Dharmasthala case: Serious discussion in the assembly

ಧರ್ಮಸ್ಥಳ ಪ್ರಕರಣ: ವಿಧಾನಸಭೆ ಅಧಿವೇಶನದಲ್ಲಿ ಮಹತ್ವದ ಚರ್ಚೆ.. ಗದ್ದಲ

ಬೆಂಗಳೂರು: ಧರ್ಮಸ್ಥಳ (Dharmasthala) ಸುತ್ತಮುತ್ತಲು ನೂರಾರು ಶವಗಳನ್ನು ಹೂತಿಟ್ಟ ಆರೋಪ ಪ್ರಕರಣ ಸಂಬಂಧದ ಚರ್ಚೆ ಇಂದು ಸದನದ ಕಲಾಪದಲ್ಲಿ ತೀವ್ರ ಚರ್ಚೆ ನಡೆಯಿತು.

ತನಿಖೆಯ ಮಧ್ಯಂತರ ವರದಿ ಕುರಿತಾಗಿ ವಿಪಕ್ಷನಾಯಕ, ಸದನದ ಸದಸ್ಯರು ಸರ್ಕಾರ ಉತ್ತರಿಸಬೇಕು ಎಂಬ ಒತ್ತಾಯಕ್ಕೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಉತ್ತರಿಸಿದರು.

ವ್ಯಕ್ತಿಯೋರ್ವ ಶವಗಳನ್ನು ಹೂಳಲಾಗಿದೆ ಎಂದು ಧರ್ಮಸ್ಥಳ ಪೊಲೀಸ್ ಠಾಣೆ ದೂರಿನ ಬಳಿಕ, ನ್ಯಾಯಾಧೀಶರ ಮುಂದೆ ಹಾಜರು ಪಡಿಸಲಾಯಿತು. ಅಲ್ಲದೆ ರಾಜ್ಯ ಮಹಿಳಾ ಆಯೋಗ ಮನವಿ ಮಾಡಿದ ಹಿನ್ನೆಲೆಯಲ್ಲಿ ಪ್ರಕರಣದ ತನಿಖೆಯನ್ನು ಎಸ್‌ಐಟಿ ರಚನೆ ಮಾಡಲಾಯಿತು‌.

ಎಸ್ಐಟಿ ತಂಡ ಪಾರದರ್ಶಕವಾಗಿ ನಡೆಸುತ್ತಿದೆ. ಈ ವಿಶೇಷ ತನಿಖಾ ತಂಡವನ್ನು ಯಾರ ಒತ್ತಡಕ್ಕೆ ಮಣಿದು ರಚನೆ ಮಾಡಿಲ್ಲ. ಯಾರನ್ನು ರಕ್ಷಣೆ ಅಥವಾ ದೂಷಣೆ ಮಾಡುವ ಅಗತ್ಯ ನಮ್ಮ ಸರ್ಕಾರಕ್ಕೆ ಇಲ್ಲ.

ತನಿಕೆಗೆ ವಿರೋಧ ಪಕ್ಷದವರು ಸಹಕರಿಸಬೇಕೆಂದು ಮನವಿ ಮಾಡಿದರು. ಇಡೀ ದೇಶದಲ್ಲಿ ಧರ್ಮಸ್ಥಳ ದೊಡ್ಡ ಕ್ಷೇತ್ರವಾಗಿದೆ. ಅಂತಹ ಕ್ಷೇತ್ರದ ಮೇಲೆ ಕೇಳಿ ಬಂದಿರುವ ಕಳಂಕದ ಆರೋಪದ ಬಗ್ಗೆ ತನಿಖೆ ನಡೆಯುತ್ತಿದೆ. ಸರ್ಕಾರ ಯಾವುದನ್ನೂ ಮುಚ್ಚಿಡಲ್ಲ. ಸರ್ಕಾರಕ್ಕೂ ಅದರ ಅಗತ್ಯವಿಲ್ಲ ಎಂದು ಸ್ಪಷ್ಟ ಪಡಿಸಿದರು. ಆರಂಭದಲ್ಲಿ ಎಸ್‌ಐಟಿ ತನಿಖೆ ಸ್ವಾಗತಿಸಿದ ಬಿಜೆಪಿ ಮುಖಂಡರು 15 ದಿನಗಳ ಬಳಕ ಏನಾಯ್ತು..? ಏಕೆ..? ಯಾವ ಕಾರಣಕ್ಕೆ..? ವಿರೋಧ ಪಕ್ಷಗಳ ಪ್ರಶ್ನೆಗೆ ವಸ್ತು ಸ್ಥಿತಿ ತಿಳಿಸಿದ್ದೇನೆ.

ಈಗಾಗಲೇ ಉತ್ಕನನದ ವೇಳೆ ಸಿಕ್ಕ ಅಸ್ಥಿಪಂಜರಗಳನ್ನು, ಕೆಲ ಸ್ಥಳಗಳಲ್ಲಿ ಮಣ್ಣು ಮೂಳೆಯನ್ನು ಕರಗಿಸುವಂತಿದ್ದು, ಅಲ್ಲಿನ ಮಣ್ಣನ್ನು ಸಂಗ್ರಹಿಸಿ ಎಫ್‌ಎಸ್‌ಎಲ್‌ ಪರೀಕ್ಷೆಗೆ ರವಾನಿಸಲಾಗಿದೆ. ಆ ವರದಿ ಬರುವವರೆಗೂ ಉತ್ಪನನ ನಡೆಸಲ್ಲ ಎಂದು ಎಸ್‌ಐಟಿ ತಂಡ ತೀರ್ಮಾನಿಸಿದೆ.

ಇನ್ನು ಮುಂದೆಯೂ ಅನಾಮಿಕ, ಸಾಕ್ಷಿದಾರ ಸೂಚಿಸುವ ಸ್ಥಳಗಳಲ್ಲಿ ಉತ್ಪನನ ಕಾರ್ಯ ಮುಂದುವರಿಯಬೇಕಾ ಅಥವಾ ಬೇಡವಾ ಎಂಬುವುದನ್ನು ಸರ್ಕಾರ ನಿರ್ಧರಿಸಲ್ಲ. ಅದನ್ನು ಎಸ್‌ಐಟಿ ಮಾತ್ರ ನಿರ್ಧರಿಸಲಿದೆ.

ಇನ್ನೂ ಮುಸುಕುಧಾರಿಗೆ ರಕ್ಷಣೆ ನೀಡುವಂತೆ, ವಶಕ್ಕೆ ಪಡೆಯದಂತೆ ಆದೇಶ ಇರುವ ಕಾರಣ ಆತನನ್ನು ವಶಕ್ಕೆ ಪಡೆದಿಲ್ಲ ಎಂದು ಸ್ಪಷ್ಟ ಪಡಿಸಿದರು.

ಊಟ ಬಿಟ್ಟು ಬಂದೆ: ಆರ್.ಅಶೋಕ

ಬಳಿಕ ಮಾತನಾಡಿದ ವಿರೋಧ ಪಕ್ಷದ ನಾಯಕ ಆರ್. ಅಶೋಕ ಮಾತನಾಡಿ, ಇಂದು ಪರಮೇಶ್ವರ್ ಉತ್ತರ ಕೊಡ್ತಾರೆ ಅಂತ ಊಟ ಮಾಡೋದ್ ಬಿಟ್ಟು ಬಂದೆ. ಮಾಸ್ಕ್ ಮ್ಯಾನ್ ಮ್ಯಾನ್ ನೋಡಿದರೆ ಬೆಟ್ಟ ಅಗೆದು ಇಲಿ ಕೂಡ ಸಿಕ್ಕಿಲ್ಲ. ಇಲ್ಲಿ ಪರಮೇಶ್ವರ್ ಹೇಳಿದ್ರಲ್ಲಿ ಸೊಳ್ಳೆಕೂಡ ಸಿಕ್ಕಿಲ್ಲ. ಬರೆದು ಕೊಟ್ಟಿದ್ದು ಓದಿದ್ದಾರೆ ಅಷ್ಟೇ

ಯಾರ ಒತ್ತಡಕ್ಕೂ ಮಣಿದು ತನಿಖೆಗೆ ಎಸ್‌ಐಟಿ ರಚನೆ ಮಾಡಿಲ್ಲ ಎಂದು ಗೃಹ ಸಚಿವರು ಹೇಳಿದ್ದಾರೆ. ಆದರೆ ಸಿಎಂ ಸಿದ್ದರಾಮಯ್ಯ ಅವರ ಮನೆಗೆ ಯಾರೆಲ್ಲಾ ಭೇಟಿ ನೀಡಿ ತನಿಖೆ ಆಗ್ರಹಿಸಿದ್ದರು ಎಂದು ರಾಜ್ಯದ ಜನತೆಗೆ ಗೊತ್ತಿದೆ. ತನಿಖೆ ನಡೆಯುತ್ತಿದೆ ಎಂದೀರಿ. ಉಪಮುಖ್ಯಮಂತ್ರಿಗಳೇ ಧರ್ಮಸ್ಥಳದ ಈ ಬೆಳವಣಿಗೆ ಹಿಂದೆ ದೊಡ್ಡ ಷಡ್ಯಂತ್ರ ನಡೆದಿದೆ ಎಂದಿದ್ದಾರೆ.

ಹೀಗಾಗಿ ಸತ್ಯ ಹೊರಗೆ ಬರಲಿ. ಗೃಹ ಸಚಿವರು ಸಹ ವಿವರವಾಗಿ ರಾಜ್ಯದ ಜನತೆಗೆ ಮಾಹಿತಿ ನೀಡಬೇಕಿತ್ತು ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಅವರು ಪರಮೇಶ್ವರ್ ಅವರ ಉತ್ತರಕ್ಕೆ ಅಸಮಾಧಾನ ಹೊರಹಾಕಿದರು. ಇನ್ನು ಅಶೋಕ್ ಅವರ ಮಾತಿಗೆ ಧ್ವನಿಗೂಡಿಸಿದ ಶಾಸಕ ಸುನೀಲ್ ಕುಮಾರ್ ಅವರು, ಅನಾಮಿಕನಿಗೆ ಬುರುಡೆ ಅಗೆದು ತೆಗೆಲು ಹೇಳಿದ್ಯಾರು? ಈ ಷಡ್ಯಯಂತ್ರದ ಹಿಂದೆ ಯಾರಿದ್ದಾರೆ ಎಂದು ಗೃಹ ಸಚಿವರು ಬಹಿರಂಗ ಪಡಿಸಲಿ ಎಂದು ಒತ್ತಾಯಿಸಿದರು.

ಹೆಗಡೆ ಸಹೋದರ ತನಿಖೆ ಸ್ವಾಗತಿಸಿದ್ದಾರೆ, ಬಿಜೆಪಿ ರಾಜಕೀಯ; ಬಾಲಕೃಷ್ಣ

ಈ ವೇಳೆ ಮಾತನಾಡಿದ ಶಾಸಕ ಬಾಲಕೃಷ್ಣ, ಸರ್ಕಾರ ಪ್ರಕರಣವನ್ನು ಎಸ್‌ಐಟಿ ತನಿಖೆ ಒಳಪಡಿಸಿದ ಬಳಿಕ ವೀರೇಂದ್ರ ಹೆಗಡೆ ಅವರ ಸಹೋದರ ಸಿಎಂ ಸಿದ್ದರಾಮಯ್ಯ ಅವರ ಮನೆಗೆ ಬಂದು ಧನ್ಯವಾದಗಳನ್ನು ಹೇಳಿ ಸ್ವಾಗತಿಸಿದ್ದಾರೆ.ಬಿಜೆಪಿಯವರು ಈ ವಿಚಾರದಲ್ಲಿ ರಾಜಕೀಯ ಮಾಡಲು ಮುಂದಾಗಿದ್ದಾರೆ. ಗುಂಪು ಕಟ್ಟಿಕೊಂಡು ಧರ್ಮಸ್ಥಳಕ್ಕೆ ನಾವು ಪರ, ಕಾಂಗ್ರೆಸ್ ವಿರೋಧಿಗಳು ಎಂದು ಬಿಂಬಿಸುತ್ತಿದ್ದಾರೆ. ಎಸ್‌ಐಟಿ ತನಿಖೆಗೆ ಬಿಜೆಪಿಯವರು ಅಡ್ಡಿ ಪಡಿಸುತ್ತಿದ್ದಾರೆ. ಇವರ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿದರು.

ಮಾಧ್ಯಮಗಳಿಗೆ ಸೂಚನೆ ನೀಡಿ: ಸುರೇಶ್ ಕುಮಾರ್

ಮಾಜಿ ಸಚಿವ ಸುರೇಶ್ ಕುಮಾರ್ ಮಾತನಾಡಿ, ಎಸ್‌ಐಟಿ ತನಿಖೆ ಕುರಿತು ಮಾಧ್ಯಮಗಳಲ್ಲಿ ಬೇಕಾಬಿಟ್ಟಿ ವರದಿ ಪ್ರಸಾರವಾಗುತ್ತಿದೆ. ಈ ಪ್ರಕರಣದ ತನಿಖೆ ಕುರಿತು ವರದಿ ಪ್ರಸಾರ ಮಾಡದಂತೆ ಸೂಚನೆ ನೀಡುವಂತೆ ಹೇಳಿದರು.

ರಾಜಕೀಯ

ಧರ್ಮಸ್ಥಳ ಪ್ರಕರಣ; ಸುಳ್ಳು ಆಪಾದನೆ ಮಾಡಿದವರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲು ಸಿಎಂ ಸೂಚನೆ: ಡಿಸಿಎಂ ಡಿ.ಕೆ.ಶಿವಕುಮಾರ್

ಧರ್ಮಸ್ಥಳ ಪ್ರಕರಣ; ಸುಳ್ಳು ಆಪಾದನೆ ಮಾಡಿದವರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲು ಸಿಎಂ

“ಧರ್ಮಸ್ಥಳ ವಿಚಾರದಲ್ಲಿ ಸುಳ್ಳು ಆಪಾದನೆ ಮಾಡಿದ್ದರೆ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲಾಗುವುದುʼ ಎಂದು ಶಾಸಕಾಂಗ ಸಭೆಯಲ್ಲಿ ಮುಖ್ಯಮಂತ್ರಿಯವರೇ ಭರವಸೆ ನೀಡಿದ್ದಾರೆ”; ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="112789"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ಡಿ.ಕ್ರಾಸ್ ಹಾಗೂ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಸ್ತೆಯಲ್ಲಿನ ಅಂಗಡಿಗಳಲ್ಲಿ ಪದೇ ಪದೇ ಕಳ್ಳತನ ಪ್ರಕರಣಗಳು (Shops robbed) ನಡೆಯುತ್ತಿದ್ದು, ವ್ಯಾಪಾರಿಗಳನ್ನು ಚಿಂತೆಗೀಡುಮಾಡಿದೆ.

[ccc_my_favorite_select_button post_id="112687"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!