ರಾಜಘಟ್ಟದಲ್ಲಿ ಬೌದ್ಧನೆಲೆಯ ಉತ್ಖನನಕ್ಕೆ ಚಾಲನೆ

Excavation of Buddhist site begins at Rajghatta

ದೊಡ್ಡಬಳ್ಳಾಪುರ: ಬೌದ್ಧ ನೆಲೆಗಳನ್ನು (Buddhist site) ಪ್ರತಿಬಿಂಬಿಸುವ ಚೈತ್ಯ-ವಿಹಾರ ಸಂಕೀರ್ಣದ ಸಂಪೂರ್ಣ ಚಿತ್ರಣವನ್ನು ಬೆಳಕಿಗೆ ತರಲು ಬೌದ್ಧ ನೆಲೆ ಉತ್ಖನನಕ್ಕೆ ಚಾಲನೆ ನೀಡಲಾಗಿದ್ದು ರಾಜಘಟ್ಟವು ಮುಂದೆ ಮಹತ್ವದ ನೆಲೆಯಾಗಲಿದೆ ಎಂದು ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಪ್ರವಾಸೋದ್ಯಮ ಸಚಿವ ಡಾ.ಎಚ್.ಕೆ ಪಾಟೀಲ್ (Dr.H.K.Patil) ಅವರು ಹೇಳಿದರು.

ದೊಡ್ಡಬಳ್ಳಾಪುರ ತಾಲ್ಲೂಕಿನ ರಾಜಘಟ್ಟ ಗ್ರಾಮದ ಬೂದಿಗುಂಡಿಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪ್ರವಾಸೋದ್ಯಮ ಇಲಾಖೆ, ರಾಜ್ಯದ ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ್ದ ಬೌದ್ಧನೆಲೆಯ ಉತ್ಖನನಕ್ಕೆ ಚಾಲನೆ ನೀಡುವ ಮೂಲಕ ಅವರು ಮಾತನಾಡಿದರು.

ರಾಜಘಟ್ಟ ಗ್ರಾಮದಲ್ಲಿ ಬೌದ್ಧನೆಲೆಯ ಕುರಿತಾದ ಸ್ತೂಪಗಳು, ಹಾಗೂ ವಿವಿ‍ಧ ಅವಶೇಷಗಳು ಪತ್ತೆಯಾಗಿದ್ದು, ಕಾರಣಾಂತರದಿಂದ ಅಪೂರ್ಣಗೊಂಡಿದ್ದ ಉತ್ಖನನಕ್ಕೆ, ಕೇಂದ್ರ ಪುರಾತತ್ವ ಇಲಾಖೆ ಅನುಮೋದನೆಯೊಂದಿಗೆ ಈಗ ರಾಜ್ಯ ಸರ್ಕಾರದಿಂದ ಮರು ಚಾಲನೆ ನೀಡಲಾಗಿದೆ.

ರಾಜಘಟ್ಟದಲ್ಲಿ ಬೌದ್ಧನೆಲೆಯ ಉತ್ಖನನಕ್ಕೆ ಚಾಲನೆ

ಪ್ರೋ ಎಮ್.ಎಸ್ ಕೃಷ್ಣ ಮೂರ್ತಿ ಅವರು ಈ ಉತ್ಖನನದ ಪ್ರಧಾನ ನಿರ್ದೇಶಕರಾಗಿರುತ್ತಾರೆ.

2001 ಮತ್ತು 2004ರಲ್ಲಿ ಸಂಶೋಧಕ ಪ್ರೊ.ಎಂ.ಎಸ್.ಕೃಷ್ಣಮೂರ್ತಿ ಮಾರ್ಗದರ್ಶನದಲ್ಲಿ ರಾಜಘಟ್ಟದಲ್ಲಿ ಕ್ರಮಬದ್ಧವಾಗಿ ಉತ್ಖನನ ಕಾರ್ಯ ನಡೆದಿತ್ತು. ಅದರ ಫಲವಾಗಿ ಬೌದ್ದ ಧರ್ಮಿಯರು ಚೈತ್ಯಾಲಯ ಮತ್ತು ಅದರ ಸುತ್ತಲೂ ನಿರ್ಮಿತವಾಗಿದ್ದ ಬೌದ್ಧ ವಿಹಾರದ ಪಾಯದ ಅವಶೇಷಗಳು ಬೆಳಕಿಗೆ ಬಂದವು.

ಈಗ ನಡೆಯಲಿರುವ ಈ ಮಹತ್ತರ ಉತ್ಖನನ ಕಾರ್ಯಕ್ರಮದಿಂದ ಬೌದ್ಧಧರ್ಮದ ಇತಿಹಾಸ, ಕುರುಹುಗಳು, ಮಾರ್ಗದರ್ಶನ ಹಾಗೂ ಬುದ್ದನ ಸಂದೇಶ ಅರಿಯಲು ಸಹಕಾರಿಯಾಗಲಿದೆ ಎಂದರು.

ಬುದ್ಧನ ಸಂದೇಶಗಳು ಜನರ ಬದುಕಿಗೆ ಸಮೀಪವಾಗಿದ್ದು ನಾವೇಲ್ಲರು ಬುದ್ಧನ ಸಂದೇಶಗಳನ್ನು ಅರಿಯಬೇಕು, ಅವರ ಸಂದೇಶಗಳೆ ನಮಗೆ ಪ್ರೇರಣೆ ಎಂದರಲ್ಲದೆ ಉತ್ಖನನ ಕಾರ್ಯಕ್ಕೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸಚಿವರಾದ ಡಾ.ಎಚ್.ಕೆ ಪಾಟೀಲ್ ಅವರು ಸೂಚಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ ಅವರಿಂದ ಪುಸ್ತಕ ಬಿಡುಗಡೆ

ಕರ್ನಾಟಕದಲ್ಲಿ ಬೌದ್ಧಕಲೆ ಮತ್ತು ಸಂಸ್ಕೃತಿ ಪುಸ್ತಕ ಬಿಡುಗಡೆಗೊಳಿಸಿ ಮಾತನಾಡಿದ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ ಅವರು ಬೌದ್ಧ ಧರ್ಮವನ್ನು ಈಡಿ ಜಗತ್ತು ಒಪ್ಪಿಕೊಂಡಿದೆ. ನಾವು ಬುದ್ಧನನ್ನು ಮಾತ್ರ ನೋಡುತ್ತೇವೆ ಅವನ ಸಿದ್ದಾಂತ ಅವನು ತೋರಿಸಿದ ಸುಖ ಜೀವನದ ದಾರಿ ದೀಪವನ್ನು ತಿಳಿದುಕೊಳ್ಳಬೇಕು.

ರಾಜ್ಯ ಪುರತತ್ವ ಇಲಾಖೆ ರಾಜಘಟ್ಟದಲ್ಲಿ ಸಿಕ್ಕಿರುವ ಬೌದ್ಧ ಧರ್ಮದ ಚೈತ್ಯ- ವಿಹಾರ ಸಂಕೀರ್ಣದ ಸಂಪೂರ್ಣ ಚಿತ್ರಣವನ್ನು ಬೆಳಕಿಗೆ ತರುವ ಯೋಜನೆಯನ್ನು ಹಮ್ಮಿಕೊಂಡಿದೆ. ಈ ಭೂಗರ್ಭದಲ್ಲಿ ಅಡಗಿರುವ ಬೌದ್ಧ ಮಂತ್ರ ಮುದ್ರಿತ ಮಣ್ಣಿನ ಬಿಲ್ಲೆಗಳು ಅವುಗಳ ಗಾತ್ರ ಅಗಲ ಚೈತ್ಯ ವಿಹಾರ ಎಲ್ಲಾವೂ ಬೌದ್ಧ ಧರ್ಮದ ಧಾರ್ಮಿಕ ಶಕ್ತಿ ಮತ್ತು ಮೌಲ್ಯವನ್ನು ಪ್ರತಿಬಿಂಬಿಸುತ್ತದೆ ಹಾಗಾಗಿ ಇದರ ಸಂಪೂರ್ಣ ಅಭಿವೃದ್ಧಿಗೆ ನಾವೆಲ್ಲರು ಕೈಜೋಡಿಸಬೇಕು. ನಮ್ಮ ಇತಿಹಾಸವನ್ನು ಅರಿಯುವ ನಿಟ್ಟಿನಲ್ಲಿ ಉತ್ಖನನ ಕಾರ್ಯಗಳಿಗೆ ಸರ್ಕಾರದಿಂದ ಎಲ್ಲಾ ರೀತಿಯ ನೆರವು ನೀಡಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ಮೈಸೂರು ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕರು ಹಾಗೂ ಸಂಶೋಧಕರಾದ ಎಂ.ಎಸ್ ಕೃಷ್ಣಮೂರ್ತಿ, ಸಾಹಿತಿಗಳಾದ ಡಾ.ಎಲ್ ಹನುಮಂತಯ್ಯ, ನಾಡೋಜ ಪ್ರೊ.ಹಂಪ ನಾಗರಾಜ್, ಮೈಸೂರಿನ ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆಯ ಆಯುಕ್ತರು ದೇವರಾಜು ಎ, ದೊಡ್ಡಬಳ್ಳಾಪುರ ಮಾಜಿ ಶಾಸಕ ವೆಂಕಟರಮಣಯ್ಯ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಜಿಲ್ಲಾ ಅಧ್ಯಕ್ಷರಾದ ರಾಜಣ್ಣ, ರಾಜಘಟ್ಟ ಉತ್ಖನನ ಭೂಮಾಲೀಕರು ಕೃಷ್ಣಪ್ಪ ಎನ್.ಅಂಜಿನಪ್ಪ, ಸ್ಥಳೀಯ ಜನ ಪ್ರತಿನಿಧಿಗಳು, ಇತರರು ಉಪಸ್ಥಿತರಿದ್ದರು.

ರಾಜಕೀಯ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಯುದ್ಧ ಇನ್ನೂ ಸ್ಥಗಿತಗೊಂಡಿಲ್ಲ. ಅಡುಗೆ ಅನಿಲ ಸೇರಿದಂತೆ ತೈಲ ಸಮಸ್ಯೆ ಎಲ್ಲ ದೇಶಗಳಿಗೆ ತಟ್ಟಿದೆ. ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಆರ್‌. ಅಶೋಕ (R. Ashoka)

[ccc_my_favorite_select_button post_id="121608"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಯಾಗಲು ಸೂಕ್ತ ಯುವತಿ ದೊರೆಯದ ಕಾರಣ ಮನನೊಂದ ಯುವಕನೊಬ್ಬ ಕಲ್ಯಾಣಿಗೆ ಬಿದ್ದು ಆತ್ಮಹತ್ಯೆ (suicide) ಮಾಡಿಕೊಂಡಿರುವ ಘಟನೆ ನಡೆದಿದೆ.

[ccc_my_favorite_select_button post_id="121591"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]