Doddaballapura: Mother and child die... doctor's negligence alleged

ದೊಡ್ಡಬಳ್ಳಾಪುರ: ತಾಯಿ- ಮಗು ಸಾವು.. ವೈದ್ಯರ ನಿರ್ಲಕ್ಷ್ಯದ ಆರೋಪ, ಪೋಷಕರ ಆಕ್ರೋಶ| Video

ದೊಡ್ಡಬಳ್ಳಾಪುರ: ತುಂಬು ಗರ್ಭಿಣಿಗೆ ಸೂಕ್ತ ಚಿಕಿತ್ಸೆ ದೊರಕದ ಕಾರಣ ತಾಯಿ ಮತ್ತು ಮಗು ಸಾವನಪ್ಪಿರುವ ಘಟನೆ ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆದಿದ್ದು, ವೈದ್ಯರ ನಿರ್ಲಕ್ಷ್ಯದ (Doctor’s negligence) ಆರೋಪ ಕೇಳಿ ಬಂದಿದೆ.

ಮೃತ ಗರ್ಭಿಣಿಯನ್ನು ಸಿಂಗೇನಹಳ್ಳಿ ನಿವಾಸಿ ಸುಶ್ಮಿತ (24 ವರ್ಷ) ಎಂದು ಗುರುತಿಸಲಾಗಿದೆ.

ಗುಂಡಪ್ಪನಾಯಕನಹಳ್ಳಿ ಗ್ರಾಮದ ಸುಶ್ಮಿತ ಎನ್ನುವರನ್ನು ಗೊಲ್ಲರಪಾಳ್ಯದ ಮಹೇಶ್ ಎನ್ನುವವರಿಗೆ ಮದುವೆ ಮಾಡಿಕೊಡಲಾಗಿತ್ತು. ಗರ್ಭಿಣಿಯಾದ ಹಿನ್ನೆಲೆಯಲ್ಲಿ ಸುಶ್ಮಿತ ಅವರು ಡೆಲಿವರಿಗೆಂದು ದೊಡ್ಡಬಳ್ಳಾಪುರದಲ್ಲಿ ವಾಸವಿದ್ದ ಪೊಷಕರ ತವರು ಮನೆಗೆ ಬಂದಿದ್ದರು.

ಮೊದಲ ಮಗುವಾದ ಕಾರಣ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರ ಸಲಹೆ ಸೂಚನೆ, ಚಿಕಿತ್ಸೆ ಪಡೆಯುತ್ತಿದ್ದ ಸುಶ್ಮಿತ ಅವರಿಗೆ ಆಗಸ್ಟ್. 14ಕ್ಕೆ ಡಿಲಿವರಿ ದಿನಾಂಕವನ್ನು ವೈದ್ಯರು ನೀಡಿದ್ದರಂತೆ.

ಆದರೆ ನಿನ್ನೆ ಸುಶ್ಮಿತ ಅವರಿಗೆ ಏಕಾಏಕಿ ಉಸಿರಾಟದಲ್ಲಿ ತೊಂದರೆ ಉಂಟಾಗಿದ್ದು, ಆಸ್ಪತ್ರೆಗೆ ತೆರಳಿದ್ದಾರೆ, ಈ ವೇಳೆ ವೈದ್ಯರು ಇಲ್ಲದ ಕಾರಣ ಶುಶ್ರೋಕಿಯ ಬಳಿ ಚಿಕಿತ್ಸೆ ಪಡೆಯುವಂತೆ ವೈದ್ಯರು ಹೇಳಿದ್ದರಂತೆ.

ವೈದ್ಯರ ಸಲಹೆ ಮೇರೆಗೆ ಮಾತ್ರೆ ನೀಡಿದ ಶುಶ್ರೋಷಕಿ ಏನು ಆಗಿಲ್ಲ ನಡೆಯಿರಿ ಎಂದಿದ್ದರಂತೆ. ಆದರೆ ಇಂದು ಬೆಳಗ್ಗಿನ ಜಾವ ಸುಶ್ಮಿತ ಸಾವನಪ್ಪಿದ್ದಾರೆ.

ಇದರಿಂದ ಕೆರಳಿದ ಪೋಷಕರು ತಾಯಿ-ಮಗು ಸಾವಿಗೆ ವೈದ್ಯರ ನಿರ್ಲಕ್ಷ್ಯ ಕಾರಣ ಎಂದು ಆರೋಪಿಸಿ, ಪ್ರತಿಭಟನೆಗೆ ಮುಂದಾಗಿದ್ದಾರೆ.

ಸ್ಥಳಕ್ಕೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಅಮರೇಶ್ ಗೌಡ ಹಾಗೂ ಸಿಬ್ಬಂದಿಗಳು ದೌಡಾಯಿಸಿದ್ದಾರೆ.

ರಾಜಕೀಯ

ದ್ವೇಷ ಭಾಷಣ ಮಸೂದೆ; ಬಿಜೆಪಿಯವರು ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿ ಏಕೆ ನೋಡಿಕೊಳ್ಳುತ್ತಿದ್ದಾರೆ.?: ಸಿಎಂ ಸಿದ್ದರಾಮಯ್ಯ ಪ್ರಶ್ನೆ

ದ್ವೇಷ ಭಾಷಣ ಮಸೂದೆ; ಬಿಜೆಪಿಯವರು ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿ ಏಕೆ

ಪ್ರಚೋದನಕಾರಿ ಭಾಷಣ ಮಾಡುವವರು ಮಾತ್ರ ವಿರೋಧಿಸುತ್ತಾರೆ. ಪ್ರಚೋದನಾಕಾರಿ ಭಾಷಣ ಮಾಡದೆ ಹೋದರೆ ಸುಮ್ಮನೆ ಪ್ರಕರಣ ದಾಖಲಿಸುವುದಿಲ್ಲ ಎಂದರು. ಬಿಜೆಪಿಯವರು ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿ ಏಕೆ ನೋಡಿಕೊಳ್ಳುತ್ತಿದ್ದಾರೆ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah)

[ccc_my_favorite_select_button post_id="117673"]
ಕಲಾವಿದರಾದ ಉಮೇಶ್, ರಾಮಚಂದ್ರಯ್ಯ ಅವರಿಗೆ ದೊಡ್ಡಬಳ್ಳಾಪುರದಲ್ಲಿ ನುಡಿನಮನ

ಕಲಾವಿದರಾದ ಉಮೇಶ್, ರಾಮಚಂದ್ರಯ್ಯ ಅವರಿಗೆ ದೊಡ್ಡಬಳ್ಳಾಪುರದಲ್ಲಿ ನುಡಿನಮನ

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಚಲನಚಿತ್ರ ಹಾಸ್ಯ ನಟ ಉಮೇಶ್ (Umesh) ಮತ್ತು ಜಾನಪದ ಕಲಾವಿದ ಶ್ಯಾಕಲದೇವನಪುರ ರಾಮಚಂದ್ರಯ್ಯ (Ramachandraiah) ಅವರಿಗೆ ನುಡಿನಮನ ಕಾರ್ಯಕ್ರಮ ನಡೆಯಿತು. 

[ccc_my_favorite_select_button post_id="117539"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರದ ಎಂ.ಆ‌ರ್.ಜಾಹ್ನವಿಗೆ ಬಾಲ ವಿಕಾಸ ಅಕಾಡೆಮಿ ಪ್ರಶಸ್ತಿ

ದೊಡ್ಡಬಳ್ಳಾಪುರದ ಎಂ.ಆ‌ರ್.ಜಾಹ್ನವಿಗೆ ಬಾಲ ವಿಕಾಸ ಅಕಾಡೆಮಿ ಪ್ರಶಸ್ತಿ

ಇಲ್ಲಿನ ನಿಸರ್ಗ ಯೋಗ ಕೇಂದ್ರದ ಯೋಗಪಟು ಎಂ. ಆರ್. ಜಾಹ್ನವಿ (M.R. Jahnavi) ಅವರಿಗೆ ಧಾರವಾಡದ ಕರ್ನಾಟಕ ಬಾಲ ವಿಕಾಸ ಅಕಾಡೆಮಿ ವತಿಯಿಂದ 2023-24ನೇ ಸಾಲಿಗೆ ನೀಡಲಾಗುವ ಅಕಾಡೆಮಿ ಬಾಲ ಗೌರವ ಪ್ರಶಸ್ತಿ ಬಾಲ

[ccc_my_favorite_select_button post_id="117462"]
ದೊಡ್ಡಬಳ್ಳಾಪುರ: ನೀರಿಲ್ಲದ ಪಾಳು ಬಾವಿಗೆ ಬಿದ್ದು ವ್ಯಕ್ತಿ ಸಾವು..!

ದೊಡ್ಡಬಳ್ಳಾಪುರ: ನೀರಿಲ್ಲದ ಪಾಳು ಬಾವಿಗೆ ಬಿದ್ದು ವ್ಯಕ್ತಿ ಸಾವು..!

ಸುಮಾರು 40 ಅಡಿ ಆಳದ ಪಾಳು ಬಾವಿಗೆ (Water well) ಬಿದ್ದು ವ್ಯಕ್ತಿಯೋರ್ವ ಸಾವನಪ್ಪಿರುವ ಘಟನೆ ತಾಲೂಕಿನ ಪುಟ್ಟಯ್ಯನ ಅಗ್ರಹಾರದಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ್ದು, ಶನಿವಾರ ಬೆಳಕಿಗೆ ಬಂದಿದೆ.

[ccc_my_favorite_select_button post_id="117569"]
ದೊಡ್ಡಬಳ್ಳಾಪುರ; ಕಂಟೇನರ್‌ಗೆ ಡಿಕ್ಕಿ.. ಬೈಕ್ ಸವಾರ ಸಾವು..

ದೊಡ್ಡಬಳ್ಳಾಪುರ; ಕಂಟೇನರ್‌ಗೆ ಡಿಕ್ಕಿ.. ಬೈಕ್ ಸವಾರ ಸಾವು..

ಕಂಟೇನರ್ (container) ಚಾಲಕ ನಿರ್ಲಕ್ಷ್ಯದಿಂದ ಏಕಾಏಕಿ ತಿರುವ ಪಡೆದ ವೇಳೆ ಎದುರು ರಸ್ತೆಯಲ್ಲಿ ಬರುತ್ತಿದ್ದ ದ್ವಿಚಕ್ರ ವಾಹನ‌ ಡಿಕ್ಕಿ ಹೊಡೆದ ಪರಿಣಾಮ (Accident) ಬೈಕ್ (Bike) ಸವಾರ ಸಾವನಪ್ಪಿರುವ ಘಟನೆ ಕನ್ನಮಂಗಲ ಗೇಟ್ ಬಳಿ

[ccc_my_favorite_select_button post_id="117565"]

ಆರೋಗ್ಯ

ಸಿನಿಮಾ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video ನೋಡಿ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video

ಅಭಿಮಾನಿಗಳ ದಾಸ, ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ (Darshan) ಅಭಿನಯದ ಬಹುನಿರೀಕ್ಷಿತ ಚಿತ್ರ 'ದಿ ಡೆವಿಲ್' ಇಂದು (ಡಿ.11) ರಾಜ್ಯಾದ್ಯಂತ ಅದ್ಧೂರಿಯಾಗಿ ರಿಲೀಸ್ ಆಗಿದ್ದು, ಯಶಸ್ವಿ ಪ್ರದರ್ಶನ ಕಾಣುತ್ತಿದೆ.

[ccc_my_favorite_select_button post_id="117242"]
error: Content is protected !!