CM, DCM hijack Modi's program... BJP disappointed

ಪ್ರಧಾನಿ ಮೋದಿ ಕಾರ್ಯಕ್ರಮವನ್ನು ಹೈಜಾಕ್ ಮಾಡಿದ ಸಿಎಂ, ಡಿಸಿಎಂ.. ಬಿಜೆಪಿಗರಿಗೆ ನಿರಾಸೆ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಉದ್ಘಾಟನೆಯೊಂದಿಗೆ ವಂದೇ ಭಾರತ್ ಮೂರು ರೈಲುಗಳಿಗೆ ಚಾಲನೆ ನೀಡಿದರು.

ಎರಡು ದಿನಗಳ ಹಿಂದಷ್ಟೇ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಓಟ್ ಚೋರಿ ಕುರಿತಂತೆ ಬೆಂಗಳೂರಿನಲ್ಲಿ ನಡೆಸಿದ ಪ್ರತಿಭಟನೆಗೆ ಕೌಂಟರ್ ನೀಡಲು ಬಿಜೆಪಿ ಏಕಾಏಕಿ ಮೆಟ್ರೋ ಹಳದಿ ಮಾರ್ಗದ ಚಾಲನೆ ಕಾರ್ಯಕ್ರಮವನ್ನು ಆಯೋಜಿಸಿ, ಪ್ರಧಾನಿ‌ ನರೇಂದ್ರ ಮೋದಿ ಅವರ ಮೂಲಕ ತಿರುಗೇಟು ನೀಡಲು ಸಿದ್ದತೆ ನಡೆಸಿತ್ತು.

ಆದರೆ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿ.ಕೆ. ಶಿವಕುಮಾರ್ ಜೋಡಿ ಇಡೀ ಮೋದಿ ಅವರ ಕಾರ್ಯಕ್ರಮವನ್ನು ಹೈಜಾಕ್ ಮಾಡಿದ್ದು, ರಾಜ್ಯ ಬಿಜೆಪಿ ನಾಯಕರಿಗೆ ನಿರಾಸೆಯಾಗುವಂತೆ ಮಾಡಿದರು.

ಹೌದು ಇಂದು ಬೆಳಗ್ಗೆ ನವದೆಹಲಿಯಿಂದ ಎಚ್ಎಎಲ್ ನಿಲ್ದಾಣದಲ್ಲಿ ವಿಶೇಷ ವಿಮಾನದಲ್ಲಿ ಬಂದಿಳಿದರು‌. ಈ ವೇಳೆ ಮಾಜಿ ಸಿಎಂ ಯಡಿಯೂರಪ್ಪ ಸೇರಿದಂತೆ ಬಿಜೆಪಿಯ ನಾಯಕರು ಸ್ವಾಗತ ಕೋರಿದ್ದು ಬಿಟ್ಟರೆ, ಮೋದಿ ಅವರು ಕಾರ್ಯಕ್ರಮವನ್ನು ಮುಗಿಸಿ ತೆರಳುವವರೆಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಅಕ್ಕಪಕ್ಕವೇ ನಿಂತು ಸಂಪೂರ್ಣ ಕಾರ್ಯಕ್ರಮವನ್ನು ಹೈಜಾಕ್ ಮಾಡಿಬಿಟ್ಟರು.

ಇನ್ನೂ ನಮ್ಮ ಮೆಟ್ರೋದಲ್ಲಿ ಪ್ರಧಾನಿ ಮೋದಿ ಅವರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಕಾಮಗಾರಿ, ಮೆಟ್ರೋ ಸಂಚರಿಸುವ ಮಾರ್ಗಗಳ ಕುರಿತು ವಿವರಿಸಿದರೆ, ಮೋದಿ ಅವರ ಮೆಟ್ರೋ ಪ್ರಯಾಣದ ವೇಳೆ ಸಿಎಂ ಡಿಸಿಎಂ ಮೋದಿ ಅವರ ಅಕ್ಕಪಕ್ಕದಲ್ಲಿಯೆ ಕುಳಿತಿದ್ದು, ಪ್ರಧಾನಿ ಮೋದಿ ಅವರು ಶಕ್ತಿಯೋಜನೆ ಉಚಿತ ಬಸ್ ಪ್ರಯಾಣದ ಕುರಿತು ಹಾಸ್ಯ ಚಟಾಕಿ ಹಾರಿಸಿದ್ದು, ಸಿಎಂ, ಡಿಸಿಎಂ ಜೋರಾಗಿ ನಕ್ಕಿದ್ದು, ಎದುರಗಡೆ ಸೀಟಿನಲ್ಲಿ ಕುಳಿತಿದ್ದ ಬಿಜೆಪಿ ಸಂಸದರು ಸಪ್ಪೆ ಮೋರೆ ಹಾಕಿಕೊಂಡು ನೋಡುವಂತಾಯಿತು.

CM, DCM hijack Modi's program... BJP disappointed

ಬಳಿಕ ಐಐಐಟಿ ಆಡಿಟೋರಿಯಂ ನಲ್ಲಿ ನಡೆದ ಹಳದಿ ಮೆಟ್ರೋ ಮಾರ್ಗದ ಉದ್ಘಾಟನೆ ಹಾಗೂ 3ನೇ ಹಂತದ ಮೆಟ್ರೋ ಶಂಕುಸ್ಥಾಪನೆ ಕಾರ್ಯಕ್ರಮದ ವೇಳೆ ಮಾತನಾಡಿದ ನರೇಂದ್ರ ಮೋದಿ ಅವರು, “ಆಪರೇಷನ್ ಸಿಂಧೂರ್ ನಂತರ ನಾನು ಮೊದಲ ಬಾರಿಗೆ ಬೆಂಗಳೂರಿನಲ್ಲಿದ್ದೇನೆ. ಕಾರ್ಯಾಚರಣೆಯ ಯಶಸ್ಸು ಇಡೀ ಜಗತ್ತಿಗೆ ಹೊಸ ಭಾರತವನ್ನು ತೋರಿಸಿತು.

ಈ ವಿಜಯದ ಹಿಂದಿನ ಪ್ರಮುಖ ಶಕ್ತಿಯೆಂದರೆ ನಮ್ಮ ಸ್ಥಳೀಯ ತಂತ್ರಜ್ಞಾನ ಮತ್ತು ಮೇಕ್ ಇನ್ ಇಂಡಿಯಾದ ಶಕ್ತಿ. ಇದಕ್ಕೆ ಕರ್ನಾಟಕ ಸಾಕಷ್ಟು ಕೊಡುಗೆ ನೀಡಿದೆ. ಇದಕ್ಕಾಗಿ ರಾಜ್ಯದ ಜನತೆಗೆ ನಾನು ಕೃತಜ್ಞನಾಗಿದ್ದೇನೆ “ಎಂದು ಹೇಳಿದರು.

ಬೆಂಗಳೂರು ಮತ್ತು ಕರ್ನಾಟಕದ ಯುವಕರ ಪ್ರಮುಖ ಪಾತ್ರವನ್ನು ಶ್ಲಾಘಿಸಿದ ಪ್ರಧಾನಿ ಮೋದಿ, ಬೆಂಗಳೂರನ್ನು ಜಾಗತಿಕ ಐಟಿ ಹಬ್ ಮತ್ತು ನವ ಭಾರತದ ಉದಯದ ಸಂಕೇತ ಎಂದು ಕರೆದಿದ್ದಾರೆ.

ಆಪರೇಷನ್ ಸಿಂಧೂರಿನ ಯಶಸ್ಸಿಗೆ ಭಾರತದ ತಾಂತ್ರಿಕ ಶಕ್ತಿ ಮತ್ತು ರಕ್ಷಣೆಯಲ್ಲಿ ‘ಮೇಕ್ ಇನ್ ಇಂಡಿಯಾ’ ಶಕ್ತಿ ಕಾರಣ. ಇದರ ಹಿಂದೆ ಬೆಂಗಳೂರಿನ ಯುವಕರ ಕಠಿಣ ಪರಿಶ್ರಮ, ನಾವೀನ್ಯತೆ ಮತ್ತು ಪ್ರತಿಭೆಯನ್ನು ಹೊಂದಿದೆ. ಬೆಂಗಳೂರು ತಾಂತ್ರಿಕವಾಗಿ ಇಡಿ ವಿಶ್ವವೇ ಹೆಮ್ಮೆ ಪಡುವ ಸಾಧನೆಯನ್ನು ಮಾಡಿದೆ ಎಂದು ಶ್ಲಾಘಿಸಿದರು.

ಪ್ರಧಾನಿ ಮೋದಿ ಎದುರೆ ಮೆಟ್ರೋ ಯೋಜನೆಗೆ ರಾಜ್ಯ ಸರ್ಕಾರ ಶೇ. 87.37 ರಷ್ಟು ಹಣ ನೀಡುತ್ತಿದೆ ಎಂದ ಸಿ.ಎಂ.ಸಿದ್ದರಾಮಯ್ಯ

ಮೆಟ್ರೋ ಯೋಜನೆಗೆ ರಾಜ್ಯ ಸರ್ಕಾರ ಶೇ. 87.37 ರಷ್ಟು ಹಣ ನೀಡುತ್ತಿದ್ದು ಕೇಂದ್ರ ಸರ್ಕಾರದ ಪಾಲು ಕೇವಲ ಶೇ12.63 ರಷ್ಟಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿವರಿಸಿದರು.

ಕೇಂದ್ರ ಸರ್ಕಾರದ ಸಹಭಾಗಿತ್ವವೂ ಸಹ ಬೆಂಗಳೂರು ಮೆಟ್ರೋ ಯೋಜನೆಯ ಅನುಷ್ಠಾನಕ್ಕೆ ಕಾರಣವಾಗಿದೆ.

ಮೆಟ್ರೋ ಯೋಜನೆಗೆ ಕೇಂದ್ರ ಸರ್ಕಾರ ಹಣಕಾಸು ಮತ್ತು ತಾಂತ್ರಿಕ ನೆರವು ಒದಗಿಸುತ್ತಿದೆ. ರಾಜ್ಯ ಸರ್ಕಾರ ಮೆಟ್ರೋ ಯೋಜನೆ ಹಂತ 1,2 ಮತ್ತು 2ಎ, 2ಬಿ ಮತ್ತು ಹಂತ 3 ಅನುಷ್ಠಾನಕ್ಕೆ ತನ್ನ ಪಾಲಿನ ರೂ. 25,387 ಕೋಟಿ ಒದಗಿಸಿದ್ದು, ಇದರೊಂದಿಗೆ ಹೆಚ್ಚುವರಿ ಹಣಕಾಸು ನೆರವಿನ ರೂಪದಲ್ಲಿ ಸಾಲ ಮರುಪಾವತಿಗಾಗಿ ರೂ.3,987 ಕೋಟಿ ಒದಗಿಸಿದೆ. ಮೆಟ್ರೋ ಯೋಜನೆಗಳಿಗಾಗಿ ಇದುವರೆಗೂ 59139 ಕೋಟಿ ರೂ ಅನುದಾನವನ್ನು ವಿನಿಯೋಗಿಸಲಾಗಿದೆ.

ರಾಜ್ಯ ಸರ್ಕಾರದ ಜವಾಬ್ಧಾರಿ ಶೇ. 87.37 ರಷ್ಟಿದೆ. ಕೇಂದ್ರ ಸರ್ಕಾರವು ತನ್ನ ಖಜಾನೆಯಿಂದ ಕೊಟ್ಟಿರುವುದು ಶೇ. 12.63 ರಷ್ಟು. ಕೇಂದ್ರ ಸರ್ಕಾರ ಒದಗಿಸಿರುವುದು 7468.86 ಕೋಟಿ ರೂಗಳು ಮಾತ್ರ ಎಂದರು.

ಕರ್ನಾಟಕ ಸರ್ಕಾರ ಮತ್ತು ಕೇಂದ್ರ ಸರ್ಕಾಗಳು ಶೇ.50;50 ಅನುಪಾತದಲ್ಲಿ ಹೂಡಿಕೆ ಮಾಡಬೇಕೆಂದು ಒಪ್ಪಂದವಾಗಿದೆ. ಆದರೆ ಕೇಂದ್ರ ಸರ್ಕಾರದಿಂದ ಈಕ್ವಿಟಿಯ ಹೊರತಾಗಿ ಸಾಲದ ರೂಪದಲ್ಲಿ ಬಂದ ಹಣವನ್ನು ಬಡ್ಡಿ ಸಮೇತ ರಾಜ್ಯ ಸಕಾರ ಹಾಗೂ ಮೆಟ್ರೋ ಸಂಸ್ಥೆಗಳು ತೀರಿಸಬೇಕಾಗಿದೆ ಎಂದರು. ಇದರಿಂದ ರಾಜ್ಯದ ಮೇಲೆ, ನಮ್ಮ ಮೇಲೆ ಶೇ.87.37 ರಷ್ಟು ಭಾರವಿದೆ ಎಂದು ಮಾನ್ಯ ಪ್ರಧಾನಮಂತ್ರಿಗಳಿಗೆ ಮನವರಿಕೆ ಮಾಡಿಸಬಯಸುತ್ತೇನೆ ಎಂದರು.

ಸಂಪರ್ಕ ವ್ಯವಸ್ಥೆಯನ್ನು ಸುಧಾರಿಸಿ ಬೆಂಗಳೂರು ನಗರವನ್ನು ಜಾಗತಿಕ ಆಕರ್ಷಣೆಯ ನಗರವಾಗಿಸುವ ನಿಟ್ಟಿನಲ್ಲಿ ನಮ್ಮದು ಪ್ರಮುಖ ಹೆಜ್ಜೆಯಾಗಿದ್ದು, ನಮಗೆಲ್ಲರಿಗೂ ಹೆಮ್ಮೆಯ ದಿನವಾಗಿದೆ.

ಮೆಟ್ರೊ ಹಳದಿ ಮಾರ್ಗದ ಉದ್ಘಾಟನೆಯಿಂದ ಬೆಂಗಳೂರು ಮೆಟ್ರೋ ಒಟ್ಟು 96.10 ಕಿ.ಮೀ ಕಾರ್ಯಾಚರಣೆಯೊಂದಿಗೆ ದಕ್ಷಿಣ ಭಾರತದಲ್ಲಿಯೇ ಅತಿ ಉದ್ದದ ಮೆಟ್ರೊ ಜಾಲದ ಗೌರವಕ್ಕೆ ಪಾತ್ರವಾಗಿದೆ. ಇದು ಪ್ರತಿಯೊಬ್ಬ ಕನ್ನಡಿಗನಿಗೆ ಹೆಮ್ಮೆಯ ಕ್ಷಣವಾಗಿದ್ದು, ಅಭಿವೃದ್ಧಿಯ ಕಡೆಗಿನ ನಮ್ಮ ಬದ್ಧತೆಗೆ ಸಾಕ್ಷಿಯಾಗಿದೆ.

ಬೆಂಗಳೂರಿನ ಬೆಳವಣಿಗೆ ಮತ್ತು ರಾಷ್ಟ್ರದ ಅಭಿವೃದ್ಧಿಯ ದೃಷ್ಟಿಯಿಂದ ನಮ್ಮ ಮೆಟ್ರೋಗೆ ಹೆಚ್ಚಿನ ಅನುದಾನಗಳನ್ನು ಒದಗಿಸಬೇಕೆಂದು ವಿನಂತಿಸುತ್ತೇನೆ ಎಂದರು.

ನಾಗರಿಕರಿಗೆ ಉತ್ತಮ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಪರಸ್ಪರ ಸಹಕಾರ, ಒಕ್ಕೂಟ ವ್ಯವಸ್ಥೆಯ ಬುನಾದಿಯನ್ನು ಇನ್ನಷ್ಟು ಬಲಪಡಿಸುವ ವಿಶ್ವಾಸ ನನಗಿದೆ ಎಂದರು.

ಇಂದು ಲೋಕಾರ್ಪಣೆಗೊಂಡಿರುವ ರೂ.7,160 ಕೋಟಿ ವೆಚ್ಚದ ಹಳದಿ ಲೇನ್ ಬೆಂಗಳೂರಿನ ಪ್ರಮುಖ ಐಟಿ ಮತ್ತು ತಂತ್ರಜ್ಞಾನ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಾವಿರಾರು ವೃತ್ತಿಪರರಿಗೆ, ಉದ್ಯೋಗಿಗಳಿಗೆ, ವಿದ್ಯಾರ್ಥಿಗಳಿಗೆ ಸುರಕ್ಷಿತ ಮತ್ತು ತ್ವರಿತ ಪ್ರಯಾಣವನ್ನು ಖಾತ್ರಿಪಡಿಸುತ್ತದೆ. ಪ್ರತಿನಿತ್ಯ ಸುಮಾರು 3.5 ಲಕ್ಷ ಪ್ರಯಾಣಿಕರು ಹಳದಿ ಲೇನ್ ಬಳಸುವ ನಿರೀಕ್ಷೆಯಿದೆ. ಇದರಿಂದ ಮುಖ್ಯವಾಗಿ ಸೆಂಟ್ರಲ್ ಸಿಲ್ಕ್ ಬೋರ್ಡ್ ಮತ್ತು ಜಯದೇವ ಆಸ್ಪತ್ರೆ ಸುತ್ತಲಿನ ಭಾರೀ ಟ್ರಾಫಿಕ್ ಸಮಸ್ಯೆ ಸುಧಾರಿಸುವ ವಿಶ್ವಾಸ ಹೊಂದಿದ್ದೇವೆ ಎಂದರು.

ಇಂದು ಉದ್ಘಾಟನೆಗೊಂಡಿರುವ ಈ ಹಳದಿ ಲೇನ್ ಪ್ರಮುಖ ಬಯೋಟೆಕ್ ಮತ್ತು ಐಟಿ ಹಬ್ಗಳನ್ನು ಪರಸ್ಪರ ಜೋಡಿಸುತ್ತದೆ ಮಾತ್ರವಲ್ಲದೆ ಹಲವು ಪ್ರಮುಖ ಆಸ್ಪತ್ರೆಗಳು ಮತ್ತು ಕೈಗಾರಿಕಾ ವಲಯಗಳಿಗೂ ಸುಲಭದ ಸಂಪರ್ಕ ಸಾಧ್ಯವಾಗಿಸಿದೆ. ರಾಗಿಗುಡ್ಡದಿಂದ ಸೆಂಟ್ರಲ್ ಸಿಲ್ಕ್ ಬೋರ್ಡ್ ವರೆಗೆ ರಾಜ್ಯ ಸರ್ಕಾರದ ಅನುದಾನದಲ್ಲಿ ನಿರ್ಮಿಸಲಾಗಿರುವ ಡಬಲ್ ಡೆಕ್ಕರ್ ಫ್ಲೈಓವರ್, ಬೆಂಗಳೂರಿನ ಅತ್ಯಂತ ನಿಬಿಡ ಜಂಕ್ಷನ್ಗಳಲ್ಲಿನ ಸಂಚಾರ ವ್ಯವಸ್ಥೆಯನ್ನು ಸುಧಾರಿಸಲಿದೆ. ಬೆಂಗಳೂರಿನ ಟ್ರಾಫಿಕ್ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಸಾಧ್ಯವಿರುವ ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದೆ ಎಂಬುವುದಕ್ಕೆ ಇದು ನಿದರ್ಶನವಾಗಿದೆ.

ಹೆಚ್ಚುತ್ತಿರುವ ನಗರೀಕರಣ ಮತ್ತು ಜನಸಂಖ್ಯೆ ನಗರದ ರಸ್ತೆಗಳ ಮೇಲೆ ವಿಪರೀತ ಒತ್ತಡವನ್ನು ಹೇರುತ್ತಿದೆ. ಪ್ರತಿದಿನ ಸುಮಾರು 9 ಲಕ್ಷ ಪ್ರಯಾಣಿಕರು ಬೆಂಗಳೂರು ಮೆಟ್ರೋ ಸೇವೆ ಬಳಸುತ್ತಿದ್ದಾರೆ. ಹಳದಿ ಲೇನ್ ಸೇರ್ಪಡೆಯಿಂದ ಪ್ರಯಾಣಿಕರ ಸಂಖ್ಯೆ 12.5 ಲಕ್ಷ ದಾಟುವ ನಿರೀಕ್ಷೆ ಹೊಂದಲಾಗಿದೆ.

ಬೆಂಗಳೂರು ಮೆಟ್ರೋ ಹಾದಿಯಲ್ಲಿ ನಾವು ಸಾಗಬೇಕಾದ ದೂರ ಇನ್ನೂ ಬಹಳಷ್ಟಿದೆ. ಎರಡನೇ ಹಂತದ ಮಾರ್ಗದ ಕಾರ್ಯಾಚರಣೆಯೊಂದಿಗೆ, ನಾವು 117 ಕಿ.ಮೀ ಮೆಟ್ರೋ ಸಂಪರ್ಕ ಸಾಧಿಸಲಿದ್ದೇವೆ. ಇದರಿಂದ 15 ಲಕ್ಷ ಮಂದಿ ಮೆಟ್ರೋದಲ್ಲಿ ಪ್ರಯಾಣಿಸಲು ಅವಕಾಶವಾಗಲಿದೆ.

ಮೆಟ್ರೋ 2ಎ ಮತ್ತು 2ಬಿ ಹಂತದಲ್ಲಿ Outer ring road ಮತ್ತು ಏರ್ಪೋರ್ಟ್ ಸಂಪರ್ಕಿಸುವ 58 ಕಿ.ಮೀ ಉದ್ದದ ರೂ.15,131 ಕೋಟಿ ವೆಚ್ಚದ ಮಾರ್ಗ 2027ರ ಡಿಸೆಂಬರ್ನಲ್ಲಿ ಪೂರ್ಣಗೊಳ್ಳಲಿದೆ. ಈ ಮಾರ್ಗ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ಬೆಂಗಳೂರು ನಗರವನ್ನು ಜೋಡಿಸಲಿದೆ.

ಹಂತ-3ರ 44.65 ಕಿ.ಮೀ ಉದ್ದದ ರೂ.15,611 ಕೋಟಿ ಹೂಡಿಕೆಯ ಮಾರ್ಗ ಬೆಂಗಳೂರು ನಗರದ ಸಂಪರ್ಕ ವ್ಯವಸ್ಥೆಯನ್ನು ಇನ್ನಷ್ಟು ಸುಧಾರಿಸಲಿದೆ. ಇದರ ಸಿವಿಲ್ ಕಾಮಗಾರಿಗಳು ಸಧ್ಯದಲ್ಲಿಯೇ ಆರಂಭವಾಗಲಿದೆ.

ಮೆಟ್ರೋ ಹಂತ 4ರಲ್ಲಿ 53 ಕಿ.ಮೀ ಉದ್ದದ ಡಬಲ್ ಡೆಕ್ಕರ್-ಕಂ-ಮೆಟ್ರೋ ಮಾರ್ಗ ನಿರ್ಮಾಣದ ಕಾರ್ಯಸಾಧ್ಯತಾ ವರದಿ (Feasibility Report) ಸಿದ್ಧಪಡಿಸುವ ಕಾರ್ಯ ಪ್ರಗತಿಯಲ್ಲಿದೆ.

2030ರ ವೇಳೆಗೆ ಬೆಂಗಳೂರು ನಗರದಲ್ಲಿ 220 ಕಿ.ಮೀ ಉದ್ದದ ಮೆಟ್ರೋ ಮಾರ್ಗ ಪೂರ್ಣಗೊಳಿಸಿ, 30 ಲಕ್ಷ ಜನರು ಪ್ರಯಾಣಿಸಲು ಮೂಲಸೌಕರ್ಯ ಕಲ್ಪಿಸುವುದು ನಮ್ಮ ಬದ್ಧತೆಯಾಗಿದೆ.

ಮೆಟ್ರೋ ನಿಲ್ದಾಣಗಳ ನಿರ್ಮಾಣದಲ್ಲಿ ಇನ್ಫೋಸಿಸ್ ಫೌಂಡೇಶನ್, ಬಯೋಕಾನ್ ಮತ್ತು ಡೆಲ್ಟಾ ಎಲೆಕ್ಟ್ರಾನಿಕ್ಸ್‌ ನಂತಹ ಖಾಸಗಿ ಸಂಸ್ಥೆಗಳು ಕೈ ಜೋಡಿಸಿವೆ. ಬೆಂಗಳೂರಿನ ಅಭಿವೃದ್ಧಿ ಕಾರ್ಯಗಳಲ್ಲಿ ಖಾಸಗಿ ಮತ್ತು ಸಾರ್ವಜನಿಕ ಸಹಭಾಗಿತ್ವ ಮುಂದಿನ ದಿನಗಳಲ್ಲಿ ಇನ್ನಷ್ಟು ಸದೃಢಗೊಳ್ಳುವ ವಿಶ್ವಾಸ ನನಗಿದೆ.

ನಮ್ಮ ರಾಜ್ಯವು ದೇಶದ ಐಟಿ ರಫ್ತಿನಲ್ಲಿ ಶೇ.35-40 ರಷ್ಟು ಕೊಡುಗೆ ಕೊಡುತ್ತಿದೆ. ಇದರಲ್ಲಿ ಬೆಂಗಳೂರಿನ ಪಾಲು ದೊಡ್ಡದು. ಎಲೆಕ್ಟ್ರಾನಿಕ್ಸ್ ಮತ್ತು ಸಂಶೋಧನೆ ಹಾಗೂ ಅಭಿವೃದ್ಧಿಯ ರಫ್ತಿನಲ್ಲಿ ಶೇ.40 ಕ್ಕೂ ಹೆಚ್ಚಿನ ಪಾಲು ರಾಜ್ಯದ್ದಾಗಿದೆ. ಈ ಹಿನ್ನೆಲೆಯಲ್ಲಿ ನಮ್ಮ ಸರ್ಕಾರವು 1.35 ಲಕ್ಷ ಕೋಟಿ ರೂಗಳಿಗೂ ಅಧಿಕ ಮೊತ್ತದ ಯೋಜನೆಗಳನ್ನು ರೂಪಿಸಿ ಸಂಪನ್ಮೂಲಗಳನ್ನು ವಿನಿಯೋಗಿಸಿ ಬೆಂಗಳೂರನ್ನು ಮಾದರಿ ನಗರವನ್ನಾಗಿಸಲು ಪ್ರಯತ್ನ ಮಾಡುತ್ತಿದ್ದೇವೆ.

ಈಗಾಗಲೇ ಅನೇಕ ಯೋಜನೆಗಳು ಕಾರ್ಯಗತಗೊಳ್ಳುತ್ತಿವೆ. ದೇಶದ ಆರ್ಥಿಕತೆಗೆ ಬೃಹತ್ ಕೊಡುಗೆ ಕೊಡುತ್ತಿರುವ ಬೆಂಗಳೂರಿನ ಅಭಿವೃದ್ಧಿಗೆ ಕೇಂದ್ರ ಸರ್ಕಾರವೂ ಸಹ ಕೈ ಜೋಡಿಸಬೇಕೆಂದು ವಿನಂತಿಸುತ್ತೇನೆ.

ಕಾರ್ಯಕ್ರಮದಲ್ಲಿ ಬೆಂಗಳೂರು ನಗರದ ಸಮಗ್ರ ಅಭಿವೃದ್ಧಿಗೆ ಕೈಗೊಂಡಿರುವ ಯೋಜನೆಗಳಿಗೆ ಸಮರ್ಪಕ ಅನುದಾನ ಕೋರಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಮೆಟ್ರೋ ರೈಲು ಹಳದಿ ಮಾರ್ಗ ಉದ್ಘಾಟನೆ ಸಮಾರಂಭದಲ್ಲಿ ಮನವಿ ಸಲ್ಲಿಸಿದರು ಹಾಗೂ ಗಣೇಶ ಪ್ರತಿಮೆಯನ್ನು ಉಡುಗೊರೆಯಾಗಿ ನೀಡಿದರು.

ಕಾರ್ಯಕ್ರಮದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್, ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ, ವಿ.ಸೋಮಣ್ಣ, ಶೋಭ ಕರಂದ್ಲಾಜೆ, ಸಂಸದರಾದ ಡಾ.ಮಂಜುನಾಥ್, ತೇಜಸ್ವಿ ಸೂರ್ಯ, ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮತ್ತಿತರರಿದ್ದರು.

ರಾಜಕೀಯ

ರಾಹುಲ್ ಗಾಂಧಿ ಬಂಧನ..!| Video

ರಾಹುಲ್ ಗಾಂಧಿ ಬಂಧನ..!| Video

ಮತ ಕಳವು (Vote chori) ಕುರಿತಂತೆ ಚುನಾವಣೆ ಆಯೋಗದ ವಿರುದ್ಧ ದಾಖಲೆ ಬಿಡುಗಡೆ ಮಾಡಿದ್ದ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi)

[ccc_my_favorite_select_button post_id="112441"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ಜು.25ರಿಂದ 28ರವರೆಗೆ ನಡೆಯಲಿರುವ ಪುರುಷರ ಸೀನಿಯರ್ -ನ್ಯಾಷನಲ್ಸ್ ಕಬಡ್ಡಿ ಚಾಂಪಿಯನ್‌ಶಿಪ್(Kabaddi Championship) ಪಂದ್ಯಾವಳಿ

[ccc_my_favorite_select_button post_id="111553"]
ದೊಡ್ಡಬಳ್ಳಾಪುರ: ರೈತರಿಗೆ ಕೇಬಲ್ ವೈರ್ ಕಳ್ಳರ ಹಾವಳಿ.. ಕದಿಯಲು ಬಂದವರು ವಾಹನ ಬಿಟ್ಟು ಪರಾರಿ

ದೊಡ್ಡಬಳ್ಳಾಪುರ: ರೈತರಿಗೆ ಕೇಬಲ್ ವೈರ್ ಕಳ್ಳರ ಹಾವಳಿ.. ಕದಿಯಲು ಬಂದವರು ವಾಹನ ಬಿಟ್ಟು

ಕೃಷಿ ಜಮೀನುಗಳಲ್ಲಿನ ಬೋರ್ವೆಲ್ ಗೆ ಅಳವಡಿಸಿದ್ದ ಕೇಬಲ್ ವೈರ್ ಗಳನ್ನು (Cable wire) ಕದ್ದು ಪರಾರಿಯಾಗುತ್ತಿದ್ದ ಕಳ್ಳರನ್ನು (Thieves) ಬೆನ್ನತ್ತಿದ ರೈತರು, ವಾಹನವನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

[ccc_my_favorite_select_button post_id="112373"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!