Two accused who kidnapped and brutally murdered a boy shot in the leg

ಬಾಲಕನನ್ನ ಅಪಹರಿಸಿ ಬರ್ಬರವಾಗಿ ಹತ್ಯೆಗೈದ ಇಬ್ಬರು ಆರೋಪಿಗಳ ಕಾಲಿಗೆ ಗುಂಡು

ಬೆಂಗಳೂರು: ಬಾಲಕನನ್ನ ಅಪಹರಿಸಿ (kidnapped) ಬರ್ಬರವಾಗಿ ಹತ್ಯೆಗೈದ ಇಬ್ಬರು ಆರೋಪಿಗಳ ಕಾಲಿಗೆ ಹುಳಿಮಾವು ಠಾಣೆ ಪೊಲೀಸರು (Police) ಗುಂಡು ಹಾರಿಸಿ ಹೆಡೆಮುರಿ ಕಟ್ಟಿದ್ದಾರೆ.

ಗುರುಮೂರ್ತಿ ಹಾಗೂ ಗೋಪಾಲಕೃಷ್ಣ ಎಂಬ ಇಬ್ಬರು ಆರೋಪಿಗಳನ್ನ ವಶಕ್ಕೆ ಪಡೆಯಲಾಗಿದೆ.

ತಡರಾತ್ರಿ ಕಗ್ಗಲೀಪುರ ರಸ್ತೆಯ ಬಳಿಯಿದ್ದ ಆರೋಪಿಗಳನ್ನ ವಶಕ್ಕೆ ಪಡೆಯಲು ಹುಳಿಮಾವು ಠಾಣೆ ಪೊಲೀಸರು ತೆರಳಿದ್ದರು. ಈ ವೇಳೆ ಮಾರಕಾಸ್ತ್ರಳನ್ನ ಬಳಸಿ ಆರೋಪಿಗಳು ಪೊಲೀಸರ ಮೇಲೆ ದಾಳಿಗೆ ಮುಂದಾದಾಗ ಇನ್ಸ್‌ಪೆಕ್ಟರ್ ಕುಮಾರಸ್ವಾಮಿ ಹಾಗೂ ಪಿಎಸ್ಐ ಅರವಿಂದ್ ಕುಮಾರ್ ಆರೋಪಿಗಳ ಕಾಲಿಗೆ ಗುಂಡು ಹಾರಿಸುವ ಮೂಲಕ ವಶಕ್ಕೆ ಪಡೆದಿದ್ದಾರೆ.

ಘಟನೆಯಲ್ಲಿ ಗುರುಮೂರ್ತಿಯ ಎರಡು ಕಾಲುಗಳು ಹಾಗೂ ಗೋಪಾಲಕೃಷ್ಣನ ಒಂದು ಕಾಲಿಗೆ ಗುಂಡು ತಗುಲಿದ್ದು, ಇಬ್ಬರನ್ನೂ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.

ಅರಕೆರೆಯ ಶಾಂತಿನಿಕೇತನ ಲೇಔಟ್‌ನಲ್ಲಿ ನಿಶ್ಚಿತ್ ಮತ್ತು ಆತನ ಪೋಷಕರು ವಾಸವಾಗಿದ್ದರು. ನಗರದ ಪ್ರತಿಷ್ಠಿತ ಕಾಲೇಜ್‌ನಲ್ಲಿ ಸಹಾಯಕ ಪ್ರಾಧ್ಯಾಪಕರಾಗಿದ್ದ ನಿಶ್ಚಿತ್ ತಂದೆಯ ಬಳಿ ಆರೋಪಿ ಗುರುಮೂರ್ತಿ ಹೆಚ್ಚುವರಿ ಚಾಲಕನಾಗಿ ಕೆಲಸ ಮಾಡಿಕೊಂಡಿದ್ದ. ಆಗಾಗ ಮನೆಗೆ ಹೋಗಿ ಬರುತ್ತಿದ್ದ ಗುರುಮೂರ್ತಿ, ನಿಶ್ಚಿತ್‌ನನ್ನ ಅಪಹರಿಸಿ ಹಣಕ್ಕೆ ಬೇಡಿಕೆಯಿಡುವ ಸಂಚು ರೂಪಿಸಿದ್ದ.

ಬುಧವಾರ ಸಂಜೆ ಟ್ಯೂಷನ್ ಮುಗಿಸಿ ಸೈಕಲ್‌ನಲ್ಲಿ ಮನೆಯತ್ತ ಬರುತ್ತಿದ್ದ ನಿಶ್ಚಿತ್‌ನನ್ನ ಆರೋಪಿಗಳು ಅಪಹರಿಸಿದ್ದರು. ಟ್ಯೂಷನ್ ಮುಗಿದು ಸುಮಾರು ಗಂಟೆಗಳಾದರೂ ಮನೆಗೆ ಬಾರದ ಮಗನ ಬಗ್ಗೆ ಪೋಷಕರು ಆಂತಕದಿಂದ ಹುಡುಕಾಟ ನಡೆಸಿದ್ದರು.

ನಿರಂತರ ಶೋಧದ ಬಳಿಕವೂ ಮಗನ ಸುಳಿವು ಸಿಗದಿದ್ದಾಗ ಹುಳಿಮಾವು ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಅಷ್ಟೊತ್ತಿಗಾಗಲೇ ಬಾಲಕನ ತಂದೆಗೆ ಕರೆ ಮಾಡಿದ್ದ ಆರೋಪಿಗಳು ‘ಮಗನನ್ನ ಜೀವಂತವಾಗಿ ನೋಡುವ ಆಸೆಯಿದ್ದರೆ, 5 ಲಕ್ಷ ರೂ ನೀಡುವಂತೆ’ ಡಿಮ್ಯಾಂಡ್ ಮಾಡಿದ್ದರು.

ಹಣ ನೀಡುವುದಾಗಿ ಪೋಷಕರೂ ಸಹ ಒಪ್ಪಿಕೊಂಡಿದ್ದರು‌. ಇತ್ತ ವಿಷಯ ತಿಳಿದ ಪೊಲೀಸರು ಅಪಹರಣಕಾರರ ಪೋನ್ ಕರೆ ಆಧರಿಸಿ ತನಿಖೆ ಆರಂಭಿಸಿದ್ದರು. ಆದರೆ ಅಷ್ಟರಲ್ಲಾಗಲೇ ಬನ್ನೇರುಘಟ್ಟ ಅರಣ್ಯ ಪ್ರದೇಶದಲ್ಲಿ ಕತ್ತು ಕೊಯ್ದು ಸುಟ್ಟ ಸ್ಥಿತಿಯಲ್ಲಿ ಬಾಲಕನ ಶವ ಪತ್ತೆಯಾಗಿದೆ.

ಮುಖ ಚಹರೆ ತಿಳಿಯದಿರಲು ಪೆಟ್ರೋಲ್ ಸುರಿದ ಬೆಂಕಿ ಹಚ್ಚಿರುವುದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿತ್ತು.ಸ್ಥಳಕ್ಕೆ ಎಲೆಕ್ಟ್ರಾನಿಕ್ ಸಿಟಿ ಉಪವಿಭಾಗದ ಡಿಸಿಪಿ ನಾರಾಯಣ್ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಎಸ್‌ಪಿ ಸಿ.ಕೆ.ಬಾಬಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.

ಅಪರಾಧ ಹಿನ್ನೆಲೆ ಹೊಂದಿರುವ ಗುರುಮೂರ್ತಿ ಈ ಅಪಹರಣಕ್ಕೆ ಸಂಚು ರೂಪಿಸಿದ್ದ ಎಂದು ತಿಳಿದು ಬಂದಿದೆ. ಆದರೆ ಕೃತ್ಯಕ್ಕೆ ಕಾರಣವೇನು, ಇನ್ನೂ ಯಾರಾದರೂ ಭಾಗಿಯಾಗಿದ್ದಾರಾ ಎಂಬುದರ ಕುರಿತು ತನಿಖೆ ನಡೆಸುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಜಕೀಯ

ಬೇಟಿ ಬಚಾವೋ ಬೇಟಿ ಪಡಾವೋ ಎನ್ನುವ ಬಿಜೆಪಿಯವರು ಪ್ರಜ್ವಲ್ ರೇವಣ್ಣ ಪ್ರಕರಣದ ಬಗ್ಗೆ ಮಾತಾಡಲಿ: ಪ್ರಿಯಾಂಕ್ ಖರ್ಗೆ

ಬೇಟಿ ಬಚಾವೋ ಬೇಟಿ ಪಡಾವೋ ಎನ್ನುವ ಬಿಜೆಪಿಯವರು ಪ್ರಜ್ವಲ್ ರೇವಣ್ಣ ಪ್ರಕರಣದ ಬಗ್ಗೆ

ಬೇಟಿ ಬಚಾವೋ ಬೇಟಿ ಪಡಾವೋ ಎನ್ನುವ ಬಿಜೆಪಿಯವರು ಪ್ರಜ್ವಲ್ ರೇವಣ್ಣ ಪ್ರಕರಣದ ಉತ್ತರ ನೀಡಲಿ ಎಂದು ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಹೇಳಿದ್ದಾರೆ.

[ccc_my_favorite_select_button post_id="112013"]
ಆಗಸ್ಟ್ 4 ರಿಂದ ಅಮೇರಿಕಾದಲ್ಲಿ ಶಾಸಕಾಂಗ ಶೃಂಗಸಭೆ 2025: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಪ್ರಯಾಣ

ಆಗಸ್ಟ್ 4 ರಿಂದ ಅಮೇರಿಕಾದಲ್ಲಿ ಶಾಸಕಾಂಗ ಶೃಂಗಸಭೆ 2025: ವಿಧಾನ ಪರಿಷತ್ ಸಭಾಪತಿ

ಆಗಸ್ಟ್ 4 ರಿಂದ 6ನೇ ತಾರೀಖಿನವರೆಗೆ ಅಮೇರಿಕಾದ ಬೋಸ್ಟನ್ ನಗರದಲ್ಲಿ ನಡೆಯುವ "ಶಾಸಕಾಂಗ ಶೃಂಗಸಭೆ 2025”ರಲ್ಲಿ (Legislative Summit 2025) ಪಾಲ್ಗೊಳ್ಳಲು ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಇಂದು ಬೆಳಗಿನ ಜಾವ

[ccc_my_favorite_select_button post_id="111777"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ಜು.25ರಿಂದ 28ರವರೆಗೆ ನಡೆಯಲಿರುವ ಪುರುಷರ ಸೀನಿಯರ್ -ನ್ಯಾಷನಲ್ಸ್ ಕಬಡ್ಡಿ ಚಾಂಪಿಯನ್‌ಶಿಪ್(Kabaddi Championship) ಪಂದ್ಯಾವಳಿ

[ccc_my_favorite_select_button post_id="111553"]
ಅತ್ಯಾಚಾರ ಪ್ರಕರಣ; ಪ್ರಜ್ವಲ್ ರೇವಣ್ಣ ದೋಷಿ ಎಂದು ತೀರ್ಪು..!

ಅತ್ಯಾಚಾರ ಪ್ರಕರಣ; ಪ್ರಜ್ವಲ್ ರೇವಣ್ಣ ದೋಷಿ ಎಂದು ತೀರ್ಪು..!

ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ವಿರುದ್ಧ ಮನೆ ಕೆಲಸದ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ತೀರ್ಪು ಹೊರಡಿಸಿದೆ.

[ccc_my_favorite_select_button post_id="111989"]
ದೊಡ್ಡಬಳ್ಳಾಪುರ: ಕ್ಯಾಂಟರ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಕ್ಯಾಂಟರ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು..!

ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ತಾಲ್ಲೂಕಿನ ಮಧುರೆ ರಸ್ತೆಯಲ್ಲಿನ ಖಾಸಗಿ

[ccc_my_favorite_select_button post_id="111623"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!