Poisoning of school tank: CM Siddaramaiah lashes out at BJP

ಶಾಲೆಯ ಟ್ಯಾಂಕ್‌ಗೆ ವಿಷ: ಧರ್ಮದ ಹೆಸರಿನಲ್ಲಿ ದ್ವೇಷವೆಂದು ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ಆಕ್ರೋಶ

ಬೆಳಗಾವಿ: ಶಾಲಾ ಮುಖ್ಯ ಶಿಕ್ಷಕ ಮುಸ್ಲಿಂ (Muslim teacher) ಎಂಬ ಕಾರಣಕ್ಕೆ ಆತನನ್ನು ಶಾಲೆಯಿಂದ ಎತ್ತಂಗಡಿ ಮಾಡಿಸುವ ಉದ್ದೇಶದಿಂದ ಶಾಲೆಯ ಆವರಣದಲ್ಲಿದ್ದ ಕುಡಿಯುವ ನೀರಿನ ಟ್ಯಾಂಕ್ ಗೆ ವಿಷ ಸೇರಿಸಿದ ಘಟನೆ ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದಲ್ಲಿ ನಡೆದಿದೆ.

ಈ ಕುರಿತಂತೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಸಿಎಂ, ಜಿಲ್ಲೆಯ ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದ ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯರು ಮುಸ್ಲಿಂ ಸಮುದಾಯಕ್ಕೆ ಸೇರಿದವರು, ಅವರನ್ನು ತಮ್ಮ ಊರಿನಿಂದ ಬೇರೆಡೆಗೆ ವರ್ಗಾವಣೆ ಮಾಡಿಸಬೇಕೆಂಬ ದುರುದ್ದೇಶದಿಂದ ಶಾಲಾಮಕ್ಕಳ ಕುಡಿಯುವ ನೀರಿಗೆ ವಿಷ ಹಾಕಿದ ಶ್ರೀರಾಮ ಸೇನೆಯ ತಾಲೂಕು ಅಧ್ಯಕ್ಷ ಸಾಗರ ಪಾಟೀಲ ಸೇರಿದಂತೆ ಒಟ್ಟು ಮೂವರನ್ನು ಬಂಧಿಸಲಾಗಿದೆ.

ಕಳೆದ 15 ದಿನಗಳ ಹಿಂದೆ ನಡೆದ ಈ ಘಟನೆಯಲ್ಲಿ ಹಲವು ಮಕ್ಕಳು ಅಸ್ವಸ್ಥಗೊಂಡಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ‌ ಸಂಭವಿಸಿರಲಿಲ್ಲ.

ಧಾರ್ಮಿಕ ಮೂಲಭೂತವಾದ, ಕೋಮುವೈಷಮ್ಯ ಎನ್ನುವುದು ಎಂತಹ ಹೀನ ಕೃತ್ಯವನ್ನೂ ಮಾಡಿಸಬಲ್ಲುದು ಎಂಬುದಕ್ಕೆ ಪುಟ್ಟಮಕ್ಕಳ ಮಾರಣಹೋಮಕ್ಕೆ ಕಾರಣವಾಗಬಹುದಾಗಿದ್ದ ಈ ಘಟನೆಯೇ ಸಾಕ್ಷಿ.

“ದಯೆಯೇ ಧರ್ಮದ ಮೂಲವಯ್ಯ” ಎಂದು ಸಾರಿದ ಶರಣರ ನಾಡಿನಲ್ಲಿ ಈ ಮಟ್ಟಿನ ಕೌರ್ಯ, ದ್ವೇಷ ಹುಟ್ಟಲು ಸಾಧ್ಯವೇ? ಎಂಬುದನ್ನು ಈ ಕ್ಷಣಕ್ಕೂ ನನ್ನಿಂದ ನಂಬಲಾಗುತ್ತಿಲ್ಲ.

ಧರ್ಮದ ಹೆಸರಿನಲ್ಲಿ ಸಮಾಜದಲ್ಲಿ ದ್ವೇಷ ಬಿತ್ತಿ, ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳುವ ಬಿಜೆಪಿ ನಾಯಕರು ಒಮ್ಮೆ ತಮ್ಮ‌ ಆತ್ಮವಿಮರ್ಷೆ ಮಾಡಿಕೊಳ್ಳಲಿ.

ಈ ಘಟನೆಯ ಹೊಣೆಯನ್ನು ಪ್ರಮೋದ್ ಮುತಾಲಿಕ್ ಹೊರುವರೇ? ವಿಜಯೇಂದ್ರ ಹೊರುವರೇ? ಆರ್.ಅಶೋಕ್ ಹೊರುವರೇ? ಇಂಥವರು ಮಾಡುವ ಸಮಾಜಘಾತುಕ ಕೃತ್ಯಗಳಿಗೆ ಸದಾ ಬೆಂಬಲವಾಗಿ ನಿಲ್ಲುವ ನಾಯಕರು ಈಗ ಮುಂದೆ ಬಂದು ತಮ್ಮ ಪಾಪಕ್ಕೆ ಪ್ರಾಯಶ್ಚಿತ್ತ ಮಾಡಿಕೊಳ್ಳಲಿ.

ಎಲ್ಲ ಬಗೆಯ ಮತೀಯವಾದ, ಮೂಲಭೂತವಾದಿತನಗಳು ಮನುಷ್ಯ ಸಮಾಜಕ್ಕೆ ಅಪಾಯಕಾರಿ. ದ್ವೇಷ ಭಾಷಣಗಳು, ಕೋಮು ಗಲಭೆಗಳ ತಡೆಗಾಗಿಯೇ ನಾವು ವಿಶೇಷ ಟಾಸ್ಕ್ ಫೋರ್ಸ್ ರಚನೆ ಮಾಡಿದ್ದೇವೆ, ಅಂಥವರ ವಿರುದ್ಧ ಕಾನೂನಿನ ಪರಿಧಿಯೊಳಗೆ ಸಾಧ್ಯವಾದ ಎಲ್ಲಾ ಕ್ರಮವನ್ನು ವಹಿಸುತ್ತಿದ್ದೇವೆ.

ನಮ್ಮ ಎಲ್ಲಾ ಪ್ರಯತ್ನಗಳು ಫಲ ಕೊಡಬೇಕಾದರೆ ಸಾರ್ವಜನಿಕರೂ ಇಂಥಾ ಶಕ್ತಿಗಳ ವಿರುದ್ಧ ಧ್ವನಿಯೆತ್ತಬೇಕು, ಪ್ರತಿರೋಧ ಒಡ್ಡಬೇಕು, ದೂರು ದಾಖಲಿಸಬೇಕು.

ನನಗೆ ಈಗಲೂ ನಂಬಿಕೆಯಿದೆ, ಕೋಮುವಾದಿಗಳ ಸಂಖ್ಯೆಗಿಂತ ಕೂಡಿ ಬಾಳಬೇಕೆಂದು ಬಯಸುವ ಜನರ ಸಂಖ್ಯೆ ನೂರು ಪಟ್ಟು ಹೆಚ್ಚಿದೆ.

ಮಕ್ಕಳ ಹತ್ಯಾಕಾಂಡ ನಡೆಸುವ ದುಷ್ಟ ಹುನ್ನಾರವನ್ನು ಭೇದಿಸಿದ ಪೊಲೀಸ್ ಸಿಬ್ಬಂದಿಗಳಿಗೆ ಅಭಿನಂದನೆಗಳು. ಇಂಥ ಹೀನಕೃತ್ಯ ಎಸಗಿದ ದುರುಳರಿಗೆ ನ್ಯಾಯ ವ್ಯವಸ್ಥೆ ತಕ್ಕಶಿಕ್ಷೆ ನೀಡಲಿದೆ ಎಂಬ ಪೂರ್ಣ ವಿಶ್ವಾಸವಿದೆ ಎಂದಿದ್ದಾರೆ.

ರಾಜಕೀಯ

ಮೆಟ್ರೋ ಯೋಜನೆಯಲ್ಲಿ ರಾಜ್ಯ ಸರ್ಕಾರದ ಪಾಲುದಾರಿಕೆ ಇದೆ: ಬಿಜೆಪಿ ನಾಯಕರ ಕುಟುಕಿದ ಡಿಸಿಎಂ ಡಿ.ಕೆ.ಶಿವಕುಮಾರ್

ಮೆಟ್ರೋ ಯೋಜನೆಯಲ್ಲಿ ರಾಜ್ಯ ಸರ್ಕಾರದ ಪಾಲುದಾರಿಕೆ ಇದೆ: ಬಿಜೆಪಿ ನಾಯಕರ ಕುಟುಕಿದ ಡಿಸಿಎಂ

"ಮೆಟ್ರೋ ಯೋಜನೆ ಕೇವಲ ಕೇಂದ್ರ ಸರ್ಕಾರದ ಯೋಜನೆಯಲ್ಲ. ಇದರಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಪಾಲುದಾರಿಕೆ ಇದೆ. ಇದರಲ್ಲಿ ಜನರ ಸೇವೆ ಮುಖ್ಯವೇ ಹೊರತು, ಕ್ರೆಡಿಟ್ ರಾಜಕಾರಣವಲ್ಲ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="112139"]
ಆಗಸ್ಟ್ 4 ರಿಂದ ಅಮೇರಿಕಾದಲ್ಲಿ ಶಾಸಕಾಂಗ ಶೃಂಗಸಭೆ 2025: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಪ್ರಯಾಣ

ಆಗಸ್ಟ್ 4 ರಿಂದ ಅಮೇರಿಕಾದಲ್ಲಿ ಶಾಸಕಾಂಗ ಶೃಂಗಸಭೆ 2025: ವಿಧಾನ ಪರಿಷತ್ ಸಭಾಪತಿ

ಆಗಸ್ಟ್ 4 ರಿಂದ 6ನೇ ತಾರೀಖಿನವರೆಗೆ ಅಮೇರಿಕಾದ ಬೋಸ್ಟನ್ ನಗರದಲ್ಲಿ ನಡೆಯುವ "ಶಾಸಕಾಂಗ ಶೃಂಗಸಭೆ 2025”ರಲ್ಲಿ (Legislative Summit 2025) ಪಾಲ್ಗೊಳ್ಳಲು ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಇಂದು ಬೆಳಗಿನ ಜಾವ

[ccc_my_favorite_select_button post_id="111777"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ಜು.25ರಿಂದ 28ರವರೆಗೆ ನಡೆಯಲಿರುವ ಪುರುಷರ ಸೀನಿಯರ್ -ನ್ಯಾಷನಲ್ಸ್ ಕಬಡ್ಡಿ ಚಾಂಪಿಯನ್‌ಶಿಪ್(Kabaddi Championship) ಪಂದ್ಯಾವಳಿ

[ccc_my_favorite_select_button post_id="111553"]
ಕಣ್ಣೀರು ತರಿಸುವ  ನವವಿವಾಹಿತೆಯ ಸೂಸೈಡ್ ನೋಟ್..!

ಕಣ್ಣೀರು ತರಿಸುವ ನವವಿವಾಹಿತೆಯ ಸೂಸೈಡ್ ನೋಟ್..!

ಅಣ್ಣಾ, ಈ ಬಾರಿ ನಾನು ನಿನಗೆ ರಾಖಿ ಕಟ್ಟಲು ಸಾಧ್ಯವಾಗದಿರಬಹುದು ಎಂದು ಸುಸೈಡ್ ನೋಟ್ ಬರೆದಿರುವ ಸಹೋದರಿಯೋರ್ವಳು ಗಂಡನ ಕಿರುಕುಳದಿಂದ ಬೇಸತ್ತು ಮದುವೆಯಾದ ಆರು ತಿಂಗಳಲ್ಲಿಯೇ suicide

[ccc_my_favorite_select_button post_id="112128"]
ಎರಡು ಬಸ್ಸುಗಳ ನಡುವೆ ಸಿಲುಕಿದ ಆಟೋ ನುಜ್ಜುಗುಜ್ಜು..!| Video ನೋಡಿ

ಎರಡು ಬಸ್ಸುಗಳ ನಡುವೆ ಸಿಲುಕಿದ ಆಟೋ ನುಜ್ಜುಗುಜ್ಜು..!| Video ನೋಡಿ

ಚಲಿಸುತ್ತಿದ್ದ ಎರಡು ಬಸ್ಸುಗಳ ನಡುವೆ ಸಿಲುಕಿದ ಆಟೋ ನುಜ್ಜುಗುಜ್ಜಾಗಿದ್ದು (Auto crushed), ಹಲವರಿಗೆ ಪೆಟ್ಟಾಗಿರುವ ಗಾಯವಾದ ಘಟನೆ

[ccc_my_favorite_select_button post_id="112134"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!