ಚಿಕ್ಕಬಳ್ಳಾಪುರ: ತಾಲ್ಲೂಕಿನ ಮಂಚನಬಲೆ ಗ್ರಾಮದ ನಿವಾಸಿ ವಿನೋದ ಎಂಬ 42 ವರ್ಷ ಮಹಿಳೆ (Woman) ಜುಲೈ 4 ರಂದು ಮನೆಯಲ್ಲಿ ಜಗಳ ಮಾಡಿಕೊಂಡು ಮನೆ ಬಿಟ್ಟು ಹೋರಟು ಹೋಗಿದ್ದು, ಮನೆಗೆ ವಾಪಸ್ ಬಾರದ ಕಾರಣ ಪೊಲೀಸ್ ಠಾಣೆಯಲ್ಲಿ ದೂರು ನೀಡಿ ಅವರನ್ನು ಪತ್ತೆ (Find) ಮಾಡಿಕೊಡಬೇಕೆಂದು ಪತಿ ರವಿಕುಮಾರ್ ಮನವಿ ಮಾಡಿದ್ದಾರೆ.
ಚಹರೆ: ವಿನೋದ, 42 ವರ್ಷ ವಯಸ್ಸು, 4.5 ಅಡಿ ಎತ್ತರ, ಗೋಧಿ ಮೈ ಬಣ್ಣ, ಗುಂಡು ಮುಖ, ಸಾಧಾರಣ ಮೈಕಟ್ಟು, ಬೂದು ಬಣ್ಣ ಟಾಫ್, ಕಾಫಿ ಬಣ್ಣದ ಪ್ಯಾಂಟ್ ಧರಿಸಿದ್ದು, ಕನ್ನಡ, ತೆಲುಗು ಮಾತನಾಡುತ್ತಾರೆ.
ಇವರ ಬಗ್ಗೆ ಸುಳಿವು ಸಿಕ್ಕಲ್ಲಿ ಚಿಕ್ಕಬಳ್ಳಾಪುರ ಮಹಿಳಾ ಪೊಲೀಸ್ ಠಾಣೆಗೆ ಸಂಪರ್ಕಿಸಬಹುದೆಂದು ಮಹಿಳಾ ಪೊಲೀಸ್ ಠಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

