It is BJP's delusion to create a rift between me and DK Shivakumar: CM Siddaramaiah

ನನ್ನ ಹಾಗೂ ಡಿಕೆ ಶಿವಕುಮಾರ್ ನಡುವೆ ಒಡಕುಂಟು ಮಾಡುವುದು ಬಿಜೆಪಿಯವರ ಭ್ರಮೆ: ಸಿಎಂ ಸಿದ್ದರಾಮಯ್ಯ

ಮೈಸೂರು: ಸರ್ಕಾರದ ಸಾಧನೆಯ ಬಗ್ಗೆ ಸುಳ್ಳು ಹೇಳುವ ಬಿಜೆಪಿಯವರು ಎಂದಿಗೂ ಬಹಿರಂಗ ಚರ್ಚೆಗೆ ಬರುವುದಿಲ್ಲ. ಆದರೆ ನಾವು ಚರ್ಚೆಗೆ ಸದಾ ಸಿದ್ದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ತಿಳಿಸಿದರು.

ಅವರು ಇಂದು ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಣೆ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ರಾಜಕೀಯ ಲಾಭ ಪಡೆಯುವುದು ಬಿಜೆಪಿಯ ಭ್ರಮೆ

ನಿನ್ನೆ ನಡೆದ ಮೈಸೂರಿನ ಸಮಾವೇಶದಲ್ಲಿ ಮುಖ್ಯಮಂತ್ರಿಗಳು ಡಿಸಿಎಂ ಗೆ ಅವಮಾನ ಮಾಡಿದೆ ಎಂದು ಬಿಜೆಪಿಯವರು ಟೀಕಿಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡುತ್ತಾ, ಕಾರ್ಯಕ್ರಮದಲ್ಲಿ ಇರುವವರಿಗೆ ಸ್ವಾಗತ ಮಾಡುವುದು ಪರಿಪಾಠ.

ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ರವರು ಕಾರ್ಯಕ್ರಮದಲ್ಲಿ ಆ ವೇಳೆಯಲ್ಲಿ ಇರದಿದ್ದ ಕಾರಣ, ಅವರ ಹೆಸರನ್ನು ತೆಗೆದುಕೊಳ್ಳಲಿಲ್ಲವಾದ್ದರಿಂದ, ಇದರಲ್ಲಿ ಅವಮಾನ ಮಾಡುವ ಪ್ರಶ್ನೆಯಿಲ್ಲ. ಬಿಜೆಪಿಯವರು ಮೊಸರಿನಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ.

ನನ್ನ ಹಾಗೂ ಡಿಸಿಎಂ ನಡುವೆ ಒಡಕುಂಟು ಮಾಡುವ ಉದ್ದೇಶದಿಂದ ಬಿಜೆಪಿಯವರು ಇಂತಹ ಹೇಳಿಕೆಗಳನ್ನು ನೀಡುತ್ತಾರೆ. ಇದರಿಂದ ರಾಜಕೀಯ ಲಾಭವಾಗಬಹುದೆಂಬ ಭ್ರಮೆ ಬಿಜೆಪಿಯವರಿಗಿದ್ದು, ಇದು ಸದಾ ಭ್ರಮೆಯಾಗಿಯೇ ಇರಲಿದೆ ಎಂದರು.

ಡಿಜಿಟಲ್ ಪೇಮಂಟ್-ವಾಣಿಜ್ಯ ತೆರಿಗೆ ಇಲಾಖೆಯೊಂದಿಗೆ ಚರ್ಚಿಸಿ ತೀರ್ಮಾನ

ರಾಜ್ಯದ ಸಣ್ಣ ವ್ಯಾಪಾರಿಗಳಿಗೆ ಡಿಜಿಟಲ್ ಪೇಮೆಂಟ್ನಿಂದ ತೆರಿಗೆ ನೋಟೀಸ್ ನೀಡುತ್ತಿದೆ ಎಂಬ ಕೂಗೆದ್ದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಜಿಎಸ್ ಟಿ ಎಂಬುದನ್ನು ಕೇಂದ್ರ ಸರ್ಕಾರ ಮಾಡಿದ್ದು, ಜಿಎಸ್ ಟಿ ಕೌನ್ಸಿಲ್ ಕೇಂದ್ರ ಸರ್ಕಾರದ ಅಧೀನದಲ್ಲಿ ಬರುತ್ತದೆ. ಇದಕ್ಕೆ ರಾಜ್ಯಸರ್ಕಾರಗಳು ಜವಾಬ್ದಾರಿಯಿಲ್ಲ. ಆದಾಗ್ಯೂ ಈ ಬಗ್ಗೆ ಕೇಂದ್ರ ಸರ್ಕಾರದೊಂದಿಗೆ ಸಮಾಲೋಚನೆ ನಡೆಸಿ, ರಾಜ್ಯಸರ್ಕಾರದ ವಾಣಿಜ್ಯ ತೆರಿಗೆ ಇಲಾಖೆಯೊಂದಿಗೆ ಚರ್ಚಿಸಿ ಸೂಕ್ತ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದರು.

ಕಾಂಗ್ರಸ್ ಗ್ಯಾರಂಟಿಗಳನ್ನು ಬಿಜೆಪಿ ಅನುಕರಿಸುತ್ತಿದೆ

ನಿನ್ನೆ ನಡೆದ ಸಾಧನಾ ಸಮಾವೇಶ ಬಿಜೆಪಿಯವರಿಗೆ ಉತ್ತರ ನೀಡಿದೆಯೇ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸುತ್ತಾ, ಸರ್ಕಾರಕ್ಕೆ ಎರಡು ವರ್ಷತುಂಬಿದ ಸಂದರ್ಭದಲ್ಲಿ ವಿಜಯನಗರದಲ್ಲಿ ನಡೆದ ಸಮಾವೇಶದಲ್ಲಿ ಸುಮಾರು 2 ಲಕ್ಷ ಜನ ಭಾಗವಹಿಸಿದ್ದರು. ಇದು ಸರ್ಕಾರಕ್ಕೆ ಜನರ ಬೆಂಬಲವನ್ನು ಸೂಚಿಸುತ್ತದೆ.

ಬಿಜೆಪಿಯವರು ಕೇವಲ ಸುಳ್ಳು ಹೇಳುತ್ತಿದ್ದಾರೆ. ನಮ್ಮ ಗ್ಯಾರಂಟಿ ಯೋಜನೆಗಳನ್ನು ಬಿಜೆಪಿಯವರು ಅನುಕರಿಸುತ್ತಿದ್ದಾರೆ. ನಮ್ಮ ಸರ್ಕಾರ ಗ್ಯಾರಂಟಿಗಳಿಗಾಗಿ 52 ಸಾವಿರ ಕೋಟಿ ರೂ.ಗಳನ್ನು ಖರ್ಚು ಮಾಡಿದೆ ಎಂದರು.

ರಾಜಕೀಯ

ಚುನಾವಣಾ ಉದ್ದೇಶದಿಂದ ಬೆಂಗಳೂರು ಒಡೆದ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ

ಚುನಾವಣಾ ಉದ್ದೇಶದಿಂದ ಬೆಂಗಳೂರು ಒಡೆದ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ

ಬಿಬಿಎಂಪಿ ಚುನಾವಣೆಯಲ್ಲಿ ಗೆಲ್ಲುವ ಉದ್ದೇಶದಿಂದ ಕಾಂಗ್ರೆಸ್‌ ಸರ್ಕಾರ ತನಗೆ ಬೇಕಾದಂತೆ ಬೆಂಗಳೂರನ್ನು ವಿಭಜನೆ ಮಾಡಿದೆ: ಆರ್‌.ಅಶೋಕ (R. Ashok) ಹೇಳಿದರು.

[ccc_my_favorite_select_button post_id="111673"]
ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳು, ಬಿಜೆಪಿ ಹಾಗೂ ಜೆಡಿಎಸ್‌ನ್ನು ಕಂಗೆಡಿಸಿದೆ: ಸಿಎಂ ಸಿದ್ದರಾಮಯ್ಯ

ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳು, ಬಿಜೆಪಿ ಹಾಗೂ ಜೆಡಿಎಸ್‌ನ್ನು ಕಂಗೆಡಿಸಿದೆ: ಸಿಎಂ ಸಿದ್ದರಾಮಯ್ಯ

ಕಾಂಗ್ರೆಸ್ ಸರ್ಕಾರದ ಮೇಲೆ ಸುಳ್ಳು ಅಪವಾದಗಳನ್ನು ಮಾಡುವ ಬಿಜೆಪಿಯವರು ಕರ್ನಾಟಕದಲ್ಲಿ ಇಂತಹ ಜನೋಪಯೋಗಿ ಯೋಜನೆಯನ್ನು ಜಾರಿಗೆ ತಂದಿದ್ದಾರೆಯೇ? Cmsiddaramaiah

[ccc_my_favorite_select_button post_id="111451"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ಜು.25ರಿಂದ 28ರವರೆಗೆ ನಡೆಯಲಿರುವ ಪುರುಷರ ಸೀನಿಯರ್ -ನ್ಯಾಷನಲ್ಸ್ ಕಬಡ್ಡಿ ಚಾಂಪಿಯನ್‌ಶಿಪ್(Kabaddi Championship) ಪಂದ್ಯಾವಳಿ

[ccc_my_favorite_select_button post_id="111553"]
ಕರ್ತವ್ಯ ಲೋಪ: PDO ಅಮಾನತ್ತು

ಕರ್ತವ್ಯ ಲೋಪ: PDO ಅಮಾನತ್ತು

ಕರ್ತವ್ಯ ಲೋಪ ಹಾಗೂ ಅಧಿಕಾರ ದುರುಪಯೋಗದ ಆರೋಪದ ಹಿನ್ನೆಲೆಯಲ್ಲಿ ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಅವರನ್ನು ಅಮಾನತ್ತು (suspended) ಮಾಡಲಾಗಿದೆ.

[ccc_my_favorite_select_button post_id="111621"]
ದೊಡ್ಡಬಳ್ಳಾಪುರ: ಕ್ಯಾಂಟರ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಕ್ಯಾಂಟರ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು..!

ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ತಾಲ್ಲೂಕಿನ ಮಧುರೆ ರಸ್ತೆಯಲ್ಲಿನ ಖಾಸಗಿ

[ccc_my_favorite_select_button post_id="111623"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!