ದೊಡ್ಡಬಳ್ಳಾಪುರ: ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ ದ್ವಿಚಕ್ರ ವಾಹನ ಸವಾರ ಡಿಕ್ಕಿ ಹೊಡೆದು ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ (Accident) ತಾಲೂಕಿನ ತೊಗರಿಘಟ್ಟ-ಸುಣ್ಣಘಟ್ಟಹಳ್ಳಿ ನಡುವೆ ಸಂಭವಿಸಿದೆ.
ಘಟನೆಯಲ್ಲಿ ಗಂಟಿಗಾನಹಳ್ಳಿ ನಿವಾಸಿ ಚನ್ನಕೇಶವ (19 ವರ್ಷ) ಸ್ಥಳದಲ್ಲೇ ಸಾವನಪ್ಪಿದ್ದಾರೆ.
ತೊಗರಿಘಟ್ಟ-ಸುಣ್ಣಘಟ್ಟಹಳ್ಳಿ ನಡುವಿನ ರಸ್ತೆಯಲ್ಲಿ ಬದಿಯಲ್ಲಿ ಟ್ರಾಕ್ಟರ್ ಕೆಟ್ಟು ನಿಂತಿದ್ದು, ಭಾನುವಾರ ಸಂಜೆ ದ್ವಿಚಕ್ರವಾಹನದಲ್ಲಿ ಬಂದ ಚನ್ನಕೇಶವ ಮಳೆಯಲ್ಲಿ ನಿಂತಿದ್ದ ಟ್ರಾಕ್ಟರ್ ಕಾಣದೆ ಏಕಾಏಕಿ ಡಿಕ್ಕಿ ಹೊಡೆದಿದ್ದಾರೆ. ಪರಿಣಾಮ ತಲೆಗೆ ಪೆಟ್ಟು ಬಿದ್ದು, ಸ್ಥಳದಲ್ಲಿಯೇ ಸಾವನಪ್ಪಿದ್ದಾರೆ.
ಘಟನೆ ಕುರಿತಂತೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.