If Shri Manjunatha is insulted, it is an insult to us too: D.K. Suresh

ಶ್ರೀಕ್ಷೇತ್ರ ಯಾವುದೇ ಒಂದು ಕುಟುಂಬದ ಆಸ್ತಿಯಲ್ಲ; ಶ್ರೀ ಮಂಜುನಾಥನಿಗೆ ಅಪಮಾನವಾದರೆ ನಮಗೂ ಅಪಮಾನವಾದಂತೆ: ಬಮುಲ್ ಅಧ್ಯಕ್ಷ ಡಿ.ಕೆ. ಸುರೇಶ್

ಬೆಂಗಳೂರು: “ಇ.ಡಿ. ರಾಜಕೀಯ ಅಸ್ತ್ರವಾಗಿ ಬಳಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ತೀರ್ಪು ಮಹತ್ವದ್ದಾಗಿದೆ” ಎಂದು ಬಮುಲ್ ಅಧ್ಯಕ್ಷ ಹಾಗೂ ನಿಕಟಪೂರ್ವ ಸಂಸದ ಡಿ.ಕೆ. ಸುರೇಶ್ (D.K. Suresh) ಹೇಳಿದ್ದಾರೆ.

ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಸುರೇಶ್ ಅವರು ಮಂಗಳವಾರ ಪ್ರತಿಕ್ರಿಯೆ ನೀಡಿದರು.

ನಿನ್ನೆ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು ಮಹತ್ವದ್ದಾಗಿದೆ. ಇ.ಡಿ ಸಂಸ್ಥೆ ಹಸ್ತಕ್ಷೇಪ, ಕಾರ್ಯವೈಖರಿ ಹಾಗೂ ಎಲ್ಲೆ ಮೀರಿ ವರ್ತನೆ ಮಾಡುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು ಇದೇ ಮೊದಲಲ್ಲ. ಕಳೆದ ಎರಡು ವರ್ಷಗಳಿಂದ ಸುಪ್ರೀಂ ಕೋರ್ಟ್ ಈ ವಿಚಾರವಾಗಿ ಚಾಟಿ ಬೀಸುತ್ತಲೇ ಇದೆ.

ಇ.ಡಿ. ಸಂಸ್ಥೆ ರಾಜಕೀಯ ಕೈಗೊಂಬೆಯಾಗಿ ಕೆಲಸ ಮಾಡುತ್ತಿರುವುದನ್ನು ನೋಡುತ್ತಿದ್ದೇವೆ. ಕಳೆದ ವಾರ ಮದ್ರಾಸ್ ಹೈಕೋರ್ಟ್ ಕೂಡ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಇ.ಡಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿತ್ತು. ರಾಜಕೀಯ ಪ್ರೇರಿತ ದಾಳಿ ಮಾಡಿ ವಿರೋಧ ಪಕ್ಷಗಳನ್ನು ಬಗ್ಗುಬಡಿಯಲು ಕೇಂದ್ರ ಸರ್ಕಾರ ಇ.ಡಿ ಸಂಸ್ಥೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ.

ಮುಂದಿನ ದಿನಗಳಲ್ಲಿಯಾದರೂ ಕೇಂದ್ರ ಸರ್ಕಾರ ದ್ವೇಷದ ರಾಜಕಾರಣ ಬಿಟ್ಟು, ಅಭಿವೃದ್ಧಿ ರಾಜಕಾರಣ ಮಾಡಲಿ. ದೇಶದ ಅಭಿವೃದ್ಧಿ, ಯುವಕರ ಭವಿಷ್ಯ ನಿರ್ಮಾಣ ಮಾಡುವ ಬಗ್ಗೆ, ಸಮಸ್ಯೆಗಳನ್ನು ನಿವಾರಿಸುವ ಬಗ್ಗೆ ಚಿಂತನೆ ಮಾಡಲಿ ಎಂದು ಒತ್ತಾಯಿಸುತ್ತೇನೆ ಎಂದು ತಿಳಿಸಿದರು.

ಇ.ಡಿಯಿಂದ ರಾಜಕೀಯ ನಾಯಕರುಗಳಿಗೆ ಡ್ಯಾಮೇಜ್ ಆಗುತ್ತಿದೆಯೇ ಎಂದು ಕೇಳಿದಾಗ, “ರಾಜಕೀಯದಲ್ಲಿ ಎಲ್ಲವನ್ನು ಸಹಿಸಲು ಸಿದ್ಧರಾಗಿರುತ್ತಾರೆ. ಕೆಲವರು ಇದನ್ನು ಅಸ್ತ್ರವಾಗಿ ಬಳಸಿಕೊಂಡು ವಿರೋಧ ಪಕ್ಷಗಳ ನಾಯಕರನ್ನು ಸದೆಬಡಿಯುವ ಪ್ರಯತ್ನ ಮಾಡುತ್ತಿದ್ದಾರೆ. ಇಂತಹ ಷಡ್ಯಂತ್ರ ಆಗಬಾರದು ಎಂದು ಸುಪ್ರೀಂ ಕೋರ್ಟ್ ತೀರ್ಪು ನ್ಯಾಯಕ್ಕೆ ಗೌರವ ಸಿಕ್ಕಂತಾಗಿದೆ ಎಂದು ಭಾವಿಸುತ್ತೇನೆ” ಎಂದು ತಿಳಿಸಿದರು.

ನನ್ನ ಮೇಲಿನ ಪ್ರಕರಣವೇ ರಾಜಕೀಯ ಷಡ್ಯಂತ್ರಕ್ಕೆ ಸಾಕ್ಷಿ ಎಂಬ ಡಿ.ಕೆ. ಶಿವಕುಮಾರ್ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ನಮ್ಮ ಮೇಲಿನ ಇ.ಡಿ ಪ್ರಕರಣ ವಜಾವಾಗಿದ್ದರೂ ಸಿಬಿಐಗೆ ಪತ್ರ ಬರೆಯುವುದು, ಸಿಬಿಐ ಆದಾಯ ತೆರಿಗೆಗೆ ಪತ್ರ ಬರೆಯುವುದು ಹೀಗೆ ಪ್ರತಿ ಹಂತದಲ್ಲೂ ಯಾವುದಾದರೂ ಪ್ರಕರಣದ ಸುಳಿಯಲ್ಲಿ ಸಿಲುಕಿಸಿ ಸದೆಬಡಿಯುವ ಪ್ರಯತ್ನ ನಡೆಯುತ್ತಿರುವುದು ಸ್ಪಷ್ಟವಾಗಿದೆ. ಇಲ್ಲಿ ನ್ಯಾಯಕ್ಕಾಗಿ ಹೋರಾಟ ನಡೆಯುತ್ತಿಲ್ಲ. ಸರಿ, ತಪ್ಪು ತೀರ್ಮಾನ ಮಾಡಲು ತನಿಖೆ ನಡೆಯುತ್ತಿಲ್ಲ. ಎಲ್ಲಾದರೂ ಒಂದು ಕಡೆ ತಪ್ಪಿಸಿಕೊಂಡರೆ, ಮತ್ತೊಂದು ಕಡೆ ಸಿಲುಕಿಸುವ ಪ್ರವೃತ್ತಿ ಬೆಳೆಸಿಕೊಂಡು ಕೇಂದ್ರ ಸರ್ಕಾರ ಕೆಲಸ ಮಾಡುತ್ತಿದೆ” ಎಂದು ತಿಳಿಸಿದರು.

ಅನುಮಾನಗಳ ನಿವಾರಣೆಗೆ ಎಸ್ಐಟಿ ರಚನೆ; ಇದರಲ್ಲಿ ರಾಜಕೀಯ ಕೆಸರೆರೆಚಾಟ ಬೇಡ

ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ರಚಿಸಲಾಗಿದ್ದು, ಕೆಲವರನ್ನು ರಕ್ಷಣೆ ಮಾಡಲು ಧರ್ಮ ಕ್ಷೇತ್ರವನ್ನು ಗುರಿಯಾಗಿಸಲು ಪ್ರಯತ್ನವಿದೆ ಎಂಬ ಚರ್ಚೆ ನಡೆಯುತ್ತಿದೆ ಎಂದು ಕೇಳಿದಾಗ, ಧರ್ಮಸ್ಥಳ ಶ್ರೀಕ್ಷೇತ್ರವನ್ನು ರಾಜ್ಯದ ಬಹುತೇಕ ಮಂದಿ ನಂಬಿ ಪೂಜೆ, ಹರಕೆ ಮಾಡಿಕೊಂಡು ಬಂದಿದ್ದಾರೆ.

ಕೆಲವು ವಿಚಾರಗಳು ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ ಮಾಡುತ್ತಲೇ ಬಂದಿದೆ. ಈ ವಿಚಾರದಲ್ಲಿ ಜನರ ಅನುಮಾನಗಳನ್ನು ನಿವಾರಣೆ ಮಾಡುವುದು ಸರ್ಕಾರದ ಕರ್ತವ್ಯ. ಇದರಿಂದ ಶ್ರೀಕ್ಷೇತ್ರಕ್ಕೂ ಒಳ್ಳೆಯದು.

ಕೆಲವರು ಇದನ್ನು ಹಿಂದೂ ವಿರೋಧಿ ನೀತಿ ಎಂಬ ರೀತಿ ಬಿಂಬಿಸುತ್ತಿದ್ದಾರೆ. ಇದು ಹಿಂದೂ ವಿರೋಧಿ ನೀತಿ ಅಲ್ಲ. ಇದು ಹಿಂದೂಗಳ ಪರವಾದ ನೀತಿ. ಹಿಂದೂಗಳಿಗೆ ಅನ್ಯಾಯ ಆಗಿದ್ದರೆ ಅದನ್ನು ಸರಿಪಡಿಸಬೇಕಾಗಿದೆ.

ಈ ಜವಾಬ್ದಾರಿ ಮಾತನಾಡುತ್ತಿರುವವರು ಸೇರಿದಂತೆ ಎಲ್ಲರ ಮೇಲಿದೆ. ಇದು ಶ್ರೀಕ್ಷೇತ್ರದ ಪಾವಿತ್ರ್ಯತೆ ನಂಬಿಕೆ ಉಳಿಸಿಕೊಳ್ಳುವ ಕೆಲಸವಾಗಿದೆ. ಇದು ರಾಜಕೀಯ ಕೆಸರೆರೆಚಾಟದಿಂದ ಹೊರಗೆ ಬರಬೇಕು.

40 ವರ್ಷಗಳಿಂದ ಪ್ರತಿ ವರ್ಷ ನಾನು ಶ್ರೀಕ್ಷೇತ್ರಕ್ಕೆ ಹೋಗಿ ಮಂಜುನಾಥನ ದರ್ಶನ ಪಡೆಯುತ್ತೇನೆ. ಇಲ್ಲಿ ನಂಬಿಕೆ ಎಂಬುದು ಬಹಳ ಮುಖ್ಯ. ಇಲ್ಲಿ ಯಾರು ತಪ್ಪು ಮಾಡಿದ್ದಾರೆ, ಯಾರಿಂದ ತಪ್ಪಾಗಿದೆ ಎಂದು ಯಾರಿಗೂ ಗೊತ್ತಿಲ್ಲ. ಶ್ರೀಕ್ಷೇತ್ರದ ಹೆಸರಿನಲ್ಲಿ ಏನಾದರೂ ಅಪಮಾನ ಆಗಿದ್ದರೆ ಇದನ್ನು ಸರಿಪಡಿಸುವ ಜವಾಬ್ದಾರಿ ಇದರ ಉಸ್ತುವಾರಿಗಳ ಮೇಲೆ ಇದೆ. ಇದರಲ್ಲಿ ಯಾರನ್ನೂ ರಕ್ಷಣೆ ಮಾಡುವ ಅಥವಾ ಅಪಮಾನ ಮಾಡುವ ಪ್ರಶ್ನೆಯಲ್ಲ.

ಶ್ರೀಕ್ಷೇತ್ರ ಯಾವುದೇ ಒಂದು ಕುಟುಂಬದ ಆಸ್ತಿಯಲ್ಲ. ಇದನ್ನು ಒಂದು ಕುಟುಂಬ ನೋಡಿಕೊಳ್ಳುತ್ತಿದ್ದರೂ ಎಲ್ಲಾ ಭಕ್ತರಿಗೂ ಸೇರಿದ ಸ್ವತ್ತು. ಶ್ರೀ ಮಂಜುನಾಥನಿಗೆ ಅಪಮಾನವಾದರೆ ನಮಗೂ ಅಪಮಾನವಾದಂತೆ ಎಂದು ತಿಳಿಸಿದರು.

ಬಿಬಿಎಂಪಿಯನ್ನು ಐದು ಪಾಲಿಕೆಯಾಗಿ ವಿಂಗಡಿಸುವ ಬಗ್ಗೆ ಬಿಜೆಪಿ ಹೋರಾಟ ನಡೆಸುವುದರ ಬಗ್ಗೆ ಕೇಳಿದಾಗ, “ಪರ ವಿರೋಧ ಚರ್ಚೆ ಇದ್ದೇ ಇರುತ್ತದೆ. ಸರ್ಕಾರ ಇದರ ಬಗ್ಗೆ ಗಮನ ಹರಿಸಲಿದೆ” ಎಂದರು.

ಗ್ರಾಮಾಂತರ ಭಾಗಗಳು ಇದರ ವ್ಯಾಪ್ತಿಗೆ ಬರುತ್ತಿವೆ ಎಂದು ಕೇಳಿದಾಗ, “ನಗರೀಕರಣ ವೇಗವಾಗಿ ಆಗುತ್ತಿರುವುದರಿಂದ ಎಲ್ಲರಿಗೂ ಮೂಲಭೂತ ಸೌಕರ್ಯ ಒದಗಿಸಬೇಕು. ನನ್ನ ಕ್ಷೇತ್ರ ಭಾಗದ ಅನೇಕ ಪ್ರದೇಶಗಳಲ್ಲಿ ಇದು ಹಳ್ಳಿಯೇ, ಪಂಚಾಯ್ತಿಯೇ ಎಂದು ಗೊಂದಲವಾಗುತ್ತದೆ. ಇಂತಹ ಪ್ರದೇಶಗಳಲ್ಲಿ ನಾಗರೀಕರು ಹೆಚ್ಚಿನ ಮೂಲಭೂತ ಸೌಕರ್ಯ ಕೇಳುತ್ತಾರೆ. ಆದರೆ ಗ್ರಾಮ ಪಂಚಾಯ್ತಿಯಿಂದ ಇದನ್ನು ಒದಗಿಸಲು ಸಾಧ್ಯವಾಗುವುದಿಲ್ಲ. ಬೆಂಗಳೂರಿನಲ್ಲಿ 1.40 ಕೋಟಿ ಜನಸಂಖ್ಯೆ ಇದೆ. ಹೀಗಾಗಿ ಆಡಳಿತ ನಡೆಸಬೇಕಾದರೆ ಒಬ್ಬ ಆಯುಕ್ತರಿಂದ ಎಲ್ಲವೂ ಸಾಧ್ಯವಿಲ್ಲ. ಉತ್ತಮ ಆಡಳಿತ ನೀಡಬೇಕು ಎಂದು ಸರ್ಕಾರ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲವು ತೀರ್ಮಾನ ಕೈಗೊಂಡಿದೆ” ಎಂದು ತಿಳಿಸಿದರು.

ಡಿಸಿಎಂ ಹಾಗೂ ಸಿಎಂ ದೆಹಲಿ ಪ್ರವಾಸದ ಬಗ್ಗೆ ಕೇಳಿದಾಗ, “ಅವರು ಹೋಗಬಾರದೇ? ಪಕ್ಷದ ನಾಯಕರ ಜೊತೆ ಪಕ್ಷದ ಸಂಘಟನೆ ಸೇರಿದಂತೆ ಅನೇಕ ವಿಚಾರಗಳ ಜೊತೆ ಚರ್ಚೆ ಮಾಡಲಿದ್ದಾರೆ. ಸಂಸತ್ ಅಧಿವೇಶನ ನಡೆಯುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸಚಿವರನ್ನು ಭೇಟಿ ಮಾಡಿ ರಾಜ್ಯಕ್ಕೆ ಬರಬೇಕಾದ ಅನುದಾನ, ಯೋಜನೆಗಳ ಬಗ್ಗೆ ಚರ್ಚೆ ಮಾಡಲಾಗುವುದು. ಡಿ.ಕೆ. ಶಿವಕುಮಾರ್ ಅವರು ದೆಹಲಿಗೆ ಹೋಗುವುದು ಹೊಸತೇನಲ್ಲ” ಎಂದು ತಿಳಿಸಿದರು.

ಮೈಸೂರಿನ ಸಾಧನ ಸಮಾವೇಶದಲ್ಲಿ ಡಿ.ಕೆ. ಶಿವಕುಮಾರ್ ಅವರ ಹೆಸರು ಪ್ರಸ್ತಾಪ ಮಾಡಲಿಲ್ಲ ಎಂದು ಕೇಳಿದಾಗ, “ಈ ಬಗ್ಗೆ ಮುಖ್ಯಮಂತ್ರಿಗಳೇ ಸ್ಪಷ್ಟೀಕರಣ ನೀಡಿರುವಾಗ ಮತ್ತೆ ಈ ವಿಚಾರ ಚರ್ಚೆ ಮಾಡುವುದರಲ್ಲಿ ಅರ್ಥವಿಲ್ಲ” ಎಂದು ತಿಳಿಸಿದರು.

ರಾಜಕೀಯ

ಚುನಾವಣಾ ಉದ್ದೇಶದಿಂದ ಬೆಂಗಳೂರು ಒಡೆದ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ

ಚುನಾವಣಾ ಉದ್ದೇಶದಿಂದ ಬೆಂಗಳೂರು ಒಡೆದ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ

ಬಿಬಿಎಂಪಿ ಚುನಾವಣೆಯಲ್ಲಿ ಗೆಲ್ಲುವ ಉದ್ದೇಶದಿಂದ ಕಾಂಗ್ರೆಸ್‌ ಸರ್ಕಾರ ತನಗೆ ಬೇಕಾದಂತೆ ಬೆಂಗಳೂರನ್ನು ವಿಭಜನೆ ಮಾಡಿದೆ: ಆರ್‌.ಅಶೋಕ (R. Ashok) ಹೇಳಿದರು.

[ccc_my_favorite_select_button post_id="111673"]
ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳು, ಬಿಜೆಪಿ ಹಾಗೂ ಜೆಡಿಎಸ್‌ನ್ನು ಕಂಗೆಡಿಸಿದೆ: ಸಿಎಂ ಸಿದ್ದರಾಮಯ್ಯ

ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳು, ಬಿಜೆಪಿ ಹಾಗೂ ಜೆಡಿಎಸ್‌ನ್ನು ಕಂಗೆಡಿಸಿದೆ: ಸಿಎಂ ಸಿದ್ದರಾಮಯ್ಯ

ಕಾಂಗ್ರೆಸ್ ಸರ್ಕಾರದ ಮೇಲೆ ಸುಳ್ಳು ಅಪವಾದಗಳನ್ನು ಮಾಡುವ ಬಿಜೆಪಿಯವರು ಕರ್ನಾಟಕದಲ್ಲಿ ಇಂತಹ ಜನೋಪಯೋಗಿ ಯೋಜನೆಯನ್ನು ಜಾರಿಗೆ ತಂದಿದ್ದಾರೆಯೇ? Cmsiddaramaiah

[ccc_my_favorite_select_button post_id="111451"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ಜು.25ರಿಂದ 28ರವರೆಗೆ ನಡೆಯಲಿರುವ ಪುರುಷರ ಸೀನಿಯರ್ -ನ್ಯಾಷನಲ್ಸ್ ಕಬಡ್ಡಿ ಚಾಂಪಿಯನ್‌ಶಿಪ್(Kabaddi Championship) ಪಂದ್ಯಾವಳಿ

[ccc_my_favorite_select_button post_id="111553"]
ಕರ್ತವ್ಯ ಲೋಪ: PDO ಅಮಾನತ್ತು

ಕರ್ತವ್ಯ ಲೋಪ: PDO ಅಮಾನತ್ತು

ಕರ್ತವ್ಯ ಲೋಪ ಹಾಗೂ ಅಧಿಕಾರ ದುರುಪಯೋಗದ ಆರೋಪದ ಹಿನ್ನೆಲೆಯಲ್ಲಿ ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಅವರನ್ನು ಅಮಾನತ್ತು (suspended) ಮಾಡಲಾಗಿದೆ.

[ccc_my_favorite_select_button post_id="111621"]
ದೊಡ್ಡಬಳ್ಳಾಪುರ: ಕ್ಯಾಂಟರ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಕ್ಯಾಂಟರ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು..!

ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ತಾಲ್ಲೂಕಿನ ಮಧುರೆ ರಸ್ತೆಯಲ್ಲಿನ ಖಾಸಗಿ

[ccc_my_favorite_select_button post_id="111623"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!