ದೊಡ್ಡಬಳ್ಳಾಪುರ: ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ (Hit and run) ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಗರದ ರೈಲ್ವೆ ಸ್ಟೇಷನ್ ಸರ್ಕಲ್ ಬಳಿ ಇಂದು ಮುಂಜಾನೆ 5 ಗಂಟೆ ಸಮಯದಲ್ಲಿ ಘಟನೆ ನಡೆದಿದ್ದೆ.
ಮೃತ ದುರ್ದೈವಿಯನ್ನು ಬಾಲು (40 ವರ್ಷ) ಎಂದು ಗುರುತಿಸಲಾಗಿದೆ.
ಮೃತ ವ್ಯಕ್ತಿ ಹಿಂದೂಪುರ ಮೂಲದವು ಎನ್ನಲಾಗಿದ್ದು,, ಕೂಲಿ ಕಾರ್ಮಿಕನಾಗಿದ ಕೆಲಸಕ್ಕೆಂದು ಬಂದಿದ್ದ ವೇಳೆ ದುರ್ಘಟನೆ ಸಂಭವಿಸಿದೆ.
ಸ್ಥಳಕ್ಕೆ ದೊಡ್ಡಬಳ್ಳಾಪುರ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಅಪರಿಚಿತ ವಾಹನ ಡಿಕ್ಕಿ ಹೊಡೆದು ಪರಾರಿಯಾಗಿದ್ದು, ಸ್ಥಳದಲ್ಲಿರುವ ಸಿಸಿ ಕ್ಯಾಮೆರಾಗಳ ಪರಿಶೀಲನೆ ಮಾಡಿದ್ದಾಗ ಆರೋಪಿಯ ಸುಳಿವು ಪತ್ತೆಯಾಗಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.