Dharmasthala case: Will not yield to any pressure: Cmsiddaramaiah

ಧರ್ಮಸ್ಥಳ‌ ಸೌಜನ್ಯ ಪ್ರಕರಣ: ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ| Video ನೋಡಿ

ಮೈಸೂರು: ಬಿಜೆಪಿಯ ಕಾಂಗ್ರೆಸ್ ಸರ್ಕಾರದ ಬಗ್ಗೆ ಅಪಪ್ರಚಾರ ಮಾಡುತ್ತಿದೆ. ನಾಳೆ ಮೈಸೂರಿನಲ್ಲಿ ನಡೆಯುತ್ತಿರುವ ಸಮಾವೇಶ, ಕಾಂಗ್ರೆಸ್ ಸರ್ಕಾರ ಮಾಡಿರುವ ಜನಪರ ಕೆಲಸವನ್ನು ಜನರ ಮುಂದಿಡುವ ಕಾರ್ಯಕ್ರಮವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ತಿಳಿಸಿದರು.

ಅವರು ಇಂದು ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಮೈಸೂರಿನಲ್ಲಿ ನಾಳೆ ನಡೆಯಲಿರುವ ಸಮಾವೇಶದ ಬಗ್ಗೆ ಬಿಜೆಪಿಯವರು ಟೀಕೆ ವ್ಯಕ್ತಪಡಿಸುತ್ತಿರುವ ಬಗ್ಗೆ ಉತ್ತರಿಸಿ, ನಾಳೆ ಸುಮಾರು 2600 ಕೋಟಿ ರೂ.ಗಳ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಗುತ್ತಿದ್ದು, ಬಿಜೆಪಿಯವರು ಯಾವ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ ಎಂದು ಪ್ರಶ್ನಿಸಿದರು.

ನಗರಪ್ರದೇಶದ ಮತದಾರರಲ್ಲಿ ಕಾಂಗ್ರೆಸ್ ಪರವಾದ ಒಲವು ಕಡಿಮೆ ಆಗುತ್ತಿದೆಯಾ ಎನ್ನುವ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ಮೈಸೂರು ಜಿಲ್ಲೆಯಲ್ಲಿ ಎರಡು ಕ್ಷೇತ್ರಗಳನ್ನು ಕಾಂಗ್ರೆಸ್ ತನ್ನದಾಗಿಸಿಕೊಂಡಿದೆ. ಬೆಂಗಳೂರು ನಗರದಲ್ಲಿ ನಡೆದ ಉಪಚುನಾವಣೆಯಲ್ಲಿ ಮೂರು ಕ್ಷೇತ್ರಗಳನ್ನು ಕಾಂಗ್ರೆಸ್ ಗೆದ್ದಿದೆ. ನಾಳಿನ ಕಾರ್ಯಕ್ರಮ ಯಾರದೇ ಶಕ್ತಿ ಪ್ರದರ್ಶನದ ಕಾರ್ಯಕ್ರಮವಲ್ಲ. ಅದು ಅಭಿವೃದ್ಧಿಯ ಕಾರ್ಯಕ್ರಮ ಎಂದರು.

ಕೃಷ್ಣಾ ನದಿಹಂಚಿಕೆ- ಕೇಂದ್ರವಿನ್ನೂ ಅಧಿಸೂಚನೆ ಹೊರಡಿಸಿಲ್ಲ

ಕೃಷ್ಣಾ ಜಲವಿವಾದ ನ್ಯಾಯಾಧೀಕರಣದ ಅವಧಿಯನ್ನು ವಿಸ್ತರಿಸಿರುವ ಬಗ್ಗೆ ಯಾವುದೇ ವಿರೋಧವಿಲ್ಲ. ಕೃಷ್ಣಾನದಿ ನೀರು ಹಂಚಿಕೆ ಬಗ್ಗೆ ಕೇಂದ್ರ ಇದುವರೆಗೂ ಅಧಿಸೂಚನೆಯನ್ನು ಹೊರಡಿಸಿಲ್ಲದಿರುವುದು ರಾಜ್ಯದ ಮೇಲೆ ಒತ್ತಡ ಹೇರಿದಂತಾಗಿದೆಯೇ ಬಗ್ಗೆ ಪ್ರತಿಕ್ರಿಯೆ ನೀಡಿ, ಕೃಷ್ಣಾ ಜಲವಿವಾದ ನ್ಯಾಯಾಧೀಕರಣದ ಅವಧಿಯನ್ನು ವಿಸ್ತರಿಸಿರುವ ಬಗ್ಗೆ ಯಾವುದೇ ವಿರೋಧವಿಲ್ಲ. ಆದರೆ ನೀರು ಹಂಚಿಕೆಯ ಬಗ್ಗೆ ಕೇಂದ್ರ ಸರ್ಕಾರ ಇದುವರೆಗೆ ಅಧಿಸೂಚನೆ ಹೊರಡಿಸಿಲ್ಲ.

ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯದ ನಡುವೆ ಅಂತರ ರಾಜ್ಯ ಜಲವಿವಾದವಿದ್ದು, ನಮ್ಮ ರಾಜ್ಯಕ್ಕೆ ಸಂಬಂಧಿಸಿದಂತೆ ನೀರು ಹಂಚಿಕೆಯ ಅಧಿಸೂಚನೆ ಹೊರಡಿಸಲು ಕೇಂದ್ರಕ್ಕೆ ಯಾವುದೇ ಅಡ್ಡಿಯಿರುವುದಿಲ್ಲ ಮತ್ತು ತೀರ್ಪಿನನ್ವಯ ನೀರಿನ ಹಂಚಿಕೆಯಲ್ಲಿ ರಾಜ್ಯಕ್ಕೆ ಯಾವುದೇ ನಷ್ಟವೂ ಆಗುವುದಿಲ್ಲ. ಆಲಮಟ್ಟಿ ಜಲಾಶಯದ ಎತ್ತರವನ್ನು 524.26 ಮೀ ಗಳಿಗೆ ಹೆಚ್ಚಿಸಲು ಅನುಮತಿ ನೀಡಿದ್ದಾರೆ ಎಂದರು.

ಕಾಲ್ತುಳಿತ ಪ್ರಕರಣ ವರದಿ-ಮುಂದಿನ ಸಚಿವ ಸಂಪುಟದಲ್ಲಿ ತೀರ್ಮಾನ

ಆರ್ ಸಿ ಬಿ ವಿಜಯೋತ್ಸವದ ವೇಳೆ ಬೆಂಗಳೂರಿನಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾ ಆಯೋಗದ ವರದಿಯ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸುತ್ತಾ, . ಮುಂದಿನ ಸಚಿವ ಸಂಪುಟದಲ್ಲಿ ತನಿಖಾ ವರದಿಯ ಬಗ್ಗೆ ಚರ್ಚಿಸಿ ಸೂಕ್ತ ತೀರ್ಮಾನವನ್ನು ಕೈಗೊಳ್ಳಲಾಗುವುದು ಎಂದರು.

ಧರ್ಮಸ್ಥಳ ಸೌಜನ್ಯ ಪ್ರಕರಣ-ಸರ್ಕಾರ ಯಾವುದೇ ಒತ್ತಡಕ್ಕೆ ಮಣಿಯುವುದಿಲ್ಲ

ಧರ್ಮಸ್ಥಳದ ಸೌಜನ್ಯ ಪ್ರಕರಣದಲ್ಲಿ ನಿವೃತ್ತ ನ್ಯಾಯಾಧೀಶರೊಬ್ಬರು ಪ್ರಕರಣದ ಎಸ್ ಐ ಟಿ ತನಿಖೆಯಾಗಬೇಕೆಂದು ಒತ್ತಾಯಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಸರ್ಕಾರ ಈ ಬಗ್ಗೆ ಕಾನೂನು ಕ್ರಮ ತೆಗೆದುಕೊಳ್ಳಲಿದೆ.

ಪ್ರಕರಣಕ್ಕೆ ಸಂಬಂಧಿಸಿದ ವ್ಯಕ್ತಿ ಹತ್ತುವರ್ಷಗಳ ನಂತರ ಬಂದು ಪೊಲೀಸರಿಗೆ ಹೇಳಿಕೆ ನೀಡಿದ್ದಾನೆ. ಪೊಲೀಸ್ ಇಲಾಖೆಯೊಂದಿಗೆ ಚರ್ಚಿಸಿ ಎಸ್ ಐ ಟಿ ತನಿಖೆಯ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು. ಪ್ರಕರಣದ ತನಿಖೆಯ ವಿಷಯದಲ್ಲಿ ಸರ್ಕಾರ ಯಾವುದೇ ಒತ್ತಡಕ್ಕೆ ಮಣಿಯದೇ , ಕಾನೂನು ರೀತ್ಯ ಕ್ರಮ ಕೈಗೊಳ್ಳುತ್ತೇವೆ ಎಂದರು.

ಶಾಲೆಗಳಿಗೆ ಬಾಂಬ್ ಕರೆ-ಪೊಲೀಸರಿಗೆ ತನಿಖೆ ನಡೆಸಲು ಸೂಚನೆ

ಬೆಂಗಳೂರಿನ ಸುಮಾರು 40 ಶಾಲೆಗಳಿಗೆ ಬಾಂಬ್ ಬೆದರಿಕೆ ಬಂದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಇದು ಹುಸಿ ಬಾಂಬ್ ಕರೆಯಿರಬಹುದೇ ಎಂಬ ಬಗ್ಗೆ ತನಿಖೆ ನಡೆಸಲು ಪೊಲೀಸರಿಗೆ ಸೂಚನೆ ನೀಡಲಾಗಿದೆ ಎಂದರು. ಸುಳ್ಳು ಹೇಳಿ ಅಪಪ್ರಚಾರ , ಪ್ರಚೋದನೆಗೊಳಿಸುವ ಕೃತ್ಯಗಳ ವಿರುದ್ದ ಕಠಿಣ ಕ್ರಮ ಕೈಗೊಳ್ಳಲು ಕಾನೂನು ರೂಪಿಸಲಾಗುತ್ತಿದೆ ಎಂದರು.

ಬಿಜೆಪಿಯವರು ಪ್ರಧಾನಿ ಹುದ್ದೆಯನ್ನು ಪರಿಶಿಷ್ಟ ಜಾತಿಯವರಿಗೆ ಬಿಟ್ಟುಕೊಡಲಿ

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರನ್ನು ಪ್ರಧಾನಿ ಹೆಸರಿಗೆ ಕಾಂಗ್ರೆಸ್ ಸೂಚಿಸಲಿ ಎಂಬ ಬಿಜೆಪಿಯವರ ಹೇಳಿಕೆಗೆ ಪ್ರತಿಕ್ರಿಯೆ ನೀಡುತ್ತಾ, ಈ ರೀತಿ ಹೇಳಿಕೆ ನೀಡುತ್ತಿರುವ ಬಿಜೆಪಿಯ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಬಿಜೆಪಿ ಅಧ್ಯಕ್ಷಗಿರಿಯನ್ನು ಎಸ್ ಸಿ ವರ್ಗದವರಿಗೆ ಬಿಟ್ಟುಕೊಡಲಿ ಮತ್ತು ದೇಶದ ಪ್ರಧಾನಿ ಸ್ಥಾನವನ್ನು ಪರಿಶಿಷ್ಟ ಜಾತಿಗೆ ಸೇರಿದವರಿಗೆ ಮೊದಲು ಬಿಟ್ಟುಕೊಡಲಿ ಎಂದರು.

ಸಂವಿಧಾನ ಬದ್ಧವಾಗಿ ಸಾಮಾಜಿಕ ನ್ಯಾಯದ ಪರವಾಗಿರುವುದು ಕಾಂಗ್ರೆಸ್ ಪಕ್ಷವೇ ಹೊರತು ಬಿಜೆಪಿ ಪಕ್ಷವಲ್ಲ ಎಂದರು.

ರಾಜಕೀಯ

ಸಣ್ಣ ವ್ಯಾಪಾರಿಗಳಿಗೆ GST ಬಿಸಿ; ಸಿಎಂ ಸಿದ್ದರಾಮಯ್ಯ ವಿರುದ್ಧ ಬಿ.ವೈ. ವಿಜಯೇಂದ್ರ ವಾಗ್ದಾಳಿ

ಸಣ್ಣ ವ್ಯಾಪಾರಿಗಳಿಗೆ GST ಬಿಸಿ; ಸಿಎಂ ಸಿದ್ದರಾಮಯ್ಯ ವಿರುದ್ಧ ಬಿ.ವೈ. ವಿಜಯೇಂದ್ರ ವಾಗ್ದಾಳಿ

ಜಿಎಸ್‍ಟಿ, ಕೇಂದ್ರಕ್ಕೆ ಹೋಗುತ್ತದೆ ಎಂಬುದು ಎಷ್ಟು ಸತ್ಯವೋ, ದೇಶದ ಯಾವುದೇ ರಾಜ್ಯದಲ್ಲಿ ಇಂಥ ಬೆಳವಣಿಗೆ ಆಗಿಲ್ಲ. B.Y. Vijayendra

[ccc_my_favorite_select_button post_id="111365"]
ಮಲ್ಲಿಕಾರ್ಜುನ ಖರ್ಗೆಯವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸಿ: ಬಿ.ವೈ.ವಿಜಯೇಂದ್ರ

ಮಲ್ಲಿಕಾರ್ಜುನ ಖರ್ಗೆಯವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸಿ: ಬಿ.ವೈ.ವಿಜಯೇಂದ್ರ

ಸಿದ್ದರಾಮಯ್ಯನವರು ಮತ್ತು ಕಾಂಗ್ರೆಸ್ ಪಕ್ಷದ ವರಿಷ್ಠರನ್ನು ಪ್ರಶ್ನಿಸಲು ಬಯಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ (B.Y. Vijayendra) ಅವರು ತಿಳಿಸಿದ್ದಾರೆ.

[ccc_my_favorite_select_button post_id="111198"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಮಲಗಿದ್ದ ವೇಳೆ ಮನೆಯಲ್ಲಿ ಬೆಂಕಿ.. ವ್ಯಕ್ತಿ ಸಾವು.!

ದೊಡ್ಡಬಳ್ಳಾಪುರ: ಮಲಗಿದ್ದ ವೇಳೆ ಮನೆಯಲ್ಲಿ ಬೆಂಕಿ.. ವ್ಯಕ್ತಿ ಸಾವು.!

ಆಕಸ್ಮಿಕವಾಗಿ ತಗುಲಿದ ಬೆಂಕಿಯ (Fire) ಕೆನ್ನಾಲಿಗೆಗೆ ಮನೆಯಲ್ಲಿ ಮಲಗಿದ್ದ ವೇಳೆ ವ್ಯಕ್ತಿಯೋರ್ವ ಸುಟ್ಟು ಸಾವನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ

[ccc_my_favorite_select_button post_id="111353"]
Accident; ರಾಷ್ಟ್ರೀಯ ಹೆದ್ದಾರಿಯಲ್ಲಿ ಮಗುಚಿ ಬಿದ್ದ ಲಾರಿ.. ಮಾವಿನ ಕಾಯಿಗಾಗಿ ಮುಗಿಬಿದ್ದ ಜನ

Accident; ರಾಷ್ಟ್ರೀಯ ಹೆದ್ದಾರಿಯಲ್ಲಿ ಮಗುಚಿ ಬಿದ್ದ ಲಾರಿ.. ಮಾವಿನ ಕಾಯಿಗಾಗಿ ಮುಗಿಬಿದ್ದ ಜನ

ಮಾವಿನ ಕಾಯಿ ತುಂಬಿಕೊಂಡು ಸಾಗುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪೊ ಮಗುಚಿ ಬಿದ್ದಿರುವ ಘಟನೆ (Accident)

[ccc_my_favorite_select_button post_id="111232"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!