LKG-UKG to start in Anganwadis: Lakshmi Hebbalkar

ಅಂಗನವಾಡಿಗಳಲ್ಲಿ ಎಲ್‌ಕೆಜಿ-ಯುಕೆಜಿ ಆರಂಭ: ಲಕ್ಷ್ಮಿ ಹೆಬ್ಬಾಳಕರ್

ಬೆಂಗಳೂರು: ರಾಜ್ಯದ ಅಂಗನವಾಡಿ ಕೇಂದ್ರಗಳಲ್ಲಿ ಎಲ್‌ಕೆಜಿ, ಯುಕೆಜಿ (LKG, UKG) ತರಗತಿಗಳನ್ನ ಆರಂಭಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಲಕ್ಷ್ಮಿ ಹೆಬ್ಬಾಳಕರ್ (Lakshmi Hebbalkar) ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಂಗನವಾಡಿಗಳಲ್ಲಿ ಎಲ್‌ಕೆಜಿ, ಯುಕೆಜಿ ಆರಂಭ ಮಾಡಲು 2 ಕೊಠಡಿಗಳ ಅಗತ್ಯವಿದೆ. ರಾಜ್ಯದಲ್ಲಿ ಈ ರೀತಿ 2 ಕೊಠಡಿಗಳಿರುವ 10 ಸಾವಿರ ಅಂಗನವಾಡಿ ಕೇಂದ್ರಗಳನ್ನು ಗುರುತಿಸಿ ಪಟ್ಟಿ ಮಾಡಲಾಗಿದೆ.

ಸದ್ಯ 4 – 5 ಸಾವಿರ ಅಂಗನವಾಡಿಗಳಲ್ಲಿ ತರಗತಿಗಳನ್ನು ಆರಂಭಿಸಲಾಗುವುದು. ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಎಲ್ಲಾ ಕೇಂದ್ರಗಳಲ್ಲಿ ಆರಂಭ ಮಾಡಲಾಗುವುದು ಎಂದು ಲಕ್ಷ್ಮಿ ಹೆಬ್ಬಾಳಕರ್ ತಿಳಿಸಿದ್ದಾರೆ.

ಇನ್ನು ಚಾಮರಾಜನಗರ ಜಿಲ್ಲೆಯಲ್ಲಿ 233 ಅಂಗನವಾಡಿ ಕೇಂದ್ರಗಳನ್ನ ಇಲಾಖೆ ಪಟ್ಟಿ ಮಾಡಿದ್ದು, ಈ ಕೇಂದ್ರಗಳಲ್ಲಿ ಅಂಗನವಾಡಿ ಇಲಾಖೆ ಆರಂಭಿಸಲಾಗುತ್ತದೆ.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಪ್ರತ್ಯೇಕ ಇಲಾಖೆಯಾಗಿ ರೂಪುಗೊಂಡು ಅಕ್ಟೋಬರ್ 2 ಕ್ಕೆ 50 ವರ್ಷಗಳನ್ನ ಪೂರೈಸುತ್ತದೆ. ಈ ನಿಟ್ಟಿನಲ್ಲಿ ಅಕ್ಟೋಬರ್‌ನಿಂದ ಅಂಗನವಾಡಿ ಕೇಂದ್ರಗಳಲ್ಲಿ ಎಲ್ ಕೆಜಿ ಮತ್ತು ಯುಕೆಜಿ ಆರಂಭಿಸಲು ಇಲಾಖೆ ನಿರ್ಧಾರ ಮಾಡಿದೆ. ಹಾಗೆಯೇ, ಜಿಲ್ಲೆಯ ಅಂಗನವಾಡಿ ಕಾರ್ಯಕರ್ತೆಯರಿಗೆ ಈಗಾಗಲೇ ತರಬೇತಿ ನೀಡಿದ್ದು, ಪುಸ್ತಕಗಳನ್ನ ಸಹ ಕೊಡಲಾಗಿದೆ.

ಕಲ್ಯಾಣ ಕರ್ನಾಟಕ ಭಾಗ ಹೊರತುಪಡಿಸಿ, ಉಳಿದ ಕಡೆ ಹೊಸದಾಗಿ ಅಂಗನವಾಡಿ ಕೇಂದ್ರಗಳಲ್ಲೇ ಪೂರ್ವ ಪ್ರಾಥಮಿಕ (ಎಲ್‌ಕೆಜಿ, ಯುಕೆಜಿ) ಶಿಕ್ಷಣ ನೀಡುವ ಬಗ್ಗೆ ತಜ್ಞರ ಸಮಿತಿ ರಚನೆ ಮಾಡಲಾಗಿತ್ತು. ಅದರ ಅನುಸಾರ ಇದೀಗ ಎಲ್‌ಜಿ ಹಾಗೂ ಯುಕೆಜಿ ಆರಂಭಿಸಲು ನಿರ್ಧಾರ ಮಾಡಲಾಗಿದೆ.

ಅಂಗನವಾಡಿ ಕೇಂದ್ರಗಳಲ್ಲಿಯೇ ಪೂರ್ವ ಪ್ರಾಥಮಿಕ ಶಿಕ್ಷಣ ನೀಡಲು ತೀರ್ಮಾನಿಸಲಾಗಿದೆ. ಗುಣಮಟ್ಟದ ಶಿಕ್ಷಣ ಹಾಗೂ ಪೌಷ್ಠಿಕ ಆಹಾರ ನೀಡುವುದೇ ನಮ್ಮ ಉದ್ದೇಶ. ಈ ಕಾರಣಕ್ಕೆ ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲು ಮುಖ್ಯಮಂತ್ರಿಗಳು ಸಹಮತ ವ್ಯಕ್ತಪಡಿಸಿದ್ದಾರೆ.

ಇಲಾಖೆಯ ಮೂಲಕವೇ ಮಕ್ಕಳಿಗೆ ಸಮವಸ್ತ್ರ ಪುಸ್ತಕ, ಬ್ಯಾಗ್‌ ನೀಡಲು ತೀರ್ಮಾನಿಸಲಾಗಿದೆ. ಜೊತೆಗೆ ಶಾಲೆಗಳ ಮಾದರಿಯಲ್ಲೇ ವರ್ಗಾವಣೆ ಪತ್ರ (ಟಿಸಿ) ನೀಡಲು ಕ್ರಮ ವಹಿಸಲಾಗುವುದು ಎಂದು ಹೆಬ್ಬಾಳಕರ್ ಹೇಳಿದ್ದಾರೆ.

ರಾಜಕೀಯ

ತಮಿಳುನಾಡಿಗೆ ಬೆಣ್ಣೆ, ನಮಗೆ ಸುಣ್ಣ: ಕೇಂದ್ರದ ವಿರುದ್ಧ ಎಂ ಬಿ ಪಾಟೀಲ ಅಸಮಾಧಾನ

ತಮಿಳುನಾಡಿಗೆ ಬೆಣ್ಣೆ, ನಮಗೆ ಸುಣ್ಣ: ಕೇಂದ್ರದ ವಿರುದ್ಧ ಎಂ ಬಿ ಪಾಟೀಲ ಅಸಮಾಧಾನ

ತಮಿಳುನಾಡಿನ (Tamil Nadu) ಮಧುರೈ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿರುವ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರಕಾರವು ರಾಜ್ಯದ ಹುಬ್ಬಳ್ಳಿ ಮತ್ತು ಬೆಳಗಾವಿ ವಿಮಾನ‌ ನಿಲ್ದಾಣಗಳ ಬಗ್ಗೆ ಇಂತಹ ನಿರ್ಧಾರ ಘೋಷಿಸದೆ ಇರುವುದು

[ccc_my_favorite_select_button post_id="120142"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೈಕ್ ಸವಾರರ ಜೀವ ಉಳಿಸಲು ಬೆಸ್ಕಾಂ ಕೇಂದ್ರಕ್ಕೆ ಟೆಂಪೋ ಡಿಕ್ಕಿ.. ತಪ್ಪಿದ ಪ್ರಮಾದ

ದೊಡ್ಡಬಳ್ಳಾಪುರ: ಬೈಕ್ ಸವಾರರ ಜೀವ ಉಳಿಸಲು ಬೆಸ್ಕಾಂ ಕೇಂದ್ರಕ್ಕೆ ಟೆಂಪೋ ಡಿಕ್ಕಿ.. ತಪ್ಪಿದ

ಮುಂದೆ ಸಾಗುತ್ತಿದ್ದ ಬೈಕ್ ಸವಾರರ ಜೀವ ಉಳಿಸಲು ಮುಂದಾದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಟೆಂಪೋ ಬೆಸ್ಕಾಂ ಕೇಂದ್ರಕ್ಕೆ ಡಿಕ್ಕಿ ಹೊಡೆದಿದ್ದು (Accident) ಅದೃಷ್ಟವಶಾತ್ ಸಂಭವಿಸಬಹುದಾಗಿದ್ದ ದೊಡ್ಡ ಪ್ರಮಾಣದ ಅನಾಹುತವೇ ತಪ್ಪಿದೆ.

[ccc_my_favorite_select_button post_id="120119"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!