ದೊಡ್ಡಬಳ್ಳಾಪುರ: ಆಪರೇಷನ್ ವಿಜಯ್‌ನಲ್ಲಿ ಭಾಗವಹಿಸಿದ ಸೈನಿಕರ ಮೌಲ್ಯ ಮತ್ತು ಶೌರ್ಯವನ್ನು ಪುನರುಜ್ಜೀವನಗೊಳಿಸಲು ತಾಲೂಕಿನ ಪ್ರತಿಷ್ಠಿತ ಶಾಲೆಯಾದ ಎಂ.ಎಸ್.ವಿ ಪಬ್ಲಿಕ್ ಸ್ಕೂಲ್‌ನಲ್ಲಿ (MSV Public School) ಶನಿವಾರ ಕಾರ್ಗಿಲ್ ವಿಜಯ್ ದಿವಸ್‌ನ (Kargil Vijay Diwas) 26ನೇ ವಾರ್ಷಿಕೋತ್ಸವವನ್ನು ಆಚರಿಸಿತು.

M.S.V ಶಾಲೆಯ ಅಧ್ಯಕ್ಷರಾದ ಎ.ಸುಬ್ರಹ್ಮಣ್ಯ ಅವರು ಮಾತನಾಡಿ, ಕಾರ್ಗಿಲ್ ವಿಜಯ್ ದಿವಸ್”. ಪ್ರತಿ ಜುಲೈ 26 ರಂದು ಕಾರ್ಗಿಲ್ ವಿಜಯ್ ದಿವಸ್ ಅಥವಾ ಕಾರ್ಗಿಲ್ ವಿಜಯ ದಿನವನ್ನು ಆಚರಣೆ ಮಾಡಲಾಗುತ್ತದೆ. ಭಾರತೀಯರಿಗೆ ಇದು ಎಂದು ಮರೆಯದ ದಿವಾಗಿದೆ.

ಭಾರತೀಯರು ಎಂದು ಮರೆಯದ ಅವಿಸ್ಮರಣೀಯ ದಿನಗಳಲ್ಲಿ ಜುಲೈ 26 ಕೂಡಾ ಒಂದಾಗಿದೆ. ಕಾರ್ಗಿಲ್ ಯುದ್ಧ ಭಾರತೀಯ ಪ್ರತಿಯೋಬ್ಬ ಪ್ರಜೆಯ ಮನಸ್ಸಿನಲ್ಲಿ ಅಚ್ಚಳಿಯದೆ ಉಳಿದಿದೆ. ಜಮ್ಮು ಕಾಶ್ಮೀರದ ಕಾರ್ಗಿಲ್‌ನಲ್ಲಿ ನಡೆದ ಈ ಯುದ್ಧದಲ್ಲಿ ಪಾಕಿಸ್ತಾನವನ್ನು ನಮ್ಮ ಭಾರತದ ವೀರ ಯೋಧರು ಸದೆ ಬಡೆದು ಅವರು ಆಕ್ರಮಿಸಿಕೊಂಡಿದ್ದ ಜಾಗವನ್ನು ವಶಕ್ಕೆ ಪಡೆದ ದಿನವಾಗಿದೆ.

1999 ಮೇ ತಿಂಗಳಿನಲ್ಲಿ ಆರಂಭವಾದ ಕಾರ್ಗಿಲ್ ಯುದ್ಧ ಜುಲೈ ಅಂತ್ಯದ ತನಕ ಅಂದರೆ ಸುಮಾರು ಎರಡು ತಿಂಗಳ ಕಾಲ ನಡೆಯಿತು. ಈ ಯುದ್ಧದಲ್ಲಿ ಲೇಹ್ ಹೆದ್ದಾರಿಯವರೆಗೆ ನುಗ್ಗಿ ಬಂದಿದ್ದ ಪಾಕ್ ಸೇನೆಯನ್ನು ಭಾರತೀಯ ಸೇನೆ ಕೆಚ್ಚೆದೆಯಿಂದ ಯಶಸ್ವಿಯಾಗಿ ಹಿಮ್ಮೆಟ್ಟಿಸಿತ್ತು. ಈ ಯುದ್ಧದಲ್ಲಿ ಭಾರತೀಯ ಸೇನೆಯ ಅಧಿಕಾರಿಗಳು ಸೇರಿದಂತೆ ಸುಮಾರು 527 ಭಾರತೀಯ ಯೋಧರು ಹುತಾತ್ಮರಾದರು ಎಂದು ಸ್ಮರಿಸಿದರು.
ಈ ವೇಳೆ ಶಾಲೆಯ ಅಧ್ಯಕ್ಷರಾದ ಎ. ಸುಬ್ರಹ್ಮಣ್ಯ, ಪ್ರಾಂಶುಪಾಲರಾದ ರೆಮ್ಯಾ ಬಿ ವಿ, ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಶಾಲಾ ಆವರಣದಲ್ಲಿ ಮೇಣದಬತ್ತಿಗಳನ್ನು ಬೆಳಗಿಸುವ ಮೂಲಕ ವೀರ ಯೋಧರಿಗೆ ಗೌರವ ಸಲ್ಲಿಸಿದರು ಮತ್ತು ಮೌನ ಆಚರಿಸಿದರು.
