ಬೆಂ.ಗ್ರಾಂ.ಜಿಲ್ಲೆ: ಜಿಲ್ಲಾಡಳಿತ, ಜಿಲ್ಲಾ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಜಿಲ್ಲಾ ಕೈಗಾರಿಕಾ ಕೇಂದ್ರ ವತಿಯಿಂದ ಎಂ.ಎಸ್.ಎಂ.ಇ ಪ್ರಗತಿ ವೇಗವರ್ಧನೆ ಯೋಜನೆ ಅಡಿಯಲ್ಲಿ ಸೂಕ್ಷ್ಮ ಸಣ್ಣ ಮಧ್ಯಮ ಉದ್ಯಮಿಗಳಿಗೆ ತಂತ್ರಜ್ಞಾನ ಚಿಕಿತ್ಸಾಲಯ- ಏರೋಸ್ಪೇಸ್ (Technology Clinic-Aerospace) ಕ್ಲಸ್ಟರ್ ಕುರಿತು ಎರಡು ದಿನಗಳ ಕಾರ್ಯಾಗಾರ ಆಯೋಜಿಸಲಾಗಿದೆ.
ಕಾರ್ಯಾಗಾರವು ಜುಲೈ 29 ಮತ್ತು 30 ರಂದು ಎರಡು ದಿನ ದೇವನಹಳ್ಳಿ ತಾಲ್ಲೂಕಿನ ವಿಶ್ವನಾಥಪುರದ ಕರ್ನಾಟಕ ಪಬ್ಲಿಕ್ ಶಾಲೆಯ ಸರ್.ಎಂ ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ನಡೆಯಲಿದೆ.
ಕಾರ್ಯಾಗಾರದಲ್ಲಿ ಏರೋ ಸ್ಪೇಸ್ ಕ್ಷೇತ್ರದ ಕೈಗಾರಿಕೆಗಳಿಗೆ ತಂತ್ರಜ್ಞಾನ ಕುರಿತು ತಿಳುವಳಿಕೆ ನೀಡುವ ಜೊತೆಗೆ ತಾಂತ್ರಿಕ ಸವಾಲುಗಳಿಗೆ ಪರಿಹಾರ ಸೂಚಿಸುವ ವೇದಿಕೆಯಾಗಲಿದೆ. ಕೈಗಾರಿಕೆಗಳು ತಜ್ಞರು ಮತ್ತು ಸರ್ಕಾರಿ ಅಧಿಕಾರಿಗಳ ಉಪಸ್ಥಿತಿಯಲ್ಲಿ ಉಪನ್ಯಾಸಗಳು ಮತ್ತು ಪರಮಾರ್ಶ ಅಧಿವೇಶನಗಳು ನಡೆಯಲಿದೆ.
ಜುಲೈ 29 ರಂದು ಬೆಳಗ್ಗೆ 10 ಗಂಟೆಗೆ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಲಿದ್ದಾರೆ.
ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವರಾದ ಶರಣಬಸಪ್ಪ ದರ್ಶನಾಪುರ, 5ನೇ ಹಣಕಾಸು ಆಯೋಗದ ಅಧ್ಯಕ್ಷರಾದ ಸಿ.ನಾರಾಯಣ ಸ್ವಾಮಿ, ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ ಹಾಗೂ ಹೊಸಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ಶರತ್ ಕುಮಾರ್ ಬಚ್ಚೇಗೌಡ ಅವರು ಕಾರ್ಯಕ್ರಮದಲ್ಲಿ ಘನ ಉಪಸ್ಥಿತರಿರಲಿದ್ದಾರೆ.
ಚಿಕ್ಕಬಳ್ಳಾಪುರ ಕ್ಷೇತ್ರದ ಲೋಕಸಭಾ ಸದಸ್ಯರಾದ ಡಾ.ಕೆ.ಸುಧಾಕರ್, ವಿಧಾನ ಪರಿಷತ್ತಿನ ಶಾಸಕರಾದ ಎಸ್.ರವಿ, ಪುಟ್ಟಣ್ಣ, ಎನ್.ನಾಗರಾಜು, ರಾಮೋಜಿಗೌಡ, ಜಿಲ್ಲಾ ಗ್ಯಾರಂಟಿ ಯೋಜನೆಯ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಬಿ.ರಾಜಣ್ಣ, ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಧೀರಜ್ ಮುನಿರಾಜು, ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶಾಭಿವೃದ್ದಿ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾದ ವಿ.ಶಾಂತಕುಮಾರ್.
ತಾಲ್ಲೂಕು ಗ್ಯಾರಂಟಿ ಯೋಜನೆಯ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಸಿ.ಜಗನ್ನಾಥ್, ವಿಶ್ವನಾಥಪುರ ಗ್ರಾಮ ಪಂಚಾಯತಿಯ ಅಧ್ಯಕ್ಷರಾದ ವೆಂಕಟಮ್ಮ, ಉಪಾಧ್ಯಕ್ಷಕರು ಮಂಗಳಮ್ಮ, ಆರ್ಥಿಕ ಇಲಾಖೆ (ಆಯವ್ಯಯ ಮತ್ತು ಸಂಪನ್ಮೂಲ) ಆಡಳಿತಾಧಿಕಾರಿಗಳು,ಜಿಲ್ಲಾ ಪಂಚಾಯತ್ ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಡಾ.ಪಿ.ಸಿ ಜಾಫರ್, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ನಿರ್ದೇಶಕರು ನಿತೇಶ್ ಪಾಟೀಲ್,
ಜಿಲ್ಲಾಧಿಕಾರಿಗಳು ಎ.ಬಿ ಬಸವರಾಜು, ಜಿಲ್ಲಾ ಪಂಚಾಯತ್ ಸಿಇಒ ಡಾ.ಕೆ.ಎನ್ ಅನುರಾಧ, ಜಿಲ್ಲಾ ಪೊಲೀಸ್ ಅಧೀಕ್ಷಕರು ಸಿ.ಕೆ ಬಾಬಾ ಅವರು ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಕರ್ನಾಟಕ ತಾಂತ್ರಿಕ ಉನ್ನತೀಕರಣ ಪರಿಷತ್ ಬೆಂಗಳೂರಿನ ವ್ಯವಸ್ಥಾಪಕ ನಿರ್ದೇಶಕರು ಡಾ ಅರುಣಕುಮಾರ್ ಹೆಚ್.ಅರ್,
ಕೇಂದ್ರ ಕಚೇರಿ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಅಪರ ನಿರ್ದೇಶಕರು ಮಾಣಿಕ್ ವಿ ರಾಘೋಜಿ, ಜಿಲ್ಲಾ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಜಂಟಿ ನಿರ್ದೇಶಕರು ನರೇಂದ್ರ ಬಾಬು ಎನ್, ಎಫ್.ಕೆ.ಸಿ.ಸಿ.ಐ ನ ಅಧ್ಯಕ್ಷರಾದ ಎಂ.ಜಿ ಬಾಲಕೃಷ್ಣ, ಕಾಸಿಯ ಬೆಂಗಳೂರಿನ ಅಧ್ಯಕ್ಷರಾದ ಗಣೇಶ್ ರಾವ್, ಹೈಟೆಕ್ ಮತ್ತು ಡಿಫೆನ್ಸ್ ಏರೋಸ್ಪೇಸ್ ಪಾರ್ಕ್ ಅಸೋಸಿಯೇಶನ್ ಅಧ್ಯಕ್ಷರು ಉದಯಂತ್ ಮಲ್ಹೌತ್ರ.
ದೊಡ್ಡಬಳ್ಳಾಪುರ ಕೈಗಾರಿಕ ಸಂಘದ ಅಧ್ಯಕ್ಷರು ಆಂಜನೇಯಲು, ದಾಬಸ್ ಪೇಟೆ ಕೈಗಾರಿಕ ಸಂಘದ ಅಧ್ಯಕ್ಷರು ಎಸ್.ಕಂಟಪ್ಪ, ದೊಡ್ಡಬಳ್ಳಾಪುರ ಇಂಟಿಗ್ರೇಟೆಡ್ ಜವಳಿ ಪಾರ್ಕ್ ಅಧ್ಯಕ್ಷರು ಹೆಚ್.ಜೆ ನಟೇಶ್ ಕುಮಾರ್, ಹೊಸಕೋಟೆ ಕೈಗಾರಿಕ ಕಲ್ಯಾಣ ಸಂಘದ ಅಧ್ಯಕ್ಷರು ಕೃಷ್ಣಪ್ಪ ಬಿ.ಪಿ ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ.
ಜಿಲ್ಲೆಯ ಎಲ್ಲಾ ಚುನಾಯಿತ ಪ್ರತಿನಿಧಿಗಳು, ನಾಮ ನಿರ್ದೇಶಿತ ಸದಸ್ಯರು ಹಾಗೂ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.