BJP supports small traders' struggle: B.Y. Vijayendra

GST ಬರೆ; ಸಣ್ಣ ವ್ಯಾಪಾರಿಗಳ ಹೋರಾಟಕ್ಕೆ ಬಿಜೆಪಿ ಬೆಂಬಲ: ಬಿ.ವೈ. ವಿಜಯೇಂದ್ರ

ಬೆಂಗಳೂರು: ರಾಜ್ಯದ ಸಣ್ಣ ವ್ಯಾಪಾರಿಗಳ ಹೋರಾಟಕ್ಕೆ ಬಿಜೆಪಿ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (B.Y. Vijayendra) ತಿಳಿಸಿದ್ದಾರೆ.

ಬಿಜೆಪಿ ರಾಜ್ಯ ಕಾರ್ಯಾಲಯ ‘ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಜ್ಯ ಸರಕಾರವು ವಾಣಿಜ್ಯ ತೆರಿಗೆ ಇಲಾಖೆಯಿಂದ ಬೀದಿಬದಿ ವ್ಯಾಪಾರಿಗಳು, ಮಧ್ಯಮ, ಸಣ್ಣ ಮತ್ತು ಅತಿ ಸಣ್ಣ ವ್ಯಾಪಾರಿಗಳಿಗೆ ನೋಟಿಸ್ ಕೊಡುತ್ತಿದೆ. ಇದು ರಾಜ್ಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಈ ಎಲ್ಲ ವ್ಯಾಪಾರಿಗಳು ಅತ್ಯಂತ ಭಯ, ಆತಂಕಕ್ಕೆ ಒಳಗಾಗಿದ್ದಾರೆ ಎಂದು ಹೇಳಿದರು.

ಮತ್ತೊಂದು ಕಡೆ ಮುಖ್ಯಮಂತ್ರಿಗಳು ಸೇರಿ ಸಚಿವ ಸಂಪುಟದ ಸದಸ್ಯರು ಕೇಂದ್ರ ಸರಕಾರವನ್ನು ದೂರುವ ಕುತಂತ್ರ ಮಾಡುತ್ತಿದ್ದಾರೆ. ಜಿಎಸ್‍ಟಿ ಸಂಗ್ರಹದ ವಿಷಯದಲ್ಲಿ ಕರ್ನಾಟಕವು ಮೊದಲ ಸ್ಥಾನಕ್ಕೆ ಬರಬೇಕೆಂದು ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬಹಿರಂಗವಾಗಿಯೇ ಹೇಳಿದ್ದರು.

ಮಹಾರಾಷ್ಟ್ರವನ್ನು ಹಿಂದಿಕ್ಕಿ ಅತಿ ಹೆಚ್ಚು ಜಿಎಸ್‍ಟಿ ಸಂಗ್ರಹ ಮಾಡಬೇಕೆಂದು ಮುಖ್ಯಮಂತ್ರಿಗಳು ಬಹಿರಂಗವಾಗಿ ಹೇಳಿದ್ದರು; ಅಧಿಕಾರಿಗಳಿಗೆ ಮೊತ್ತದ ಗುರಿಯನ್ನೂ ನೀಡಿದ್ದರು ಎಂದು ಗಮನ ಸೆಳೆದರು.

ಇದೀಗ ಸತ್ಯ ಗೊತ್ತಾಗುತ್ತಿದೆ. ರಾಜ್ಯದ ಕಾಂಗ್ರೆಸ್ ಸರಕಾರದ ಖಜಾನೆ ಖಾಲಿ ಆಗಿರುವ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ವಾಣಿಜ್ಯ ತೆರಿಗೆ ಇಲಾಖೆಯಿಂದ ನೋಟಿಸ್ ಕೊಡಿಸಿ ರಾಜ್ಯ ಸರಕಾರವೇ ವಸೂಲಿಗೆ ಇಳಿದಿದೆ ಎಂದು ಟೀಕಿಸಿದರು.

ಬೀದಿಬದಿ ವ್ಯಾಪಾರಿಗಳು, ಮಧ್ಯಮ, ಸಣ್ಣ ಮತ್ತು ಅತಿ ಸಣ್ಣ ವ್ಯಾಪಾರಿಗಳಿಗೆ ನೀಡಿರುವ ನೋಟಿಸ್ ಸಂಪೂರ್ಣವಾಗಿ ಅಕ್ರಮವಾಗಿದೆ. ತಕ್ಷಣ ನೋಟಿಸ್ ಕೊಡುವುದನ್ನು ಸ್ಥಗಿತಗೊಳಿಸಬೇಕು. ಈಗಾಗಲೇ ಕೊಟ್ಟಿರುವ ನೋಟಿಸನ್ನು ಹಿಂದಕ್ಕೆ ಪಡೆಯಬೇಕೆಂದು ಆಗ್ರಹಿಸಿದರು. ಹಾಲು ಮತ್ತಿತರ ಕೆಲ ವಸ್ತುಗಳು ಜಿಎಸ್‍ಟಿ ವ್ಯಾಪ್ತಿಗೆ ಬರುವುದಿಲ್ಲ, ಅಂಥವರಿಗೂ ನೋಟಿಸ್ ಕೊಟ್ಟಿದ್ದಾರೆ.

ಜಿಎಸ್‍ಟಿ ವ್ಯವಸ್ಥೆಯಲ್ಲಿ 3 ಸ್ಲ್ಯಾಬ್‍ಗಳಿವೆ. ಎಲ್ಲರಿಗೂ ವಾಣಿಜ್ಯ ತೆರಿಗೆ ಇಲಾಖೆಯು ಶೇ 18ರ ತೆರಿಗೆ ಪಾವತಿಗೆ ನೋಟಿಸ್ ಕೊಡುತ್ತಿದೆ. ಖಜಾನೆ ಖಾಲಿ ಆಗಿದೆ ಎಂಬ ಕಾರಣಕ್ಕೆ ಯಾವುದನ್ನೂ ಪರಿಶೀಲಿಸದೆ, ವಿಮರ್ಶೆ ಮಾಡದೇ ರಾತ್ರೋರಾತ್ರಿ ನೋಟಿಸ್ ಕೊಡುತ್ತಿದ್ದು, ಎಲ್ಲ ವ್ಯಾಪಾರಿಗಳು ಭಯಭೀತರಾಗಿದ್ದಾರೆ. ಇಂಥ ಕೆಲಸಕ್ಕೆ ಕೈ ಹಾಕಿದ ರಾಜ್ಯ ಸರಕಾರವು ತಕ್ಷಣ ತನ್ನ ನಿರ್ಧಾರದಿಂದ ಹಿಂದೆ ಸರಿಯಬೇಕೆಂದು ಮುಖ್ಯಮಂತ್ರಿಗಳನ್ನು ಆಗ್ರಹಿಸಿದರು.

ನಮ್ಮ ಕಾರ್ಯಕರ್ತರಿಗೂ ಶಕ್ತಿ ಇದೆ

ಕಾಂಗ್ರೆಸ್ ಪಕ್ಷದ ವತಿಯಿಂದ ಬಿಜೆಪಿ ರಾಜ್ಯ ಕಾರ್ಯಾಲಯ ‘ಜಗನ್ನಾಥ ಭವನ’ದ ಮುಂದೆ ಅನೇಕ ಬಾರಿ ಕಾಂಗ್ರೆಸ್ ಪುಡಾರಿಗಳು ದಾಂಧಲೆ ಮಾಡುವುದು, ಹೋರಾಟದ ನೆಪದಲ್ಲಿ ಗಲಾಟೆ ಮಾಡುವುದು ನಡೆದಿದೆ. ನಮ್ಮ ಕಾರ್ಯಕರ್ತರಿಗೂ ಶಕ್ತಿ ಇದೆ.

ನಿಮ್ಮ ಪೊಲೀಸ್ ವ್ಯವಸ್ಥೆಯನ್ನು ಧಿಕ್ಕರಿಸಿ ಕಾಂಗ್ರೆಸ್ ಪಕ್ಷದ ಕಚೇರಿ ಮುಂದೆ ಹೋರಾಟ ಮಾಡುವ ಶಕ್ತಿ ನಮ್ಮ ಕಾರ್ಯಕರ್ತರಿಗೂ ಇದೆ. ನಿಮ್ಮ ಕಾರ್ಯಕರ್ತರಿಗೆ ಹೋರಾಟದ ಚಟ ಇದ್ದರೆ ಫ್ರೀಡಂಪಾರ್ಕ್ ಇದೆ ಎಂದು ಪಕ್ಷದ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ತಿಳಿಸಲು ಬಯಸುವುದಾಗಿ ಬಿ.ವೈ.ವಿಜಯೇಂದ್ರ ಅವರು ಹೇಳಿದರು.

ಪದೇಪದೇ ಹೋರಾಟದ ನೆಪದಲ್ಲಿ ಗೂಂಡಾವರ್ತನೆ ಮಾಡುತ್ತಿದ್ದಾರೆ. ಇದು ಖಂಡಿತ ಸರಿಯಲ್ಲ ಎಂದು ಎಚ್ಚರಿಸಿದರು. ಪಕ್ಷದ ಕಡೆಯಿಂದ ಪೊಲೀಸ್ ಕಮಿಷನರ್ ಅವರನ್ನು ಭೇಟಿ ಮಾಡಿ, ಇದನ್ನು ನಿಲ್ಲಿಸಲು ಈಗಾಗಲೇ ಮನವಿ ಮಾಡಿದ್ದೇವೆ ಎಂದರಲ್ಲದೆ, ಇಂಥ ಬೆಳವಣಿಗೆಯಿಂದ ಹಿಂದೆ ಸರಿಯುವಂತೆ ಡಿ.ಕೆ.ಶಿವಕುಮಾರ್ ಅವರನ್ನು ಒತ್ತಾಯಿಸಿದರು.

ಸಿಎಂಗೆ ಸುಪ್ರೀಂ ಕೋರ್ಟ್ ಕ್ಲೀನ್ ಚಿಟ್ ಕೊಟ್ಟಿಲ್ಲ

ಪ್ರಶ್ನೆಗೆ ಉತ್ತರಿಸಿದ ಅವರು, ಮುಡಾ ಹಗರಣ ಸಂಬಂಧ ಇ.ಡಿ. ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದ್ದನ್ನು ಒಪ್ಪಿಕೊಳ್ಳುತ್ತೇನೆ. ಕೆಲವು ಸೂಕ್ಷ್ಮ ಅಂಶಗಳನ್ನು ನ್ಯಾಯಾಲಯ ಗಮನಿಸಿದ್ದು, ಅದನ್ನೂ ಒಪ್ಪಿಕೊಳ್ಳುವೆ. ಆದರೆ, ಮುಡಾ ಹಗರಣದಲ್ಲಿ ಸಿಲುಕಿ ಹಾಕಿಕೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸುಪ್ರೀಂ ಕೋರ್ಟ್ ಕ್ಲೀನ್ ಚಿಟ್ ಕೊಟ್ಟಿಲ್ಲ ಎಂದು ತಿಳಿಸಿದರು.

ಮುಖ್ಯಮಂತ್ರಿ ಮತ್ತು ಅವರ ಕುಟುಂಬದವರು ಈ ಹಗರಣದ ಭಾಗೀದಾರರು ಎಂಬ ಬಿಜೆಪಿ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸ್ಪಷ್ಟಪಡಿಸಿದರು. ಅವರು ನಿರಪರಾಧಿ ಎಂದು ಸುಪ್ರೀಂ ಕೋರ್ಟ್ ಹೇಳಿಲ್ಲ. ಮುಡಾ ಹಗರಣದಲ್ಲಿ ಮುಖ್ಯಮಂತ್ರಿಗಳು ಇವತ್ತು ಕೂಡ ಆರೋಪಿಯಾಗಿದ್ದಾರೆ ಎಂದು ತಿಳಿಸಿದರು.

ಇದು ಸಿಬಿಐಗೆ ಹೋಗುವಂಥ ಪ್ರಕರಣ. 14 ನಿವೇಶನಗಳು ಸಿಎಂ ಕುಟುಂಬಕ್ಕೆ ಸಂಬಂಧಿಸಿವೆ. 5 ಸಾವಿರ ಕೋಟಿಗೂ ಹೆಚ್ಚು ಮೌಲ್ಯದ ನಿವೇಶನಗಳು ರಿಯಲ್ ಎಸ್ಟೇಟ್ ಏಜೆಂಜರ ಮೂಲಕ ಮಾರಾಟ ಆಗಿವೆ ಎಂದು ಇನ್ನೊಂದು ಪ್ರಶ್ನೆಗೆ ಉತ್ತರಿಸಿದರು.

ಧರ್ಮಸ್ಥಳದ ಕುರಿತು ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯ ಸರಕಾರ ಇದೀಗ ಎಸ್‍ಐಟಿ ರಚಿಸಿದೆ. ಶೀಘ್ರದಲ್ಲಿ ತನಿಖೆ ಆಗಲಿ. ಪಾರದರ್ಶಕ ತನಿಖೆ ಆಗಿ ಸತ್ಯಾಂಶ ಹೊರಬರಬೇಕೆಂಬುದು ಎಲ್ಲರ ಆಶಯವಾಗಿದೆ. ಈ ವಿಚಾರ ಇಟ್ಟುಕೊಂಡು ಅಲ್ಲಿನ ವಾತಾವರಣ ಹಾಳು ಮಾಡುವ, ಅಲ್ಲಿನ ವ್ಯವಸ್ಥೆ ಹಾಳು ಮಾಡುವುದು, ಅಪಪ್ರಚಾರ ಮಾಡುವುದನ್ನು ಸರಕಾರ ತಡೆಯಬೇಕು. ಇದರ ಹಿಂದಿನ ಕುತಂತ್ರ ನಮಗೂ ತಿಳಿದಿದೆ. ಅಲ್ಲಿನ ವ್ಯವಸ್ಥೆ ಹಾಳು ಮಾಡಲು ಮುಂದಾದರೆ ಏನು ಮಾಡಬೇಕೆಂದು ಚರ್ಚಿಸಿ ನಿರ್ಧರಿಸುತ್ತೇವೆ ಎಂದರು.

ತಪ್ಪಿಸಿಕೊಳ್ಳುವ ಷಡ್ಯಂತ್ರ, ಕುತಂತ್ರ?

ಅಧಿವೇಶನ ಪ್ರಾರಂಭ ಆಗಲಿದೆ. ಆಡಳಿತ ಪಕ್ಷದ ಶಾಸಕರು ಹಾದಿಬೀದಿಯಲ್ಲಿ ಮುಖ್ಯಮಂತ್ರಿಗಳ ಮರ್ಯಾದೆ ತೆಗೆಯುತ್ತಿದ್ದಾರೆ. ಅಧಿವೇಶನ ಸುಸೂತ್ರವಾಗಿ ನಡೆಯಬೇಕೆಂಬ ದೃಷ್ಟಿಯಿಂದ ಮುಖ್ಯಮಂತ್ರಿಗಳು 50 ಕೋಟಿ ಅನುದಾನ ಘೋಷಿಸಿದ್ದಾರೆ. ಆದರೆ, ಅದು ಜಮಾ ಆಗಿಲ್ಲ. ಅಭಿವೃದ್ಧಿ ಕುರಿತು ಇನ್ನೂ ತೀರ್ಮಾನ ಆಗಿಲ್ಲ ಎಂದು ಮತ್ತೊಂದು ಪ್ರಶ್ನೆಗೆ ಉತ್ತರ ನೀಡಿದರು. ತಪ್ಪಿಸಿಕೊಳ್ಳುವ ಷಡ್ಯಂತ್ರ, ಕುತಂತ್ರವೂ ಇದರಲ್ಲಿ ಇರಬಹುದು ಎಂದು ನುಡಿದರು.

ರಾಜಕೀಯ

ಚುನಾವಣಾ ಉದ್ದೇಶದಿಂದ ಬೆಂಗಳೂರು ಒಡೆದ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ

ಚುನಾವಣಾ ಉದ್ದೇಶದಿಂದ ಬೆಂಗಳೂರು ಒಡೆದ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ

ಬಿಬಿಎಂಪಿ ಚುನಾವಣೆಯಲ್ಲಿ ಗೆಲ್ಲುವ ಉದ್ದೇಶದಿಂದ ಕಾಂಗ್ರೆಸ್‌ ಸರ್ಕಾರ ತನಗೆ ಬೇಕಾದಂತೆ ಬೆಂಗಳೂರನ್ನು ವಿಭಜನೆ ಮಾಡಿದೆ: ಆರ್‌.ಅಶೋಕ (R. Ashok) ಹೇಳಿದರು.

[ccc_my_favorite_select_button post_id="111673"]
ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳು, ಬಿಜೆಪಿ ಹಾಗೂ ಜೆಡಿಎಸ್‌ನ್ನು ಕಂಗೆಡಿಸಿದೆ: ಸಿಎಂ ಸಿದ್ದರಾಮಯ್ಯ

ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳು, ಬಿಜೆಪಿ ಹಾಗೂ ಜೆಡಿಎಸ್‌ನ್ನು ಕಂಗೆಡಿಸಿದೆ: ಸಿಎಂ ಸಿದ್ದರಾಮಯ್ಯ

ಕಾಂಗ್ರೆಸ್ ಸರ್ಕಾರದ ಮೇಲೆ ಸುಳ್ಳು ಅಪವಾದಗಳನ್ನು ಮಾಡುವ ಬಿಜೆಪಿಯವರು ಕರ್ನಾಟಕದಲ್ಲಿ ಇಂತಹ ಜನೋಪಯೋಗಿ ಯೋಜನೆಯನ್ನು ಜಾರಿಗೆ ತಂದಿದ್ದಾರೆಯೇ? Cmsiddaramaiah

[ccc_my_favorite_select_button post_id="111451"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ಜು.25ರಿಂದ 28ರವರೆಗೆ ನಡೆಯಲಿರುವ ಪುರುಷರ ಸೀನಿಯರ್ -ನ್ಯಾಷನಲ್ಸ್ ಕಬಡ್ಡಿ ಚಾಂಪಿಯನ್‌ಶಿಪ್(Kabaddi Championship) ಪಂದ್ಯಾವಳಿ

[ccc_my_favorite_select_button post_id="111553"]
ಕರ್ತವ್ಯ ಲೋಪ: PDO ಅಮಾನತ್ತು

ಕರ್ತವ್ಯ ಲೋಪ: PDO ಅಮಾನತ್ತು

ಕರ್ತವ್ಯ ಲೋಪ ಹಾಗೂ ಅಧಿಕಾರ ದುರುಪಯೋಗದ ಆರೋಪದ ಹಿನ್ನೆಲೆಯಲ್ಲಿ ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಅವರನ್ನು ಅಮಾನತ್ತು (suspended) ಮಾಡಲಾಗಿದೆ.

[ccc_my_favorite_select_button post_id="111621"]
ದೊಡ್ಡಬಳ್ಳಾಪುರ: ಕ್ಯಾಂಟರ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಕ್ಯಾಂಟರ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು..!

ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ತಾಲ್ಲೂಕಿನ ಮಧುರೆ ರಸ್ತೆಯಲ್ಲಿನ ಖಾಸಗಿ

[ccc_my_favorite_select_button post_id="111623"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!