ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಬಿಜೆಪಿ- ಜೆಡಿಎಸ್ ಪ್ರತಿಭಟನೆ

BJP-JDS protest near Gandhi statue at Vidhana Soudha

ಬೆಂಗಳೂರು: ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಸಚಿವ ಸಂಪುಟ ಮತ್ತು ಈ ಸರಕಾರ ಬೇಜವಾಬ್ದಾರಿಯಿಂದ ನಡೆದುಕೊಳ್ಳುತ್ತಿದೆ ಎಂದು ಬಿಜೆಪಿ (BJP) ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ (B.Y. Vijayendra) ಅವರು ಆಕ್ಷೇಪಿಸಿದ್ದಾರೆ.

ಬಿ.ವೈ. ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಆರ್. ಅಶೋಕ್, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮತ್ತು ಜೆಡಿಎಸ್ ವಿರೋಧ ಪಕ್ಷದ ನಾಯಕ ಸುರೇಶ್ ಬಾಬು ಅವರ ನೇತೃತ್ವದಲ್ಲಿ ಇಂದು ಬೆಳಿಗ್ಗೆ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು.

ಈ ಸಂದರ್ಭದಲ್ಲಿ ವಿಜಯೇಂದ್ರ ಅವರು ಮಾತನಾಡಿದರು. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆದ ಕಾಲ್ತುಳಿತ ಪ್ರಕರಣದಲ್ಲಿ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಗೃಹಸಚಿವರು, ಸಚಿವರು ಜವಾಬ್ದಾರಿ ತೆಗೆದುಕೊಳ್ಳಬೇಕಿತ್ತು. ಅದನ್ನು ಬಿಟ್ಟು ಅಮಾಯಕ ಪೊಲೀಸ್ ಅಧಿಕಾರಿಗಳ ಮೇಲೆ ಕ್ರಮ ಜರುಗಿಸಿದ್ದಾರೆ.

ಅಧಿಕಾರಿಗಳ ಅಮಾನತು ಮಾಡಿದ್ದಾರೆ ಎಂದು ಟೀಕಿಸಿದರು. ಇವರ ಹುಳುಕು ಮುಚ್ಚಿ ಹಾಕಿಕೊಳ್ಳುವ ಸಲುವಾಗಿ ಪೊಲೀಸ್ ಅಧಿಕಾರಿಗಳ ಮೇಲೆ ಕ್ರಮ ಕೈಗೊಂಡರು ಎಂದು ಆರೋಪಿಸಿದರು.

ರಸಗೊಬ್ಬರ ಕೊರತೆಯಿಂದ ರೈತರು ರಾಜ್ಯದಲ್ಲಿ ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆ. ಉತ್ತರ ಕರ್ನಾಟಕದ ನೀರಾವರಿ ಯೋಜನೆಗಳಿಗೆ ಪರಿಹಾರ ನೀಡುತ್ತಿಲ್ಲ. ಇದರ ಕುರಿತು ಚರ್ಚೆಯೂ ಆಗುತ್ತಿಲ್ಲ; ಈ ಎಲ್ಲ ವಿಷಯಗಳನ್ನು ಸದನದಲ್ಲಿ ಕೈಗೆತ್ತಿಕೊಳ್ಳಲು ತೀರ್ಮಾನಿಸಿದ್ದೇವೆ. ಸಾಂಕೇತಿಕವಾಗಿ ಎರಡೂ ಪಕ್ಷಗಳ ಶಾಸಕರು ಹೋರಾಟ ಮಾಡಿದ್ದೇವೆ ಎಂದು ವಿವರಿಸಿದರು.

ಇವೆಲ್ಲ ವಿಷಯಗಳನ್ನು ಸದನದ ಒಳಗೆ ಪ್ರಸ್ತಾಪಿಸುತ್ತೇವೆ. ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಹೊಣೆಗೇಡಿ ಸರಕಾರ ಜವಾಬ್ದಾರಿ ತೆಗೆದುಕೊಳ್ಳಬೇಕು ಎಂದು ಆಗ್ರಹಿಸುತ್ತೇವೆ ಎಂದು ತಿಳಿಸಿದರು.

ರಾಜಕೀಯ

ಒಂದು ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

ಒಂದು ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

“ಕೇಂದ್ರ ಪರಿಸರ ಇಲಾಖೆಯವರು ದಂಡ ಹಾಗೂ ಮಿಟಿಗೇಷನ್ ಪ್ಲಾನ್ ಸೇರಿ 257 ಕೋಟಿ ರೂಪಾಯಿ ಹಣ ಸಂದಾಯ ಮಾಡಬೇಕು ಎಂದು ಸೂಚಿಸಿದ್ದಾರೆ. ಇಂದೇ ಈ ಹಣ ಪಾವತಿ ಮಾಡಿ ಎಂದು ಮಾರ್ಗದರ್ಶನ ನೀಡಿದ್ದೇನೆ. ಕಟ್ಟಿದ

[ccc_my_favorite_select_button post_id="121560"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]