BJP shot a farmer who asked for fertilizer: D.K. Shivakumar

ಗೊಬ್ಬರ ಕೇಳಿದ ರೈತನಿಗೆ ಗುಂಡು ಹೊಡೆದಿದ್ದು ಬಿಜೆಪಿ: ಡಿ.ಕೆ. ಶಿವಕುಮಾರ್

ಬೆಂಗಳೂರು: “ಸಿಎಂ ಸಿದ್ದರಾಮಯ್ಯ ಅವರು ತಮಗೆ ಇರುವ ಅಧಿಕಾರವನ್ನು ಬಳಸಿಕೊಂಡು ಶಾಸಕರ ಸಭೆ ಮಾಡುತ್ತಿದ್ದು, ಇದರಲ್ಲಿ ತಪ್ಪೇನಿದೆ ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar) ಅವರು ಹೇಳಿದ್ದಾರೆ.

ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಮಂಗಳವಾರ ಉತ್ತರಿಸಿದರು.

ಮುಖ್ಯಮಂತ್ರಿಗಳು ನಿಮಗೆ ಆಹ್ವಾನ ನೀಡದೆ ಶಾಸಕರ ಸಭೆ ಮಾಡುತ್ತಿದ್ದಾರೆ ಎಂದು ಕೇಳಿದಾಗ “ಸುರ್ಜೆವಾಲ ಅವರು ಶಾಸಕರನ್ನು ಭೇಟಿ ಮಾಡಿದ ಬಳಿಕ ಅನೇಕ ವಿಚಾರಗಳನ್ನು ಸಿಎಂ ಗಮನಕ್ಕೆ ತಂದಿದ್ದು, ಶಾಸಕರ ಅಹವಾಲುಗಳ ವಿಚಾರವಾಗಿ ಸಿಎಂ ಸಭೆ ಮಾಡುತ್ತಿದ್ದಾರೆ. ಇದರಲ್ಲಿ ತಪ್ಪೇನು ಇಲ್ಲ. ಈ ಬಗ್ಗೆ ನನಗೆ ಯಾವುದೇ ಆಕ್ಷೇಪ ಇಲ್ಲ. ಈ ವಿಚಾರದಲ್ಲಿ ನನಗೆ ಏನೂ ಕಷ್ಟವಾಗದಿದ್ದರೂ, ನಿಮಗೆ ಏಕೆ (ಮಾಧ್ಯಮಗಳು) ಕಷ್ಟವಾಗುತ್ತಿದೆ ” ಎಂದು ಮರುಪ್ರಶ್ನಿಸಿದರು.

ನೀವು ಕೆಪಿಸಿಸಿ ಅಧ್ಯಕ್ಷರು ಹಾಗೂ ಡಿಸಿಎಂ ಆಗಿದ್ದು ನಿಮ್ಮನ್ನು ಕರೆದಿಲ್ಲ ಎಂದಾಗ, “ಈ ವಿಚಾರವಾಗಿ ನನಗೆ ಯಾವುದೇ ಆಕ್ಷೇಪವಿಲ್ಲ. ಬೆಂಗಳೂರಿನ ಅಭಿವೃದ್ದಿಗೆ ನಾವು ಪ್ರತ್ಯೇಕ ಅಜೆಂಡಾ ಹೊಂದಿರುವ ಕಾರಣಕ್ಕೆ ಆನಂತರ ಚರ್ಚೆ ನಡೆಸುತ್ತೇವೆ. ಬೆಂಗಳೂರಿನ ಅಭಿವೃದ್ದಿಗೆ ಹೆಚ್ಚಿನ ಅನುದಾನದ ಅವಶ್ಯಕತೆಯಿದೆ. ನಾನು ಸಹ ಒಂದಷ್ಟು ಜನಪ್ರತಿನಿಧಿಗಳ ಜೊತೆ ಸಭೆ ನಡೆಸಿದ್ದೇನೆ” ಎಂದರು.

ಬಿಜೆಪಿ ತನ್ನ ಮನೆ ಸರಿಪಡಿಸಿಕೊಳ್ಳಲಿ

ಉಪಮುಖ್ಯಮಂತ್ರಿಗಳನ್ನು ಸಿಎಂ ಕಡೆಗಣಿಸಿದ್ದಾರೆ ಎನ್ನುವ ಬಿಜೆಪಿ ಟೀಕೆಯ ಬಗ್ಗೆ ಕೇಳಿದಾಗ, “ಅವರು ಮೊದಲು ಅವರ ಮನೆಯನ್ನು ಸರಿ ಮಾಡಿಕೊಳ್ಳಲಿ. ಅವರ ಪಕ್ಷ, ಮನೆಯೇ ಅಸ್ತವ್ಯಸ್ತವಾಗಿದೆ. ಅವರ ಪಕ್ಷದ ಒಳಗೆ ಅನೇಕ ಮೇಲಾಟಗಳು ನಡೆಯುತ್ತಿವೆ. ಅವರ ಪಕ್ಷದ ನಾಯಕರ ಹೇಳಿಕೆಗಳನ್ನು ಎಲ್ಲರೂ ನೋಡಿದ್ದಾರೆ. ಅವರ ಮಧ್ಯೆಯೇ ಸಾಕಷ್ಟು ತಿಕ್ಕಾಟಗಳು ನಡೆಯುತ್ತಿವೆ. ಮೊದಲು ಅವರ ಸಮಸ್ಯೆಗಳನ್ನು ಸರಿಮಾಡಿಕೊಳ್ಳಲಿ” ಎಂದರು.

ಬೆಂಗಳೂರು ಹಾಗೂ ನಾಗರೀಕರ ಹಿತಕ್ಕಾಗಿ ಪಾಲಿಕೆ ವಿಭಜನೆ

“ನಾವು ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆಗೆ ಮುಂದಾಗಿದ್ದು, ಈ ವಿಚಾರವಾಗಿ ವಿರೋಧ ಪಕ್ಷಗಳ ನಾಯಕರ ಅಭಿಪ್ರಾಯವನ್ನು ಪಡೆದಿದ್ದೇವೆ. ಪಾಲಿಕೆ ಚುನಾವಣೆ ಕುರಿತಾಗಿ ಸುಪ್ರೀಂ ಕೋರ್ಟಿಗೆ ಅಫಿಡವಿಟ್ ಸಲ್ಲಿಸಬೇಕಾಗಿದೆ. ಬೆಂಗಳೂರು ಹಾಗೂ ನಾಗರೀಕರ ಹಿತಕ್ಕಾಗಿ ಪಾಲಿಕೆ ವಿಭಜನೆ ಮಾಡುತ್ತಿದ್ದೇವೆ. ನಾವು ಭೌಗೋಳಿಕ ಹಾಗೂ ಆಡಳಿತ, ಆರ್ಥಿಕತೆ ಹಾಗೂ ಭವಿಷ್ಯದಲ್ಲಿ ಬೆಂಗಳೂರಿನ ವಿಸ್ತರಣೆ ವಿಚಾರವನ್ನು ಗಮನದಲ್ಲಿಟ್ಟುಕೊಂಡು ಈ ತೀರ್ಮಾನ ಮಾಡಿದ್ದೇವೆ. ಬಿಜೆಪಿಯವರು ರಾಜಕೀಯ ಕಾರಣಗಳಿಗೆ ನಮ್ಮನ್ನು ಟೀಕೆ ಮಾಡುತ್ತಾರೆ, ಮಾಡಲಿ. ಸಾರ್ವಜನಿಕವಾಗಿ ಟೀಕೆ ಮಾಡುತ್ತಾರೆ, ಮಾಡಲಿ. ನಾವು ಇಡೀ ಬೆಂಗಳೂರು ಹಾಗೂ ರಾಜ್ಯದ ಹಿತಕ್ಕೆ ಕೆಲಸ ಮಾಡುತ್ತೇವೆ” ಎಂದು ತಿಳಿಸಿದರು.

ಮಲ್ಲಿಕಾರ್ಜುನ ಖರ್ಗೆ ಅವರು ತಮ್ಮ ಭಾವನೆ ಹೇಳಿರುವುದರಲ್ಲಿ ತಪ್ಪೇನಿದೆ

ಮಲ್ಲಿಕಾರ್ಜುನ ಖರ್ಗೆ ಅವರು ಮುಖ್ಯಮಂತ್ರಿ ಸ್ಥಾನ ತಪ್ಪಿದ್ದರ ಬಗ್ಗೆ ಬೇಸರ ವ್ಯಕ್ತಪಡಿಸಿರುವ ಬಗ್ಗೆ ಕೇಳಿದಾಗ, “ಇದರಲ್ಲಿ ತಪ್ಪೇನಿದೆ. ಹಿರಿಯ ನಾಯಕರು ಅವರು, ಕಾಂಗ್ರೆಸ್ ಪಕ್ಷಕ್ಕಾಗಿ ದುಡಿದಿದ್ದಾರೆ. ಅವರ ಭಾವನೆಗಳನ್ನು ಹೇಳಿಕೊಂಡಿದ್ದಾರೆ. ಇದರಲ್ಲಿ ಯಾವ ತರಹದ್ದು ತಪ್ಪೇನಿಲ್ಲ” ಎಂದರು.

ರಾಜ್ಯ ರಾಜಕಾರಣಕ್ಕೆ ಖರ್ಗೆ ಅವರು ಮರಳಿ ಬರುತ್ತಾರೆ ಎನ್ನುವ ಕೆಲವರ ಚರ್ಚೆ ಬಗ್ಗೆ ಕೇಳಿದಾಗ, “ಈ ಬಗ್ಗೆಯೂ ಚರ್ಚೆ ಮಾಡುವುದರಲ್ಲಿ ತಪ್ಪೇನಿದೆ. ಅವರವರ ಅಭಿಪ್ರಾಯ ಅವರು ತಿಳಿಸುತ್ತಾರೆ” ಎಂದರು.

ಗೊಬ್ಬರ ಕೇಳಿದವರಿಗೆ ಗುಂಡು ಹೊಡೆದಿದ್ದು ಬಿಜೆಪಿ

ಬಿಜೆಪಿಯವರು ಯೂರಿಯ ಕೊರತೆ ಬಗ್ಗೆ ಪ್ರತಿಭಟನೆ ನಡೆಸುವ ಬಗ್ಗೆ ಕೇಳಿದಾಗ, “ಬಿಜೆಪಿ ಅವರ ಮೇಲೆ ಅವರೇ ಪ್ರತಿಭಟನೆ ಮಾಡಿಕೊಳ್ಳಬೇಕು ಅಷ್ಟೇ. ಈ ಹಿಂದೆ ಗೊಬ್ಬರ ಕೊಡಲು ಆಗದೇ ರೈತರ ಮೇಲೆ ಗುಂಡು ಹಾರಿಸಿದ್ದರು. ನಾವು ಅಂತಹ ಕೆಲಸ ಮಾಡುವುದಿಲ್ಲ. ಮಳೆ ಹೆಚ್ಚಾಗಿರುವ ಕಾರಣ ಕೃಷಿ ಚಟುವಟಿಕೆ ಜಾಸ್ತಿಯಾಗಿದೆ. ಹೀಗಾಗಿ ರಸಗೊಬ್ಬರ ಬೇಡಿಕೆ ಹೆಚ್ಚಾಗಿದೆ. ಕೇಂದ್ರ ಸರ್ಕಾರ ಹೆಚ್ಚುವರಿ ರಸಗೊಬ್ಬರ ಪೂರೈಕೆ ಮಾಡಬೇಕು ಎಂದು ಸಂಸದರು ಒಪ್ಪಿಕೊಂಡಿದ್ದಾರೆ. ಕೂಡಲೇ ಗೊಬ್ಬರ ಸಿಕ್ಕರೆ ನಮ್ಮ ರೈತರಿಗೆ ಒಳ್ಳೆಯದಾಗುತ್ತದೆ ಎಂದು ನಾವು ಒತ್ತಡ ಹಾಕುತ್ತಿದ್ದೇವೆ” ಎಂದರು.

“ಬಿಜೆಪಿ ಅವರ ಕೇಂದ್ರ ಕೃಷಿ ಸಚಿವರು, ರಾಸಾಯನಿಕ ಗೊಬ್ಬರ ಖಾತೆ ಸಚಿವರ ವಿರುದ್ಧ ಪ್ರತಿಭಟನೆ ಮಾಡಬೇಕಷ್ಟೆ. ನಮ್ಮ ಮೇಲೆ ಏಕೆ ಪ್ರತಿಭಟನೆ ಮಾಡುತ್ತಾರೆ. ಗೊಬ್ಬರವೇನು ನಮ್ಮ ಬಳಿ ಇದೆಯೇ? ಆ ಇಲಾಖೆ, ಗೊಬ್ಬರದ ಕಾರ್ಖಾನೆ ಏನು ನಮ್ಮ ಬಳಿ ಇದೆಯೇ? ಅವರು ಕೊಡುವುದನ್ನು ಹಂಚುವುದು ನಮ್ಮ ಕೆಲಸವಷ್ಟೇ” ಎಂದು ಹೇಳಿದರು.

“ನಾವು ಹಂಚುವುದರಲ್ಲಿ ತಾರತಮ್ಯ ಮಾಡಿದರೆ ಮಾತನಾಡಲಿ. ನಮ್ಮ ಬಳಿ ಎಲ್ಲ ಲೆಕ್ಕವೂ ಇದೆ. ಯಾವ ಯಾವ ಸೊಸೈಟಿಗಳಿಗೆ ಎಷ್ಟು ಹಂಚಲಾಗಿದೆ, ಯಾವ ಜಿಲ್ಲೆಯಲ್ಲಿ ಎಷ್ಟು ದಾಸ್ತಾನಿದೆ ಎನ್ನುವ ಎಲ್ಲ ಲೆಕ್ಕವೂ ಇದೆ. ಇದನ್ನು ಪರಿಶೀಲನೆ ನಡೆಸಲಿ, ಅದನ್ನು ಎಲ್ಲರೂ ನೋಡಲಿ. ನಾವುಗಳು ಯಾರೂ ರೈತರ ವಿರುದ್ಧ ಹೋಗಿಲ್ಲ, ಆ ಕೆಲಸ ಮಾಡುವುದೂ ಇಲ್ಲ” ಎಂದು ತಿಳಿಸಿದರು.

ರಾಜಕೀಯ

ಸಂಸತ್‌ನಲ್ಲಿ ಆಪರೇಷನ್ ಸಿಂಧೂರ ಕದನವಿರಾಮದ ಕಾವೇರಿದ ಚರ್ಚೆ: ರಾಹುಲ್ ಗಾಂಧಿ ಸವಾಲು, ಮೋದಿ ಸ್ಪಷ್ಟನೆ

ಸಂಸತ್‌ನಲ್ಲಿ ಆಪರೇಷನ್ ಸಿಂಧೂರ ಕದನವಿರಾಮದ ಕಾವೇರಿದ ಚರ್ಚೆ: ರಾಹುಲ್ ಗಾಂಧಿ ಸವಾಲು, ಮೋದಿ

ಚಳಿಗಾಲದ ಅಧಿವೇಶನದಲ್ಲಿ ಆಪರೇಷನ್ ಸಿಂಧೂರ (Operation Sindoor), ಏಕಾಏಕಿ ಕದನ ವಿರಾಮ (ceasefire) ಘೋಷಣೆ ಕುರಿತು ತೀವ್ರ ಚರ್ಚೆಗೆ ಕಾರಣವಾಗಿತ್ತು.

[ccc_my_favorite_select_button post_id="111876"]
ಆಗಸ್ಟ್ 4 ರಿಂದ ಅಮೇರಿಕಾದಲ್ಲಿ ಶಾಸಕಾಂಗ ಶೃಂಗಸಭೆ 2025: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಪ್ರಯಾಣ

ಆಗಸ್ಟ್ 4 ರಿಂದ ಅಮೇರಿಕಾದಲ್ಲಿ ಶಾಸಕಾಂಗ ಶೃಂಗಸಭೆ 2025: ವಿಧಾನ ಪರಿಷತ್ ಸಭಾಪತಿ

ಆಗಸ್ಟ್ 4 ರಿಂದ 6ನೇ ತಾರೀಖಿನವರೆಗೆ ಅಮೇರಿಕಾದ ಬೋಸ್ಟನ್ ನಗರದಲ್ಲಿ ನಡೆಯುವ "ಶಾಸಕಾಂಗ ಶೃಂಗಸಭೆ 2025”ರಲ್ಲಿ (Legislative Summit 2025) ಪಾಲ್ಗೊಳ್ಳಲು ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಇಂದು ಬೆಳಗಿನ ಜಾವ

[ccc_my_favorite_select_button post_id="111777"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ಜು.25ರಿಂದ 28ರವರೆಗೆ ನಡೆಯಲಿರುವ ಪುರುಷರ ಸೀನಿಯರ್ -ನ್ಯಾಷನಲ್ಸ್ ಕಬಡ್ಡಿ ಚಾಂಪಿಯನ್‌ಶಿಪ್(Kabaddi Championship) ಪಂದ್ಯಾವಳಿ

[ccc_my_favorite_select_button post_id="111553"]
ದೊಡ್ಡಬಳ್ಳಾಪುರ: ಕೃಷಿ ಹೊಂಡಕ್ಕೆ ಮತ್ತೊಂದು ಬಲಿ.!

ದೊಡ್ಡಬಳ್ಳಾಪುರ: ಕೃಷಿ ಹೊಂಡಕ್ಕೆ ಮತ್ತೊಂದು ಬಲಿ.!

ಸರ್ಕಾರಗಳು ಮುಂಜಾಗ್ರತೆ ಕ್ರಮ ಕೈಗೊಳ್ಳಿ ಎಂದು ಎಷ್ಟೇ ಸೂಚನೆ ನೀಡಿದರು, ಕೃಷಿ ಹೊಂಡದಲ್ಲಿ (Agricultural pit) ಆಕಸ್ಮಿಕವಾಗಿ ಬಿದ್ದು ಸಾವನಪ್ಪುತ್ತಿರುವ ಪ್ರಕರಣಗಳು ಮಾತ್ರ ನಿಲ್ಲುತ್ತಿಲ್ಲ.

[ccc_my_favorite_select_button post_id="111873"]
ದೊಡ್ಡಬಳ್ಳಾಪುರ: ಕ್ಯಾಂಟರ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಕ್ಯಾಂಟರ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು..!

ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ತಾಲ್ಲೂಕಿನ ಮಧುರೆ ರಸ್ತೆಯಲ್ಲಿನ ಖಾಸಗಿ

[ccc_my_favorite_select_button post_id="111623"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!