ರಸಗೊಬ್ಬರ ಬಿಕ್ಕಟ್ಟು; ಕೃಷಿ ಸಚಿವರ ಪ್ರತಿಕೃತಿಗೆ ಬೆಂಕಿ ಇಟ್ಟ ಜೆಡಿಎಸ್‌ ಕಾರ್ಯಕರ್ತರು

Fertilizer crisis; JDS Activists set fire to Agriculture Minister's effigy

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ಸರಕಾರ ʼಎʼ ಖಾತಾ ʼಬಿʼ ಎಂದು ರಾಜಧಾನಿಯ ಜನರನ್ನು ಒಂದೆಡೆ ವಂಚಿಸುತ್ತಿದ್ದರೆ, ಮತ್ತೊಂದು ಕಡೆ ಸಮಯಕ್ಕೆ ಸರಿಯಾಗಿ ಯೂರಿಯಾ ಪೂರೈಕೆ ಮಾಡದೇ ರೈತರಿಗೂ ಮೋಸ ಮಾಡುತ್ತಿದೆ ಎಂದು ಜೆಡಿಎಸ್‌ (JDS) ಆಕ್ರೋಶ ವ್ಯಕ್ತಪಡಿಸಿದೆ.

ಜೆಡಿಎಸ್‌ ನಗರ ಜಿಲ್ಲಾಧ್ಯಕ್ಷ, ಮಾಜಿ ಶಾಸಕ ಹೆಚ್.ಎಂ. ರಮೇಶ್‌ ಗೌಡ ಅವರ ನೇತೃತ್ವದಲ್ಲಿ ನಗರದ ಫ್ರೀಡಂ ಪಾರ್ಕ್‌ ನಲ್ಲಿ ಬೃಹತ್‌ ಪ್ರತಿಭಟನೆ ನಡೆಸಿದ ಜೆಡಿಎಸ್‌ ಕಾರ್ಯಕರ್ತರು ಕೃಷಿ ಸಚಿವ ಚೆಲುವರಾಯ ಸ್ವಾಮಿ ಅವರ ಪ್ರತಿಕೃತಿ ದಹನ ಮಾಡಿದರು. ಬಳಿಕ ಖಾತ ಬದಲಾವಣೆ ವಂಚನೆಯನ್ನು ಕೂಡಲೇ ನಿಲ್ಲಿಸಬೇಕು ಎಂದು ಬಿಬಿಎಂಪಿಯನ್ನು ಆಗ್ರಹಿಸಿದರು.

ಅಲ್ಲದೆ, ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರ ರಾವ್‌ ಅವರಿಗೆ ಮನವಿ ಸಲ್ಲಿಸಿ, ತಕ್ಷಣವೇ ಖಾತ ವಂಚನೆಯನ್ನು ನಿಲ್ಲುಸವಂತೆ ಆಗ್ರಹಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ರಮೇಶ್‌ ಗೌಡರು; ಬಿ ಖಾತಾದಿಂದ ಎ ಖಾತ ಮಾಡುವ ಕ್ರಮಕ್ಕೆ ಕಾನೂನಿನಲ್ಲಿಯೇ ಅವಕಾಶ ಇಲ್ಲ. ಕೇವಲ ಜನರ ಹಣ ಲೂಟಿ ಮಾಡಲಿಕ್ಕಾಗಿಯೇ ಇದನ್ನು ಮಾಡಲಾಗುತ್ತಿದೆ. ಜನರಿಗೆ ಮಂಕುಬೂದಿ ಎರಚಿ ಸಾವಿರಾರು ಕೋಟಿ ರೂಪಾಯಿಗಳನ್ನು ಲೂಟಿ ಮಾಡುವ ಹುನ್ನಾರ ನಡೆಸಲಾಗಿದೆ ಎಂದು ಆರೋಪ ಮಾಡಿದರು.

ಖಾತಾಗೆ ಬದಲಾವಣೆ ಎನ್ನುವುದೇ ದೊಡ್ಡ ಬೋಗಸ್‌ ಎಂದಿರುವ ಅವರು, ನ್ಯಾಯಾಲಯದಲ್ಲಿ ಈ ಸರಕಾರ ಛೀಮಾರಿ ಹಾಕಿಸಿಕೊಳ್ಳುವುದು ಖಚಿತ. ಈ ಹಿಂದೆ ಒಂದು ಚದರ ಮೀಟರಿಗೆ 13,800 ರೂಪಾಯಿ ತೆರಿಗೆಯನ್ನು ಬಿಬಿಎಂಪಿಯಿಂದ ವಿಧಿಸಲಾಗುತ್ತಿತ್ತು. ಕಾಂಗ್ರೆಸ್‌ ಸರಕಾರ ಈ ತೆರಿಗೆಯನ್ನು 1000% ಏರಿಕೆ ಮಾಡಿದೆ. ಅಂದರೆ 3ರಿಂದ 6 ಲಕ್ಷ ರೂಪಾಯಿವರೆಗೂ ಹೆಚ್ಚಿಸಿದೆ. ಜನರಿಂದ ಇಷ್ಟೊಂದು ಹಣ ಕಟ್ಟಲು ಸಾಧ್ಯವೇ ಎಂದು ಅವರು ಕಿಡಿಕಾರಿದರು.

ಸರಕಾರಕ್ಕೆ ಚೆಲ್ಲಾಟ, ರೈತರಿಗೆ ಪ್ರಾಣ ಸಂಕಟ

ರಾಜ್ಯದ ಎಲ್ಲಾ ವರ್ಗದ ಜನರ ಜೊತೆ ಚೆಲ್ಲಾಟವಾಡಿದಂತೆ ಕಾಂಗ್ರೆಸ್‌ ಸರಕಾರವು ರೈತರ ಜತೆಯೂ ಆಟವಾಡುತ್ತಿದೆ. ಉತ್ತಮ ಮಳೆಯಾಗಿ ಬಿತ್ತನೆ ಚಟುವಟಿಕೆ ಆರಂಭವಾಗುವುದಕ್ಕೆ ಸರಿಯಾಗಿ ರಸಗೊಬ್ಬರದ ಕೃತಕ ಅಭಾವ ಸೃಷ್ಟಿಸಲಾಗಿದೆ. ಇದಕ್ಕೆ ಕೃಷಿ ಸಚಿವ ಚೆಲುವರಾಯಸ್ವಾಮಿ ಅವರೇ ಕಾರಣ. ಈ ಕಾರಣಕ್ಕಾಗಿಯೇ ಅವರ ಪ್ರತಿಕೃತಿ ದಹನ ಮಾಡಿದ್ದೇವೆ ಎಂದು ರಮೇಶ್‌ ಗೌಡ ದೂರಿದರು.

ಸೊಸೈಟಿಗಳ ಮೂಲಕ ರೈತರಿಗೆ ನ್ಯಾಯಯುತವಾಗಿ ಸಿಗಬೇಕಿದ್ದ ರಸಗೊಬ್ಬರ ದಲ್ಲಾಳಿಗಳ ಮೂಲಕ ಕಾಳಸಂತೆಯಲ್ಲಿ ಮಾರಾಟವಾಗುತ್ತಿದೆ. ಕೇವಲ ಗ್ಯಾರಂಟಿಗಳಿಂದ ಜನರಿಗೆ ಟೋಪಿ ಹಾಕುತ್ತಿರುವ ಸರಕಾರ ಅದೇ ಅನ್ನ ಕೊಡುವ ರೈತನಿಗೇ ಮೋಸ ಮಾಡುತ್ತಿದೆ ಎಂದು ಅವರು ಆರೋಪಿಸಿದರು.

ಪ್ರತಿಭಟನೆಯಲ್ಲಿ ಮಾಜಿ ಶಾಸಕ ಕೆ.ಎ. ತಿಪ್ಪೇಸ್ವಾಮಿ, ನಗರದ ಮಹಿಳಾ ವಿಭಾಗದ ಅಧ್ಯಕ್ಷೆ ಶೈಲಾ ಸಂತೋಷ್ ರಾವ್, ಬಿಬಿಎಂಪಿ ಮಾಜಿ ವಿರೋಧ ಪಕ್ಷದ ನಾಯಕ ಟಿ.ತಿಮ್ಮೇಗೌಡ, ಮಾಜಿ ಉಪ ಮಹಾಪೌರ ಶ್ರೀರಾಮೇಗೌಡ, ಬಿಬಿಎಂಪಿ ಮಾಜಿ ಸದಸ್ಯ ಎಂ. ಮುನಿಸ್ವಾಮಿ, ಬೆಂಗಳೂರು ದಕ್ಷಿಣ ಲೋಕಸಭೆ ಕ್ಷೇತ್ರದ ಅಧ್ಯಕ್ಷ ಟಿ.ಆರ್. ತುಳಸಿರಾಮ್, ಬೆಂಗಳೂರು ಕೇಂದ್ರ ಲೋಕಸಭೆ ಕ್ಷೇತ್ರದ ಅಧ್ಯಕ್ಷ ವಿ.ನಾಗೇಶ್ವರರಾವ್, ಬೆಂಗಳೂರು ನಗರ ಯುವ ಘಟಕದ ಅಧ್ಯಕ್ಷ ಸ್ಯಾಮುಯಲ್ ಇನ್ನಿತರ ಮುಖಂಡರು, ಕಾರ್ಯಕರ್ತರು ನೂರಾರು ಸಂಖ್ಯೆಯಲ್ಲಿ ಭಾಗವಹಿಸಿದ್ದರು.

ರಾಜಕೀಯ

ಒಂದು ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

ಒಂದು ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

“ಕೇಂದ್ರ ಪರಿಸರ ಇಲಾಖೆಯವರು ದಂಡ ಹಾಗೂ ಮಿಟಿಗೇಷನ್ ಪ್ಲಾನ್ ಸೇರಿ 257 ಕೋಟಿ ರೂಪಾಯಿ ಹಣ ಸಂದಾಯ ಮಾಡಬೇಕು ಎಂದು ಸೂಚಿಸಿದ್ದಾರೆ. ಇಂದೇ ಈ ಹಣ ಪಾವತಿ ಮಾಡಿ ಎಂದು ಮಾರ್ಗದರ್ಶನ ನೀಡಿದ್ದೇನೆ. ಕಟ್ಟಿದ

[ccc_my_favorite_select_button post_id="121560"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]