Necessary work for the safety of dams: DCM D.K. Shivakumar

ಅಣೆಕಟ್ಟುಗಳ ಸುರಕ್ಷತೆಗೆ ಅಗತ್ಯ ಕಾಮಗಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

ಕಬಿನಿ: “ರಾಜ್ಯದ ಅಣೆಕಟ್ಟುಗಳ ಸುರಕ್ಷತೆ ಕುರಿತು ಸರ್ಕಾರ ತಾಂತ್ರಿಕ ಸಮಿತಿ ರಚಿಸಿದ್ದು, ಈ ಸಮಿತಿ ವರದಿ ಬಂದ ನಂತರ ಅಗತ್ಯ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಕೈಗೆತ್ತಿಕೊಳ್ಳಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ತಿಳಿಸಿದರು.

ಕಬಿನಿ ಅಣೆಕಟ್ಟಿನ ಬಳಿ ಜಲಸಂಪನ್ಮೂಲ ಸಚಿವರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾಧ್ಯಮಗಳಿಗೆ ಭಾನುವಾರ ಪ್ರತಿಕ್ರಿಯೆ ನೀಡಿದರು.

“ಕೆಆರ್ ಎಸ್ ಅಣೆಕಟ್ಟಿನ ನಂತರ ಇಂದು ಕಬಿನಿಯಲ್ಲಿ ಬಾಗಿನ ಅರ್ಪಣೆ ಮಾಡಿದ್ದೇವೆ. ಈ ಮಧ್ಯೆ ಎರಡು ವರ್ಷ ಅಣೆಕಟ್ಟು ಭರ್ತಿ ಆಗಿರಲಿಲ್ಲ. ಈ ವರ್ಷ ತುಂಬಿದೆ. ಕಬಿನಿಯಿಂದ ನಮಗೆ ಕಷ್ಟ ಕಾಲದಲ್ಲೂ ಸಹಾಯವಾಗುತ್ತಿದೆ. ಈ ಪ್ರದೇಶ ವಿಸ್ತರಣೆ ಮಾಡಬೇಕು ಎಂದು ನಮ್ಮ ಶಾಸಕರು ಪ್ರಸ್ತಾವನೆ ನೀಡಿದ್ದಾರೆ. ಮಹದೇಶ್ವರ ಬೆಟ್ಟದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಸುಮಾರು 35 ಕೋಟಿ ಮೊತ್ತದ ಅಭಿವೃದ್ಧಿ ಕಾಮಗಾರಿಗಳಿಗೆ ಅನುಮೋದನೆ ನೀಡಿದ್ದೇವೆ. ಈ ಭಾಗದಲ್ಲಿ 88 ಕೋಟಿ ಮೊತ್ತದ ಹನಿ ನೀರಾವರಿ ಯೋಜನೆಗೆ ಡಿಪಿಆರ್ ಸಿದ್ಧಗೊಳಿಸಿ ಪ್ರಸ್ತಾವನೆ ಸಲ್ಲಿಸಿದ್ದೇವೆ” ಎಂದು ತಿಳಿಸಿದರು.

“ತುಂಗಭದ್ರಾ ಅಣೆಕಟ್ಟು ಗೇಟ್ ದುರಸ್ತಿಯಾದ ಬಳಿಕ ರಾಜ್ಯದ ಎಲ್ಲಾ ಅಣೆಕಟ್ಟುಗಳ ಸುರಕ್ಷತೆ ವಿಚಾರದಲ್ಲಿ ತಾಂತ್ರಿಕ ಸಮಿತಿ ರಚಿಸಲಾಗಿದೆ. ಈ ವರದಿ ಬಂದ ಬಳಿಕ ಮುಂದಿನ ಕ್ರಮ ಕೈಗೊಳ್ಳುತ್ತೇವೆ” ಎಂದರು.

ಕಬಿನಿ ಉತ್ಸವ ಮಾಡುವ ಬಗ್ಗೆ ಒತ್ತಾಯ ಇದೆ ಎಂದು ಕೇಳಿದಾಗ, “ಈ ಬಗ್ಗೆ ಪ್ರಸ್ತಾವನೆ ಸಲ್ಲಿಸಿದ್ದಾರೆ. ಈ ಬಗ್ಗೆ ಜಿಲ್ಲಾ ಸಚಿವರು ಹಾಗೂ ಇತರರೊಂದಿಗೆ ಚರ್ಚೆ ಮಾಡುತ್ತೇನೆ. ಕಬಿನಿ ಉತ್ಸವ, ಕಾವೇರಿ ಆರತಿ ಮಾಡಲು ನಾವು ಚರ್ಚೆ ಮಾಡುತ್ತಿದ್ದೇವೆ. ಈ ಕಾರ್ಯಕ್ರಮಗಳ ಮೂಲಕ ಪ್ರವಾಸೋದ್ಯಮ ಆಕರ್ಷಣೆ ಹಾಗೂ ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡಲು ನಮ್ಮ ಸರ್ಕಾರ ಸಂಕಲ್ಪ ಮಾಡಿದೆ” ಎಂದು ಹೇಳಿದರು.

ಬಟಾನಿಕಲ್ ಗಾರ್ಡನ್ ಮಾಡುವ ಯೋಜನೆ ನೆನೆಗುದಿಗೆ ಬಿದ್ದಿದೆಯಲ್ಲ ಎಂದು ಕೇಳಿದಾಗ, “ಇದಕ್ಕೆ ಬಂಡವಾಳ ಹೂಡಿಕೆ ಮಾಡುವವರು ಮುಂದೆ ಬರಬೇಕು. ನಮ್ಮ ಆದ್ಯತೆ ಇರುವುದು ನೀರಿನ ಸಮರ್ಪಕ ಬಳಕೆ ಹಾಗೂ ಅಣೆಕಟ್ಟು ಸುರಕ್ಷತೆ ಬಗ್ಗೆ ಇದೆ”ಎಂದು ಹೇಳಿದರು.

ಖಾಸಗಿ ಕೆಲಸದ ನಿಮಿತ್ತ ಪ್ರಯಾಣ

ದಿಢೀರನೆ ದೆಹಲಿ ಪ್ರವಾಸದ ಬಗ್ಗೆ ಕೇಳಿದಾಗ, “ನಾನು ಸಿಎಂಗೆ ಮಾಹಿತಿ ನೀಡಿ ನಾನು ಕಾರ್ಯಕ್ರಮದಿಂದ ಹೊರಟೆ. ಮಾರ್ಗ ಮಧ್ಯದಲ್ಲೇ ನನ್ನ ಬೆಂಗಾವಲು ವಾಹನ ಅಪಘಾತಕ್ಕೀಡಾಯಿತು. ತಾಯಿ ಚಾಮುಂಡೇಶ್ವರಿ ಕೃಪೆ ಯಾರಿಗೂ ಅಪಾಯವಾಗಿಲ್ಲ. ವಕೀಲರ ಜೊತೆ ಸಭೆ ನಿಗದಿಯಾದ ಕಾರಣ, ನಾನು 7.30ಕ್ಕೆ ತೆರಳಿ, 9.30ಕ್ಕೆ ವಾಪಸ್ ಬಂದಿದ್ದೇನೆ. ನಂತರ ಇಂದಿನ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದೇನೆ. ನನ್ನ ಖಾಸಗಿ ಕಾರ್ಯಕ್ರಮ ಹಿನ್ನೆಲೆಯಲ್ಲಿ ಹೋಗಿದ್ದು, ಅದನ್ನು ಮುಗಿಸಿಕೊಂಡು ಬಂದಿದ್ದೇನೆ. ಇದರ ಹೊರತಾಗಿ ರಾಜಕಾರಣವಿಲ್ಲ” ಎಂದು ಹೇಳಿದರು.

ಡಿ.ಕೆ. ಶಿವಕುಮಾರ್ ಅವರಿಗೆ ಅಪಮಾನ ಮಾಡಲಾಗಿದೆ ಎಂಬ ಬಿಜೆಪಿ ನಾಯಕರ ಹೇಳಿಕೆ ಬಗ್ಗೆ ಕೇಳಿದಾಗ, “ಅವರಿಗೆ ಯಾವಾಗಲೂ ನನ್ನ ಮೇಲೆ ಪ್ರೀತಿ ಜಾಸ್ತಿ. ನಾನು ಹೆಚ್ಚು ಬಲಿಷ್ಠವಾಗಿರುವುದಕ್ಕೆ ನನ್ನ ಮೇಲೆ ಪ್ರೀತಿ ಜಾಸ್ತಿ” ಎಂದು ಲೇವಡಿ ಮಾಡಿದರು.

ರಾಜಕೀಯ

ಚುನಾವಣಾ ಉದ್ದೇಶದಿಂದ ಬೆಂಗಳೂರು ಒಡೆದ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ

ಚುನಾವಣಾ ಉದ್ದೇಶದಿಂದ ಬೆಂಗಳೂರು ಒಡೆದ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ

ಬಿಬಿಎಂಪಿ ಚುನಾವಣೆಯಲ್ಲಿ ಗೆಲ್ಲುವ ಉದ್ದೇಶದಿಂದ ಕಾಂಗ್ರೆಸ್‌ ಸರ್ಕಾರ ತನಗೆ ಬೇಕಾದಂತೆ ಬೆಂಗಳೂರನ್ನು ವಿಭಜನೆ ಮಾಡಿದೆ: ಆರ್‌.ಅಶೋಕ (R. Ashok) ಹೇಳಿದರು.

[ccc_my_favorite_select_button post_id="111673"]
ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳು, ಬಿಜೆಪಿ ಹಾಗೂ ಜೆಡಿಎಸ್‌ನ್ನು ಕಂಗೆಡಿಸಿದೆ: ಸಿಎಂ ಸಿದ್ದರಾಮಯ್ಯ

ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳು, ಬಿಜೆಪಿ ಹಾಗೂ ಜೆಡಿಎಸ್‌ನ್ನು ಕಂಗೆಡಿಸಿದೆ: ಸಿಎಂ ಸಿದ್ದರಾಮಯ್ಯ

ಕಾಂಗ್ರೆಸ್ ಸರ್ಕಾರದ ಮೇಲೆ ಸುಳ್ಳು ಅಪವಾದಗಳನ್ನು ಮಾಡುವ ಬಿಜೆಪಿಯವರು ಕರ್ನಾಟಕದಲ್ಲಿ ಇಂತಹ ಜನೋಪಯೋಗಿ ಯೋಜನೆಯನ್ನು ಜಾರಿಗೆ ತಂದಿದ್ದಾರೆಯೇ? Cmsiddaramaiah

[ccc_my_favorite_select_button post_id="111451"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ಜು.25ರಿಂದ 28ರವರೆಗೆ ನಡೆಯಲಿರುವ ಪುರುಷರ ಸೀನಿಯರ್ -ನ್ಯಾಷನಲ್ಸ್ ಕಬಡ್ಡಿ ಚಾಂಪಿಯನ್‌ಶಿಪ್(Kabaddi Championship) ಪಂದ್ಯಾವಳಿ

[ccc_my_favorite_select_button post_id="111553"]
ಕರ್ತವ್ಯ ಲೋಪ: PDO ಅಮಾನತ್ತು

ಕರ್ತವ್ಯ ಲೋಪ: PDO ಅಮಾನತ್ತು

ಕರ್ತವ್ಯ ಲೋಪ ಹಾಗೂ ಅಧಿಕಾರ ದುರುಪಯೋಗದ ಆರೋಪದ ಹಿನ್ನೆಲೆಯಲ್ಲಿ ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಅವರನ್ನು ಅಮಾನತ್ತು (suspended) ಮಾಡಲಾಗಿದೆ.

[ccc_my_favorite_select_button post_id="111621"]
ದೊಡ್ಡಬಳ್ಳಾಪುರ: ಕ್ಯಾಂಟರ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಕ್ಯಾಂಟರ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು..!

ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ತಾಲ್ಲೂಕಿನ ಮಧುರೆ ರಸ್ತೆಯಲ್ಲಿನ ಖಾಸಗಿ

[ccc_my_favorite_select_button post_id="111623"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!