ಪ್ರಧಾನಿಯವರ ಮಾತಿನ ಮೇಲೆ ಭರವಸೆಯಿದೆ; ಬಿಜೆಪಿಯ ಕೆಲವು ಖಾಲಿ ಟ್ರಂಕುಗಳು ಶಬ್ದ ಮಾತ್ರ ಮಾಡುತ್ತವೆ: ಡಿಸಿಎಂ ಡಿ.ಕೆ. ಶಿವಕುಮಾರ್ ವ್ಯಂಗ್ಯ

There is confidence in the Prime Minister's words; DCM D.K. Shivakumar

ಬೆಂಗಳೂರು: “ಬಿಜೆಪಿಯಲ್ಲಿ ಕೆಲವೊಂದಷ್ಟು ಖಾಲಿ ಟ್ರಂಕುಗಳಿವೆ. ಅವು ಕೇವಲ ಶಬ್ದ ಮಾತ್ರ ಮಾಡುತ್ತವೆ. ಬರೀ ಶಬ್ದ ಮಾಡುವವರು ಸಂಸತ್ ನಲ್ಲಿ ಮಾತನಾಡಿ, ಪ್ರಧಾನ‌ಮಂತ್ರಿಯವರನ್ನು ಭೇಟಿ ಮಾಡಿ ರಾಜ್ಯಕ್ಕೆ ಹತ್ತು ರೂಪಾಯಿಯಾದರೂ ಅನುದಾನ ತೆಗೆದುಕೊಂಡು ಬರಲಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಛೇಡಿಸಿದರು.

ನಗರದ ಖಾಸಗಿ ಹೋಟೆಲ್ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಅವರು ಸೋಮವಾರ ಪ್ರತಿಕ್ರಿಯೆ ನೀಡಿದರು.

“ಬರೀ ಶಬ್ದ ಮಾಡುವವರಿಗೂ ನಾನು ಅನುದಾನದ ವಿಚಾರವಾಗಿ ಎಲ್ಲಾ ಮಾಹಿತಿಗಳನ್ನು ಕಳುಹಿಸಿ ಕೊಡುತ್ತಿದ್ದೇನೆ. ಏಕೆಂದರೆ ಇದುವರೆಗೂ ಯಾರೊಬ್ಬರು ಅನುದಾನ ತಂದಿಲ್ಲ, ತರಲು ಆಸಕ್ತಿಯನ್ನೂ ತೋರಿಲ್ಲ. ಪ್ರಧಾನಿಯವರನ್ನೂ ಭೇಟಿ ಮಾಡಿಲ್ಲ. ರಾಜ್ಯಕ್ಕೆ, ಅದರಲ್ಲೂ ಬೆಂಗಳೂರಿಗಂತೂ ಏನೇನೂ ತಂದಿಲ್ಲ” ಎಂದರು.

ಪ್ರಧಾನಿಯವರ ಮಾತಿನ ಮೇಲೆ ಭರವಸೆಯಿದೆ

“ಬೆಂಗಳೂರು ಅಭಿವೃದ್ಧಿಗೆ ಅನುದಾನ ನೀಡುವ ಬಗ್ಗೆ ಪ್ರಧಾನಿಯವರ ಬಳಿ ಮಾತನಾಡಿದೆ. ಅವರು ನಮ್ಮ‌ ಮನವಿಯನ್ನು ಗಮನಿಸುವುದಾಗಿ ತಿಳಿಸಿದ್ದಾರೆ. ಅವರು ಮಾತನಾಡಿದ ಶೈಲಿ ನೋಡಿದರೆ ನನಗೆ ಅವರ ಮಾತಿನ ಮೇಲೆ ಭರವಸೆಯಿದೆ. ಬೆಂಗಳೂರು ಜಾಗತಿಕ ನಗರ ಎನ್ನುವುದನ್ನು ಅವರು ಒಪ್ಪಿಕೊಂಡಿದ್ದಾರೆ. ಬೆಂಗಳೂರು ಭಾರತವನ್ನು ಪ್ರತಿನಿಧಿಸುತ್ತದೆ” ಎಂದರು.

“ಬೆಂಗಳೂರು ಅಭಿವೃದ್ಧಿಗೆ ಎಲ್ಲಾ ಪಕ್ಷಗಳು ಕೊಡುಗೆ ‌ನೀಡಿವೆ. ನಾನು ಒಬ್ಬನೇ ಅಥವಾ ನಮ್ಮ ಸರ್ಕಾರದಿಂದಲೇ ಎಲ್ಲಾ ಆಗಿದೆ ಎಂದು ಹೇಳುವುದಿಲ್ಲ. ಬೆಂಗಳೂರು ದೇಶದಲ್ಲಿಯೇ ಪ್ರಮುಖ ನಗರವಾಗಿದೆ. ಇದನ್ನು ಇನ್ನೂ ಅತ್ಯುತ್ತಮ ನಗರವನ್ನಾಗಿ ಮಾಡುವುದು ನಮ್ಮೆಲ್ಲರ ಜವಾಬ್ದಾರಿ. ಇಲ್ಲಿ ರಾಜಕೀಯಕ್ಕಿಂತ ರಾಜ್ಯದ ಹಿತಾಸಕ್ತಿ ಮುಖ್ಯ” ಎಂದು ಹೇಳಿದರು.

ನೋಟಿಸ್ ನೀಡಲು ಅವರು ಯಾರು

ರಾಹುಲ್ ಗಾಂಧಿ ಅವರಿಗೆ ಚುನಾವಣಾ ಆಯೋಗ ನೋಟಿಸ್ ನೀಡಿರುವ ಬಗ್ಗೆ ಕೇಳಿದಾಗ, “ನೋಟಿಸ್ ಕೊಡಲಿ ಬಿಡಿ. ಅಷ್ಟಕ್ಕೂ ನೋಟಿಸ್ ನೀಡಲು ಅವರು ಯಾರು? ನಾವೇ ಅವರಿಗೆ ನೋಟಿಸ್ ನೀಡಿದ್ದೇವೆ. ನಮಗೆ ನೋಟಿಸ್ ನೀಡಲು ಅಧಿಕಾರವಿದೆಯೇ ಹೊರತು ಅವರಿಗಲ್ಲ. ನಾವು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನ್ಯಾಯಯುತವಾಗಿ ಚುನಾವಣೆ ಗೆದ್ದಿದ್ದೇವೆ. ನ್ಯಾಯಯುತವಾಗಿ ಚುನಾವಣೆ ನಡೆಸಲು ಅವರಿಗೆ ಅವಕಾಶವಿದೆಯೇ ಹೊರತು ನೋಟಿಸ್ ನೀಡುವ ಹಕ್ಕಿಲ್ಲ‌. ಏನಿದ್ದರೂ ಕಾನೂನಾತ್ಮಕವಾಗಿ ಉತ್ತರ ನೀಡುತ್ತೇವೆ” ಎಂದು ಖಡಕ್ಕಾಗಿ ಉತ್ತರಿಸಿದರು.

ರಾಜಕೀಯ

ಒಂದು ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

ಒಂದು ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

“ಕೇಂದ್ರ ಪರಿಸರ ಇಲಾಖೆಯವರು ದಂಡ ಹಾಗೂ ಮಿಟಿಗೇಷನ್ ಪ್ಲಾನ್ ಸೇರಿ 257 ಕೋಟಿ ರೂಪಾಯಿ ಹಣ ಸಂದಾಯ ಮಾಡಬೇಕು ಎಂದು ಸೂಚಿಸಿದ್ದಾರೆ. ಇಂದೇ ಈ ಹಣ ಪಾವತಿ ಮಾಡಿ ಎಂದು ಮಾರ್ಗದರ್ಶನ ನೀಡಿದ್ದೇನೆ. ಕಟ್ಟಿದ

[ccc_my_favorite_select_button post_id="121560"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]