ಮೆಟ್ರೋ ಹಳದಿ ಮಾರ್ಗಕ್ಕೆ ಪ್ರಧಾನಿ ನರೇಂದ್ರ ಮೋದಿ ಹಸಿರು ನಿಶಾನೆ

Prime Minister Narendra Modi gives green signal to Metro Yellow Line

ಬೆಂಗಳೂರು: ನಮ್ಮ ಮೆಟ್ರೋ ಹಳದಿ ಮಾರ್ಗದ ಚಾಲನೆಯನ್ನು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಹಸಿರು ಬಾವುಟ ತೋರುವ ಮೂಲಕ ನೆರವೇರಿಸಿದರು.

ಆರ್.ವಿ.ರಸ್ತೆಯ ಮೆಟ್ರೋ ನಿಲ್ದಾಣದಲ್ಲಿ QR ಕೋಡ್ ಮೂಲಕ ಸ್ಕ್ಯಾನ್ ಮಾಡಿ ಟಿಕೆಟ್ ಪಡೆದು ನಿಲ್ದಾಣಕ್ಕೆ ಪ್ರವೇಶಿಸಿದ ಪ್ರಧಾನಿ ಮೋದಿ, ನಮ್ಮ ಮೆಟ್ರೋ ಹಳದಿ ಮಾರ್ಗದ ಚಾಲನೆ ನೀಡಿದರು. ಅವರಿಗೆ ಸಿಎಂ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಸಾಥ್ ನೀಡಿದರು.

ಬಳಿಕ ಸಿಎಂ, ಡಿಸಿಎಂ ಹಾಗೂ ಸಂಸದರೊಂದಿಗೆ ಮೆಟ್ರೋದಲ್ಲಿ ಪ್ರಯಾಣಿಸಿದ ಮೋದಿ ಅವರು ಸರ್ಕಾರಿ ಶಾಲೆ ವಿದ್ಯಾರ್ಥಿಗಳು ಹಾಗೂ ಪ್ರಯಾಣಿಕರೊಂದಿಗೆ ಮಾತುಕತೆ ನಡೆಸಿದರು.

ಈ ವೇಳೆ ನಿಲ್ದಾಣದಲ್ಲಿ ಮೆಟ್ರೋ ಹಳದಿ ಮಾರ್ಗದ ಕುರಿತಂತೆ ಡಿ.ಕೆ.ಶಿವಕುಮಾರ್ ಅವರು ಪ್ರಧಾನಿ ಮೋದಿ ಅವರಿಗೆ ಮಾಹಿತಿ ನೀಡಿದರು.

ಈ ವೇಳೆ ಸಂಸದರಾದ ಡಾ.ಮಂಜುನಾಥ್, ತೇಜಸ್ವಿ ಸೂರ್ಯ, ಶೋಭ ಕರಂದ್ಲಾಜೆ ಮತ್ತಿತರರಿದ್ದರು.

ಇದಕ್ಕೂ ಮುನ್ನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲುನಿಲ್ದಾಣದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಅವರು ಬೆಂಗಳೂರಿನಿಂದ ಬೆಳಗಾವಿಯ ವಂದೇ ಭಾರತ್‌ ರೈಲಿಗೆ ಚಾಲನೆ ನೀಡಿದರು.

ಇದೇ ಸಮಯದಲ್ಲಿ ಅಮೃತ್‍ಸರ್ ದಿಂದ ಶ್ರೀ ಮಾತಾ ವೈಷ್ಣೋದೇವಿ ಕತ್ರಾ ಹಾಗೂ ನಾಗ್‍ಪುರ್ (ಅಜ್ನಿ) ಯಿಂದ ಪುಣೆಯ ವರೆಗೆ ಚಲಿಸಲಿರುವ ವಂದೇ ಭಾರತ್ ಎಕ್ಸ್‍ಪ್ರೆಸ್ ರೈಲುಗಳಿಗೂ ಸಹ ವರ್ಚುವಲ್ ಮೂಲಕ ಚಾಲನೆ ನೀಡಲಾಯಿತು.

ಈ ಸಮಯದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಸಿಎಂ ಸಿದ್ದರಾಮಯ್ಯ, ಕೇಂದ್ರ ಜಲಶಕ್ತಿ ಮತ್ತು ರೈಲ್ವೆ ಖಾತೆ ರಾಜ್ಯ ಸಚಿವರಾದ ವಿ. ಸೋಮಣ್ಣ, ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸೇರಿದಂತೆ ಗಣ್ಯರು ಅಧಿಕಾರಿಗಳು ಉಪಸ್ಥಿತರಿದ್ದರು.

ರಾಜಕೀಯ

ಒಂದು ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

ಒಂದು ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

“ಕೇಂದ್ರ ಪರಿಸರ ಇಲಾಖೆಯವರು ದಂಡ ಹಾಗೂ ಮಿಟಿಗೇಷನ್ ಪ್ಲಾನ್ ಸೇರಿ 257 ಕೋಟಿ ರೂಪಾಯಿ ಹಣ ಸಂದಾಯ ಮಾಡಬೇಕು ಎಂದು ಸೂಚಿಸಿದ್ದಾರೆ. ಇಂದೇ ಈ ಹಣ ಪಾವತಿ ಮಾಡಿ ಎಂದು ಮಾರ್ಗದರ್ಶನ ನೀಡಿದ್ದೇನೆ. ಕಟ್ಟಿದ

[ccc_my_favorite_select_button post_id="121560"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]