Inspector Dr. M.B. Naveen Kumar imparts legal knowledge to GKVK students

ದೊಡ್ಡಬಳ್ಳಾಪುರ: ಜಿಕೆವಿಕೆ ವಿದ್ಯಾರ್ಥಿಗಳಿಗೆ ಇನ್ಸ್ಪೆಕ್ಟರ್ ಡಾ.ಎಂ.ಬಿ.ನವೀನ್ ಕುಮಾರ್ ಕಾನೂನು ಅರಿವು

ದೊಡ್ಡಬಳ್ಳಾಪುರ: ತಾಲೂಕಿನ ಹುಲಿಕುಂಟೆ ಸಮೀಪದ ಹುಲುಕಡಿ ಬೆಟ್ಟದ ತಪ್ಪಲಿನಲ್ಲಿ ಜಿಕೆವಿಕೆ (GKVK) ಕೃಷಿ ವಿಶ್ವವಿದ್ಯಾನಿಲಯದ ಇಂಜಿನಿಯರ್ ವಿದ್ಯಾರ್ಥಿಗಳ ವತಿಯಿಂದ ಎನ್ಎಸ್ಎಸ್ ಶಿಬಿರವನ್ನು ಆಯೋಜಿಸಲಾಗಿದೆ.

ಈ ಶಿಬಿರದಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳಿಗೆ ದೊಡ್ಡಬಳ್ಳಾಪುರ ಮಹಿಳಾ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಡಾ.ಎಂ.ಬಿ.ನವೀನ್ ಕುಮಾರ್ ಅವರು ಕಾನೂನು ಅರಿವು ಮೂಡಿಸಿದರು.

ಮಾದಕ ವಸ್ತುಗಳ ಸೇವೆನೆಯಿಂದಾಗಿ ವಿದ್ಯಾರ್ಥಿಗಳು ತಮ್ಮ ಅಮೂಲ್ಯ ಜೀವನವನ್ನು ಹಾಳು ಮಾಡಿಕೊಳ್ಳುತ್ತಾರೆ. ದುಷ್ಕರ್ಮಿಗಳು ವಿದ್ಯಾರ್ಥಿಗಳ ಅಮಾಯಕತೆಯನ್ನು ಉಪಯೋಗಿಸಿಕೊಂಡು ಅವರನ್ನು ಮಾದಕ ವಸ್ತುಗಳ ಜಾಲಕ್ಕೆ ಕೆಡವುತ್ತಿದ್ದಾರೆ. ಇಂತಹ ಚಟುವಟಿಕೆಗಳ ಬಗ್ಗೆ ವಿದ್ಯಾರ್ಥಿಗಳು ನಿಗಾ ವಹಿಸಬೇಕು. ಇಂತಹ ಚಟುವಟಿಕೆಗಳು ಕಂಡು ಬಂದರೆ ಪೊಲೀಸರಿಗೆ ತಿಳಿಸಬೇಕು.

ವಿದ್ಯಾರ್ಥಿಗಳು ಸದಾ ಪೊಲೀಸ್‌ ಇಲಾಖೆಯ ತುರ್ತು ಸೇವೆ ನಂಬರ್ ಗಳನ್ನು ಜ್ಞಾಪಕದಲ್ಲಿಟ್ಟುಕೊಳ್ಳಬೇಕು. ಅನಾಹುತಗಳು ನಡೆದಾಗ ಪೊಲೀಸರಿಗೆ ದೂರವಾಣಿ ಮೂಲಕ ಕರೆ ಮಾಡಬೇಕು. ಕರೆ ಮಾಡಿದವರ ಹೆಸರನ್ನು ಗೌಪ್ಯವಾಗಿ ಇಡಲಾಗುವುದು ಎಂದು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲಾಯಿತು.

ಕೆಲ ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿಗಳು ಇತ್ತೀಚಿನ ದಿನಗಳಲ್ಲಿ ಮೋಟಾ‌ರ್ ಬೈಕ್ ಮತ್ತಿತರ ವಾಹನಗಳನ್ನು ಚಲಾವಣೆ ಮಾಡುತ್ತಿರುವುದು ಪೊಲೀಸ್ ಇಲಾಖೆಯ ಗಮನಕ್ಕೆ ಬಂದಿದೆ. ಅಕಸ್ಮಾತ್ ಅಪಘಾತ ಸಂಭವಿಸಿದರೆ, ವಿದ್ಯಾರ್ಥಿಗಳ ಪೋಷಕರು ದೊಡ್ಡ ಅಪಾಯಕ್ಕೆ ಮತ್ತು ಆರ್ಥಿಕ ನಷ್ಟಕ್ಕೆ ಕಾರಣವಾಗಬೇಕಾಗುತ್ತದೆ.

ಸರ್ಕಾರ ನಿಗದಿ ಪಡಿಸಿದ ವಾಹನ ಪರವಾನಿಗೆಯನ್ನು ಪಡೆದುಕೊಂಡ ನಂತರವಷ್ಟೇ ವಾಹನ ಚಲಾಯಿಸಬೇಕು. ಮೂರು ಮಂದಿ ಬೈಕ್ ನಲ್ಲಿ ಕುಳಿತುಕೊಳ್ಳುವುದು, ವೀಲಿಂಗ್ ಮಾಡುವುದು ಅಪರಾಧ. ಇಂತಹ ಕ್ರಿಯೆಗಳಿಗೆ ದಂಡ ವಿಧಿಸಲಾಗುತ್ತದೆ ಎಂದು ಪೊಲೀಸ್‌ ಅಧಿಕಾರಿಗಳು ವಿದ್ಯಾರ್ಥಿಗಳಿಗೆ ಎಚ್ಚರಿಕೆ ನೀಡಿದರು.

ವಿದ್ಯಾರ್ಥಿಗಳು ಉತ್ತಮ ವಿದ್ಯಾಭ್ಯಾಸ ಮಾಡಿ ಸಮಾಜಕ್ಕೆ ಉತ್ತಮ ಕಾಣಿಕೆ ನೀಡಬೇಕು. ವಿದ್ಯಾವಂತ ಸಮಾಜವನ್ನು ಕಟ್ಟಲು ವಿದ್ಯಾರ್ಥಿಗಳು ಬುನಾದಿಯಾಗುತ್ತಾರೆ. ಇದಕ್ಕೆ ವ್ಯತಿರಿಕ್ತವಾಗಿ ಕೆಲ ಕಡೆ ಅಪ್ರಾಪ್ತ ವಯಸ್ಸಿನವರಿಗೆ ಮದುವೆ ಮಾಡುತ್ತಿರುವುದು ಕೂಡ ಗಮನಕ್ಕೆ ಬಂದಿದೆ. ಕಾನೂನು ರೀತಿಯಲ್ಲಿ ಬಾಲ್ಯ ವಿವಾಹ ಅಪರಾಧ. ಬಾಲ್ಯ ವಿವಾಹ ಮಾಡುವ ಪೋಷಕರು ಅಪರಾಧಿಗಳಾಗುತ್ತಾರೆ. ಅವರ ವಿರುದ್ಧ ಪ್ರಕರಣ ದಾಖಲು ಮಾಡಲಾಗುತ್ತದೆ ಎಂಬ ಮಾಹಿತಿಯನ್ನು ನೀಡಿದರು.

ಕಾರ್ಯಕ್ರಮದಲ್ಲಿ ಶಿಬಿರ ಸಂಯೋಜನ ಅಧಿಕಾರಿ ಡಾ.ಜಯಶ್ರೀ, ಎಎಸ್ಐ ಕೃಷ್ಣಪ್ಪ, ಗಂಗಾಧರ್ ಮತ್ತಿತರರು ಇದ್ದರು.

ರಾಜಕೀಯ

ಷಡ್ಯಂತ್ರ ಬಹಳ ದಿನ ಗುಟ್ಟಾಗಿ ಉಳಿಯಲು ಸಾಧ್ಯವಿಲ್ಲ: ಬಿ.ವೈ. ವಿಜಯೇಂದ್ರ

ಷಡ್ಯಂತ್ರ ಬಹಳ ದಿನ ಗುಟ್ಟಾಗಿ ಉಳಿಯಲು ಸಾಧ್ಯವಿಲ್ಲ: ಬಿ.ವೈ. ವಿಜಯೇಂದ್ರ

"ಶ್ರೀ ಕ್ಷೇತ್ರ ಧರ್ಮಸ್ಥಳದ ಕುರಿತು ನಿರಂತರ ಅಪಪ್ರಚಾರದ ಹಿಂದೆ ಯಾರಿದ್ದಾರೆ? ಯಾರ ಷಡ್ಯಂತ್ರ ಇದರ ಹಿಂದಿದೆ ಎಂಬುದು ಬಹಳ ದಿನ ಗುಟ್ಟಾಗಿ ಉಳಿಯಲು ಸಾಧ್ಯವಿಲ್ಲ"; B.Y. Vijayendra

[ccc_my_favorite_select_button post_id="112839"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ಡಿ.ಕ್ರಾಸ್ ಹಾಗೂ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಸ್ತೆಯಲ್ಲಿನ ಅಂಗಡಿಗಳಲ್ಲಿ ಪದೇ ಪದೇ ಕಳ್ಳತನ ಪ್ರಕರಣಗಳು (Shops robbed) ನಡೆಯುತ್ತಿದ್ದು, ವ್ಯಾಪಾರಿಗಳನ್ನು ಚಿಂತೆಗೀಡುಮಾಡಿದೆ.

[ccc_my_favorite_select_button post_id="112687"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!