ಬೆಂಗಳೂರು: ಕೆಂಗೇರಿ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ಕುಮಾರ ಚಂದ್ರಶೇಖರನಾಥ ಮಹಾಸ್ವಾಮೀಜಿರವರು (Sri Kumara Chandrashekaranath Swamiji) ಶುಕ್ರವಾರ ತಡರಾತ್ರಿ 12:01 ನಿಮಿಷಕ್ಕೆ ಶ್ರೀಕ್ಷೇತ್ರದಲ್ಲಿ ಭೈರವೈಕ್ಯರಾಗಿದ್ದಾರೆ (ವಿಧಿ ವಶರಾಗಿದ್ದಾರೆ).
ಆಗಸ್ಟ್ 14 ರಂದು ಕಲಬುರ್ಗಿಯ ಶರಣಬಸವೇಶ್ವರ ಸಂಸ್ಥಾನದ ಪೀಠಾಧಿಪತಿಯಾಗಿದ್ದ ಡಾ. ಶರಣಬಸವಪ್ಪ ಅಪ್ಪಾಜಿಯವರು ಇಹಲೋಕ ತ್ಯಜಿಸಿದ್ದರು. ಇದೀಗ ವಿಶ್ವ ಒಕ್ಕಲಿಗರ ಸಂಸ್ಥಾನ ಮಠದ ಶ್ರೀ ಚಂದ್ರಶೇಖರ ಸ್ವಾಮೀಜಿಗಳು ಕೂಡ ಇದೀಗ ಇಹಲೋಕ ತ್ಯಜಿಸಿರುವ ಮಾಹಿತಿ ಹೊರಬಿದ್ದಿದೆ.
ಶ್ರೀ ಮಠದ ಸ್ಥಾಪನೆ ಮಾಡಿ ಶಿಕ್ಷಣ ಕ್ಷೇತ್ರ, ಆಧ್ಯಾತ್ಮಿಕ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ ಶ್ರೀ ಚಂದ್ರಶೇಖರನಾಥ ಮಹಾಸ್ವಾಮೀಜಿರವರ ಅಂತಿಮ ದರ್ಶನವನ್ನು (ಇಂದು 16-08-2025ನೇ ಶನಿವಾರ) ಶ್ರೀಮಠದ ಆವರಣದಲ್ಲೇ ಅವಕಾಶ ಕಲ್ಪಿಸಲಾಗಿದೆ.
ಮಧ್ಯಾಹ್ನ 3 ಗಂಟೆಗೆ ವಿವಿಧ ಧಾರ್ಮಿಕ ಮುಖಂಡರು. ಪೀಠಾಧ್ಯಕ್ಷರ ನೇತೃತ್ವದಲ್ಲಿ ಭೈರವೈಕ್ಯರಾದ ಶ್ರೀಗಳ ಅಂತಿಮ ವಿಧಿ ವಿಧಾನಗಳು ನೆರವೇರಲಿದ್ದು, ಶ್ರೀಗಳ ಉತ್ತರಾಧಿಕಾರಿ ಪೀಠಾಧ್ಯಕ್ಷರಾದ ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿರವರು ಅಂತ್ಯ ಸಂಸ್ಕಾರದ ವಿಧಿ ವಿಧಾನಗಳನ್ನು ನೇರವೇರಿಸಲಿದ್ದಾರೆ ಎಂದು ತಿಳಿದು ಬಂದಿದೆ.
ಡಿಸಿಎಂ ಡಿಕೆ ಶಿವಕುಮಾರ್ ಸಿಎಂ ಆಗಬೇಕು ಎಂದು ಹೇಳಿಕೆ ನೀಡಿದ್ದ ವಿಶ್ವ ಒಕ್ಕಲಿಗರ ಸಂಸ್ಥಾನ ಮಠದ ಶ್ರೀ ಚಂದ್ರಶೇಖರ ಸ್ವಾಮೀಜಿ ಅವರು ಇದೀಗ ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಅವರು ಅನಾರೋಗ್ಯದಿಂದ ಬಳಲುತ್ತಿದ್ದು ಚಿಕಿತ್ಸೆ ಕೂಡ ಪಡೆಯುತ್ತಿದ್ದರು. ಈಗ ಅವರು ಇಂದು ಇಹಲೋಕಾ ತ್ಯಜಿಸಿದ್ದಾರೆ.