Alleged Election Illegality; B.Y. Vijayendra demands that Siddaramaiah, D.K. Shivakumar apologize

ಚುನಾವಣೆ ಅಕ್ರಮ ಆರೋಪ; ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಕ್ಷಮೆ ಕೇಳುವಂತೆ ಬಿ.ವೈ.ವಿಜಯೇಂದ್ರ ಆಗ್ರಹ

ಬೆಂಗಳೂರು: ದೇಶದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಜೀ ಅವರು ಅತ್ಯಂತ ಸಮರ್ಥವಾಗಿ 4,078 ದಿನಗಳ ಆಡಳಿತ ನಡೆಸಿದ್ದಾರೆ. ಅಂದರೆ, ಜವಾಹರಲಾಲ್ ನೆಹರೂ ಅವರ ನಂತರದಲ್ಲಿ ಅತಿ ಹೆಚ್ಚು ದಿನಗಳ ಕಾಲ ದೇಶವನ್ನು ಮುನ್ನಡೆಸುತ್ತಿರುವ ಎರಡನೇ ಪ್ರಧಾನಿ ಆಗಿ ಹೊರಹೊಮ್ಮಿದ್ದಾರೆ. ಇದು ಹೊಸ ದಾಖಲೆ. ಇದಕ್ಕಾಗಿ ನಾಡಿನ, ದೇಶದ ಜನರ ಪರವಾಗಿ ಅಭಿನಂದನೆಗಳು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ (B.Y. Vijayendra) ತಿಳಿಸಿದ್ದಾರೆ.

ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನರೇಂದ್ರ ಮೋದಿ ಅವರು ಸತತ 3ನೇ ಬಾರಿಗೆ ಪ್ರಧಾನಿಯಾಗಿ ದೇಶವನ್ನು ಮುನ್ನಡೆಸುತ್ತಿದ್ದಾರೆ. ದೇಶದ ಪ್ರಧಾನಮಂತ್ರಿಯಲ್ಲ, ದೇಶ ಸೇವಕ ಎಂಬ ವಿಚಾರ ಇಟ್ಟುಕೊಂಡು ದೇಶವನ್ನು ಮುನ್ನಡೆಸುತ್ತಿದ್ದಾರೆ.

ಮೋದಿ ಅವರು ತುರ್ತು ಪರಿಸ್ಥಿತಿ ಹೇರಿದವರಲ್ಲ. ಯಾವುದೇ ಒಂದು ಅನುಕಂಪದ ಆಧಾರದಲ್ಲಿ ಸತತವಾಗಿ ಈ ದೇಶದ ಆಡಳಿತ ನಡೆಸುತ್ತಿಲ್ಲ ಎಂದು ತಿಳಿಸಿದರು.

ಅವರು ಪ್ರಾಮಾಣಿಕರಾಗಿ, ಪರಿಶ್ರಮದಿಂದ ಅಭಿವೃದ್ಧಿ ಮಾಡುವ ಮೂಲಕ 3ನೇ ಬಾರಿಗೆ ಪ್ರಧಾನಮಂತ್ರಿಗಳಾಗಿ ಸುದೀರ್ಘವಾಗಿ ದೇಶ ಮುನ್ನಡೆಸುತ್ತಿದ್ದಾರೆ. ಮುಂದೆಯೂ ಕೂಡ ಈ ದೇಶವನ್ನು ಸದೃಢವಾಗಿ ಮುನ್ನಡೆಸಲಿದ್ದಾರೆ ಎಂದು ಹೇಳಿದರು.

ಕಾಂಗ್ರೆಸ್ ರಾಜ್ಯದಲ್ಲಿ ಗೆದ್ದದ್ದು ಹೇಗೆ?
ಲೋಕಸಭಾ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎನ್ನುವ ಮೂಲಕ ರಾಹುಲ್ ಗಾಂಧಿಯವರು ಚುನಾವಣಾ ಆಯೋಗದ ಮೇಲೆ ಆರೋಪ ಮಾಡಿದ್ದಾರೆ. ಈ ಮಾತಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕೂಡ ಧ್ವನಿಗೂಡಿಸಿದ್ದಾರೆ. ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ ಇಟ್ಟರು ಎಂಬ ಗಾದೆ ಮಾತಿದೆ. ಹಾಗಾಗಿದೆ ಇವತ್ತು ಕಾಂಗ್ರೆಸ್ ಪರಿಸ್ಥಿತಿ ಎಂದು ವಿಜಯೇಂದ್ರ ಅವರು ಟೀಕಿಸಿದರು.

ಚುನಾವಣಾ ಆಯೋಗ ಒಂದು ಸಾಂವಿಧಾನಿಕ ಸಂಸ್ಥೆ. ರಾಹುಲ್ ಗಾಂಧಿ ಮತ್ತಿತರರು ಇಂಥ ಸಾಂವಿಧಾನಿಕ ಸಂಸ್ಥೆ ಬಗ್ಗೆ ಅನುಮಾನ ವ್ಯಕ್ತಪಡಿಸುವುದು ಆ ಚುನಾವಣಾ ಆಯೋಗದ ಅಪಮಾನ ಮಾತ್ರವಲ್ಲ, ಪ್ರಜಾಪ್ರಭುತ್ವ ವಿರೋಧಿ ನಡೆಯೂ ಹೌದು ಎಂದು ಆಕ್ಷೇಪಿಸಿದರು.

ಡಿ.ಕೆ.ಶಿವಕುಮಾರ್ (D.K. Shivakumar) ಅವರು ತಮ್ಮ ಸೋದರ ಡಿ.ಕೆ.ಸುರೇಶ್ (D.K. Suresh) ಅವರು ಇದೇ ಅಕ್ರಮದಿಂದ ಸೋತಿದ್ದಾಗಿ ಹೇಳಿದ್ದಾರೆ. ಸಿದ್ದರಾಮಯ್ಯ (Siddaramaiah), ಡಿ.ಕೆ.ಶಿವಕುಮಾರ್ ಅವರು ರಾಜ್ಯದ ಜನರ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದರು.

ಚುನಾವಣಾ ಅಕ್ರಮ ನಡೆದಿದ್ದರೆ ಕಾಂಗ್ರೆಸ್ ಪಕ್ಷವು ರಾಜ್ಯದಲ್ಲಿ 136 ಶಾಸಕರ ಬಲದೊಂದಿಗೆ ಯಾಕೆ ಅಧಿಕಾರಕ್ಕೆ ಬರುತ್ತಿತ್ತು ಎಂದು ಕೇಳಿದರು.

ಕೇಂದ್ರ ಸರಕಾರ, ನರೇಂದ್ರ ಮೋದಿ, ಬಿಜೆಪಿ ಸೇರಿ ಚುನಾವಣಾ ಆಯೋಗದ ದುರ್ಬಳಕೆ ಮಾಡಿದ್ದಿದ್ದರೆ ನೀವು ಮುಖ್ಯಮಂತ್ರಿಯಾಗಲು ಸಾಧ್ಯವಿತ್ತೇ ಸಿದ್ದರಾಮಯ್ಯನವರೇ ಎಂದು ಪ್ರಶ್ನಿಸಿದರು.

ಡಿ.ಕೆ.ಶಿವಕುಮಾರ್ ಅವರು ಉಪ ಮುಖ್ಯಮಂತ್ರಿಯಾಗಿ ಇವತ್ತು ರಾಜ್ಯದಲ್ಲಿ ಅಲೆದಾಡುತ್ತಿಲ್ಲವೇ? ಈಚೆಗೆ 3 ಉಪ ಚುನಾವಣೆಯಲ್ಲೂ ಗೆದ್ದ್ದರಲ್ಲವೇ? ಆಗ ಚುನಾವಣಾ ಆಯೋಗದಿಂದ ದುರ್ಬಳಕೆ ಆಗಿಲ್ಲವೇ ಎಂದು ಕೇಳಿದರು.

ರಾಹುಲ್ ಗಾಂಧಿ, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅವರ ಹೇಳಿಕೆ ಅಪಾಯಕಾರಿ ಬೆಳವಣಿಗೆ. ಕಾಂಗ್ರೆಸ್ ನಾಯಕರ ತುರ್ತು ಪರಿಸ್ಥಿತಿಯ ಮನಸ್ಥಿತಿ ಇಂದಿಗೂ ಬದಲಾಗಿಲ್ಲ ಎಂಬುದಕ್ಕೆ ಮತ್ತೊಂದು ನಿದರ್ಶನವಿದು ಎಂದರಲ್ಲದೆ, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅವರು ನಾಡಿನ ಜನರ ಕ್ಷಮೆ ಯಾಚಿಸಬೇಕು ಎಂದು ಒತ್ತಾಯಿಸಿದರು.

ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆ ಬಗ್ಗೆ ಸುಪ್ರೀಂ ಕೋರ್ಟಿನಲ್ಲಿ ಈಗಾಗಲೇ ಚರ್ಚೆ ನಡೆಯುತ್ತಿದೆ. ಇಂಥ ಸಂದರ್ಭದಲ್ಲಿ ಹೇಳಿಕೆ ಕೊಡುವುದಾದರೆ ಸುಪ್ರೀಂ ಕೋರ್ಟಿನಲ್ಲಿ ತಿಳಿಸಲಿ. ಚುನಾವಣಾ ಆಯೋಗವನ್ನು ಪ್ರಶ್ನಿಸುವುದು, ಅನುಮಾನದಿಂದ ನೋಡುವುದು ಇವರಿಗೆ ಶೋಭೆ ತರುವುದಿಲ್ಲ ಎಂದು ನುಡಿದರು.

ಕರ್ನಾಟಕದ ಹಿತಾಸಕ್ತಿ ಬಲಿ ಕೊಡಲು ಅವಕಾಶ ಕೊಡುವುದಿಲ್ಲ

ಮಹದಾಯಿ ವಿಚಾರದ ಪ್ರಶ್ನೆಗೆ ಉತ್ತರಿಸಿದ ಅವರು, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅವರು ಮಹದಾಯಿ ವಿಚಾರದಲ್ಲಿ ರಾಜಾರೋಷವಾಗಿ ಹೇಳಿಕೆ ನೀಡಿದ್ದಾರೆ.

ಮಹದಾಯಿ ವಿಚಾರದಲ್ಲಿ ರಾಜ್ಯದ ಹಿತಾಸಕ್ತಿ ಕಾಪಾಡುವ ನಿಟ್ಟಿನಲ್ಲಿ ರಾಜ್ಯ ಬಿಜೆಪಿ ರಾಜ್ಯದೊಂದಿಗೆ ಸದಾ ಇರುತ್ತದೆ. ಗೋವಾ ಮುಖ್ಯಮಂತ್ರಿ ಹೇಳಿಕೆಯನ್ನು ನಾನು ಗಮನಿಸಿದ್ದೇನೆ. ಕೇಂದ್ರದ ಸಚಿವ ಪ್ರಲ್ಹಾದ್ ಜೋಶಿಯವರ ಹೇಳಿಕೆಯನ್ನೂ ತಾವು ಗಮನಿಸಬೇಕು. ಕರ್ನಾಟಕದ ಹಿತಾಸಕ್ತಿ ಬಲಿ ಕೊಡಲು ನಾವು ಅವಕಾಶ ಕೊಡುವುದಿಲ್ಲ ಎಂದು ವಿಜಯೇಂದ್ರ ತಿಳಿಸಿದರು.

ರಾಜಕೀಯ

ಚುನಾವಣಾ ಉದ್ದೇಶದಿಂದ ಬೆಂಗಳೂರು ಒಡೆದ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ

ಚುನಾವಣಾ ಉದ್ದೇಶದಿಂದ ಬೆಂಗಳೂರು ಒಡೆದ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ

ಬಿಬಿಎಂಪಿ ಚುನಾವಣೆಯಲ್ಲಿ ಗೆಲ್ಲುವ ಉದ್ದೇಶದಿಂದ ಕಾಂಗ್ರೆಸ್‌ ಸರ್ಕಾರ ತನಗೆ ಬೇಕಾದಂತೆ ಬೆಂಗಳೂರನ್ನು ವಿಭಜನೆ ಮಾಡಿದೆ: ಆರ್‌.ಅಶೋಕ (R. Ashok) ಹೇಳಿದರು.

[ccc_my_favorite_select_button post_id="111673"]
ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳು, ಬಿಜೆಪಿ ಹಾಗೂ ಜೆಡಿಎಸ್‌ನ್ನು ಕಂಗೆಡಿಸಿದೆ: ಸಿಎಂ ಸಿದ್ದರಾಮಯ್ಯ

ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳು, ಬಿಜೆಪಿ ಹಾಗೂ ಜೆಡಿಎಸ್‌ನ್ನು ಕಂಗೆಡಿಸಿದೆ: ಸಿಎಂ ಸಿದ್ದರಾಮಯ್ಯ

ಕಾಂಗ್ರೆಸ್ ಸರ್ಕಾರದ ಮೇಲೆ ಸುಳ್ಳು ಅಪವಾದಗಳನ್ನು ಮಾಡುವ ಬಿಜೆಪಿಯವರು ಕರ್ನಾಟಕದಲ್ಲಿ ಇಂತಹ ಜನೋಪಯೋಗಿ ಯೋಜನೆಯನ್ನು ಜಾರಿಗೆ ತಂದಿದ್ದಾರೆಯೇ? Cmsiddaramaiah

[ccc_my_favorite_select_button post_id="111451"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ಜು.25ರಿಂದ 28ರವರೆಗೆ ನಡೆಯಲಿರುವ ಪುರುಷರ ಸೀನಿಯರ್ -ನ್ಯಾಷನಲ್ಸ್ ಕಬಡ್ಡಿ ಚಾಂಪಿಯನ್‌ಶಿಪ್(Kabaddi Championship) ಪಂದ್ಯಾವಳಿ

[ccc_my_favorite_select_button post_id="111553"]
ಕರ್ತವ್ಯ ಲೋಪ: PDO ಅಮಾನತ್ತು

ಕರ್ತವ್ಯ ಲೋಪ: PDO ಅಮಾನತ್ತು

ಕರ್ತವ್ಯ ಲೋಪ ಹಾಗೂ ಅಧಿಕಾರ ದುರುಪಯೋಗದ ಆರೋಪದ ಹಿನ್ನೆಲೆಯಲ್ಲಿ ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಅವರನ್ನು ಅಮಾನತ್ತು (suspended) ಮಾಡಲಾಗಿದೆ.

[ccc_my_favorite_select_button post_id="111621"]
ದೊಡ್ಡಬಳ್ಳಾಪುರ: ಕ್ಯಾಂಟರ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಕ್ಯಾಂಟರ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು..!

ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ತಾಲ್ಲೂಕಿನ ಮಧುರೆ ರಸ್ತೆಯಲ್ಲಿನ ಖಾಸಗಿ

[ccc_my_favorite_select_button post_id="111623"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!