ಬೆಂಗಳೂರು: ನಗರದ ಆರ್.ವಿ. ರಸ್ತೆಯಿಂದ ಬೊಮ್ಮಸಂದ್ರ ನಡುವಿನ ನಮ್ಮ ಮೆಟ್ರೊ ಹಳದಿ ಮಾರ್ಗದಲ್ಲಿ ರೈಲು ಸಂಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ (Narendra Modi) ಆಗಸ್ಟ್ 10ರಂದು ಹಸಿರು ನಿಶಾನೆ ತೋರಿಸಲಿದ್ದಾರೆ.
ಈ ಹಿನ್ನೆಲೆಯಲ್ಲಿ ಬಹು ತಿಂಗಳ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ.
ಪ್ರಧಾನಿ ಮೋದಿ ಅವರ ಭೇಟಿ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿಯಲ್ಲಿ ಚಟುವಟಿಕೆ ಆರಂಭವಾಗಿದೆ. ಮೋದಿ ಅವರಿಗೆ ಅದ್ದೂರಿ ಸ್ವಾಗತ ಕೋರುವ ನಿಟ್ಟಿನಲ್ಲಿ ರಾಜ್ಯ ಬಿಜೆಪಿ ಮುಖಂಡರು ಸರಣಿ ಸಭೆ ನಡೆಸುತ್ತಿದ್ದಾರೆ.
ನಿನ್ನೆ ನಡೆದ ಪೂರ್ವಭಾವಿ ಸಭೆಯಲ್ಲಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (B.Y.Vijayendra), ವಿರೋಧ ಪಕ್ಷದ ನಾಯಕ ಆರ್. ಅಶೋಕ (R.Ashoka) ಸಂಸದ ತೇಜಸ್ವಿ ಸೂರ್ಯ (Tejasvi_Surya) ಹಾಗೂ ಪಕ್ಷದ ಬೆಂಗಳೂರಿನ ಶಾಸಕರುಗಳು, ಮುಖಂಡರು ಇದ್ದರು.
ರಾಹುಲ್ ಪ್ರತಿಭಟನೆ
ಮತ್ತೊಂದೆಡೆ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಮತಗಳ್ಳತನ ಆಗಿದೆ ಎಂದು ಆರೋಪಿಸಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರು (Rahul Gandhi) ಆಗಸ್ಟ್ 4 ರಂದು ಪ್ರತಿಭಟನೆ ನಡೆಸಲಿದ್ದಾರೆ. ಇದರ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ( Narendra Modi) ಬೆಂಗಳೂರಿಗೆ ಭೇಟಿ ನಿಗದಿಯಾಗಿರುವುದು ಅಚ್ಚರಿಗೆ ಕಾರಣವಾಗಿದೆ.