ಒಕ್ಕಲಿಗ ಸಮುದಾಯಕ್ಕೆ ಅನ್ಯಾಯವಾದಾಗ ಪ್ರತಿಯೊಬ್ಬರೂ ಅದರ ವಿರುದ್ಧ ಧ್ವನಿ ಎತ್ತಬೇಕು: ಆರ್‌.ಅಶೋಕ

When injustice is done to the Vokkaliga community, everyone should raise their voice against it: R. Ashoka

ಬೆಂಗಳೂರು: ಒಕ್ಕಲಿಗ (Vokkaliga) ಸಮುದಾಯಕ್ಕೆ ಅನ್ಯಾಯವಾದಾಗ ಪ್ರತಿಯೊಬ್ಬರೂ ಅದರ ವಿರುದ್ಧ ಧ್ವನಿ ಎತ್ತಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R. Ashoka) ಕರೆ ನೀಡಿದರು.

ರಾಜ್ಯ ಒಕ್ಕಲಿಗರ ಜಾಗೃತಿ ಸಂಘದಿಂದ ಕುವೆಂಪು ಕಲಾಕ್ಷೇತ್ರದಲ್ಲಿ ನಡೆದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸಮುದಾಯಕ್ಕೆ ಅನ್ಯಾಯವಾದಾಗ ಪ್ರತಿಯೊಬ್ಬರೂ ಧ್ವನಿ ಎತ್ತಬೇಕು. ಅಂದರೆ ಮಾತ್ರ ಸಮುದಾಯಕ್ಕೆ ನ್ಯಾಯ ದೊರೆಯುತ್ತದೆ. ನಾಡಪ್ರಭು ಕೆಂಪೇಗೌಡರು ಯಾರ ಮೇಲೂ ದಂಡೆತ್ತಿ ಹೋಗಿ ಸಾಮ್ರಾಜ್ಯ ಸ್ಥಾಪಿಸಲಿಲ್ಲ. ಅವರು ಎಲ್ಲರನ್ನೂ ಸಮಾನತೆಯಿಂದ ಕಂಡು ಬೆಂಗಳೂರನ್ನು ಕಟ್ಟಿದ್ದರು.

ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು, ಮಾಜಿ ಸಿಎಂ ಎಸ್‌.ಎಂ.ಕೃಷ್ಣ, ರಾಜ್ಯದ ಅಭಿವೃದ್ಧಿಗೆ ಸಾಕಷ್ಟು ಕೆಲಸ ಮಾಡಿದ್ದಾರೆ. ಸಮುದಾಯದಲ್ಲಿ ಇನ್ನಷ್ಟು ಯುವಜನರನ್ನು ಬೆಳೆಸಿದರೆ ಈ ರೀತಿ ಮಹಾನ್‌ ವ್ಯಕ್ತಿಗಳಾಗುತ್ತಾರೆ. ಬೇರೆ ಸಮುದಾಯಕ್ಕೆ ಅನ್ಯಾಯ ಮಾಡದೆ ನಮ್ಮ ಸಮುದಾಯಕ್ಕಾಗಿ ಹೋರಾಟ ಮಾಡಬೇಕು ಎಂದರು.

ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ಪ್ರತಿ ವರ್ಷ ಆಚರಣೆ ಮಾಡಿದರೆ ಸಾಲುವುದಿಲ್ಲ. ಒಕ್ಕಲಿಗ ಸಮುದಾಯದವರು ಕೃಷಿ ಮಾಡುವವರು. ಇಂತಹ ಸಮುದಾಯದವರ ಹಕ್ಕುಗಳಿಗಾಗಿ ಎಲ್ಲರೂ ಒಗ್ಗೂಡಬೇಕು. ಈ ಹಿಂದೆ ಒಂದು ಬಾರಿ ಹಕ್ಕುಗಳಿಗಾಗಿ ಹೋರಾಡಿದ್ದನ್ನು ನೋಡಿದ್ದೇನೆ. ಮತ್ತೆ ಎಂದೂ ಹೋರಾಟ ಮಾಡಿದ್ದನ್ನು ಕಂಡಿಲ್ಲ.

ಶ್ರೀ ಬಾಲಗಂಗಾಧನರನಾಥ ಸ್ವಾಮೀಜಿಯವರ ಪ್ರೇರಣೆಯಿಂದಾಗಿ 70 ವರ್ಷದ ಬಳಿಕ ವಿಧಾನಸೌಧ ಮುಂಭಾಗ ಕೆಂಪೇಗೌಡರ ಪ್ರತಿಮೆ ಸ್ಥಾಪಿಸಲು ಸಾಧ್ಯವಾಯಿತು. ಅಂದರೆ ಕೆಂಪೇಗೌಡರಿಗೆ ಆ ಗೌರವ ನೀಡಲು ಅಷ್ಟು ವರ್ಷ ಬೇಕಾಯಿತು.

ನಾನು ಕಂದಾಯ ಸಚಿವನಾಗಿದ್ದಾಗ ಒಂದೇ ತಿಂಗಳಲ್ಲಿ ನಿರ್ಣಯ ತೆಗೆದುಕೊಂಡು ಬಸವಣ್ಣ ಹಾಗೂ ಕೆಂಪೇಗೌಡರ ಪ್ರತಿಮೆ ಸ್ಥಾಪಿಸಲಾಯಿತು. ಅದೇ ರೀತಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬಳಿ ಪ್ರತಿಮೆ ಸ್ಥಾಪಿಸಲಾಯಿತು ಎಂದರು.

ರಾಜಕೀಯ

ಬೆಲೆ ಏರಿಕೆಗೆ ಹೊಣೆ ಯಾರು?: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಲೆ ಏರಿಕೆಗೆ ಹೊಣೆ ಯಾರು?: ಡಿಸಿಎಂ ಡಿ.ಕೆ. ಶಿವಕುಮಾರ್

"ಕೇಂದ್ರ ಸರ್ಕಾರ ಜನಸಾಮಾನ್ಯರ ನೋವನ್ನು ಅರ್ಥ ಮಾಡಿಕೊಳ್ಳಬೇಕಿತ್ತು. ಎಲ್ಲಾ ಪದಾರ್ಥಗಳ ಬೆಲೆ ಆಕಾಶಕ್ಕೇರಿದೆ. ಆದಾಯ ಪಾತಳಕ್ಕೆ ಕುಸಿದಿದೆ. ಬೆಲೆ ಹೆಚ್ಚಳಕ್ಕೆ ಹೊಣೆ ಯಾರು?" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ಕೇಂದ್ರ

[ccc_my_favorite_select_button post_id="121597"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಯಾಗಲು ಸೂಕ್ತ ಯುವತಿ ದೊರೆಯದ ಕಾರಣ ಮನನೊಂದ ಯುವಕನೊಬ್ಬ ಕಲ್ಯಾಣಿಗೆ ಬಿದ್ದು ಆತ್ಮಹತ್ಯೆ (suicide) ಮಾಡಿಕೊಂಡಿರುವ ಘಟನೆ ನಡೆದಿದೆ.

[ccc_my_favorite_select_button post_id="121591"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]