This is our boy - D.K. Suresh

ಗುಡ್ಮಾರ್ನಿಂಗ್ ನ್ಯೂಸ್: ಇವ ನಮ್ಮ ಹುಡುಗ – ಡಿ.ಕೆ.ಸುರೇಶ್

ದೊಡ್ಡಬಳ್ಳಾಪುರ: ಹಾಲಿನ ಉತ್ಪಾದನೆ ಹೆಚ್ಚಿಸಲು ಹೊಸದಾಗಿ ಹಸುಗಳನ್ನು ಖರೀದಿಸಿ ಹೈನುಗಾರಿಕೆಯಲ್ಲಿ ತೊಡಗಿಸಿಕೊಳ್ಳುವಂತೆ ಮಾಡಲು ಪ್ರತಿ ಹಾಲು ಉತ್ಪಾದಕರ ಸಹಕಾರ ಸಂಘದ ವ್ಯಾಪ್ತಿಲ್ಲಿನ 25 ಜನ ರೈತರಿಗೆ ಶೇ 3ರ ಬಡ್ಡಿದರದಲ್ಲಿ ₹1.60 ಲಕ್ಷ ದಿಂದ ₹15 ಲಕ್ಷದವರೆಗೂ ಸಾಲ ನೀಡುವ ಚಿಂತನೆ ನಡೆಸಲಾಗಿದೆ ಎಂದು ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ (D.K. Suresh) ಹೇಳಿದರು.

ನಗರದ ಹಾಲು ಶೀಥಲ ಕೇಂದ್ರದಲ್ಲಿ ಶುಕ್ರವಾರ ನಡೆದ ಹಾಲು ಉತ್ಪಾದಕ ಸಹಕಾರ ಸಂಘದ ಅಧ್ಯಕ್ಷರು, ಕಾರ್ಯನಿರ್ವಾಹಕರು ಹಾಗೂ ರೈತರ ಸಮಾಲೋಚನ ಸಭೆಯಲ್ಲಿ ಮಾತನಾಡಿದರು.

ಬಮೂಲ್ ಗ್ರಾಮೀಣ ಭಾಗದ ಜನರ ಆರ್ಥಿಕ ಪ್ರಗತಿಯ ಅಡಿಪಾಯವಾಗಿದೆ. ನಂದಿನಿ ಹಾಲು,ಇತರೆ ಉತ್ಪನ್ನಗಳು ಗುಣಮಟ್ಟದಲ್ಲಿ ಗ್ರಾಹಕರ ವಿಶ್ವಾಸ ಉಳಿಸಿಕೊಂಡು ಬಂದಿದೆ. ಆದರೆ ವಿವಿಧ ಕಾರಣಗಳಿಂದಾಗಿ ಮಾರುಕಟ್ಟೆ ವಿಸ್ತರಣೆಗೆ ಆದ್ಯತೆ ನೀಡದೆ ಪ್ರತಿ ದಿನ 6 ಲಕ್ಷ ಲೀಟರ್ ಹಾಲನ್ನು ವಿವಿಧ ಉತ್ಪನ್ನಗಳಾಗಿ ಪರಿವರ್ತಿಸಲಾಗುತ್ತಿದೆ.

ಹಾಲು ಉತ್ಪಾದನೆ ಹೆಚ್ಚಳ ಹಾಗೂ ಮಾರುಕಟ್ಟೆ ವಿಸ್ತರಣೆ ಎರಡನ್ನೂ ಸಮಾನವಾಗಿ ಅಭಿವೃದ್ಧಿ ಮಾಡುವ ಹೊಣೆಗಾರಿಕೆ ನಮ್ಮ ಮೇಲಿದೆ. ಹೈನುಗಾರಿಕೆಯಿಂದ ಗ್ರಾಮೀಣ ಭಾಗದಲ್ಲಿ ಸಾಕಷ್ಟು ಜನರಿಗೆ ಸ್ವದ್ಯೋಗ ದೊರೆಯಲಿದೆ ಎಂದರು.

ಬಮೂಲ್ ಮೆಗಾ ಡೇರಿಯನ್ನು ಕನಕಪುರಕ್ಕೆ ತೆಗೆದುಕೊಂಡು ಹೋಗಿದ್ದಾರೆ. ಇತರೆ ತಾಲ್ಲೂಕುಗಳಿಗೆ ಬಮೂಲ್ನ ಯಾವುದೇ ಅನುಕೂಲಗಳು ಆಗಿಲ್ಲ ಎನ್ನುವ ಆರೋಪಗಳು ಸುಳ್ಳು. ಇಚ್ಚಾಶಕ್ತಿ ಕೊರತೆಯೇ ಇಲ್ಲಿಯವರೆಗೂ ಬಮೂಲ್ ಅಭಿವೃದ್ಧಿಗೆ ಅಡ್ಡಿಯಾಗಿದೆ. ಕನಕಪುರದಲ್ಲಿ 50 ಎಕರೆ ಪ್ರದೇಶದಲ್ಲಿ ಆಧುನಿಕ ಮೆಗಾ ಡೇರಿ ಸ್ಥಾಪನೆ ಮಾಡದೇ ಹೋಗಿದ್ದರೆ ಕೋವಿಡ್ ಸಂಕಷ್ಟದ ಸಮಯದಲ್ಲಿ ಹಾಗೂ ಇಂದು ಸಹ ಹಾಲು ಉತ್ಪಾದನೆ ಹೆಚ್ಚಾದ ಸಮಯದಲ್ಲಿ ರೈತರು ಹಾಲನ್ನು ಚರಂಡಿಗೆ ಸುರಿಯುವ ಪ್ರಸಂಗ ಬರುತಿತ್ತು.ಆದರೆ ಇಂದು ರೈತರು ಎಷ್ಟೇ ಹಾಲು ಉತ್ಪಾದಿಸಿದರು ಖರೀದಿ ಮಾಡಿ ವಿವಿಧ ಉತ್ಪನ್ನಗಳನ್ನು ತಯಾರಿಸುವ ಸಾಮರ್ಥ್ಯ ಇದೆ. ಬಮೂಲ್ ಆಡಳಿತ ವೆಚ್ಚವನ್ನು ತಗ್ಗಿಸುವ ಕಡೆಗೂ ಗಮನ ನೀಡಲಾಗಿದೆ ಎಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಬಮೂಲ್ ನಿರ್ದೇಶಕ ಬಿ.ಸಿ.ಆನಂದಕುಮಾರ್, ತಾಲ್ಲೂಕಿನಲ್ಲಿ ನಾಲ್ಕು ವರ್ಷಗಳ ಹಿಂದೆಯೇ ಹಾಲಿನ ಟೆಟ್ರಾಪ್ಯಾಕ್ ಸೇರಿದಂತೆ ನಂದಿನಿಯ ಇತರೆ ಉತ್ಪನ್ನಗಳ ಘಟಕ ಸ್ಥಾಪನೆಗೆ 15 ಎಕರೆ ಜಮೀನು ಖರೀದಿಸಲಾಗಿದೆ. ಬಮೂಲ್ ವತಿಯಿಂದ ಯಾವುದಾದರು ಒಂದು ಉತ್ಪನ್ನ ತಯಾರಿಕ ಘಟಕ ಸ್ಥಾಪನೆಗೆ ಅನುಮತಿ ನೀಡಬೇಕು ಎಂದರು.

ಸಮಾಲೋಚನ ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ ಎಸ್.ರವಿ, ಬಮೂಲ್ ವ್ಯವಸ್ಥಾಪಕ ಡಾ.ಟಿ.ಸುರೇಶ್, ಉಪಾಧ್ಯಕ್ಷ ರಾಜಣ್ಣ,ನಿರ್ದೇಶಕರಾದ ಕಡತನಮಲೆ ಸತೀಶ್,ಮುನಿರಾಜು,ಬೈರೇಗೌಡ, ಆರ್.ಕೆ.ರಮೇಶ್, ಮಂಜುನಾಥ್, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಶಿವಣ್ಣ,ಉಪಾಧ್ಯಕ್ಷ ರಾಮಚಂದ್ರಬಾಬು,ಟಿಎಪಿಎಂಸಿಎಸ್ ನಿರ್ದೇಶಕ ವಿ.ಅಂಜಿನಗೌಡ, ಎಸ್.ಟಿ.ಆರ್.ಆರ್.ಸದಸ್ಯ ದೀಪು,ನೌಕರರ ಹಿತರಕ್ಷಣಾ ಸಮಿತಿ ಜಿಲ್ಲಾ ಅಧ್ಯಕ್ಷ ಲೋಕೇಶ್, ತಾಲ್ಲೂಕು ಅಧ್ಯಕ್ಷ ರವೀಂದ್ರಕುಮಾರ್ ಇದ್ದರು.

ಇವ ನಮ್ಮ ಹುಡುಗ

‘ಬಮೂಲ್ ನಿರ್ದೇಶಕರಾಗಿ ಎರಡನೇ ಬಾರಿಗೆ ಆಯ್ಕೆಯಾಗಿರುವ ಬಿ.ಸಿ.ಆನಂದಕುಮಾರ್ ನಮ್ಮ ಹುಡುಗ’ ಎಂದು ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್ ಅವರು ಶುಕ್ರವಾರ ನಗರದಲ್ಲಿ ನಡೆದ ಸಭೆಯಲ್ಲಿ ಹೇಳಿರುವ ಮಾತು ತಾಲ್ಲೂಕಿನ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ.

ಬಿ.ಸಿ.ಆನಂದಕುಮಾರ್ ಸೇರಿದಂತೆ ಇತರೆ ಮುಖಂಡರು ಕಾಂಗ್ರೆಸ್ ತೊರೆದು ಹೋಗಿದ್ದರಿಂದಲೇ ಇಲ್ಲಿನ ಕಾಂಗ್ರೆಸ್ ಅಭ್ಯರ್ಥಿ ಸೋಲಿಗೆ ಕಾರಣವಾಗಿತ್ತು ಎಂದೇ ವಿಶ್ಲೇಷಿಸಲಾಗಿತ್ತು. ಅಲ್ಲದೆ ಡಿ.ಕೆ.ಶಿವಕುಮಾರ್ ಅವರ ಅತ್ಯಾಪ್ತರ ಬಳಗದಲ್ಲಿ ಪ್ರಮುಖವಾಗಿ ಗುರುತಿಸಿಕೊಂಡಿದ್ದರು.

‘ಈ ಹಿಂದೆ ಕಾಂಗ್ರೆಸ್ ಪಕ್ಷ ಬೆಂಬಲಿತ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದಾಗ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರ ಹಾಗೂ ಸ್ಥಳೀಯ ಮುಖಂಡರ ಮನವಿಯಂತೆ ಕೆ.ಎಂ.ಎಫ್ ನಿರ್ದೇಶಕರಾಗಿಯುವ ಬಿ.ಸಿ.ಆನಂದಕುಮಾರ್ ಅವರನ್ನು ಆಯ್ಕೆ ಮಾಡಲಾಗಿತ್ತು.

2023ರ ವಿಧಾನ ಸಭಾ ಚುನಾಚವಣ ಸಂದರ್ಭದಲ್ಲಿ ಇತರೆ ಪಕ್ಷದ ಕಡೆಗೆ ಹೋಗಿದ್ದಾರೆ. ಆದರೆ ಆನಂದ್ಕುಮಾರ್ ನಮ್ಮ ಹುಡುಗ. ಮುಂದಿನ ದಿಗಳಲ್ಲಿ ನಮ್ಮೊಂದಿಗೆ ಇರಲಿದ್ದಾರೆ’ ಎಂದು ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್ ಹೇಳಿದರು.

ರಾಜಕೀಯ

ಚುನಾವಣಾ ಉದ್ದೇಶದಿಂದ ಬೆಂಗಳೂರು ಒಡೆದ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ

ಚುನಾವಣಾ ಉದ್ದೇಶದಿಂದ ಬೆಂಗಳೂರು ಒಡೆದ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ

ಬಿಬಿಎಂಪಿ ಚುನಾವಣೆಯಲ್ಲಿ ಗೆಲ್ಲುವ ಉದ್ದೇಶದಿಂದ ಕಾಂಗ್ರೆಸ್‌ ಸರ್ಕಾರ ತನಗೆ ಬೇಕಾದಂತೆ ಬೆಂಗಳೂರನ್ನು ವಿಭಜನೆ ಮಾಡಿದೆ: ಆರ್‌.ಅಶೋಕ (R. Ashok) ಹೇಳಿದರು.

[ccc_my_favorite_select_button post_id="111673"]
ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳು, ಬಿಜೆಪಿ ಹಾಗೂ ಜೆಡಿಎಸ್‌ನ್ನು ಕಂಗೆಡಿಸಿದೆ: ಸಿಎಂ ಸಿದ್ದರಾಮಯ್ಯ

ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳು, ಬಿಜೆಪಿ ಹಾಗೂ ಜೆಡಿಎಸ್‌ನ್ನು ಕಂಗೆಡಿಸಿದೆ: ಸಿಎಂ ಸಿದ್ದರಾಮಯ್ಯ

ಕಾಂಗ್ರೆಸ್ ಸರ್ಕಾರದ ಮೇಲೆ ಸುಳ್ಳು ಅಪವಾದಗಳನ್ನು ಮಾಡುವ ಬಿಜೆಪಿಯವರು ಕರ್ನಾಟಕದಲ್ಲಿ ಇಂತಹ ಜನೋಪಯೋಗಿ ಯೋಜನೆಯನ್ನು ಜಾರಿಗೆ ತಂದಿದ್ದಾರೆಯೇ? Cmsiddaramaiah

[ccc_my_favorite_select_button post_id="111451"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ಜು.25ರಿಂದ 28ರವರೆಗೆ ನಡೆಯಲಿರುವ ಪುರುಷರ ಸೀನಿಯರ್ -ನ್ಯಾಷನಲ್ಸ್ ಕಬಡ್ಡಿ ಚಾಂಪಿಯನ್‌ಶಿಪ್(Kabaddi Championship) ಪಂದ್ಯಾವಳಿ

[ccc_my_favorite_select_button post_id="111553"]
ಕರ್ತವ್ಯ ಲೋಪ: PDO ಅಮಾನತ್ತು

ಕರ್ತವ್ಯ ಲೋಪ: PDO ಅಮಾನತ್ತು

ಕರ್ತವ್ಯ ಲೋಪ ಹಾಗೂ ಅಧಿಕಾರ ದುರುಪಯೋಗದ ಆರೋಪದ ಹಿನ್ನೆಲೆಯಲ್ಲಿ ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಅವರನ್ನು ಅಮಾನತ್ತು (suspended) ಮಾಡಲಾಗಿದೆ.

[ccc_my_favorite_select_button post_id="111621"]
ದೊಡ್ಡಬಳ್ಳಾಪುರ: ಕ್ಯಾಂಟರ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಕ್ಯಾಂಟರ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು..!

ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ತಾಲ್ಲೂಕಿನ ಮಧುರೆ ರಸ್ತೆಯಲ್ಲಿನ ಖಾಸಗಿ

[ccc_my_favorite_select_button post_id="111623"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!