ಬೀದರ್: ಮದ್ಯಪಾನ ಮಾಡಿ ವಾಹನ ಚಾಲನೆ (Drink & Drive) ಮಾಡಿದ ಆರೋಪಿಗೆ ನ್ಯಾಯಾಲಯ ರೂ.12 ಸಾವಿರ 500 ದಂಡ ವಿಧಿಸಿದೆ.
ಬೀದರ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ, ಸೂಚನೆ ಮೇರೆಗೆ ಜಿಲ್ಲೆಯಲ್ಲಿ ರಸ್ತೆ ಅಪಘಾತಗಳನ್ನು ಮತ್ತು ಅಪಘಾತದಲ್ಲಿ ಅಮಾಯಕರ ಪ್ರಾಣ ಹಾನಿ ತಡೆಗಟ್ಟುವ ನಿಟ್ಟಿನಲ್ಲಿ ಮದ್ಯ ಸೇವನೆ ಮಾಡಿ ವಾಹನ ಚಲಾವಣೆ ಮಾಡುತ್ತಿರುವವರ ವಿರುದ್ದ. ಪೊಲೀಸರು Drink & Drive ಅಭಿಯಾನ ಹಮ್ಮಿಕೊಂಡಿದ್ದರು.
ಈ ವೇಳೆ ಮದ್ಯ ಸೇವನೆ ಮಾಡಿ ವಾಹನ ಚಲಾಯಿಸುವವನ ವಿರುದ್ದ ಸಂಚಾರಿ ಪೊಲೀಸ್ ಠಾಣೆಯ ಪಿ.ಐ ಶ್ರೀ ಬಾಪುಗೌಡ ಪಾಟೀಲ್, ರವರು Drink & Drive ಅಡಿಯಲ್ಲಿ ಎರಡು ಪ್ರಕರಣವನ್ನು ದಾಖಲಿಸಿ ದೋಷಾರೋಪಣೆ ಪಟ್ಟಿಯನ್ನು ಮಾನ್ಯ ನ್ಯಾಯಾಲಯಕ್ಕೆ ಸಲ್ಲಿಸಿದ್ದರು.
ಬೀದರ್ ಜೆ.ಎಮ್.ಎಫ್.ಸಿ ನ್ಯಾಯಾಲಯದ ಸಿವಿಲ್ ನ್ಯಾಯಾಧೀಶರು ವಿಚಾರಣೆ ನಡೆಸಿ, ಮದ್ಯ ಸೇವನೆ ಮಾಡಿ ವಾಹನ ಚಲಾಯಿಸಿದಕ್ಕೆ ಒಬ್ಬ ಚಾಲಕನಿಗೆ 10,500=00 ರೂಪಾಯಿ, ಇನ್ನೊಬ್ಬ ಚಾಲಕನಿಗೆ 12,500=00 ರೂಪಾಯಿ ಹೀಗೆ ಒಟ್ಟು 23,000=00 ಸಾವಿರ ರೂಪಾಯಿ ದಂಡ ವಿಧಿಸಿದ್ದಾರೆ.
ಬೀದರ ಜಿಲ್ಲಾ ಪೊಲೀಸರಿಂದ ಸಾರ್ವಜನಿಕರಲ್ಲಿ ಮನವಿ ಮದ್ಯಪಾನ ಮಾಡಿ ವಾಹನ ಚಲಾಯಿಸಬೇಡಿ, ಹೆಲ್ಮೆಟ್ ಧರಿಸಿ ಜೀವ ಕಾಪಾಡಿಕೊಳ್ಳಿ, ತಪ್ಪದೇ ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸಿ ಎಂದು ಮನವಿ ಮಾಡಿದ್ದಾರೆ.