ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ (Youth Congress Committee) ಆಡಳಿತ ಉಸ್ತುವಾರಿಯಾಗಿ ದೊಡ್ಡಬಳ್ಳಾಪುರ ತಾಲೂಕು ರಾಜಘಟ್ಟದ ಯಶವಂತ್ ಆರ್ (Yashwanth R) ಅವರನ್ನು ನೇಮಕ ಮಾಡಲಾಗಿದೆ.
ಈ ಕುರಿತಂತೆ ರಾಜ್ಯ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಬಾಹುಬಲಿ ಆದೇಶಿಸಿದ್ದಾರೆ.
ಅಖಿಲ ಭಾರತ ಯುವ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕ ಉಸ್ತುವಾರಿ ನಿಗಮ್ ಭಂಡಾರಿ ಹಾಗೂ ಕರ್ನಾಟಕ ಯುವ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್. ಮಂಜುನಾಥ್ ಅವರ ನಿರ್ದೇಶನದ ಮೇರೆಗೆ ಯಶವಂತ್ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸಿನ ಆಡಳಿತ ಉಸ್ತುವಾರಿಯಾಗಿ ನೇಮಕ ಮಾಡಲಾಗಿದೆ.
ಈ ಆದೇಶವು ತಕ್ಷಣದಿಂದ ಜಾರಿಗೆ ಬರುತ್ತದೆ ಎಂದು ಆದೇಶ ಪತ್ರದಲ್ಲಿ ತಿಳಿಸಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸಿನ ಆಡಳಿತ ಉಸ್ತುವಾರಿಯಾಗಿ ನೇಮಕವಾದ ಯಶವಂತ್ ಅವರನ್ನು ಕೆಪಿಸಿಸಿ ಉಪಾಧ್ಯಕ್ಷ ಟಿ.ವೆಂಕಟರಮಣಯ್ಯ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಶರತ್ ಪಟೇಲ್, ತಾಲೂಕು ಅಧ್ಯಕ್ಷ ಪುನೀತ್ ಮಲ್ಲೋಹಳ್ಳಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುಶಾಂತ್, ಕಸಬಾ ಬ್ಲಾಕ್ ಅಧ್ಯಕ್ಷ ಜಯಸಿಂಹ ಅಭಿನಂದನೆ ಸಲ್ಲಿಸಿದ್ದಾರೆ.