ನಮ್ಮ ಮೆಟ್ರೋ ಜನರದ್ದು – ಯಾವ ಪಕ್ಷದ ಸ್ವತ್ತು ಅಲ್ಲ; ಅಂಕಿಅಂಶಗಳ ಸಹಿತ ಬಿಜೆಪಿಗೆ ಕುಟುಕಿದ ಸಚಿವ ರಾಮಲಿಂಗಾ ರೆಡ್ಡಿ

Our metro belongs to the people – not the property of any party; Ramalinga Reddy

ಬೆಂಗಳೂರು: ರಾಜ್ಯ ಬಿಜೆಪಿಯ ವಿಧಾನಸಭಾ ಮತ್ತು ಲೋಕಸಭಾ ಸದಸ್ಯರುಗಳಿಗೆ, ಪ್ರಮುಖ‌ ಮುಖಂಡರುಗಳಿಗೆ ಎಲ್ಲಾ ಸತ್ಯಗಳು ತಿಳಿದಿದ್ದರೂ ಸಹ ಅದನ್ನು ಲೆಕ್ಕಿಸದೇ, ಸ್ವಲ್ಪವೂ ನಾಚಿಕೆಯಿಲ್ಲದೇ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ನಮ್ಮಮೆಟ್ರೋ ಶ್ರೇಯಸ್ಸು ಕೊಡುತ್ತಿದ್ದಾರೆ ಎಂದು ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ (Ramalinga Reddy) ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೆಟ್ರೋ ಹಳದಿ ಮಾರ್ಗದ ಉದ್ಘಾಟನೆಗೆ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಆಗಮಿಸಲಿದ್ದು, ನಮ್ಮ ಮೆಟ್ರೋ ಉದ್ಘಾಟನೆಯೊಂದಿಗೆ ವಂದೇ ಭಾರತ್ ಮೂರು ರೈಲುಗಳಿಗೆ ಚಾಲನೆ ನೀಡಲಿದ್ದಾರೆ.

ಈ ಕುರಿತಂತೆ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಕ್ರೆಡಿಟ್ ವಾರ್ ತೀವ್ರವಾಗಿದೆ. ಈ ಕುರಿತಂತೆ ಅಂಕಿಅಂಶಗಳ ಸಹಿತ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ರಾಜ್ಯ ಬಿಜೆಪಿ ನಾಯಕರ ವಿರುದ್ಧ ರಾಮಲಿಂಗಾ ರೆಡ್ಡಿ ಆಕ್ರೋಶ ಹೊರಹಾಕಿದ್ದಾರೆ.

2006 ರಲ್ಲಿ ಮನಮೋಹನ್ ಸಿಂಗ್ ಅವರು ಪ್ರಧಾನ ಮಂತ್ರಿಗಳಾಗಿದ್ದಾಗ, ರಾಜ್ಯದಲ್ಲಿ ಧರ್ಮಸಿಂಗ್ ಮುಖ್ಯಮಂತ್ರಿಗಳಾಗಿದ್ದಾಗ , ನಾನು ಬೆಂಗಳೂರು ಉಸ್ತುವಾರಿ ಸಚಿವನಾಗಿದ್ದಾಗ ಎಂ.ಜಿ‌‌ ರಸ್ತೆಯಲ್ಲಿ ನಮ್ಮ ಮೆಟ್ರೋಗೆ ಶಂಕುಸ್ಥಾಪನೆ ನೆರವೇರಿಸಲಾಗಿತ್ತು.

ನಮ್ಮ ಮೆಟ್ರೋ ಜನರದ್ದು – ಯಾವ ಪಕ್ಷದ ಸ್ವತ್ತು ಅಲ್ಲ! ಎಂಬುದು ನಮ್ಮ ಭಾವನೆಯಾಗಿತ್ತು. ಆದರೆ ಬಿ.ಜೆ.ಪಿ‌ ಅವರಿಗೆ ಜನಾಸಕ್ತಿಗಿಂತ, ಪ್ರಚಾರಸಕ್ತಿ ಹೆಚ್ಚು.

ಕರ್ನಾಟಕ ಸರ್ಕಾರ ಸರಳ ಪಾಲುದಾರ ಅಲ್ಲ — ಅನೇಕ ಸಂದರ್ಭಗಳಲ್ಲಿ ಅದು ಹೆಚ್ಚಿನ ಹಣವನ್ನು ಖರ್ಚು ಮಾಡುತ್ತದೆ, ವಿಶೇಷವಾಗಿ ಜಮೀನು ಖರೀದಿ, ವೆಚ್ಚ ಮಿತಿಗೆ ಮೇಲ್ಪಟ್ಟ ಭಾಗಗಳು ಮತ್ತು ಪ್ರಮುಖ ಯೋಜನಾ ಅಂಶಗಳಿಗಾಗಿ ಕರ್ನಾಟಕ ಸರ್ಕಾರವು ಖರ್ಚು ಮಾಡುತ್ತಿದೆ.

ಅರ್ಧ ಸತ್ಯಗಳನ್ನು ಹರಡುವುದನ್ನು ನಿಲ್ಲಿಸಿ, ಕರ್ನಾಟಕ ಸರ್ಕಾರಕ್ಕೆ ಅದರ ನಿಜವಾದ ಗೌರವ ನೀಡಿ. ನಿಜವಾದ ಮಾಹಿತಿ ಇಲ್ಲಿದೆ ಎಂದಿರು ರಾಮಲಿಂಗಾ ರೆಡ್ಡಿ ಅವರು ಈ ರೀತಿಯ ಅಂಕಿಅಂಶಗಳನ್ನು ನೀಡಿದ್ದಾರೆ.

ಫೇಸ್ 1: ಕರ್ನಾಟಕ ಸರ್ಕಾರ – 30% (ಜಮೀನು ಸೇರಿ), ಕೇಂದ್ರ – 25%, ಉಳಿದ 45% ಸಾಲದ ರೂಪದಲ್ಲಿ.

ಫೇಸ್ 2: ಕರ್ನಾಟಕ – 30% + ಜಮೀನು ಮತ್ತು ಮಿತಿಮೀರಿದ ವೆಚ್ಚದ ಬಹುತೇಕ ಭಾಗ, ಕೇಂದ್ರ – 20%, ಉಳಿದ 50% ಸಾಲ.

ಫೇಸ್ 3: ಕರ್ನಾಟಕ – 20% + ಸಂಪೂರ್ಣ ಜಮೀನು ಮತ್ತು ಪುನರ್ವಸತಿ ವೆಚ್ಚ, ಕೇಂದ್ರ – 20%, ಉಳಿದ 60% ಸಾಲ.

ಪ್ರತಿ ಹಂತದಲ್ಲೂ ಕರ್ನಾಟಕ ಸರ್ಕಾರ ಜಮೀನಿಗಾಗಿ ದೊಡ್ಡ ಮೊತ್ತ ಹಾಕುತ್ತದೆ, ಮತ್ತು ಯೋಜನೆಗಳನ್ನು ಮುನ್ನಡೆಸಲು ನಿರಂತರವಾಗಿ ಹಣ ನೀಡುತ್ತದೆ — ಅನೇಕ ಬಾರಿ ಕೇಂದ್ರದಷ್ಟು ಅಥವಾ ಅದಕ್ಕಿಂತ ಹೆಚ್ಚು.

ನಿಜ ಹೇಳುವುದಾದರೆ, ಎಷ್ಟು ಕಾಲ ಬಿ.ಜೆ.ಪಿ‌‌ ನಾಯಕರು ತಮ್ಮದೇ ರಾಜ್ಯವನ್ನು ಇಂಥ ನಿರ್ಲಕ್ಷ್ಯದಿಂದ ಅವಮಾನಿಸುತ್ತಾ, ನಮ್ಮ ಮೆಟ್ರೋ ಕೇಂದ್ರದ ಉಡುಗೊರೆ ಎಂದು ನಟಿಸುತ್ತಾರೆ? ನಂಬಿಸುತ್ತಾರೆ? ಎಂದು ರಾಮಲಿಂಗಾ ರೆಡ್ಡಿ ಅವರು ಲೇವಡಿ ಮಾಡಿದ್ದಾರೆ

ರಾಜಕೀಯ

ಒಂದು ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

ಒಂದು ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

“ಕೇಂದ್ರ ಪರಿಸರ ಇಲಾಖೆಯವರು ದಂಡ ಹಾಗೂ ಮಿಟಿಗೇಷನ್ ಪ್ಲಾನ್ ಸೇರಿ 257 ಕೋಟಿ ರೂಪಾಯಿ ಹಣ ಸಂದಾಯ ಮಾಡಬೇಕು ಎಂದು ಸೂಚಿಸಿದ್ದಾರೆ. ಇಂದೇ ಈ ಹಣ ಪಾವತಿ ಮಾಡಿ ಎಂದು ಮಾರ್ಗದರ್ಶನ ನೀಡಿದ್ದೇನೆ. ಕಟ್ಟಿದ

[ccc_my_favorite_select_button post_id="121560"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]