ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪೊಲೀಸ್ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಗೌರಿ ಗಣೇಶ (Gauri Ganesha) ಮತ್ತು ಈದ್ ಮಿಲಾದ್ (Eid Milad) ಹಬ್ಬದ ಹಿನ್ನೆಲೆಯಲ್ಲಿ ಇಂದು (ಆ.18) ಮಧ್ಯಾಹ್ನ 3:30ಕ್ಕೆ ನಗರದ ಕೆಸಿಪಿ ಸರ್ಕಲ್ ಬಳಿ ಇರುವ ಕಲ್ಯಾಣ ಮಂಟಪದಲ್ಲಿ ಶಾಂತಿ ಸಭೆಯನ್ನು (Peace meeting) ಆಯೋಜಿಸಲಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ ಬಾಬಾ, ಡಿವೈಎಸ್ ಪಿ ರವಿ.ಪಿ, ಉಪವಿಭಾಗಾಧಿಕಾರಿ ದುರ್ಗಾಶ್ರೀ, ತಹಶೀಲ್ದಾರ್ ವಿಭಾ ವಿದ್ಯಾ ರಾಥೋಡ್ ಸೇರಿದಂತೆ ದೊಡ್ಡಬಳ್ಳಾಪುರ ಉಪವಿಭಾಗದ ವ್ಯಾಪ್ತಿಯ ಪೊಲೀಸ್ ಠಾಣೆಗಳ ಇನ್ಸ್ ಪೆಕ್ಟರ್ ಗಳು, ನಗರಸಭೆ ಪೌರಾಯುಕ್ತ ಸೇರಿದಂತೆ ವಿವಿಧ ಇಲಾಖಾಧಿಕಾರಿಗಳು ಹಾಗೂ ಸಿಬ್ಬಂದಿ ಭಾಗವಹಿಸಲಿದ್ದಾರೆ.
ಹಬ್ಬಗಳ ಆಚರಣೆ ವೇಳೆ ಕಾನೂನು ಸುವ್ಯವಸ್ಥೆ ಪಾಲನೆ, ಶಾಂತಿ- ಸೌಹಾರ್ದಯುತ ಆಚರಣೆಗೆ ಸಲಹೆ, ಪಿಒಪಿ ಗಣೇಶ ಮೂರ್ತಿ ನಿಷೇಧ, ಅನುಮತಿ ಕುರಿತು ಮಾಹಿತಿ ನೀಡುವ ಸಾಧ್ಯತೆ ಇದೆ. (ಸಾಂದರ್ಭಿಕ ಚಿತ್ರ ಬಳಸಲಾಗಿದೆ)