ಬುದ್ಧಿ ಕಡಿಮೆ ಇರುವ ರಾಹುಲ್‌ ಗಾಂಧಿಯವರ ಪಾದಯಾತ್ರೆ: ಆರ್‌.ಅಶೋಕ

Padayatra of Rahul Gandhi who has less intelligence: R. Ashoka

ಬೆಂಗಳೂರು; ಬುದ್ಧಿ ಕಡಿಮೆ ಇರುವ ರಾಹುಲ್‌ ಗಾಂಧಿಯವರ (Rahul Gandhi) ಪಾದಯಾತ್ರೆಗೆ ಯಾವ ನಿಯಮದಡಿ ಅವಕಾಶ ನೀಡುತ್ತಾರೆ? ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R. Ashoka) ಪ್ರಶ್ನೆ ಮಾಡಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಲೋಕಸಭಾ ಚುನಾವಣೆ ನಡೆದಾಗ ಕಾಂಗ್ರೆಸ್‌ ಅಧಿಕಾರದಲ್ಲಿತ್ತು. ಆಗ ಚುನಾವಣೆಯಲ್ಲಿ ಅಕ್ರಮ ಆಗಿದ್ದರೆ ಚುನಾವಣಾ ಆಯೋಗಕ್ಕೆ ದೂರು ನೀಡಬಹುದು ಎಂಬ ಕಾಮನ್‌ಸೆನ್ಸ್‌ ರಾಹುಲ್‌ ಗಾಂಧಿಗೆ ಇಲ್ಲ. ಅದಕ್ಕಾಗಿಯೇ ಅವರು ರಾಜ್ಯಕ್ಕೆ ಬಂದು ಪಾದಯಾತ್ರೆ ಮಾಡುತ್ತಿದ್ದಾರೆ. ಯಾವುದೇ ಯಾತ್ರೆಗೆ ಅನುಮತಿ ನೀಡಬಾರದು ಎಂದು ಕೋರ್ಟ್‌ ಆದೇಶ ಇರುವಾಗ ಅನುಮತಿ ಹೇಗೆ ನೀಡುತ್ತಾರೆ? ಅನುಮತಿ ನೀಡಿದರೆ ಬಿಜೆಪಿಯಿಂದ ಹೋರಾಟ ಮಾಡಲಾಗುವುದು ಎಂದು ತಿಳಿಸಿದರು.

ಇಂದಿರಾಗಾಂಧಿ ಚುನಾವಣಾ ಅಕ್ರಮ ಮಾಡಿ ತುರ್ತು ಪರಿಸ್ಥಿತಿ ಜಾರಿ ಮಾಡಿದ್ದರು. ಇಂತಹ ಪಕ್ಷಕ್ಕೆ ಚುನಾವಣಾ ಅಕ್ರಮದ ಬಗ್ಗೆ ಆರೋಪ ಮಾಡಲು ಯಾವ ನೈತಿಕ ಅಧಿಕಾರವಿದೆ. ರಾಹುಲ್‌ ಗಾಂಧಿಗೆ ಬುದ್ಧಿ ಕಡಿಮೆ ಇದೆ. ಆದ್ದರಿಂದಲೇ ಚುನಾವಣಾ ಆಯೋಗದ ಮೇಲೆ ಆರೋಪ ಹೊರಿಸುತ್ತಿದ್ದಾರೆ. ಬಿಜೆಪಿಗೆ ಪಾದಯಾತ್ರೆಗೆ ಅವಕಾಶ ನೀಡುತ್ತಿಲ್ಲ. ಅಂದಮೇಲೆ ಅವರಿಗೂ ಅವಕಾಶ ನೀಡಬಾರದು ಎಂದರು.

‘ಕೈ’ಲಾಗದವನು ಮೈಪರಚಿಕೊಂಡ ಎಂಬಂತೆ ಕೈಲಾಗದ ರಾಹುಲ್ ಗಾಂಧಿ ಚುನಾವಣಾ ಪ್ರಕ್ರಿಯೆ ಬಗ್ಗೆ ಕ್ಯಾತೆ ತೆಗೆಯುತ್ತಿದ್ದಾರೆ. ಮೂರು ಲೋಕಸಭಾ ಚುನಾವಣೆಗಳಲ್ಲಿ ಮೂರಂಕಿ ದಾಟಲಾಗದೆ ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಕಾಂಗ್ರೆಸ್ ಪಕ್ಷವನ್ನು ಸಂಪೂರ್ಣವಾಗಿ ಮುಳುಗಿಸಿ ಸೋತು ಸುಣ್ಣವಾಗಿರುವ ಬಾಲಕ ಬುದ್ಧಿ ರಾಹುಲ್ ಗಾಂಧಿ ಅವರು ಈಗ ಕರ್ನಾಟಕದಲ್ಲಿ ಚುನಾವಣಾ ಆಯೋಗದ ವಿರುದ್ಧ ಪಾದಯಾತ್ರೆ ಮಾಡಲಿದ್ದಾರೆ. ಯಾವ ಪುರುಷಾರ್ಥಕ್ಕಾಗಿ ಈ ಪಾದಯಾತ್ರೆ? ಹರಿಯಾಣ, ಮಹಾರಾಷ್ಟ್ರ, ದೆಹಲಿ ನಂತರ ಈಗ ಬಿಹಾರದಲ್ಲೂ ಹೀನಾಯ ಸೋಲಿನ ಮುನ್ಸೂಚನೆ ಸಿಕ್ಕಿದೆಯೇ? ಇಷ್ಟಕ್ಕೂ ಇವರಿಗೆ ಕರ್ನಾಟಕ ಈಗ ನೆನಪಾಯಿತೇ? ಕಳೆದ 24 ತಿಂಗಳಲ್ಲಿ 2,000 ಕ್ಕೂ ಹೆಚ್ಚು ರೈತರು ಆತ್ಮಹತ್ಯೆಗೆ ಶರಣಾದಾಗ ಬರಲಿಲ್ಲ. ಸರ್ಕಾರಿ ಆಸ್ಪತ್ರೆಗಳಲ್ಲಿ ಕಳಪೆ ಔಷಧಿ ಪೂರೈಕೆಯಿಂದ 500ಕ್ಕೂ ಹೆಚ್ಚು ಗರ್ಭಿಣಿ, ಬಾಣಂತಿ ಮಹಿಳೆಯರು, ನವಜಾತ ಶಿಶುಗಳು ಮರಣ ಹೊಂದಿದಾಗ ಬರಲಿಲ್ಲ. ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳದಿಂದ 50ಕ್ಕೂ ಹೆಚ್ಚು ಬಡವರು ಆತ್ಮಹತ್ಯೆ ಮಾಡಿಕೊಂಡಾಗ ಬರಲಿಲ್ಲ.

ಐಪಿಎಲ್ ವಿಜಯೋತ್ಸವದ ಸಂದರ್ಭದಲ್ಲಿ ಸರ್ಕಾರದ ಎಡವಟ್ಟಿನಿಂದ 11 ಜನ ಅಮಾಯಕ ಯುವಕರು ಸತ್ತಾಗ ಬರಲಿಲ್ಲ. ನಾಳೆ ಎದುರಾಗಲಿರುವ ಬಿಹಾರ ಚುನಾವಣಾ ಸೋಲಿಗೆ ಕುಂಟು ನೆಪ ಸೃಷ್ಟಿಸಿ ತಮ್ಮ ಅಸಾಮರ್ಥ್ಯಕ್ಕೆ, ವೈಫಲ್ಯಕ್ಕೆ anticipatory bail ತೆಗೆದುಕೊಳ್ಳೋಕೆ ಬರುತ್ತಿದ್ದೀರಲ್ಲ, ನಿಮ್ಮ ಕಾಂಗ್ರೆಸ್ ಪಕ್ಷದ ಲಜ್ಜೆಗೇಡಿತನಕ್ಕೆ ಕನ್ನಡಿಗರು ರೋಸಿ ಹೋಗಿದ್ದಾರೆ. ಅದ್ಯಾವ ಮುಖ ಇಟ್ಟುಕೊಂಡು ಕರ್ನಾಟಕಕ್ಕೆ ಬರುತ್ತಿದ್ದೀರೋ ಎಂದು ಆರ್‌.ಅಶೋಕ ಪ್ರಶ್ನೆ ಮಾಡಿದರು.

ಸಿಎಂ ಸಿದ್ದರಾಮಯ್ಯ ಪವರ್‌ ತೋರಿಸಲು ಡಿ.ಕೆ.ಶಿವಕುಮಾರ್‌ ಅವರನ್ನು ಸಭೆಗೆ ಆಹ್ವಾನಿಸಿಲ್ಲ. ಕಾಂಗ್ರೆಸ್‌ ಶಾಸಕರ ಬೆಂಬಲ ಡಿಕೆಶಿಗೆ ಇಲ್ಲವೆಂದು ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಆದ್ದರಿಂದಲೇ ಆ ಸಭೆಗೆ ಅವರನ್ನು ಕರೆದಿಲ್ಲ. ಎರಡು ವರ್ಷದಿಂದ ಏನೂ ಕೊಡದೆ ಈಗ 50 ಕೋಟಿ ನೀಡಿದರೆ ಪ್ರಯೋಜನವಿಲ್ಲ. ಅದರಲ್ಲೂ ಸಿದ್ದರಾಮಯ್ಯನವರ ಬೆಂಬಲಿಗ ಶಾಸಕರಿಗೆ ಮಾತ್ರ 50 ಕೋಟಿ ರೂ. ನೀಡಲಾಗುತ್ತಿದೆ. ಬಿಜೆಪಿ ಶಾಸಕರಿಗೂ 50 ಕೋಟಿ ರೂ. ನೀಡಬೇಕೆಂದು ಆಗ್ರಹಿಸಲಾಗುವುದು ಎಂದರು.

ಸಿಎಂ ಸಿದ್ದರಾಮಯ್ಯ ಎಲ್ಲ ವರ್ಗಗಳ ನಾಯಕರಾಗಿ ಉಳಿದಿಲ್ಲ. ಅವರು ಸ್ವಹಿತಾಸಕ್ತಿ ನೋಡಿಕೊಳ್ಳುತ್ತಿದ್ದಾರೆ. ಕಾಂಗ್ರೆಸ್‌ ಪಕ್ಷದಲ್ಲಿ ಗುಂಪುಗಾರಿಕೆ ಬೆಳೆದಿದೆ. ಸಿದ್ದರಾಮಯ್ಯನವರಿಗೆ ಅಧಿಕಾರಿಗಳ ಮೇಲೆ ಹಾಗೂ ಶಾಸಕರ ಮೇಲೆ ಹಿಡಿತವಿಲ್ಲ. ಅಭಿವೃದ್ಧಿ ಬಗ್ಗೆ ಸರ್ಕಾರ ಯೋಚಿಸುತ್ತಿಲ್ಲ. ರಸಗೊಬ್ಬರ ವಿತರಣೆಯಲ್ಲಿ ಕೇಂದ್ರ ಸರ್ಕಾರದ ಮೇಲೆ ಆರೋಪ ಮಾಡಲಾಗುತ್ತಿದೆ. ರಾಜ್ಯ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಎಂದರು.

ರಾಜಕೀಯ

ಮೋದಿ ಸರ್ಕಾರದ ಟೊಳ್ಳಾದ ವಿದೇಶಾಂಗ ನೀತಿಯಿಂದ ಗ್ಯಾಸ್ ಬೆಲೆ ಏರಿಕೆ: ಸಿಎಂ‌ ಸಿದ್ದರಾಮಯ್ಯ

ಮೋದಿ ಸರ್ಕಾರದ ಟೊಳ್ಳಾದ ವಿದೇಶಾಂಗ ನೀತಿಯಿಂದ ಗ್ಯಾಸ್ ಬೆಲೆ ಏರಿಕೆ: ಸಿಎಂ‌ ಸಿದ್ದರಾಮಯ್ಯ

ನಾವು ಎಲ್ಲಾ ಸಮಯದಲ್ಲೂ ಎಚ್ಚರಿಸಿದಂತೆ, ವಿಧಾನಸಭಾ ಚುನಾವಣೆಗಳು ಮುಗಿದ ಕ್ಷಣ, ನರೇಂದ್ರ ಮೋದಿ ಸರ್ಕಾರ ಮತ್ತೆ ಬೆಲೆಗಳನ್ನು ಹೆಚ್ಚಿಸಿದೆ. ಮೇ 1 ರಂದು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ₹993 ರಷ್ಟು ಹೆಚ್ಚಿಸಲಾಗಿದೆ, ಚುನಾವಣಾ

[ccc_my_favorite_select_button post_id="121599"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಯಾಗಲು ಸೂಕ್ತ ಯುವತಿ ದೊರೆಯದ ಕಾರಣ ಮನನೊಂದ ಯುವಕನೊಬ್ಬ ಕಲ್ಯಾಣಿಗೆ ಬಿದ್ದು ಆತ್ಮಹತ್ಯೆ (suicide) ಮಾಡಿಕೊಂಡಿರುವ ಘಟನೆ ನಡೆದಿದೆ.

[ccc_my_favorite_select_button post_id="121591"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]