ಸಾರಿಗೆ ನೌಕರರ ಮುಷ್ಕರ; ಕೂಡಲೇ ಪರಿಹಾರ ನೀಡುವಂತೆ ಬಿ.ವೈ.ವಿಜಯೇಂದ್ರ ಆಗ್ರಹ

Congress is a party of fools today; B.Y. Vijayendra

ಬೆಂಗಳೂರು: ಸರಕಾರಿ ಸಾರಿಗೆ ನೌಕರರ ಮುಷ್ಕರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೂಡಲೇ ಪರಿಹಾರ ನೀಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ (B.Y. Vijayendra) ಅವರು ಆಗ್ರಹಿಸಿದ್ದಾರೆ.

ನಗರದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮುಷ್ಕರದಿಂದ ಬಸ್ ಸಿಗದೇ ಗ್ರಾಮೀಣ ಭಾಗದಲ್ಲಿ ಶಾಲಾ ಮಕ್ಕಳಿಗೆ ತೀವ್ರ ಸಮಸ್ಯೆ ಆಗಿದೆ. ಸರಕಾರಿ ಬಸ್ಸಿಲ್ಲದೆ ಕಾಲೇಜು, ಶಾಲಾ ವಿದ್ಯಾರ್ಥಿಗಳು ಪರದಾಡುತ್ತಿದ್ದಾರೆ ಎಂದು ಗಮನ ಸೆಳೆದರು. ಗ್ಯಾರಂಟಿ ಕಾರಣಕ್ಕಾಗಿ ಗ್ರಾಮೀಣ ಭಾಗದ ಬಸ್ ಓಡಾಟವನ್ನು ಕಡಿತಗೊಳಿಸಿದ್ದಾರೆ ಎಂದು ಅವರು ಆಕ್ಷೇಪಿಸಿದರು.

ಕೆಎಸ್‍ಆರ್‍ಟಿಸಿ ಮತ್ತಿತರ ಸಾರಿಗೆ ಸಂಸ್ಥೆಗಳ ನೌಕರರಿಗೆ ವೇತನ ಕೊಡಲಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಬಹಳ ತಿಂಗಳುಗಳಿಂದ ಆರ್ಥಿಕ ಮುಗ್ಗಟ್ಟು ಇದ್ದು, ಸಮಸ್ಯೆ ಉಲ್ಬಣವಾಗಿದೆ. ಹಾಗಾಗಿ ಅವರ ಬೇಡಿಕೆ ಈಡೇರಿಸಲು ಮುಖ್ಯಮಂತ್ರಿಗಳಿಗೆ ಸಾಧ್ಯವಾಗುತ್ತಿಲ್ಲ ಎಂದು ತಿಳಿಸಿದರು.

ಮುಖ್ಯಮಂತ್ರಿಗಳು ತಡ ಮಾಡದೇ, ತಕ್ಷಣವೇ ಕಾರ್ಮಿಕರ ಮತ್ತು ಅಧಿಕಾರಿಗಳ ಸಭೆ ಕರೆಯಬೇಕು. ಅವರ ಸಮಸ್ಯೆಗೆ ಪರಿಹಾರ ನೀಡಬೇಕು. ಜನಸಾಮಾನ್ಯರಿಗೆ ತೊಂದರೆ ಆಗುವುದನ್ನು ತಪ್ಪಿಸಬೇಕು ಎಂದು ಒತ್ತಾಯಿಸಿದರು.

ಇದು ಮುಖ್ಯಮಂತ್ರಿಗಳ ಕರ್ತವ್ಯ. ಸಾರಿಗೆ ಸಚಿವರೂ ಕುಳಿತು ಸಮಸ್ಯೆಗೆ ಪರಿಹಾರ ನೀಡಬೇಕೆಂದು ಆಗ್ರಹವನ್ನು ಮುಂದಿಟ್ಟರು. ರಾಹುಲ್ ಗಾಂಧಿಯವರ ಬೆಂಗಳೂರು ಭೇಟಿ ಕಾರಣಕ್ಕಾಗಿ ಮುಖ್ಯಮಂತ್ರಿಗಳು ನಿನ್ನೆ ಸಾರಿಗೆ ನೌಕರರ ಸಭೆ ಕರೆದಿದ್ದರು ಎಂದೂ ಅವರು ಆರೋಪಿಸಿದರು.

ಏನು ಪರ್ಯಾಯ ವ್ಯವಸ್ಥೆ ಮಾಡಿದ್ದಾರೆ?

ನಿನ್ನೆ ಸುತ್ತೋಲೆಯನ್ನೂ ಹೊರಡಿಸಿದ್ದಾರೆ. ಖಾಸಗಿ ಶಿಕ್ಷಣ ಸಂಸ್ಥೆಗಳ ಬಸ್‍ಗಳೂ ಬೇಕೆಂದು ನಿನ್ನೆ ಪತ್ರ ಬರೆದಿದ್ದಾರೆ. ಮೊದಲೇ ವ್ಯವಸ್ಥೆ ಹಾಳು ಮಾಡಲು ಹೊರಟಿದ್ದಾರೆ. ಈಗ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲೂ ಸಮಸ್ಯೆ ಹುಟ್ಟಿಸಲು ಹೊರಟಿದ್ದೀರಿ ಎಂದು ಅವರು ಈ ಕುರಿತ ಪ್ರಶ್ನೆಗೆ ಉತ್ತರ ನೀಡಿದರು.

ಗಡ್ಡಕ್ಕೆ ಬೆಂಕಿ ಹತ್ತಿಕೊಂಡಾಗ ಸಮಸ್ಯೆ ಪರಿಹರಿಸಲು ಹೊರಟಿದ್ದಾರೆ. ಈಗಲೂ ಕಾಲ ಮಿಂಚಿಲ್ಲ; ಮುಷ್ಕರ ಈಗಾಗಲೇ ಪ್ರಾರಂಭವಾಗಿದೆ. ಸಂಬಂಧಿತರನ್ನು ಕರೆದು ಸಮಸ್ಯೆ ಪರಿಹರಿಸಬೇಕು ಎಂದು ಅವರು ತಿಳಿಸಿದರು.

ರಾಜಕೀಯ

ಒಂದು ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

ಒಂದು ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

“ಕೇಂದ್ರ ಪರಿಸರ ಇಲಾಖೆಯವರು ದಂಡ ಹಾಗೂ ಮಿಟಿಗೇಷನ್ ಪ್ಲಾನ್ ಸೇರಿ 257 ಕೋಟಿ ರೂಪಾಯಿ ಹಣ ಸಂದಾಯ ಮಾಡಬೇಕು ಎಂದು ಸೂಚಿಸಿದ್ದಾರೆ. ಇಂದೇ ಈ ಹಣ ಪಾವತಿ ಮಾಡಿ ಎಂದು ಮಾರ್ಗದರ್ಶನ ನೀಡಿದ್ದೇನೆ. ಕಟ್ಟಿದ

[ccc_my_favorite_select_button post_id="121560"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಯಾಗಲು ಸೂಕ್ತ ಯುವತಿ ದೊರೆಯದ ಕಾರಣ ಮನನೊಂದ ಯುವಕನೊಬ್ಬ ಕಲ್ಯಾಣಿಗೆ ಬಿದ್ದು ಆತ್ಮಹತ್ಯೆ (suicide) ಮಾಡಿಕೊಂಡಿರುವ ಘಟನೆ ನಡೆದಿದೆ.

[ccc_my_favorite_select_button post_id="121591"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]