ಡಾ.ವಿಷ್ಣುವರ್ಧನ್ ಸಮಾಧಿ ನೆಲಸಮ: ಸೋಮವಾರ ದೊಡ್ಡಬಳ್ಳಾಪುರದಲ್ಲಿ ಪ್ರತಿಭಟನೆಗೆ ಕರೆ

Dr. Vishnavardhan tomb demolished: Call for protest in Doddaballapura tomorrow

ದೊಡ್ಡಬಳ್ಳಾಪುರ: ಬೆಂಗಳೂರಿನ ಅಭಿಮಾನ್ ಸ್ಟುಡಿಯೋದಲ್ಲಿದ್ದ ಡಾ.ವಿಷ್ಣುವರ್ಧನ್ (Dr. Vishnavardhan) ಅವರ ಸ್ಮಾರಕವನ್ನು ರಾತ್ರೋರಾತ್ರಿ ನೆಲಸಮ ಮಾಡಲಾಗಿದ್ದು, ಅಭಿಮಾನಿಗಳಿಂದ ಆಕ್ರೋಶ ವ್ಯಕ್ತವಾಗಿದೆ.

2009ರ ಡಿಸೆಂಬರ್ 30ರಂದು ಡಾ.ವಿಷ್ಣುವರ್ಧನ್ ಅವರು ನಿಧನರಾದಾಗ ಕೆಂಗೇರಿ ಬಳಿ ಇರುವ ಅಭಿಮಾನ್ ಸ್ಟುಡಿಯೊದಲ್ಲಿ ಅಂತ್ಯ ಸಂಸ್ಕಾರ ನೆರವೇರಿಸಲಾಗಿತ್ತು. ಅದೇ ಸ್ಥಳದಲ್ಲಿ ವಿಷ್ಣುವರ್ಧನ್ ಅವರ ಸ್ಮಾರಕ ನಿರ್ಮಾಣ ಮಾಡಬೇಕೆಂದು ಅಭಿಮಾನಿಗಳ ಆಸೆಯಾಗಿತ್ತು.

ಅಲ್ಲಿ ಚಿಕ್ಕ ಸ್ಮಾರಕವೂ ನಿರ್ಮಾಣವಾಗಿತ್ತು. ಆದರೆ ಅದು ಹಿರಿಯ ನಟ ಬಾಲಕೃಷ್ಣ ಅವರ ಕುಟುಂಬಕ್ಕೆ ಸೇರಿದ್ದ ಸ್ಥಳವಾಗಿದ್ದು, ಅಲ್ಲಿ ಸ್ಮಾರಕ ನಿರ್ಮಾಣ ಮಾಡಲು ಬಾಲಣ್ಣ ಅವರ ಮಕ್ಕಳು ವಿರೋಧ ವ್ಯಕ್ತಪಡಿಸಿದರು.

ಈ ವಿಚಾರ ನ್ಯಾಯಾಲಯದ ಮೆಟ್ಟಿಲೇರಿತು. 16 ವರ್ಷ ನ್ಯಾಯಾಲಯದಲ್ಲಿ ವಾದ-ವಿವಾದ ನಡೆಯಿತು. ಕೊನೆಗೂ ನ್ಯಾಯಾಲಯದಿಂದ ತೀರ್ಪು ಹೊರಬಿದ್ದಿದ್ದು, ಆ ಜಾಗ ಬಾಲಣ್ಣನ ಮಕ್ಕಳ ಪರವಾಗಿದೆ. ಹೀಗಾಗಿ ಅಭಿಮಾನ್ ಸ್ಟುಡಿಯೊದಲ್ಲಿ ನಿರ್ಮಾಣ ಮಾಡಿದ್ದ ಚಿಕ್ಕ ಮಂಟಪವನ್ನು ತೆರವುಗೊಳಿಸಲಾಗಿದೆ.

ಸೋಮವಾರ ದೊಡ್ಡಬಳ್ಳಾಪುರದಲ್ಲಿ ಪ್ರತಿಭಟನೆಗೆ ಕರೆ

ರಾತ್ರೋರಾತ್ರಿ ವಿಷ್ಣುವರ್ಧನ್ ಅವರ ಸಮಾಧಿ ತೆರವು ಮಾಡಿರುವ ಕುರಿತಂತೆ ದೊಡ್ಡಬಳ್ಳಾಪುರದಲ್ಲಿ ಆಕ್ರೋಶ ವ್ಯಾಪಕವಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಅಭಿಮಾನಿಗಳು ಬೇಸರ ಹೊರಹಾಕುತ್ತಿದ್ದಾರೆ.

ಮುಂದುವರಿದು ಸೋಮವಾರ (ಆ.11) ಡಾ.ವಿಷ್ಣುವರ್ಧನ್ ಸೇನಾ ಸಮಿತಿ ಮತ್ತು ವಿಷ್ಣುವರ್ಧನ್ ಅಭಿಮಾನಿಗಳ ಒಕ್ಕೂಟದ ವತಿಯಿಂದ ನಗರದ ಡಾ.ವಿಷ್ಣುವರ್ಧನ್ ಪ್ರತಿಮೆ ಮುಂಭಾಗ ಪ್ರತಿಭಟನೆಗೆ ಕರೆ ನೀಡಲಾಗಿದ್ದು, ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಡಾ.ವಿಷ್ಣುವರ್ಧನ್ ಸೇನಾ ಸಮಿತಿ ಸಹಕಾರ್ಯದರ್ಶಿ ರಾಮಾಂಜಿನಪ್ಪ ಕರೆ ನೀಡಿದ್ದಾರೆ‌.

ರಾಜಕೀಯ

ಒಂದು ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

ಒಂದು ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

“ಕೇಂದ್ರ ಪರಿಸರ ಇಲಾಖೆಯವರು ದಂಡ ಹಾಗೂ ಮಿಟಿಗೇಷನ್ ಪ್ಲಾನ್ ಸೇರಿ 257 ಕೋಟಿ ರೂಪಾಯಿ ಹಣ ಸಂದಾಯ ಮಾಡಬೇಕು ಎಂದು ಸೂಚಿಸಿದ್ದಾರೆ. ಇಂದೇ ಈ ಹಣ ಪಾವತಿ ಮಾಡಿ ಎಂದು ಮಾರ್ಗದರ್ಶನ ನೀಡಿದ್ದೇನೆ. ಕಟ್ಟಿದ

[ccc_my_favorite_select_button post_id="121560"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]