ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿ -ಜೆಡಿಎಸ್ ಮೈತ್ರಿ ಗಟ್ಟಿಯಾಗಿ ಮುಂದುವರಿಯುತ್ತೆ: ನಿಖಿಲ್ ಕುಮಾರಸ್ವಾಮಿ

BJP-JDS alliance will continue strong in local body elections: Nikhil Kumaraswamy

ದಾವಣಗೆರೆ, (ಹರಿಹರ); ವಾಸ್ತವ ಸ್ಥಿತಿಯನ್ನ ಮುಂದಿಟ್ಟು ರಾಜಣ್ಣ (Rajanna) ಹೇಳಿದ್ದಾರೆ. ಅವರು ಹೇಳಿರುವುದಲ್ಲಿ ತಪ್ಪೇನಿದೆ.? ಅವರನ್ನು ಸಂಪುಟದಿಂದ ಏಕಾಏಕಿ ವಜಾ ಮಾಡಿದ್ದಾರೆ. ಅವರ ಹಿರಿತನಕ್ಕೆ ಕಾಂಗ್ರೆಸ್ ಪಕ್ಷ ಬೆಲೆ ಕೊಟ್ಟು ನಡೆಸಿಕೊಳ್ಳಬೇಕಿತ್ತು ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಅವರು ಹೇಳಿದರು.

ದಾವಣಗೆರೆಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ನಿಖಿಲ್ ಕುಮಾರಸ್ವಾಮಿಯವರು ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದರು.

ವಾಸ್ತವ ಸ್ಥಿತಿಯನ್ನ ಮುಂದಿಟ್ಟು ರಾಜಣ್ಣ ಅವರು ಹೇಳಿದ್ದಾರೆ.ವಿಧಾನಸಭೆ ಚುನಾವಣೆ ವೇಳೆ 136 ಕ್ಷೇತ್ರ ಗೆದ್ದಿದ್ರು ಆಗ ರಾಹುಲ್ ಗಾಂಧಿ ಅವರು ಕೇಳಲಿಲ್ಲ. ಈಗ ಲೋಕಸಭೆ ಚುನಾವಣೆಯಲ್ಲಿ ಕಡಿಮೆ ಸೀಟ್ ಬಂದಾಗ ಪ್ರಶ್ನೆ ಮಾಡ್ತಿದ್ದಾರೆ. ರಾಹುಲ್ ಗಾಂಧಿಯವರಿಗೆ ಸ್ಪಷ್ಟತೆ ಇಲ್ಲ, ರಾಜಣ್ಣರ ವಜಾ ಮಾಡಿದ್ರೆ ಏನಾಗುತ್ತೆ.? ಎಂದು ನಿಖಿಲ್ ಕುಮಾರಸ್ವಾಮಿ ಅವರು ಗುಡುಗಿದರು.

136 ಸ್ಥಾನ ಕಾಂಗ್ರೆಸ್ ಗೆದ್ದಾಗ ರಾಹುಲ್ ಗಾಂಧಿಗೆ ಸರಿ ಇತ್ತಾ.? ಸಂಸತ್ ಚುನಾವಣೆಯಲ್ಲಿ ಹಿನ್ನಡೆಯಾದಾಗ ಮತಗಳ್ಳತನದ ಬಗ್ಗೆ ಆರೋಪ ಮಾಡಿ ಯಾರೋ ಬರೆದುಕೊಟ್ಟ ಸ್ಕ್ರಿಪ್ಟ್ ನನ್ನ ಓದಿ, ಘೋಷಣಾ ಪತ್ರಕ್ಕೆ ಸಹಿ ಹಾಕದೆ ಹೋಗಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಪ್ರಜಾಪ್ರಭುತ್ವ ಅನ್ನೋದು ಕಾಂಗ್ರೆಸ್ ಪಕ್ಷದ ಚೌಕಟ್ಟಿನಲ್ಲಿ ಇದೆಯೇ?

ಪ್ರಜಾಪ್ರಭುತ್ವ ಅನ್ನೋದು ಕಾಂಗ್ರೆಸ್ ಪಕ್ಷದ ಚೌಕಟ್ಟಿನಲ್ಲಿ ಇದೆಯೇ? ಕಾಂಗ್ರೆಸ್ ಕೇಂದ್ರದ ನಾಯಕರ ಬಗ್ಗೆ ಜನ ಚರ್ಚೆ ಮಾಡುತ್ತಿದ್ದಾರೆ. ಭ್ರಷ್ಟಾಚಾರ ಆರೋಪಿತ ಮಂತ್ರಿಗಳ ವಜಾಗೊಳಿಸುವ ವಿಚಾರ ಬರಲಿಲ್ಲ. ರಾಜಣ್ಣ ಅವರು ಹೇಳಿದ ವಿಚಾರದಲ್ಲಿ ವಾಸ್ತವ ಸ್ಥಿತಿ ಮಾತನಾಡಿದ್ದಾರೆ ಎಂದು ಹೇಳಿದರು.

ಸಂವಿಧಾನ, ಪ್ರಜಾಪ್ರಭುತ್ವದ ಬಗ್ಗೆ ಭಾಷಣ ಮಾಡುವ ರಾಹುಲ್ ಗಾಂಧಿ ಅವರು ಪರಿಶಿಷ್ಟ ಸಮುದಾಯದವರಿಗೆ ಕೊಡುವ ಗೌರವ ಇದೇನಾ.? ರಾಜಣ್ಣ ಅವರು ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು. ಅವರ ಹಿರಿತನಕ್ಕೆ ಕಾಂಗ್ರೆಸ್ ಬೆಲೆ ಕೊಟ್ಟು ನಡೆಸಿಕೊಳ್ಳಬೇಕಿತ್ತು ಎಂದು ವಾಗ್ದಾಳಿ ನಡೆಸಿದರು.

ಕೆ.ಎನ್.ರಾಜಣ್ಣ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು.ಗೌರವಿತವಾಗಿ ರಾಜೀನಾಮೆ ಕೇಳುವ ಪ್ರಕ್ರಿಯೆ ಮಾಡಬಹುದಿತ್ತು. ವಜಾಗೊಳಿಸಿ ಮುಜುಗುರಕ್ಕೀಡು ಮಾಡಿ ಅವರ ಗೌರವಕ್ಕೆ ಧಕ್ಕೆ ಮಾಡಿದ್ದಾರೆ. ಈ ಬಗ್ಗೆ ಪಕ್ಷಾತೀತವಾಗಿ ಚರ್ಚೆ ಆಗ್ತಿದೆ ಎಂದು ಹೇಳಿದರು.

ಪರಿಶಿಷ್ಟ ಸಮುದಾಯದ ರಾಜಣ್ಣಗೆ ಆಗಿರುವ ಮುಜುಗರ, ಅಗೌರವ ಇದನ್ನು ಕಾಂಗ್ರೆಸ್ ರಾಜ್ಯ ಕೇಂದ್ರ ನಾಯಕರು ಪ್ರಶ್ನೆ ಮಾಡಬೇಕು ಎಂದ ನಿಖಿಲ್ ಕುಮಾರಸ್ವಾಮಿ ಪ್ರಶ್ನಿಸಿದರು.

ಬಿಬಿಎಂಪಿ ಸೇರಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿ ಜೆಡಿಎಸ್ ಮೈತ್ರಿ ಗಟ್ಟಿಯಾಗಿ ಮುಂದುವರಿಯುತ್ತೆ

ಬಿಬಿಎಂಪಿ ಸೇರಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿ ಜೆಡಿಎಸ್ ಮೈತ್ರಿ ಮುಂದುವರಿಕೆಯಾಗುತ್ತೆ.
ಬದಲಾವಣೆ ವ್ಯಕ್ತಿತ್ವ ದೇವೇಗೌಡರ ಬಳಿ ಇಲ್ಲ. ಪ್ರಧಾನಿ ಮೋದಿ ಕಳೆದ 11 ವರ್ಷಗಳಲ್ಲಿ ನೀಡಿದ ಆಡಳಿತ ಮೆಚ್ಚಿ ಮೈತ್ರಿಯಾಗಿದೆ. ಬಿಬಿಎಂಪಿ ಸೇರಿ ಯಾವುದೇ ಚುನಾವಣೆ ಇರಲಿ ನಮ್ಮ ಮೈತ್ರಿ ಗಟ್ಟಿಯಾಗಿ ಮುಂದುವರಿಯುತ್ತೆ ಎಂದು ತಿಳಿಸಿದರು.

ಧರ್ಮಸ್ಥಳ ಅರಣ್ಯದಲ್ಲಿ ಶವ ಹೂತಿಟ್ಟ ಆರೋಪ ಪ್ರಕರಣಕ್ಕೆ ಮಾತನಾಡಿದ ಅವರು; ಅನಾಮಿಕ ದೂರಿನ ಮೇರೆಗೆ ಎಸ್‌ಐಟಿ ಸ್ಥಳ ಪರಿಶೀಲನೆ ಬಗ್ಗೆ ನೋಡ್ತಿದೀವಿ. ತನಿಖೆ ಬಳಿಕ ಔಟ್‌ಕಮ್ ಏನು ಬರುತ್ತೆ ಆಮೇಲೆ ಚರ್ಚೆ ಮಾಡಬಹದು. ಎಸ್‌ಐಟಿ ತನಿಖೆಯಲ್ಲಿ ಏನು ಸಿಕ್ಕಿದೆ ಗೊತ್ತಿಲ್ಲ. ಇದು ಸೂಕ್ಷ್ಮ ವಿಚಾರ, ತನಿಖೆ ಪೂರ್ಣಗೊಂಡ ಬಳಿಕ ಪ್ರತಿಕ್ರಿಯಿಸೋದು ಒಳ್ಳೆಯದು ಎಂದು ಹೇಳಿದರು.

ದಿ‌.ವಿಷ್ಣುವರ್ಧನ್ ಸಮಾಧಿ ನೆಲಸಮ ವಿಚಾರಕ್ಕೆ ಪ್ರತಿಕ್ರಿಯೆಸಿದ ಅವರು. ಡಾ. ವಿಷ್ಣುವರ್ಧನ್ ಅವರು ಕನ್ನಡದ ಮೇರುನಟ. ಇತ್ತೀಚಿನ ಬೆಳವಣಿಗೆ ಹೀಗೆ ಆಗಬಾರದಿತ್ತು. ಈ ವಿಚಾರವಾಗಿ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸುತ್ತೇನೆ ಎಂದು ತಿಳಿಸಿದರು.

ರಾಜಕೀಯ

ಒಂದು ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

ಒಂದು ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

“ಕೇಂದ್ರ ಪರಿಸರ ಇಲಾಖೆಯವರು ದಂಡ ಹಾಗೂ ಮಿಟಿಗೇಷನ್ ಪ್ಲಾನ್ ಸೇರಿ 257 ಕೋಟಿ ರೂಪಾಯಿ ಹಣ ಸಂದಾಯ ಮಾಡಬೇಕು ಎಂದು ಸೂಚಿಸಿದ್ದಾರೆ. ಇಂದೇ ಈ ಹಣ ಪಾವತಿ ಮಾಡಿ ಎಂದು ಮಾರ್ಗದರ್ಶನ ನೀಡಿದ್ದೇನೆ. ಕಟ್ಟಿದ

[ccc_my_favorite_select_button post_id="121560"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]