MP Dr. Prabha Mallikarjun flags off the 2nd Vande Bharat Express

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr. Prabha Mallikarjun) ತಿಳಿಸಿದರು.

ಭಾನುವಾರ ಬೆಂಗಳೂರು ನಿಲ್ದಾಣದಿಂದ ಹೊರಟ ಸ್ವದೇಶಿ ನಿರ್ಮಿತ, ಸೆಮಿ, ಹೈಸ್ಪೀಡ್, ಸ್ವಯಂ ಚಾಲಿತ ರೈಲು ಬೆಂಗಳೂರು-ಬೆಳಗಾವಿ ವಂದೇ ಭಾರತ್ ರೈಲನ್ನು ದಾವಣಗೆರೆ ರೈಲ್ವೆ ನಿಲ್ದಾಣದಲ್ಲಿ ಸ್ವಾಗತಿಸಿ ಬೆಳಗಾವಿಗೆ ಹೊರಟ ರೈಲಿಗೆ ಹಸಿರು ನಿಶಾನೆ ತೋರಿಸಿದರು.

ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹೆಚ್ಚಿನ ವೇಗದ ರೈಲು ಸೇವೆಯಿಂದ ಶಿಕ್ಷಣಕ್ಕಾಗಿ ಇಲ್ಲಿಗೆ ಮತ್ತು ಇಲ್ಲಿಂದ ಬೇರೆ ಕಡೆ ಹೋಗಲು ಮತ್ತು ಆರೋಗ್ಯಕ್ಕೆ ಸಂಬಂಧಿಸಿದಂತೆ ಚಿಕಿತ್ಸೆಗೆ ಬೇರೆ ಕಡೆ ಹೋಗಲು ಮತ್ತು ಆಗಮಿಸಲು ವೇಗದ ಪ್ರಯಾಣ ಸೌಲಭ್ಯದಿಂದ ಜನರಿಗೆ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟಿ ಗರಿಗೆದರಲಿದೆ. ಸಾರ್ವಜನಿಕರು ಸಹ ರೈಲು ಸೇವೆ ಪಡೆದುಕೊಳ್ಳಬಹುದಾಗಿದೆ.

ತುಮಕೂರು-ದಾವಣಗೆರೆ ನೇರ ರೈಲು ಆದಷ್ಟು ಬೇಗ ನಿರ್ಮಾಣವಾದಲ್ಲಿ ಇನ್ನೂ ಹೆಚ್ಚು ಅನುಕೂಲವಾಗಲಿದೆ. ರೈಲ್ವೆ ನಿಲ್ದಾಣದಲ್ಲಿ ಗುಣಮಟ್ಟದ ಆಹಾರ ಪ್ರಯಾಣಿಕರಿಗೆ ಸಿಗಬೇಕೆಂದು ಮತ್ತು ಸ್ವಚ್ಚತೆಯನ್ನು ಕಾಪಾಡಿಕೊಳ್ಳಲು ಸಚಿವರೊಂದಿಗೆ ಚರ್ಚಿಸಲಾಗಿದ್ದು ಅಗತ್ಯವಿರುವ ಕಡೆ ರೈಲು ಸೇವೆಯನ್ನು ವಿಸ್ತರಿಸಲೂ ಸಹ ಮನವಿ ಮಾಡಲಾಗಿದೆ ಎಂದರು.

ಬೆಂಗಳೂರು-ಬೆಳಗಾವಿ ವಂದೇ ಭಾರತ್ ರೈಲು ಪ್ರತಿದಿನ ಬೆಂಗಳೂರಿನಿಂದ ಮಧ್ಯಾಹ್ನ 2.20 ಕ್ಕೆ ಹೊರಟು ಸಂಜೆ 5.48 ಕ್ಕೆ ದಾವಣಗೆರೆಗೆ ಆಗಮಿಸಿ ರಾತ್ರಿ 10.40 ಕ್ಕೆ ಬೆಳಗಾವಿ ತಲುಪಲಿದೆ. ಬೆಳಗಾವಿ ಯಿಂದ ಪ್ರತಿದಿನ ಬೆಳಗ್ಗೆ 5.20 ಕ್ಕೆ ಹೊರಟು ದಾವಣಗೆರೆಗೆ ಬೆಳಗ್ಗೆ 9.25 ಕ್ಕೆ ತಲುಪಿ ಮಧ್ಯಾಹ್ನ 1.50 ಕ್ಕೆ ಬೆಂಗಳೂರಿಗೆ ಈ ವಂದೇ ಭಾರತ್ ಎಕ್ಸ್‍ಪ್ರೆಸ್ ರೈಲು ತಲುಪಲಿದೆ.

ಕಾರ್ಯಕ್ರಮದಲ್ಲಿ ಮಾಜಿ ಸಂಸದರಾದ ಜಿ.ಎಂ.ಸಿದ್ದೇಶ್ವರ, ಹರಿಹರ ಶಾಸಕರಾದ ಬಿ.ಪಿ.ಹರೀಶ್, ದೂಡಾ ಅಧ್ಯಕ್ಷರಾದ ದಿನೇಶ್ ಕೆ.ಶೆಟ್ಟಿ, ಮಾಜಿ ಸಚಿವರಾದ ಎಂ.ಪಿ.ರೇಣುಕಾಚಾರ್ಯ, ಚೇಂಬರ್ಸ್ ಆಫ್ ಕಾಮರ್ಸ್ ಅಧ್ಯಕ್ಷ ಶಂಬಣ್ಣ, ಮೈಸೂರು ರೈಲ್ವೆ ವಿಭಾಗದ ಹೆಚ್ಚುವರಿ ವಿಭಾಗೀಯ ವ್ಯವಸ್ಥಾಪಕ ಶಾಮಿದ್ ಹಮೀದ್ ಹಾಗೂ ಇನ್ನಿತರೆ ಗಣ್ಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ರಾಜಕೀಯ

ಯಾರಾಗಲಿದ್ದಾರೆ ದೊಡ್ಡಬಳ್ಳಾಪುರ ತಾಲೂಕು ಜೆಡಿಎಸ್ ಅಧ್ಯಕ್ಷ..?

ಯಾರಾಗಲಿದ್ದಾರೆ ದೊಡ್ಡಬಳ್ಳಾಪುರ ತಾಲೂಕು ಜೆಡಿಎಸ್ ಅಧ್ಯಕ್ಷ..?

ಇತ್ತೀಚೆಗಷ್ಟೇ ಏಕಾಏಕಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಜೆಡಿಎಸ್ (JDS) ಅಧ್ಯಕ್ಷ ಆಯ್ಕೆ ಬೆನ್ನಲ್ಲೇ, ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷ ಯಾರಾಗಲಿದ್ದಾರೆ ಎಂಬ ಚರ್ಚೆ ವ್ಯಾಪಕವಾಗಿ ನಡೆಯುತ್ತಿದೆ.

[ccc_my_favorite_select_button post_id="120068"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಕೇಬಲ್ ತಯಾರಿಕಾ ಘಟಕದಲ್ಲಿ ಅಗ್ನಿ ಆಕಸ್ಮಿಕ.. ಕೋಟ್ಯಾಂತರ ರೂ. ನಷ್ಟ

ದೊಡ್ಡಬಳ್ಳಾಪುರ: ಕೇಬಲ್ ತಯಾರಿಕಾ ಘಟಕದಲ್ಲಿ ಅಗ್ನಿ ಆಕಸ್ಮಿಕ.. ಕೋಟ್ಯಾಂತರ ರೂ. ನಷ್ಟ

ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿನ ಅಡ್ವಾನ್ಸ್ ಕೇಬಲ್ ಟೆಕ್ನಾಲಜಿ ಯೂನಿಟ್-2ರಲ್ಲಿ ಸೋಮವಾರ ಸಂಜೆ 5 ಗಂಟೆ ಸುಮಾರಿಗೆ ಬೆಂಕಿ ಅವಘಡದಿಂದಾಗಿ (Fire accident) ಉಂಟಾಗಿರುವ ಬೆಂಕಿಯ ಕೆನ್ನಾಲಿಗೆ ಆವರಿಸುತ್ತಲೇ ಇದ್ದು, ಸತತ ಐದು ಗಂಟೆಗಳಿಂದಲೂ 10

[ccc_my_favorite_select_button post_id="120091"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!