B.Y. Vijayendra strongly objects to the continuous propaganda regarding Sri Kshetra Dharmasthala

ಶ್ರೀ ಕ್ಷೇತ್ರ ಧರ್ಮಸ್ಥಳದ ಕುರಿತು ನಿರಂತರ ಅಪಪ್ರಚಾರಕ್ಕೆ ಬಿ.ವೈ. ವಿಜಯೇಂದ್ರ ತೀವ್ರ ಆಕ್ಷೇಪ

ಮಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳದ ಕುರಿತು ನಿರಂತರ ಅಪಪ್ರಚಾರ ನಡೆದಿದ್ದು, ಅವುಗಳಿಗೆ ಕಡಿವಾಣ ಹಾಕಲು ಸರಕಾರ ಮುಂದಾಗಿಲ್ಲ, ಈ ನಿಟ್ಟಿನಲ್ಲಿ ಮುಖ್ಯಮಂತ್ರಿಗಳು ರಾಜ್ಯದ ಜನತೆಯ ಕ್ಷಮೆ ಕೇಳಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (B.Y. Vijayendra) ಅವರು ಆಗ್ರಹಿಸಿದ್ದಾರೆ.

ಧರ್ಮಸ್ಥಳದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಬಿಜೆಪಿ ಈ ವಿಷಯದಲ್ಲಿ ರಾಜಕಾರಣ ಮಾಡುತ್ತಿಲ್ಲ, ಶ್ರೀ ಕ್ಷೇತ್ರ ಧರ್ಮಸ್ಥಳ, ದೇವರು, ಅಣ್ಣಪ್ಪ ಸ್ವಾಮಿ ಬಗ್ಗೆ ಅಪಪ್ರಚಾರ ಮಾಡಿದ್ದಾರೆ. ಅಸಂಖ್ಯಾತ ಭಕ್ತರಲ್ಲಿ ಗೊಂದಲ ಸೃಷ್ಟಿಸುವ ಷಡ್ಯಂತ್ರವೂ ನಡೆದಿದೆ ಎಂದು ತಿಳಿಸಿದರು.

ಎಡಪಂಥೀಯರ ಗುಂಪುಗಳ ಒತ್ತಡಕ್ಕೆ ಮಣಿದು ಎಸ್‍ಐಟಿ ರಚಿಸಿದ್ದಾರೆ ಎಂಬ ಮಾಹಿತಿಯನ್ನು ಸಚಿವ ದಿನೇಶ್ ಗುಂಡೂರಾವ್ ಅವರೇ ಹೇಳಿದ್ದಾರೆ ಎಂದು ಮಾಧ್ಯಮಗಳ ಗಮನಕ್ಕೆ ತಂದರು.

ಧರ್ಮಸ್ಥಳದ ಬಗ್ಗೆ ಇನ್ನೆಷ್ಟು ಅಪಪ್ರಚಾರ ನಡೆಯಬೇಕು ಎಂದು ಅವರು ಪ್ರಶ್ನೆಯನ್ನು ಮುಂದಿಟ್ಟರು. ಈ ಅಪಪ್ರಚಾರದ ಹಿಂದಿನ ಶಕ್ತಿಗಳ ಕುರಿತು ಸರಕಾರ ತನಿಖೆ ನಡೆಸಬೇಕಿದೆ ಎಂದು ಒತ್ತಾಯಿಸಿದರು.

ಪ್ರಶ್ನೆಗೆ ಉತ್ತರ ಕೊಟ್ಟ ಅವರು, ನಾನೂ ಧರ್ಮಸ್ಥಳ ಮಂಜುನಾಥೇಶ್ವರನ ಪರಮ ಭಕ್ತ ಎಂದು ಡಿ.ಸಿ.ಎಂ ಡಿ.ಕೆ.ಶಿವಕುಮಾರ್ ಅವರು ಮೊನ್ನೆ ಸದನದಲ್ಲೂ ಹೇಳಿದ್ದಾರೆ. ಅವರು ನಿಜಕ್ಕೂ ಪರಮ ಭಕ್ತನಾಗಿದ್ದರೆ ತಡ ಮಾಡದೇ ಪಿತೂರಿ, ಷಡ್ಯಂತ್ರದ ಹಿಂದೆ ಇರುವವರ ಬಗ್ಗೆ ಮಾಹಿತಿ ಬಹಿರಂಗಪಡಿಸಬೇಕು ಎಂದು ಆಗ್ರಹವನ್ನು ಮುಂದಿಟ್ಟರು.

ಡಿಸಿಎಂ, ಷಡ್ಯಂತ್ರವನ್ನು ಬಹಿರಂಗಪಡಿಸಬೇಕು
ನಿಷ್ಪಕ್ಷಪಾತ- ಪಾರದರ್ಶಕ ತನಿಖೆಗೆ ಬಿಜೆಪಿ ಒತ್ತಾಯಿಸಿತ್ತು. ಬಿಜೆಪಿ ರಾಜಕಾರಣ ಮಾಡಿದ್ದರೆ ಇಷ್ಟು ದಿನ ಕಾಯುವ ಅವಶ್ಯಕತೆ ಇರಲಿಲ್ಲ ಎಂದು ಇನ್ನೊಂದು ಪ್ರಶ್ನೆಗೆ ಉತ್ತರಿಸಿದರು. ಇವತ್ತು ಕೋಟ್ಯಂತರ ಭಕ್ತರು ನೋವಿನಲ್ಲಿದ್ದಾರೆ ಎಂದು ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು. ಷಡ್ಯಂತ್ರ ಎಂದಿರುವ ಉಪ ಮುಖ್ಯಮಂತ್ರಿಗಳು ಆ ಷಡ್ಯಂತ್ರವನ್ನು ಬಹಿರಂಗಪಡಿಸಬೇಕು ಎಂದು ಆಗ್ರಹಿಸಿದರು.

ಇದರ ಹಿಂದೆ ಎಡಪಂಥೀಯ ಸಂಘಟನೆಗಳಿರುವ ಕುರಿತು ಸ್ವತಃ ಸಚಿವ ದಿನೇಶ್ ಗುಂಡೂರಾವ್ ಅವರೇ ಹೇಳಿದ್ದಾರೆ. ಇದೆಲ್ಲವುಗಳ ಕುರಿತು ಸಮಗ್ರ ತನಿಖೆ ನಡೆಯಲಿ ಎಂದು ಅವರು ಮತ್ತೊಂದು ಪ್ರಶ್ನೆಗೆ ಉತ್ತರ ಕೊಟ್ಟರು. ತನಿಖೆÀ ಕುರಿತು ಮಧ್ಯಂತರ ವರದಿಯನ್ನು ರಾಜ್ಯ ಸರಕಾರ ಮಂಡಿಸಬೇಕೆಂದು ಸದನದಲ್ಲೂ ಆಗ್ರಹಿಸಿದ್ದೇವೆ ಎಂದು ಗಮನ ಸೆಳೆದರು. ಹುಚ್ಚಾಟ ನಿಲ್ಲಿಸಿ ಎಂದು ಅವರು ಒತ್ತಾಯಿಸಿದರು.

ಅಪಪ್ರಚಾರದಿಂದ ನೊಂದಿರುವ ಧರ್ಮಾಧಿಕಾರಿಗಳು

ತನಿಖೆ ವಿಚಾರದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರದಿಂದ ಶ್ರೀ ಕ್ಷೇತ್ರದ ಧರ್ಮಾಧಿಕಾರಿಗಳು ನೊಂದಿರುವುದು ಗೊತ್ತಾಗುತ್ತದೆ ಎಂದು ಅವರು ಇನ್ನೊಂದು ಪ್ರಶ್ನೆಗೆ ಉತ್ತರ ನೀಡಿದರು. ಹಿಂದೂ ಧರ್ಮ, ಪರಂಪರೆ, ಸಂಸ್ಕøತಿಯನ್ನು ಉಳಿಸುವ ನಿಟ್ಟಿನಲ್ಲಿ ಹಾಗೂ ಶ್ರೀ ಕ್ಷೇತ್ರದ ಅಸಂಖ್ಯಾತ ಭಕ್ತರ ಭಾವನೆಗಳಿಗೆ ಧಕ್ಕೆ ಬರಬಾರದು ಎಂಬುದೇ ನಮ್ಮೆಲ್ಲರ ಮೂಲ ಉದ್ದೇಶ ಎಂದು ಅವರು ನುಡಿದರು.

ರಾಜಕೀಯ

ಧರ್ಮಸ್ಥಳದ ವಿಚಾರದಲ್ಲಿ ಮಧ್ಯಂತರ ವರದಿಯಿಂದ ಗೊಂದಲಕ್ಕೆ ತೆರೆ: ಬಿ.ವೈ. ವಿಜಯೇಂದ್ರ

ಧರ್ಮಸ್ಥಳದ ವಿಚಾರದಲ್ಲಿ ಮಧ್ಯಂತರ ವರದಿಯಿಂದ ಗೊಂದಲಕ್ಕೆ ತೆರೆ: ಬಿ.ವೈ. ವಿಜಯೇಂದ್ರ

ಶ್ರೀ ಕ್ಷೇತ್ರ ಧರ್ಮಸ್ಥಳದ (Dharmasthala) ವಿಚಾರದಲ್ಲಿ ಮಧ್ಯಂತರ ವರದಿಯನ್ನೂ ಒಳಗೊಂಡಂತೆ ಗೊಂದಲಕ್ಕೆ ಗೃಹ ಸಚಿವರು ತೆರೆ ಎಳೆಯುವ ವಿಶ್ವಾಸದಲ್ಲಿ ನಾವು ಇದ್ದೇವೆ: ಬಿ.ವೈ.ವಿಜಯೇಂದ್ರ (B.Y. Vijayendra)

[ccc_my_favorite_select_button post_id="112771"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ಡಿ.ಕ್ರಾಸ್ ಹಾಗೂ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಸ್ತೆಯಲ್ಲಿನ ಅಂಗಡಿಗಳಲ್ಲಿ ಪದೇ ಪದೇ ಕಳ್ಳತನ ಪ್ರಕರಣಗಳು (Shops robbed) ನಡೆಯುತ್ತಿದ್ದು, ವ್ಯಾಪಾರಿಗಳನ್ನು ಚಿಂತೆಗೀಡುಮಾಡಿದೆ.

[ccc_my_favorite_select_button post_id="112687"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!