Dharmasthala is not BJP's house property: DCM D.K. Shivakumar

ಧರ್ಮಸ್ಥಳ ಬಿಜೆಪಿಯವರ ಮನೆ ಆಸ್ತಿಯಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: “ಅವೈಜ್ಞಾನಿಕವಾಗಿ ನಿರ್ಮಾಣ ಮಾಡಿರುವ ಹಾಗೂ ದುರ್ಬಲಗೊಂಡಿರುವ ಕಟ್ಟಡಗಳನ್ನು ಮೊದಲು ಭದ್ರಗೊಳಿಸುವ ಕೆಲಸವಾಗಬೇಕು. ಇಂತಹ ಕಟ್ಟಡಗಳನ್ನು ಗುರುತಿಸಿ ನೋಟಿಸ್ ನೀಡುವಂತೆ ಪಾಲಿಕೆ ಅಧಿಕಾರಿಗಳಿಗೆ ಸೂಚಿಸಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ಹೇಳಿದರು.

ಧರ್ಮರಾಯಸ್ವಾಮಿ ದೇವಾಲಯದ ಬಳಿಯ ನಗರ್ತಪೇಟೆಯಲ್ಲಿ ಬೆಂಕಿ ಅವಘಡದಿಂದ ಹಾನಿಗೊಳಗಾದ ಸ್ಥಳಕ್ಕೆ ಡಿಸಿಎಂ ಶಿವಕುಮಾರ್ ಅವರು ಭಾನುವಾರ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದರು. ನಂತರ ಘಟನಾ ಸ್ಥಳ ಹಾಗೂ ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.

“ಎರಡು, ಮೂರು ಮಹಡಿಗಳನ್ನು ಕಟ್ಟುವ ಕಡೆಗಳಲ್ಲಿ ಎಂಟತ್ತು ಮಹಡಿಗಳನ್ನು ನಿರ್ಮಾಣ ಮಾಡಲಾಗಿದೆ. ಹಲವಾರು ಕಟ್ಟಡಗಳು ವಾಸಕ್ಕೆ ಯೋಗ್ಯವಿಲ್ಲದಂತಾಗಿವೆ. ಇಂತಹ ಕಟ್ಟಡಗಳನ್ನು ಹೊಡೆದು ಹಾಕುವುದು ನಂತರದ ವಿಚಾರ. ಇದರ ಬಗ್ಗೆ ಮೊದಲು ಸಮೀಕ್ಷೆ ನಡೆಸಲಾಗುವುದು.‌ ಇದು ಒಂದೇ ದಿನಕ್ಕೆ ಮುಗಿಯುವ ಕೆಲಸವಲ್ಲ. ವರ್ಷಗಟ್ಟಲೆ ಹಿಡಿಯುತ್ತದೆ. ದೆಹಲಿ, ಮುಂಬೈನಲ್ಲೂ ಇದೇ ಪರಿಸ್ಥಿತಿ ಎದುರಾಗಿದೆ. ಒಳಗೆ ಬಂದು ನೋಡಿದಾಗ ನನಗೆ ಗಾಬರಿಯಾಯಿತು. ಇಂತಹ ಇಕ್ಕಟ್ಟಿನ ಜಾಗದಲ್ಲಿ ಬೆಂಕಿ ಅವಘಡ ನಡೆದರೆ ಜನ ಓಡಿ ಹೋಗುತ್ತಾರೆ, ಆಗ ಕಾಲ್ತುಳಿತ ಉಂಟಾಗಿಯೇ ಜನ ಸಾಯುತ್ತಾರೆ” ಎಂದರು.

ಮೃತರಿಗೆ ತಲಾ ಐದು ಲಕ್ಷ ಪರಿಹಾರ

“ನಿರ್ಲಕ್ಷ್ಯ ವಹಿಸಿರುವ ಕಟ್ಟಡ ಮಾಲೀಕರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗಿದೆ.‌ ಅವಘಡ ನಡೆದ ಕಟ್ಟಡದ ಮಾಲೀಕರನ್ನೂ ಸಹ ಬಂಧಿಸಲಾಗಿದೆ. ಸೂಕ್ತ ಕಾನೂನು ಕ್ರಮ ಜರುಗಿಸಲು ಪೊಲೀಸರಿಗೆ ಮುಕ್ತ ಅವಕಾಶ ನೀಡಲಾಗಿದೆ. ಅವಘಡದಲ್ಲಿ ಮೃತಪಟ್ಟ ಪ್ರತಿ ವ್ಯಕ್ತಿಗಳ ಕುಟುಂಬಸ್ಥರಿಗೆ ರೂ. 5 ಲಕ್ಷ ಪರಿಹಾರ ನೀಡಲು ಸರ್ಕಾರ ತೀರ್ಮಾನಿಸಿದೆ” ಎಂದು ತಿಳಿಸಿದರು.

“ಕೂಡಲೇ ದುರ್ಬಲ ಕಟ್ಟಡಗಳನ್ನು ಕೆಡವಲು ಹೋಗುವುದಿಲ್ಲ. ಮಾಲೀಕರು ಕೂಡಲೇ ದುರಸ್ಥಿಗೆ ಒಳಪಡಿಸಬೇಕು. ಇಲ್ಲದಿದ್ದರೆ ಕ್ರಮ ತೆಗೆದುಕೊಳ್ಳುತ್ತೇವೆ. ಏಕೆಂದರೆ ದುರ್ಬಲಗೊಂಡಿರುವ ಕಟ್ಟಡಗಳು ಕುಸಿತವಾಗಿ ದೊಡ್ಡ ಸಮಸ್ಯೆ ಎದುರಾಗುವುದು ಬೇಡ. ಭವಿಷ್ಯದಲ್ಲಿ ಈ ರೀತಿಯಾಗಿ ಕಟ್ಟಡಗಳ ನಿರ್ಮಾಣಕ್ಕೆ ಯಾವುದೇ ಕಾರಣಕ್ಕೂ ಅನುಮತಿ ನೀಡುವುದಿಲ್ಲ” ಎಂದು ಹೇಳಿದರು.

ಶೇ.70 ರಷ್ಟು ಕಟ್ಟಡಗಳು ಅಕ್ರಮ

ಅಕ್ರಮ ಕಟ್ಟಡ ನಿರ್ಮಾಣದ ಬಗ್ಗೆ ಕೇಳಿದಾಗ, “ನಗರದಲ್ಲಿ ಶೇ.70 ರಷ್ಟು ಕಟ್ಟಡ ನಿರ್ಮಾಣ ಅಕ್ರಮವಾಗಿದೆ. ನೂತನ ಬಿಡಿಎ ಲೇಔಟ್ ಗಳಲ್ಲಿ ಸಾಮರ್ಥ್ಯಕ್ಕಿಂತ ಹೆಚ್ಚು ಮಹಡಿ ನಿರ್ಮಾಣ ಮಾಡುತ್ತಿದ್ದಾರೆ. ಅದಕ್ಕೆ ಈಗ ಸುಪ್ರೀಂ ಕೋರ್ಟ್ ತೀರ್ಪು ವಾಸಯೋಗ್ಯ ಪ್ರಮಾಪತ್ರವಿಲ್ಲದೇ ನೀರು, ವಿದ್ಯುತ್ ಸಂಪರ್ಕ ನೀಡಬಾರದು ಎಂದು ಮಾರ್ಗದರ್ಶನ ನೀಡಿದೆ. ಈ ಕಾರಣಕ್ಕೆ 4 ಲಕ್ಷ ಸಂಪರ್ಕಗಳನ್ನು ನಿಲ್ಲಿಸಲಾಗಿದೆ. 30/40 ಅಳತೆಯ ಎರಡು ಮಹಡಿಯ ಕಟ್ಟಡಗಳಿಗೆ ವಿನಾಯಿತಿ ನೀಡಬೇಕು ಎನ್ನುವ ವಿಚಾರವನ್ನು ಕ್ಯಾಬಿನೆಟ್ ಮುಂದೆ ತರಲಾಗುವುದು. ಸಂಪುಟ ಸಹೋದ್ಯೋಗಿಗಳು ಏನು ಹೇಳುತ್ತಾರೊ ನೋಡೋಣ” ಎಂದರು.

ಚಿಕ್ಕಪೇಟೆ, ನಗರ್ತಪೇಟೆ ಇವುಗಳು ಹೆಸರಿಗೆ ವಾಸಸ್ಥಳಗಳು, ಆದರೆ ವ್ಯಾಪಾರಿ ಕೇಂದ್ರಗಳಾಗಿ ಬದಲಾಗಿವೆ ಎಂದು ಕೇಳಿದಾಗ, “ಜನರ ಬಡತನದ ಬದುಕು. ಅಗ್ನಿಶಾಮಕ ನಿಯಮದ ಪ್ರಕಾರ ಹೋದರೆ ಎಲ್ಲಾ ಕಟ್ಟಡಗಳನ್ನು ಒಡೆದು ಹಾಕಬೇಕಾಗುತ್ತದೆ” ಎಂದರು.

“ಅನೇಕ ಕಟ್ಟಡಗಳ ಮೇಲ್ಬಾಗಕ್ಕೆ ಹತ್ತಲು ಸಹ ಆಗುತ್ತಿಲ್ಲ. ಶಾರ್ಟ್ ಸರ್ಕೀಟ್ ಆದ ಕಾರಣಕ್ಕೆ ಬೆಂಕಿ ಹೊತ್ತುಕೊಂಡು ಸಾವನ್ನಪ್ಪಿದ್ದಾರೆ. ಮೃತರೆಲ್ಲಾ ರಾಜಸ್ಥಾನ ಮೂಲದವರು.‌ ಎಲ್ಲಿಯವರು ಆದರೇನು ಬದುಕು ಕಟ್ಟಿಕೊಳ್ಳಲು ಇಲ್ಲಿಗೆ ಬಂದಿದ್ದರು” ಎಂದರು.

“ಎರಡು ದಿನಗಳ ಹಿಂದೆ ಸಿಲಿಂಡರ್ ಸ್ಪೋಟಗೊಂಡು ಮನೆ ಹಾನಿಯಾಗಿದೆ, ಜನರ ಗಾಯಗೊಂಡಿದ್ದಾರೆ. ಬೆಂಕಿಗೆ ಸಿಲುಕಿ ಐದು ಮಂದಿ ಸತ್ತಿದ್ದಾರೆ. ಬಾಡಿಗೆಗಾಗಿ ಹೀಗೆ ಕಟ್ಟಡಗಳನ್ನು ನಿರ್ಮಾಣ ಮಾಡಿರುವುದೇ ಇದೆಲ್ಲದಕ್ಕೂ ಕಾರಣ.‌‌ ಇದು ಸರಿಯಲ್ಲ” ಎಂದರು.

ಧರ್ಮಸ್ಥಳ ಬಿಜೆಪಿಯವರ ಮನೆ ಆಸ್ತಿಯಲ್ಲ

ಬಿಜೆಪಿಯವರು ಧರ್ಮಸ್ಥಳ ಯಾತ್ರೆ ಮಾಡುತ್ತಿರುವ ಬಗ್ಗೆ ಕೇಳಿದಾಗ, “ಇದು ರಾಜಕೀಯದ ಯಾತ್ರೆ. ಧರ್ಮದ ಯಾತ್ರೆಯಲ್ಲ.‌ ಧರ್ಮಸ್ಥಳ ಬಿಜೆಪಿಯವರ ಮನೆ ಆಸ್ತಿಯಲ್ಲ. ಸಾರ್ವಜನಿಕರ ಸ್ವತ್ತು” ಎಂದರು.

ರಾಜಕೀಯ

ಧರ್ಮಸ್ಥಳದ ವಿಚಾರದಲ್ಲಿ ಮಧ್ಯಂತರ ವರದಿಯಿಂದ ಗೊಂದಲಕ್ಕೆ ತೆರೆ: ಬಿ.ವೈ. ವಿಜಯೇಂದ್ರ

ಧರ್ಮಸ್ಥಳದ ವಿಚಾರದಲ್ಲಿ ಮಧ್ಯಂತರ ವರದಿಯಿಂದ ಗೊಂದಲಕ್ಕೆ ತೆರೆ: ಬಿ.ವೈ. ವಿಜಯೇಂದ್ರ

ಶ್ರೀ ಕ್ಷೇತ್ರ ಧರ್ಮಸ್ಥಳದ (Dharmasthala) ವಿಚಾರದಲ್ಲಿ ಮಧ್ಯಂತರ ವರದಿಯನ್ನೂ ಒಳಗೊಂಡಂತೆ ಗೊಂದಲಕ್ಕೆ ಗೃಹ ಸಚಿವರು ತೆರೆ ಎಳೆಯುವ ವಿಶ್ವಾಸದಲ್ಲಿ ನಾವು ಇದ್ದೇವೆ: ಬಿ.ವೈ.ವಿಜಯೇಂದ್ರ (B.Y. Vijayendra)

[ccc_my_favorite_select_button post_id="112771"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ಡಿ.ಕ್ರಾಸ್ ಹಾಗೂ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಸ್ತೆಯಲ್ಲಿನ ಅಂಗಡಿಗಳಲ್ಲಿ ಪದೇ ಪದೇ ಕಳ್ಳತನ ಪ್ರಕರಣಗಳು (Shops robbed) ನಡೆಯುತ್ತಿದ್ದು, ವ್ಯಾಪಾರಿಗಳನ್ನು ಚಿಂತೆಗೀಡುಮಾಡಿದೆ.

[ccc_my_favorite_select_button post_id="112687"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!