ಬೆಂಗಳೂರು: ಚಿಕ್ಕಬಳ್ಳಾಪುರ ಗುತ್ತಿಗೆ ಕಾರು ಚಾಲಕ ಬಾಬು ಆತ್ಮಹತ್ಯೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಡಾ.ಕೆ.ಸುಧಾಕರ್ (Dr.K. Sudhakar) ವಿರುದ್ಧ ಯಾವುದೇ ಬಲವಂತದ ಕ್ರಮ ಜರುಗಿಸದಂತೆ ಹೈಕೋರ್ಟ್ ಸೋಮವಾರ ಮಧ್ಯಂತರ ಆದೇಶ ನೀಡಿದೆ.
ಇದೇ ಸಮಯದಲ್ಲಿ, ಪ್ರಕರಣದ ತನಿಖೆಗೆ ಸಹಕರಿಸುವಂತೆ ಸಂಸದ ಡಾ. ಕೆ.ಸುಧಾಕರ್ ಅವರಿಗೂ ನ್ಯಾಯಾಲಯ ನಿರ್ದೇಶಿಸಿದೆ.
ಮೃತ ಬಾಬು ಪತ್ನಿ ದಾಖಲಿಸಿರುವ ದೂರು ಆಧರಿಸಿ, ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್ ರದ್ದುಕೋರಿ ಸಂಸದ ಕೆ. ಸುಧಾಕರ್ ಸಲ್ಲಿಸಿದ್ದ ಅರ್ಜಿ ಕುರಿತು ಸೋಮವಾರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಐ. ಅರುಣ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ಮಧ್ಯಂತರ ಆದೇಶ ನೀಡಿದೆ.