ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಶಾಲೆಯಾದ ಎಂಎಸ್‌ವಿ ಪಬ್ಲಿಕ್ ಶಾಲೆಯ (MSV Public School) ವಿದ್ಯಾರ್ಥಿಗಳು CBSE ದಕ್ಷಿಣ ವಲಯ ವಿಭಾಗದ ಅಂತರಶಾಲಾ ಟೇಕ್ವಾಂಡೋ ಸ್ಪರ್ಧೆಯಲ್ಲಿ ಭಾಗವಹಿಸಿ, ಪ್ರತಿಸ್ಪರ್ಧಿಗೆ ತೀವ್ರ ಪೈಪೋಟಿಯನ್ನು ನೀಡುವುದರ ಮೂಲಕ ಬೆಳ್ಳಿಯ ಪದಕಗಳನ್ನು ಮುಡಿಗೇರಿಸಿಕೊಂಡಿದ್ದಾರೆ.
17 ವರ್ಷದೊಳಗಿನ ವಿದ್ಯಾರ್ಥಿಗಳ ವಿಭಾಗದಲ್ಲಿ ಮಕ್ಕಳ ಸಾಧನೆ ಗಮನಾರ್ಹವಾಗಿದ್ದು, 41-45 KG ವಿಭಾಗದಲ್ಲಿ ಪಾಲ್ಗೊಂಡಿದ್ದ ತ್ರಿಶ್‍ವಂತ್ ರೆಡ್ಡಿ ಸಿ., 32-35 KG ವಿಭಾಗದಲ್ಲಿ ಪಾಲ್ಗೊಂಡಿದ್ದ ಹರ್ಷಿತಾ ಎಂ ಅವರು ಬೆಳ್ಳಿ ಪದಕಗಳನ್ನು ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಮಹಾರಾಷ್ಟ್ರದ ಪುಣೆಯಲ್ಲಿ ಆಯೋಜಿಸಲಾಗಿದ್ದ CBSE ಕ್ರೀಡಾ ಕೂಟದಲ್ಲಿ ಸುಮಾರು 270 ಶಾಲೆಗಳ 3000 ಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಬೆಳ್ಳಿ ಪದಕ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳು ಹಾಗೂ ಟೇಕ್ವಾಂಡೋ ತರಬೇತುದಾರ ಪರಮೇಶ್ವರ್ ಅವರನ್ನು ಶಾಲೆಯ ಅಧ್ಯಕ್ಷ ಎ.ಸುಬ್ರಮಣ್ಯ, ಪ್ರಾಂಶುಪಾಲರಾದ ರೆಮ್ಯ.ಬಿ.ವಿ. ಹಾಗೂ ಶಿಕ್ಷಕವೃಂದ ಅಭಿನಂದನೆ ಸಲ್ಲಿಸಿದ್ದಾರೆ.