Will not forgive Nimisha Priya

ನಿಮಿಷಾ ಪ್ರಿಯಾರನ್ನು ಕ್ಷಮಿಸಲ್ಲ; ಗಲ್ಲು ಶಿಕ್ಷೆಯನ್ನು ಜಾರಿಗೊಳಿಸುವಂತೆ ಮೃತನ ಕುಟುಂಬ ಪಟ್ಟು

ನವದೆಹಲಿ: ಯೆಮನ್ ದೇಶದಲ್ಲಿ ಕೊಲೆ ಪ್ರಕರಣದಲ್ಲಿ ಅಪರಾಧಿ ಎಂದು ಘೋಷಣೆಯಾಗಿ, ಗಲ್ಲು ಶಿಕ್ಷೆ ವಿಧಿಸಲಾಗಿರುವ ಭಾರತದ ಕೇರಳ ಮೂಲದ ಶುಕ್ರೂಷಕಿ ನಿಮಿಷಾ ಪ್ರಿಯಾಗೆ (Nimisha Priya) ಕ್ಷಮಾದಾನ ನೀಡಲು ಯೆಮನ್ ನ ಸಂತ್ರಸ್ತ, ತಲಾಲ್ ಅಬೋ ಮಹಿ ಅವರ ಕುಟುಂಬ ಸ್ಪಷ್ಟವಾಗಿ ನಿರಾಕರಿಸಿದೆ.

ಅಲ್ಲದೇ, ನ್ಯಾಯಾಲಯದಿಂದ ನಿಗದಿಯಾಗಿರುವ ಗಲ್ಲು ಶಿಕ್ಷೆಯನ್ನು ಜಾರಿಗೊಳಿಸಲೇಬೇಕು ಎಂದು ಪಟ್ಟುಹಿಡಿದಿದೆ.

ನಿಮಿಷಾ ಪ್ರಿಯಾ ಅಪರಾಧವನ್ನು ನಮ್ಮ ಕುಟುಂಬವು ಕ್ಷಮಿಸುವುದಿಲ್ಲ ಮತ್ತು ಯಾವುದೇ ಕಾರಣಕ್ಕೂ ಕ್ಷಮಾ ಪರಿಹಾರವನ್ನು (ಬ್ಲಡ್ ಮನಿ) ಸ್ವೀಕರಿಸುವುದಿಲ್ಲ ಎಂದು ನಿಮಿಷಾರಿಂದ ಹತ್ಯೆಯಾದ ಯೆಮನ್ ಪ್ರಜೆ ತಲಾಲ್ ಅಬ್ದು ಮೆಪ್ಪಿ ಸಹೋದರ ಅಬ್ದುಲ್ ಫತ್ತಾಹ್ ಹೇಳಿದ್ದಾರೆ.

ಬಿಬಿಸಿ ಅರೇಬಿಕ್ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಫತ್ತಾಹ್, ತಡ ಮಾಡದೇ ನಿಮಿಷಾ ಪ್ರಿಯಾರನ್ನು ಗಲ್ಲಿಗೇರಿ ಸಬೇಕು ಎಂದು ಒತ್ತಾಯಿಸಿದ್ದಾರೆ.

ಭಾರತದ ಮಾಧ್ಯಮಗಳು ಅಪರಾಧಿಯನ್ನು ಸಂತ್ರಸ್ತೆ ಎನ್ನುವ ರೀತಿ ಬಿಂಬಿಸುತ್ತಿವೆ. ನಿಮಿಷಾಳಿಗೆ ಮೆಹಿ ಕಿರುಕುಳ ನೀಡಿದ್ದನು ಮತ್ತು ಆಕೆಯ ಪಾಸ್‌ಪೋರ್ಟ್ ಇಟ್ಟುಕೊಂಡಿದ್ದನು ಎಂಬ ಸುಳ್ಳನ್ನು ಹರಡುತ್ತಿವೆ. ಈ ಸುಳ್ಳುಗಳಿಂದ ನಮ್ಮ ಕುಟುಂಬಕ್ಕೆ ಇನ್ನಷ್ಟು ನೋವಾಗಿದೆ ಎಂದು ಹೇಳಿದ್ದಾರೆ.

ಕೊಲೆ ಆರೋಪದ ಮೇಲೆ ಯೆಮೆನ್‌ನಲ್ಲಿ ನಿಮಿಷಾ ಪ್ರಿಯಾಗೆ ಮರಣದಂಡನೆ ಶಿಕ್ಷೆ ವಿಧಿಸಲಾಗಿತ್ತು. ಅದರಂತೆ ಜುಲೈ 16 ರಂದು ಆಕೆಯನ್ನು ಗಲ್ಲಿಗೇರಿಸಬೇಕಿತ್ತು. ಈ ನಡುವೆ ಸುಪ್ರೀಂ ಕೋರ್ಟ್ ನಲ್ಲಿ ನರ್ಸ್ ನಿಮಿಷಾ ಪ್ರಿಯಾ ಮರಣದಂಡನೆಯ ಅರ್ಜಿ ಕೂಡ ಸಲ್ಲಿಕೆಯಾಗಿತ್ತು.

ಮರಣದಂಡನೆಯನ್ನು ಮಹತ್ವದ ಬೆಳವಣಿಗೆಯೊಂದರಲ್ಲಿ ಅಲ್ಲಿನ ನ್ಯಾಯಾಲಯ ಮುಂದಿನ ಆದೇಶದ ವರೆಗೆ ಮುಂದೂಡಿದೆ.

ಕೊಲೆ ಕೇಸ್: ಯೆಮೆನ್ ಪ್ರಜೆ ತಲಾಲ್ ಅಯ್ಯೋ ಮೆಹದಿ ಅವರನ್ನು ಕೊಲೆ ಮಾಡಿದ ಆರೋಪ ನಿಮಿಷಾ ಪ್ರಿಯ ಮೇಲಿದೆ. ಆಕೆ 3 ವರ್ಷಗಳಿಂದ ಜೈಲಿನಲ್ಲಿದ್ದಾಳೆ.

2008 ರಲ್ಲಿ ನಿಮಿಷಾ ಪ್ರಿಯಾ ನರ್ಸಿಂಗ್‌ಗಾಗಿ ಯೆಮೆನ್‌ಗೆ ಹೋಗಿದ್ದಳು. 2015 ರಲ್ಲಿ ತಲಾಲ್ ಅಬ್ಬೋ ಮತ್ತೆ ಅವರೊಂದಿಗೆ ಕ್ಲಿನಿಕ್ ಒಂದನ್ನು ಓಪನ್ ಮಾಡಿದಳು. ಬಳಿಕ ಮಹಿ ತನ್ನ ಪಾಸ್‌ಪೋರ್ಟ್ ಅನ್ನು ಕಸಿದುಕೊಂಡು ತನಗೆ ಸಾಕಷ್ಟು ಹಿಂಸೆ ನೀಡಿದರು. ಅಲ್ಲದೇ ಕ್ಲಿನಿಕ್‌ನಿಂದ ಬಂದಂತಹ ಆದಾಯವನ್ನು ಕೂಡ ಕಸಿದುಕೊಂಡರು ಎಂದು ನಿಮಿಷಾ ಆರೋಪಿಸಿದಾಳೆ.

ಇದಾದ ಬಳಿಕ 2017 ರಲ್ಲಿ ತನ್ನ ಪಾಸ್‌ಪೋರ್ಟ್ ಅನ್ನು ಮರಳಿ ಪಡೆಯುವ ಸಲುವಾಗಿ ಮಹಿ ಪ್ರಜ್ಞಾಹೀನರಾಗಲು ನಿಮಿಷಾ ಇಂಜೆಕ್ಷನ್ ನೀಡಿದಳು. ಆದರೆ ಓವರ್ ಡೋಸ್‌ನಿಂದಾಗಿ ಮೆಹದಿ ಸಾವನ್ನಪ್ಪಿದರು.

ರಾಜಕೀಯ

ಗ್ಯಾರಂಟಿ ಯೋಜನೆ ಟೀಕಿಸಿದ್ದ ಬಿಜೆಪಿ ಈಗ ಬೇರೆ ರಾಜ್ಯಗಳಲ್ಲಿ ಅದನ್ನೇ ನಕಲು ಮಾಡುತ್ತಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

ಗ್ಯಾರಂಟಿ ಯೋಜನೆ ಟೀಕಿಸಿದ್ದ ಬಿಜೆಪಿ ಈಗ ಬೇರೆ ರಾಜ್ಯಗಳಲ್ಲಿ ಅದನ್ನೇ ನಕಲು ಮಾಡುತ್ತಿದೆ:

ಬಿಜೆಪಿ ಬೇರೆ ರಾಜ್ಯಗಳಲ್ಲಿ ಅದನ್ನೇ ನಕಲು ಮಾಡುತ್ತಿದೆ. ವಿರೋಧ ಪಕ್ಷಗಳ ಟೀಕೆಗಳು ಸಾಯುತ್ತವೆ, ನಮ್ಮ ಕೆಲಸ ಉಳಿಯುತ್ತವೆ: ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar)

[ccc_my_favorite_select_button post_id="111370"]
ಮಲ್ಲಿಕಾರ್ಜುನ ಖರ್ಗೆಯವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸಿ: ಬಿ.ವೈ.ವಿಜಯೇಂದ್ರ

ಮಲ್ಲಿಕಾರ್ಜುನ ಖರ್ಗೆಯವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸಿ: ಬಿ.ವೈ.ವಿಜಯೇಂದ್ರ

ಸಿದ್ದರಾಮಯ್ಯನವರು ಮತ್ತು ಕಾಂಗ್ರೆಸ್ ಪಕ್ಷದ ವರಿಷ್ಠರನ್ನು ಪ್ರಶ್ನಿಸಲು ಬಯಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ (B.Y. Vijayendra) ಅವರು ತಿಳಿಸಿದ್ದಾರೆ.

[ccc_my_favorite_select_button post_id="111198"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಮಲಗಿದ್ದ ವೇಳೆ ಮನೆಯಲ್ಲಿ ಬೆಂಕಿ.. ವ್ಯಕ್ತಿ ಸಾವು.!

ದೊಡ್ಡಬಳ್ಳಾಪುರ: ಮಲಗಿದ್ದ ವೇಳೆ ಮನೆಯಲ್ಲಿ ಬೆಂಕಿ.. ವ್ಯಕ್ತಿ ಸಾವು.!

ಆಕಸ್ಮಿಕವಾಗಿ ತಗುಲಿದ ಬೆಂಕಿಯ (Fire) ಕೆನ್ನಾಲಿಗೆಗೆ ಮನೆಯಲ್ಲಿ ಮಲಗಿದ್ದ ವೇಳೆ ವ್ಯಕ್ತಿಯೋರ್ವ ಸುಟ್ಟು ಸಾವನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ

[ccc_my_favorite_select_button post_id="111353"]
Accident; ರಾಷ್ಟ್ರೀಯ ಹೆದ್ದಾರಿಯಲ್ಲಿ ಮಗುಚಿ ಬಿದ್ದ ಲಾರಿ.. ಮಾವಿನ ಕಾಯಿಗಾಗಿ ಮುಗಿಬಿದ್ದ ಜನ

Accident; ರಾಷ್ಟ್ರೀಯ ಹೆದ್ದಾರಿಯಲ್ಲಿ ಮಗುಚಿ ಬಿದ್ದ ಲಾರಿ.. ಮಾವಿನ ಕಾಯಿಗಾಗಿ ಮುಗಿಬಿದ್ದ ಜನ

ಮಾವಿನ ಕಾಯಿ ತುಂಬಿಕೊಂಡು ಸಾಗುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪೊ ಮಗುಚಿ ಬಿದ್ದಿರುವ ಘಟನೆ (Accident)

[ccc_my_favorite_select_button post_id="111232"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!