ದೊಡ್ಡಬಳ್ಳಾಪುರ: ಮತಗಳ್ಳತನ (Vote Chori) ಹಾಗೂ ಬಿಹಾರದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ಪರಿಷ್ಕರಣೆ ಅಕ್ರಮಗಳ ವಿರುದ್ಧ ದೊಡ್ಡಬಳ್ಳಾಪುರದ ಬಸ್ ನಿಲ್ದಾಣದ ಬಳಿ ಯೂತ್ ಕಾಂಗ್ರೆಸ್ ವತಿಯಿಂದ ಶನಿವಾರ ಪ್ರತಿಭಟನೆ ನಡೆಸಲಾಯಿತು.
ಈ ವೇಳೆ ಮಾತನಾಡಿದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಯೂತ್ ಕಾಂಗ್ರೆಸ್ ಅಧ್ಯಕ್ಷ ಶರತ್ ಪಟೇಲ್, ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸಲು ನಡೆಯುತ್ತಿರುವ ಚುನಾವಣಾ ಅಕ್ರಮ, ನಕಲಿ ಮತದಾರರ ಸೇರ್ಪಡೆ ಹಾಗೂ ನ್ಯಾಯಸಮ್ಮತ ಚುನಾವಣಾ ಪ್ರಕ್ರಿಯೆಯನ್ನು ಹಾಳು ಮಾಡುವ ಪ್ರಯತ್ನಗಳ ವಿರುದ್ಧ ತೀವ್ರ ಆಕ್ರೋಶ.
ಚುನಾವಣೆ ಅಕ್ರಮಗಳನ್ನು ತಡೆದು ಪ್ರಜಾಪ್ರಭುತ್ವವನ್ನು ಕಾಪಾಡುವ ಹೋರಾಟ ಮುಂದುವರಿಯಲಿದೆ ಎಂದು ಇದೇ ವೇಳೆ ಹೇಳಿದರು.
ಪ್ರತಿಭಟನೆಯಲ್ಲಿ ಮತ ಕಳ್ಳತನದ ವಿರುದ್ಧ ಇಂದು ದೊಡ್ಡಬಳ್ಳಾಪುರದಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಪೋಸ್ಟರ್ ಅಂಟಿಸುವ ಮೂಲಕ ಕೇಂದ್ರ ಸರ್ಕಾರ ಮತ್ತು ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ನಡೆಸಿದರು
ಈ ಸಂದರ್ಭದಲ್ಲಿ ನಗರಸಭಾ ಸದಸ್ಯ ಶಿವಕುಮಾರ್ (ಶಿವಿ), ಗ್ರಾಮಾಂತರ ಬ್ಲಾಕ್ ಅಧ್ಯಕ್ಷ ರಾಕೇಶ್ ಗೌಡ ,ಪ್ರಧಾನ ಕಾರ್ಯದರ್ಶಿ ಶಿವರಾಜ್, ನಗರ ಉಪಾಧ್ಯಕ್ಷ ಮುನಿರಾಜ್, ಹರ್ಷಿತ್ ಹಾಗೂ ಅನೇಕ ಯುವ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿದರು.