BJP's religious war for the survival of religion - B.Y. Vijayendra

ಧರ್ಮಸ್ಥಳ ಪ್ರಕರಣ: ಧರ್ಮದ ಉಳಿವಿಗಾಗಿ ಬಿಜೆಪಿಯಿಂದ ಧರ್ಮ ಯುದ್ಧ – ಬಿ.ವೈ. ವಿಜಯೇಂದ್ರ

ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳದ ವಿಚಾರವಾಗಿ ರಾಜ್ಯ ಸರ್ಕಾರ ಧೋರಣೆಯನ್ನು ಖಂಡಿಸಿ ‘ಧರ್ಮದ ಉಳಿವಿಗಾಗಿ ಧರ್ಮ ಯುದ್ಧ’ ಹೋರಾಟವನ್ನು ಮಾಡಲಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ ವಿಜಯೇಂದ್ರ (B.Y. Vijayendra) ತಿಳಿಸಿದ್ದಾರೆ.

ನಗರದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಶ್ರೀ ಕ್ಷೇತ್ರ ಧರ್ಮಸ್ಥಳದ ವಿಚಾರವಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಸಚಿವ ದಿನೇಶ್ ಗುಂಡೂರಾವ್ ಅವರು ನೀಡಿರುವ ಹೇಳಿಕೆಗಳು ಎಲ್ಲರಿಗೂ ತಿಳಿದಿದೆ. ಧರ್ಮಸ್ಥಳದ ವಿರುದ್ಧ ಅಪಪ್ರಚಾರದ ವಿಚಾರವಾಗಿ ರಾಜ್ಯ ಸರ್ಕಾರದ ನಡವಳಿಕೆ ಬಗ್ಗೆ ನಮಗೂ ಅನುಮಾನಗಳು ಕಾಡುತ್ತಿವೆ ಎಂದು ಹೇಳಿದರು.

ರಾಜ್ಯ ಸರ್ಕಾರದ ಈ ಧೋರಣೆಯನ್ನು ಖಂಡಿಸಿ ‘ಧರ್ಮದ ಉಳಿವಿಗಾಗಿ ಧರ್ಮ ಯುದ್ಧ’ ಪ್ರತಿಭಟನೆಯನ್ನು ನಾಳೆಯಿಂದ ಮುಂದಿನ ವಾರದವರೆಗೂ ರಾಜ್ಯದ ಎಲ್ಲ ವಿಧಾನ ಸಭಾ ಕ್ಷೇತ್ರಗಳಲ್ಲಿ ಮಾಡಲಿದ್ದೇವೆ ಎಂದು ಪ್ರಕಟಿಸಿದರು.

ಕಳೆದ ಒಂದು ತಿಂಗಳಿಂದ ಧರ್ಮಸ್ಥಳ ವಿಚಾರದಲ್ಲಿ ಯಾವ ಯಾವ ಬೆಳವಣಿಗೆ ಆಗಿದೆ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ. ರಾಜ್ಯ ಸರ್ಕಾರ ಧರ್ಮಸ್ಥಳ ವಿಚಾರದಲ್ಲಿ ತನಿಖೆ ನಡೆಸಬೇಕೆಂದು ಎಸ್‍ಐಟಿ ರಚಿಸಿದಾಗ ಅದನ್ನು ಸ್ವಾಗತ ಮಾಡಿದ್ದೆವು; ಈ ವಿಚಾರದಲ್ಲಿ ಸಮಗ್ರವಾಗಿ, ಪಾರದರ್ಶಕವಾಗಿ ತನಿಖೆಯಾಗಬೇಕು ಎಂದು ರಾಜ್ಯ ಸರ್ಕಾರಕ್ಕೆ ನಾವು ಸಂಪೂರ್ಣವಾಗಿ ಬೆಂಬಲ ನೀಡಿದ್ದೆವು. ಇದು ಬಿಜೆಪಿಯ ಸ್ಪಷ್ಟ ನಿಲುವಾಗಿದೆ ಎಂದು ತಿಳಿಸಿದರು.

ತನಿಖೆ ವಿಚಾರದಲ್ಲಿ ಇಂದು ಕೂಡ ನಾವು ಹಿಂದೆ ಸರಿದಿಲ್ಲ. ಆದರೆ ತನಿಖೆಯ ಸಂದರ್ಭದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ನಿರಂತರವಾಗಿ ಶ್ರೀ ಕ್ಷೇತ್ರದ ಬಗ್ಗೆ ಅಪಪ್ರಚಾರಗಳು ನಡೆದುಕೊಂಡು ಬಂದಿವೆ. ಇಂಥ ಅಪಪ್ರಚಾರವನ್ನು ನಿಲ್ಲಿಸುವ, ತಡೆಯುವ ಮತ್ತು ಕಟ್ಟಿಹಾಕುವ ಕೆಲಸವನ್ನು ರಾಜ್ಯ ಸರ್ಕಾರ ಮತ್ತು ಪೊಲೀಸ್ ಇಲಾಖೆ ಏಕೆ ಮಾಡಲಿಲ್ಲ ಎಂದು ಪ್ರಶ್ನಿಸಿದರು.

ಶ್ರೀ ಕ್ಷೇತ್ರದ ಅಪಪ್ರಚಾರ ವಿಚಾರದಲ್ಲಿ ಕ್ರಮ ಏಕೆ ಇಲ್ಲ

ರಾಜ್ಯ ಸರ್ಕಾರ ಮತ್ತು ಪೊಲೀಸ್ ಇಲಾಖೆ ಬೇರೆ ಬೇರೆ ಸಂದರ್ಭದಲ್ಲಿ 24 ಗಂಟೆ ಒಳಗಾಗಿ ಎಫ್‍ಐಆರ್ ದಾಖಲಿಸುತ್ತಾರೆ. ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ನೆಪದಲ್ಲಿ ದಕ್ಷಿಣ ಕನ್ನಡದಲ್ಲಿ 81 ವರ್ಷದ ಬಿಜೆಪಿ ಹಿರಿಯ ಕಾರ್ಯಕರ್ತ ಪೂವಪ್ಪ ಅವರ ಮನೆಗೆ ರಾತ್ರಿ 1 ಗಂಟೆಗೆ ಪೊಲೀಸ್ ಅಧಿಕಾರಿಗಳು ಹೋಗಿ ಪೋಟೋ ತೆಗೆಯುತ್ತಾರೆ.

ಸಾಮಾಜಿಕ ಜಾಲತಾಣದಲ್ಲಿ ಹಿಂದೂ ಕಾರ್ಯಕರ್ತರು ಪೋಸ್ಟ್ ಮಾಡಿದರೆ ತಡಮಾಡದೇ ಅವರ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ಹಾಕಿ ಎಫ್‍ಐಆರ್ ದಾಖಲಿಸಿ ಬಂಧಿಸಿರುವುದನ್ನು ಕಳೆದ ಎರಡೂವರೆ ವರ್ಷಗಳಲ್ಲಿ ನೋಡಿದ್ದೇವೆ. ಆದರೆ ಧರ್ಮಸ್ಥಳದ ವಿಚಾರದಲ್ಲಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಸರ್ಕಾರ ಏಕೆ ಕ್ರಮ ತೆಗದುಕೊಂಡಿರುವುದಿಲ್ಲ ಎಂದು ವಿಜಯೇಂದ್ರ ಅವರು ಪ್ರಶ್ನಿಸಿದರು.

ಧರ್ಮಸ್ಥಳ ವಿಚಾರ ಬಂದಾಗ ಕೋಟ್ಯಾಂತರ ಭಕ್ತರ ಭಾವನೆಗೆ ಧಕ್ಕೆ ತರುತ್ತಿರುವ ಈ ಅಪಪ್ರಚಾರಗಳನ್ನು ರಾಜ್ಯ ಸರ್ಕಾರ ತಡೆಯುವ ಕೆಲಸವನ್ನು ಮಾಡಲಿಲ್ಲ ಎಂದು ಆಕ್ಷೇಪಿಸಿದರು. ಇದು ವ್ಯವಸ್ಥಿತವಾಗಿರುವ ಷಡ್ಯಂತ್ರ. ಈ ಅಪಪ್ರಚಾರವನ್ನು ತಡೆಯುವ ಇಚ್ಛಾಶಕ್ತಿ ರಾಜ್ಯ ಸರ್ಕಾರಕ್ಕೆ ಇರಲಿಲ್ಲವೇ? ಅಥವಾ ರಾಜ್ಯ ಸರ್ಕಾರವೇ ಈ ಅಪಪ್ರಚಾರಕ್ಕೆ ಕುಮ್ಮಕ್ಕು ನೀಡುತ್ತಿದಿಯೇ ಎಂದು ಅವರು ಪ್ರಶ್ನಿಸಿದರು.

ಈ ಎಲ್ಲ ಗುಮಾನಿಗಳು ಇಂದು ರಾಜ್ಯಾದ್ಯಂತ ಮತ್ತು ರಾಜ್ಯದ ಅಸಂಖ್ಯಾತ ಭಕ್ತರಲ್ಲಿ ಚರ್ಚೆ ಆಗುತ್ತಿದೆ. ಇದೆಲ್ಲದರ ನಡುವೆಯೂ ಇಂದು ಯಾವ ದುಷ್ಟಶಕ್ತಿಗಳು ಈ ಷಡ್ಯಂತ್ರದ ಹಿಂದೆ ಕೆಲಸ ಮಾಡುತ್ತಿವೆ?; ಯಾವ ಯಾವ ಸಂಘಟನೆಗಳು ಇದಕ್ಕೆ ಶಕ್ತಿ ತುಂಬುವ ಕೆಲಸ ಮಾಡುತ್ತಿವೆ? ಇದನ್ನು ತಡೆಯುವ ಕೆಲಸ ರಾಜ್ಯ ಸರ್ಕಾರ ಮಾಡದೆ ಇರುವುದು ದುರದೃಷ್ಟಕರ ಎಂದು ಆಕ್ಷೇಪಿಸಿದರು.

ರಾಜಕೀಯ

ಧರ್ಮಸ್ಥಳ ಪ್ರಕರಣ: ಧರ್ಮದ ಉಳಿವಿಗಾಗಿ ಬಿಜೆಪಿಯಿಂದ ಧರ್ಮ ಯುದ್ಧ – ಬಿ.ವೈ. ವಿಜಯೇಂದ್ರ

ಧರ್ಮಸ್ಥಳ ಪ್ರಕರಣ: ಧರ್ಮದ ಉಳಿವಿಗಾಗಿ ಬಿಜೆಪಿಯಿಂದ ಧರ್ಮ ಯುದ್ಧ – ಬಿ.ವೈ. ವಿಜಯೇಂದ್ರ

ಶ್ರೀ ಕ್ಷೇತ್ರ ಧರ್ಮಸ್ಥಳದ ವಿಚಾರವಾಗಿ ರಾಜ್ಯ ಸರ್ಕಾರ ಧೋರಣೆಯನ್ನು ಖಂಡಿಸಿ ‘ಧರ್ಮದ ಉಳಿವಿಗಾಗಿ ಧರ್ಮ ಯುದ್ಧ’ ಹೋರಾಟ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ (B.Y. Vijayendra)

[ccc_my_favorite_select_button post_id="112925"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ನೆರೆ ರಾಜ್ಯದಿಂದ ಅಕ್ರಮವಾಗಿ ಹೆಂಡ (Toddy) ಸಾಗಿಸುತ್ತಿದ್ದ ಮಹಿಳೆಯನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

[ccc_my_favorite_select_button post_id="112911"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!