ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Darshan) ಅವರು, ಗೆಳತಿಗೆ ಅಶ್ಲೀಲ ಫೋಟೋ ಮತ್ತು ಸಂದೇಶ ಕಳುಹಿಸಿದ ವ್ಯಕ್ತಿಯೋರ್ವನ ಹತ್ಯೆ ಆರೋಪದಡಿ ಮತ್ತೆ ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದಾರೆ.
ಇತ್ತೀಚೆಗೆ ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್ (Supreme Court) ತ್ವರಿತಗತಿಯಲ್ಲಿ ಕೇಸ್ ಇತ್ಯರ್ಥಕ್ಕೆ ಸೂಚನೆ ನೀಡಿತ್ತು. ಹೀಗಾಗಿ ಫಾಸ್ಟ್ ಟ್ರ್ಯಾಕ್ ಕೋರ್ಟ್ ರಚಿಸುವಂತೆ ಸರ್ಕಾರಕ್ಕೆ ಮನವಿ ಮಾಡಲು ಪೊಲೀಸರು ತಯಾರಿ ನಡೆಸಿದ್ದಾರೆ.
ಇನ್ನೂ ನ್ಯಾಯಾಂಗ ಬಂಧನದ ಬಳಿಕ ಇದೇ ಮೊದಲ ಬಾರಿಗೆ ಅಭಿಮಾನಿಗಳಿಗೆ ದರ್ಶನ್ ಸಂದೇಶವನ್ನು ನೀಡಿದ್ದು, ಚಿತ್ರರಂಗದ ಬಗೆಗಿನ ಕಾಳಜಿಯನ್ನು ತೋರಿದ್ದಾರೆ.
ಹೌದು ಇತ್ತೀಚಿಗೆ ಚಿತ್ರಕರಣವಾದ ದಿ ಡೆವಿಲ್ ಸಿನಿಮಾದ ಕುರಿತು ದರ್ಶನ್ ಅವರು ಪತ್ನಿ ವಿಜಯಲಕ್ಷ್ಮಿ ಅವರ ಮೂಲಕ ಕಳುಹಿಸಿದ್ದಾರೆ. ಈ ಕುರಿತು ವಿಜಯಲಕ್ಷ್ಮಿ ದರ್ಶನ್ ಅವರು ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
ಎಲ್ಲರಿಗು ನಮಸ್ಕಾರ.
ನಾನು ವಿಜಯಲಕ್ಷ ದರ್ಶನ್. ನಿಮ್ಮ ಪ್ರೀತಿಯ ದರ್ಶನ್ ರವರು ನಿಮಗೆ ಕಳಿಸಿರುವ ಸಂದೇಶ.
ಕನ್ನಡ ಕಲಾಭಿಮಾನಿಗೆ ಹಾಗೂ ನನ್ನ ಸೆಲೆಬ್ರಿಟಿಗಳಿಗೆ ಈ ನಿಮ್ಮ ಪ್ರೀತಿಯ ದಾಸನ ಶಿರ ಸಾಷ್ಟಾಂಗ ನಮಸ್ಕಾರಗಳು.
ನನ್ನ ಸುಖದಲ್ಲಿ ಭಾಗಿಯಾಗಿ, ಕಷ್ಟದಲ್ಲಿ ಬೆನ್ನೆಲುಬಾಗಿ ನಿಂತ ನಿಮ್ಮ ಪ್ರೀತಿ ಅಭಿಮಾನಕ್ಕೆ ನಾನು ಜೀವನ ಪರ್ಯಂತ ಆಭಾರಿ. ನಾನು ಎಲ್ಲೆ ಇದ್ದರು ಹೇಗೆ ಇದ್ದರು ನಿಮ್ಮಗಳ ಶ್ರೇಯೋಭಿಲಾಷೆಯನ್ನೆ ಬಯಸುತ್ತೇನೆ.
ಪ್ರಸಕ್ತ ವಿದ್ಯಮಾನ ಏನೇ ಇದ್ದರು, ನನ್ನ ನಂಬಿ ಕನಸು ಕಂಡಿರುವ ನಿರ್ದೇಶಕರ ಹಾಗು ನನ್ನ ಮೇಲೆ ಕೊಟ್ಯಂತರ ಹಣ ಹೂಡಿರುವ ನಿರ್ಮಾಪಕರ ಬೆಂಬಲವಾಗಿ ನಿಲ್ಲಬೇಕಾದ್ದು ನನ್ನ ಆದ್ಯ ಕರ್ತವ್ಯ, ಹಾಗಾಗಿ ನನ್ನ ” ದಿ ಡೆವಿಲ್ ” ಚಿತ್ರದ ಎಲ್ಲಾ ಕೆಲಸ ಕಾರ್ಯಗಳು ಯಾವುದೆ ಅಡೆತಡೆಇಲ್ಲದೆ ಸಾಗಲಿ ಎಂಬುಂದು ನನ್ನ ಆಶಯ, ಹಾಗಾಗಿ ಅದಕ್ಕೆ ನನ್ನ ಸಂಪೂರ್ಣ ಸಹಕಾರವಿದೆ ಎಂದು ಈ ಮೂಲಕ ತಿಳಿಸುತ್ತೇದ್ದೇನೆ. ಹಾಗು ಇದಕ್ಕೆ ನನ್ನ ಸೆಲೆಬ್ರಿಟಿಗಳ ಸಹಮತವಿದೆಯೆಂದು ಧೃಡವಾಗಿನಂಬಿದ್ದೇನೆ.
“ಸಿನಿಮಾ ಒಂದು ಮನರಂಜನೆಯ ಮಾಧ್ಯಮ ಅದನ್ನ ಕೇವಲ ಮನರಂಜನೆಯ ದೃಷ್ಟಿಯಿಂದ ಮಾತ್ರ ನೋಡಬೇಕು.
ನಿಮ್ಮ ಪ್ರೀತಿಯ
ದಾಸ