Astrology: ಶುಕ್ರವಾರ, ಜುಲೈ 18, 2025, ದೈನಂದಿನ ರಾಶಿ ಭವಿಷ್ಯ
ಮೇಷ ರಾಶಿ: ಆರ್ಥಿಕವಾಗಿ ಹಾಗೂ ಸಾಂಸಾರಿಕವಾಗಿ ಉತ್ತಮ ಕೆಲಸ ಗಳಾದರೂ ಕೆಲವು ಹಿತಶತ್ರುಗಳ ಕಾಟದಿಂದ ಮನಸ್ಸಿಗೆ ನೋವುಂಟಾಗಲಿದೆ. ಹೊಗಳಿಕೆಗೆ ಮರುಳಾಗದಿರಿ.
ಹಂತ ಹಂತವಾಗಿ ಯಶಸ್ಸು ಕಂಡು ಬಂದೀತು. (ಭಕ್ತಿಯಿಂದ ಶ್ರೀ ಗುರು ದತ್ತಾತ್ರೇಯ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)
ವೃಷಭ ರಾಶಿ: ಲಾಭ ಸ್ಥಾನಗತನಾದ ಗುರುವಿನಿಂದಾಗಿ ಅನಿರೀಕ್ಷಿತ ಎಷ್ಟೋ ಕಾರ್ಯ ಸಾಧನೆಯಾಗಲಿವೆ. ಮುಖ್ಯ ವಾಗಿ ದೂರ ಸಂಚಾರ, ಪ್ರಯಾಣದಲ್ಲಿ ಹೆಚ್ಚಿನ ಜಾಗ್ರತೆ ವಹಿಸುವುದು ಅಗತ್ಯ ವಿದೆ. ದಿನಾಂತ್ಯದಲ್ಲಿ ಸಂಭ್ರಮವಿದೆ. (ಭಕ್ತಿಯಿಂದ ಶ್ರೀ ಉಗ್ರ ನರಸಿಂಹ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)
ಮಿಥುನ ರಾಶಿ: ಹಿರಿಯರ ಆರೋಗ್ಯದ ಬಗ್ಗೆ ಗಮನ ಹರಿಸಿರಿ.ಕೋರ್ಟು ಕಚೇರಿ ಹೆಚ್ಚಿನ ಜಾಗ್ರತೆ ವಹಿಸಿರಿ, ಮುಖ್ಯವಾಗಿ ಯಾವುದೇ ಕೆಲಸ ಕಾರ್ಯ ಅರ್ಧಕ್ಕೆ ನಿಂತು ಆರ್ಥಿಕ ಮುಗ್ಗಟ್ಟು ಕಾಡಬಹುದು ಜಾಗರೂಕರಾಗಿರಿ. (ಭಕ್ತಿಯಿಂದ ಶ್ರೀ ಶಿರಡಿ ಸಾಯಿಬಾಬ ಪ್ರಾರ್ಥನೆ ಮಾಡಿ ಒಳಿತಾಗುವುದು.)
ಕಟಕ ರಾಶಿ: ಕೆಟ್ಟ ಜನರ ಸಹಕಾರದಿಂದ ಅಪಕೀರ್ತಿ ಉಂಟಾದೀತು. ವೈಯಕ್ತಿಕ ವಾಗಿ ಆರೋಗ್ಯದ ಬಗ್ಗೆ ಜಾಗರೂಕ ರಾಗಿರಿ.ಕೌಟುಂಬಿಕ ಸಮಸ್ಯೆಗಳು ಕಾಡಬಹುದು.ನೌಕರ ವರ್ಗದವರಿಗೆ ಉತ್ತಮ ಬದಲಾವಣೆ ಕಂಡು ಬರಲಿದೆ.(ಭಕ್ತಿಯಿಂದ ಶ್ರೀ ಸುಬ್ರಹ್ಮಣ್ಯ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)
ಸಿಂಹ ರಾಶಿ: ಮಕ್ಕಳ ವಿದ್ಯಾಭ್ಯಾಸ, ಉದ್ಯೋಗಿಗಳ ಉದ್ಯೋಗದ ಸಮಸ್ಯೆ ಕಂಡು ಬರಬಹುದು.ನಿಮ್ಮ ತಾಳ್ಮೆಗೆ ಇದು ಸಕಾಲವೆನಿಸಲಿದೆ. ಹಲವು ಸಂದರ್ಭಗಳಲ್ಲಿ ತಾಳ್ಮೆಯೇ ಉತ್ತರ ನೀಡಲಿದೆ. ಆರೋಗ್ಯದ ಬಗ್ಗೆ ಹೆಚ್ಚಿನ ಗಮನವಹಿಸಿ. (ಭಕ್ತಿಯಿಂದ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)
ಕನ್ಯಾ ರಾಶಿ: ಕೆಲಸಕಾರ್ಯಗಳಲ್ಲಿ ವಿಘ್ನ, ಭಯ ಕಂಡು ಬಂದರೂ ಯಶಸ್ಸು ತೋರಿ ಬರಲಿದೆ. ಸಿಟ್ಟಿನ ನಿರ್ಣಯಗಳಿಂದ ಅನಾವಶ್ಯಕ ತೊಂದರೆ ಅನುಭವಿಸುವಿರಿ ಸಂಯಮದಿಂದ ವ್ಯವಹರಿಸಿ. (ಭಕ್ತಿಯಿಂದ ಶ್ರೀ ಮಂಜುನಾಥ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)
ತುಲಾ ರಾಶಿ: ಏಕಾದಶ ಸ್ಥಾನ ರಾಹು ವಿನಿಂದಾಗಿ ಹಾಗೂ ಶನಿಯ ಲಾಭ ಸ್ಥಾನದಿಂದಾಗಿ ಉನ್ನತಿ ತೋರಿ ಬರಲಿದೆ, ಅದಾಗ್ಯೂ ಗುರುವಿನ ವ್ಯಯಸ್ಥಿತಿ ಅನೇಕ ರೀತಿಯ ಖರ್ಚು ವೆಚ್ಚಗಳ ಹಾದಿ ಎದುರಾಗಬಹುದು. ಉದ್ಯೋಗಿಗಳಿಗೆ ವೇತನ ಹೆಚ್ಚಳ ತರಲಿದೆ. (ಭಕ್ತಿಯಿಂದ ಶ್ರೀ ಆಂಜನೇಯ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)
ವೃಶ್ಚಿಕ ರಾಶಿ: ಮಹಿಳೆಯರಿಗೆ ಉದ್ಯೋಗ ಲಾಭವಿರುತ್ತದೆ. ಕೃಷಿಕ ವರ್ಗದವರಿಗೆ ಆದಾಯ ವರ್ಧಿಸಲಿದೆ. ಸಂಧಿ ನೋವು ಮೂಳೆ ಮುರಿತ, ಅವಘಡಗಳಿಗೆ ಕಾರಣವಾದೀತು. ಆಲಸ್ಯ, ಉದಾಸೀನತೆ ಉಂಟಾಗಬಹುದು. ಕ್ಷೇತ್ರ ದರ್ಶನ ಭಾಗ್ಯ ಬರಲಿದೆ. (ಭಕ್ತಿಯಿಂದ ನವಗ್ರಹ ದೇವತೆಗಳಿಗೆ ಪ್ರಾರ್ಥನೆ ಸಲ್ಲಿಸಿ ಶುಭವಾಗುವುದು.)
ಧನಸ್ಸು ರಾಶಿ: ಉದ್ಯೋಗಿಗಳಿಗೆ ವಿದೇಶ ದಲ್ಲಿ ಆಕರ್ಷಕವಾದ ದುಡಿಮೆಗೆ ಅವಕಾಶ ಗಳು ಒದಗಿ ಬರಲಿವೆ. ನಿರುದ್ಯೋಗಿಗಳಿಗೆ ಉದ್ಯೋಗ ಕಂಡುಕೊಳ್ಳಲು ಇದು ಸಕಾಲ. ವ್ಯಾಪಾರ ವ್ಯವಹಾರಗಳು ಚೇತರಿಕೆ ಕೊಟ್ಟು ಆದಾಯ ವೃದ್ಧಿಸಲಿವೆ. (ಭಕ್ತಿಯಿಂದ ಶ್ರೀ ಕಾಶೀ ವಿಶ್ವನಾಥ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)
ಮಕರ ರಾಶಿ: ಸಾಮಾಜಿಕವಾಗಿ ಉನ್ನತ ಸ್ಥಾನಮಾನಗಳು, ಕ್ರಿಯಾ ಶೀಲತೆಯಲ್ಲಿ ಪ್ರಶಂಸೆ ಸಿಗಲಿದೆ. ಮುಖ್ಯವಾಗಿ ನಿಮ್ಮ ವಿಶ್ವಾಸದ ದುರುಪಯೋಗವಾಗದಂತೆ ನಿಮ್ಮಲ್ಲಿ ಎಚ್ಚರವಿರಲಿ. ಮಾತಿನಿಂದ ಅನಾವಶ್ಯಕ ಮನಸ್ತಾಪವಾಗದಂತೆ ಜಾಗ್ರತೆ ವಹಿಸಿರಿ. (ಭಕ್ತಿಯಿಂದ ಶ್ರೀ ಚಂದ್ರ ಮೌಳೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)
ಕುಂಭ ರಾಶಿ: ಕ್ರೀಡಾ ಜಗತ್ತಿನ ಪಟುಗಳಿಗೆ ಜಯವು ಕಾದಿದೆ. ಹದಗೆಟ್ಟ ಆರೋಗ್ಯ ಉತ್ತಮ ರೀತಿಯಲ್ಲಿ ಸುಧಾರಿಸಲಿದೆ. ಕೃಷಿ ಹಾಗೂ ರೈತ ವರ್ಗಕ್ಕೆ ಸಕಾಲದಲ್ಲಿ ಬೆಳೆಗಳ ವಿಲೇವಾರಿ ಧನಲಾಭವನ್ನು ಕೊಡಲಿದೆ. ಆರೋಗ್ಯದಲ್ಲಿ ಜಾಗ್ರತೆ. (ಭಕ್ತಿಯಿಂದ ಕುಲದೇವರ ಪ್ರಾರ್ಥನೆ ಮಾಡಿ ಶುಭವಾಗುವುದು.)
ಮೀನ ರಾಶಿ: ಸಾಮಾಜಿಕ ಕಾರ್ಯದಲ್ಲಿ ತೊಡಗಿಸಿಕೊಂಡು ಜೀವನದ ಬಹು ಮುಖ್ಯ ಗುರಿಯೊಂದನ್ನು ಸಾಧಿಸಲಿದ್ದೀರಿ. ಹಳೆಯ ಬಾಕಿ ಕೆಲಸಗಳು ಅತೀ ಶೀಘ್ರ ದಲ್ಲಿ ನೆರವೇರಲಿವೆ. ರಾಜಕೀಯ ವರ್ಗ ದವರಿಗೆ ಉತ್ತಮ ಭವಿಷ್ಯವಿದೆ. (ಭಕ್ತಿಯಿಂದ ಶ್ರೀ ಉಮಾ ಮಹೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)
ತಿಥಿ: ಅಷ್ಠಮಿ
ನಕ್ಷತ್ರ: ಅಶ್ವಿನಿ ನಕ್ಷತ್ರ.
ರಾಹುಕಾಲ: 10:30AM ರಿಂದ 12:00PM
ಗುಳಿಕಕಾಲ: 07:30AM ರಿಂದ 09:00AM
ಯಮಗಂಡಕಾಲ: 03:00PM ರಿಂದ 04:30PM
ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ: ವಿದ್ವಾನ್ ಎಸ್.ನವೀನ್ M.A., ರಾಜ್ಯ ಜಂಟಿ ಕಾರ್ಯದರ್ಶಿ, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ(ರಿ.) ಮತ್ತು ಧಾರ್ಮಿಕ ಚಿಂತಕರು ಹಾಗೂ ಸುವರ್ಣ ಕನ್ನಡಿಗ ರಾಜ್ಯ ಪ್ರಶಸ್ತಿ ಪುರಸ್ಕೃತರು. ದೊಡ್ಡಬಳ್ಳಾಪುರ. ಮೊ:9620445122