District Collector G. Jagadish shocks wheeling Bullies

ವೀಲಿಂಗ್ ಮಾಡುವ ಪುಂಡರಿಗೆ ಜಿಲ್ಲಾಧಿಕಾರಿ ಜಿ. ಜಗದೀಶ ಶಾಕ್

ಬೆಂಗಳೂರು ನಗರ ಜಿಲ್ಲೆ: ರಸ್ತೆಗಳಲ್ಲಿ ವೀಲಿಂಗ್ (wheeling) ಮಾಡಿ ವಾಹನ ಚಲಾಯಿಸುವ ವ್ಯಕ್ತಿಗಳ ವಿರುದ್ಧ ದೂರು ದಾಖಲಿಸಿ ವಾಹನ ಪರವಾನಿಗೆಯನ್ನು ಖಾಯಂ ಆಗಿ ರದ್ದುಗೊಳಿಸಿ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ.ಜಗದೀಶ (District Collector G. Jagadish) ಅವರು ಸಾರಿಗೆ ಅಧಿಕಾರಿಗಳಿಗೆ ಸೂಚಿಸಿದರು.

ಬೆಂಗಳೂರು ನಗರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರ ಮಾತನಾಡಿದರು.

ನಗರದಲ್ಲಿ ಮಕ್ಕಳು ರಸ್ತೆ ದಾಟುವಾಗ ಆಗುವ ಅಪಘಾತಗಳು ಹೆಚ್ಚಾಗಿದ್ದು ಎಲ್ಲಾ ಶಾಲೆಗಳಲ್ಲಿ ಕಡ್ಡಾಯವಾಗಿ ರಸ್ತೆ ಸುರಕ್ಷತಾ ನಿಯಮಗಳ ಬಗ್ಗೆ ಅರಿವು ಕಾರ್ಯಕ್ರಮಗಳನ್ನು ಆಯೋಜಿಸಿ ಮಕ್ಕಳಲ್ಲಿ ರಸ್ತೆ ಅಪಘಾತ ಕುರಿತು ಜಾಗೃತಿ ಮೂಡಿಸಬೇಕು ಎಂದು ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಿಗೆ ಸೂಚಿಸಿದರು.

ಮಕ್ಕಳು ರಸ್ತೆ ದಾಟುವಾಗ ಶಾಲೆಯ ಆಯಾಗಳೊಂದಿಗೆ ದಾಟುವುದು,ಶಾಲಾ ವಾಹನಗಳನ್ನು ಓಡಿಸುವ ಚಾಲಕರನ್ನು ಕಡ್ಡಾಯ ತಪಾಸಣೆ ಹಾಗೂ ವಾಹನದಲ್ಲಿ ಸೀಮಿತ ಸಂಖ್ಯೆಗಿಂತ ಹೆಚ್ಚಿನ ಮಕ್ಕಳನ್ನು ಕೊಂಡೊಯ್ಯದಂತೆ ಶಾಲೆಗಳು ಮುಂಜಾಗ್ರತೆ ವಹಿಸಬೇಕೆಂದು ಹೇಳಿದರು.

ಅಪಘಾತ ನಿಯಂತ್ರಿಸಲು ಅಪಘಾತ ಸಂಭವಿಸುವ ಸ್ಥಳಗಳನ್ನು ಗುರುತಿಸಿ ಅಲ್ಲಿ ಬ್ಲಾಕ್ ಸ್ಪಾಟ್ (Black spots) ಸೂಚನಾ ಫಲಕಗಳನ್ನು ಅಳವಡಿಸುವಂತೆ ಸೂಚಿಸಿದರು.

ವಾರಂತ್ಯದಲ್ಲಿ ಹೆಬ್ಬಾಳ ಮೇಲ್ಸೇತುವೆ ಮತ್ತು ಕುಣಿಗಲ್ ರಸ್ತೆಗಳಲ್ಲಿ ಯುವಕರು ವೀಲಿಂಗ್ ಮಾಡುತ್ತಾ ಬೈಕ್ ಗಳನ್ನು ಚಲಾಯಿಸುತ್ತಿರುತ್ತಾರೆ ಇದರಿಂದ ಸಾರ್ವಜನಿಕರಿಗೆ ಸಂಚಾರಿಸಲು ತೊಂದರೆ ಆಗುತ್ತಿದೆ ಎಂದು ಸಾರಿಗೆ ಅಧಿಕಾರಿಗಳು ಮಾಹಿತಿ ನೀಡಿದಾಗ ಅವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ದೂರು ದಾಖಲಿಸಿ ಆರ್ ಸಿ, ಲೈಸೆನ್ಸ್ ರದ್ದುಪಡಿಸುವಂತೆ ಸೂಚಿಸಿದರು.

ಅಪಘಾತ ಸಂಭವಿಸುವ ಸ್ಥಳಗಳಿಗೆ ತಕ್ಷಣದಲ್ಲಿ ಆಂಬುಲೆನ್ಸ್ ಸೇವೆ ಒದಗಿಸಲು ಜಿಪಿಎಸ್ ಮ್ಯಾಪಿಂಗ್ ಸ್ಥಳಗಳನ್ನು ಗುರುತಿಸಲು ಅಗತ್ಯ ರಸ್ತೆ ನಕ್ಷೆ ನೀಡಬೇಕೆಂದು ಜಿಲ್ಲಾ ಆರೋಗ್ಯ ಅಧಿಕಾರಿಗಳು ಮತ್ತು ಸಾರಿಗೆ ಅಧಿಕಾರಿಗಳಿಗೆ ಸೂಚಿಸಿದ ಜಿಲ್ಲಾಧಿಕಾರಿಗಳು, ಮುಂದಿನ ಸಭೆಯಲ್ಲಿ ತಿಂಗಳಲ್ಲಿ ಸಂಭವಿಸುವ ಒಟ್ಟು ಅಪಘಾತ ನಿಯಂತ್ರಣಕ್ಕೆ ಕ್ರಿಯಾಯೋಜನೆ ಹಾಗೂ ಕೈಗೊಂಡಿರುವ ಕ್ರಮಗಳು ಬಗ್ಗೆ ಮಾಹಿತಿಯನ್ನು ಪಿಪಿಟಿಯಲ್ಲಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಇದೇ ಸಂದರ್ಭದಲ್ಲಿ ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಯೋಜನಾ ವ್ಯವಸ್ಥಾಪಕರಾದ ಶ್ರೀನಿವಾಸ್ ಗೌಡ, ಬೆಂಗಳೂರು ನಗರ ಜಿಲ್ಲಾ ಅಪರ ಜಿಲ್ಲಾಧಿಕಾರಿಗಳಾದ ಡಾ. ಜಗದೀಶ ಕೆ.ನಾಯಕ್, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಪ್ರಕಾಶ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ವಿಭಾಗೀಯ ಸಾರಿಗೆ ಅಧಿಕಾರಿಯಾದ ಪ್ರತಿಮಾ, ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಭಾಗೀಯ ಸಾರಿಗೆ ಅಧಿಕಾರಿಯಾದ ಭಾಗ್ಯಲಕ್ಷ್ಮೀ ಎಂ.

ಶಾಲಾ ಶಿಕ್ಷಣ ಇಲಾಖೆಯ ಉತ್ತರ ವಿಭಾಗದ ಉಪನಿರ್ದೇಶಕರಾದ ವಾಸು, ಶಾಲಾ ಶಿಕ್ಷಣ ಇಲಾಖೆಯ ದಕ್ಷಿಣ ವಿಭಾಗದ ಉಪನಿರ್ದೇಶಕರಾದ ಸಮೀರ್ ಪಾಷಾ, ಲೋಕೋಪಯೋಗಿ ಕಾರ್ಯಪಾಲಕ ರಾಜು, ಕರ್ನಾಟಕ ರಾಜ್ಯ ಹೆದ್ದಾರಿ ಅಭಿವೃದ್ಧಿ ನಿಗಮ ನಿಯಮಿತದ ಕಾರ್ಯಪಾಲಕ ಅಭಿಯಂತರರಾದ ಶ್ರೀಕಾಂತ್, ಬ್ಲೂಮ್ ಬರ್ಗ್ (Bloomberg) ಬಿ.ಇ.ಆರ್.ಜಿ ಸಂಸ್ಥೆಯ ಅಪರಾಜಿತ ರೈ ಸೇರಿದಂತೆ ಇತರೆ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.

ರಾಜಕೀಯ

ಧರ್ಮಸ್ಥಳ ಪ್ರಕರಣ: ಧರ್ಮದ ಉಳಿವಿಗಾಗಿ ಬಿಜೆಪಿಯಿಂದ ಧರ್ಮ ಯುದ್ಧ – ಬಿ.ವೈ. ವಿಜಯೇಂದ್ರ

ಧರ್ಮಸ್ಥಳ ಪ್ರಕರಣ: ಧರ್ಮದ ಉಳಿವಿಗಾಗಿ ಬಿಜೆಪಿಯಿಂದ ಧರ್ಮ ಯುದ್ಧ – ಬಿ.ವೈ. ವಿಜಯೇಂದ್ರ

ಶ್ರೀ ಕ್ಷೇತ್ರ ಧರ್ಮಸ್ಥಳದ ವಿಚಾರವಾಗಿ ರಾಜ್ಯ ಸರ್ಕಾರ ಧೋರಣೆಯನ್ನು ಖಂಡಿಸಿ ‘ಧರ್ಮದ ಉಳಿವಿಗಾಗಿ ಧರ್ಮ ಯುದ್ಧ’ ಹೋರಾಟ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ (B.Y. Vijayendra)

[ccc_my_favorite_select_button post_id="112925"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ನೆರೆ ರಾಜ್ಯದಿಂದ ಅಕ್ರಮವಾಗಿ ಹೆಂಡ (Toddy) ಸಾಗಿಸುತ್ತಿದ್ದ ಮಹಿಳೆಯನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

[ccc_my_favorite_select_button post_id="112911"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!