ಬೆಂಗಳೂರು: ಧರ್ಮಸಳ ಕುರಿತು ಅಪಪ್ರಚಾರ ನಡೆಸಲಾಗುತ್ತಿದೆ ಎಂದು ಬಿಜೆಪಿ ಶಾಸಕ ಎಸ್. ಆರ್.ವಿಶ್ವನಾಥ್ ನೇತೃತ್ವದಲ್ಲಿ ಶನಿವಾರ ‘ಧರ್ಮಸ್ಥಳ ಚಲೋ’ ಅಭಿಯಾನಕ್ಕೆ (Dharmasthala Chalo campaign) ಚಾಲನೆ ನೀಡಲಾಗಿದೆ.
ಬೆಳಗ್ಗೆ 6.30ಕ್ಕೆ ಯಲಹಂಕದ ಸಿಂಗನಾಯಕನಹಳ್ಳಿಯ ನಿತ್ಯೋತ್ಸವದ ಬಳಿ ವಾಹನಗಳಿಗೆ ಶಾಸಕ ಎಸ್. ಆರ್.ವಿಶ್ವನಾಥ್ ಚಾಲನೆ ನೀಡಿದರು.
ಸುಮಾರು 400ಕ್ಕೂ ಹೆಚ್ಚು ವಾಹನಗಳಲ್ಲಿ ಯಲಹಂಕ ಕ್ಷೇತ್ರದ ಭಕ್ತರೊಂದಿಗೆ ವಿಶ್ವನಾಥ್ ಅವರು ಶ್ರೀಕ್ಷೇತ್ರಕ್ಕೆ ಪ್ರಯಾಣ ಆರಂಭಿಸಿದ್ದಾರೆ.
ಸಂಜೆ ಧರ್ಮಸ್ಥಳದ ಮಂಜುನಾಥನ ವಿಶೇಷ ದರ್ಶನ ಪಡೆದು ತಪ್ಪು ಮಾಡಿದವರಿಗೆ ಶಿಕ್ಷೆಯಾಗಬೇಕು ಎಂಬ ಬೇಡಿಕೆಯೊಂದಿಗೆ ಸಂಕಲ್ಪ ಮಾಡಲಿದ್ದಾರೆ.
ಬಳಿಕ ಭಾನುವಾರ ಬೆಳಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಪಕ್ಷದ ನಾಯಕ ಆರ್.ಅಶೋಕ್ ಸೇರಿ ಪಕ್ಷದ ಶಾಸಕರೊಂದಿಗೆ ಮತ್ತೊಮ್ಮೆ ಮಂಜುನಾಥನ ವಿಶೇಷ ದರ್ಶನ ಪಡೆದು ವಾಪಸಾಗಲಿದ್ದಾರೆ ಎಂದು ತಿಳಿದುಬಂದಿದೆ.

