ದೊಡ್ಡಬಳ್ಳಾಪುರ: ಕರ್ನಾಟಕ ಯೂತ್ ಕಾಂಗ್ರೆಸ್ ಕಾನೂನು ಘಟಕದ (President of Youth Congress legal cell) ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷರನ್ನಾಗಿ ಯುವ ವಕೀಲರಾದ ರಾಜಘಟ್ಟ ನವೀನ್ ಕುಮಾರ್.ಎಂ (Rajghatta Naveen Kumar.M) ಅವರನ್ನು ಆಯ್ಕೆ ಮಾಡಲಾಗಿದೆ.
ಈ ಕುರಿತಂತೆ ಇಂಡಿಯನ್ ಯೂತ್ ಕಾಂಗ್ರೆಸ್ ರಾಷ್ಟ್ರೀಯ ಕಾನೂನು ಘಟಕದ ಅಧ್ಯಕ್ಷ ರೂಪೇಸ್ ಎಸ್. ಭಂಡೌರಿಯಾ ಅವರು ವಿವಿಧ ಜಿಲ್ಲೆಗಳಿಗೆ ಕಾನೂನು ಘಟಕದ ಅಧ್ಯಕ್ಷ ಹಾಗೂ ಉಪಾಧ್ಯಕ್ಷರನ್ನು ಆಯ್ಕೆ ಮಾಡಿ, ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ.
ಇದರನ್ವಯ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾನೂನು ಘಟಕದ ಅಧ್ಯಕ್ಷರಾಗಿ ನವೀನ್ ರಾಜಘಟ್ಟ.ಎಂ ಹಾಗೂ ಉಪಾಧ್ಯಕ್ಷರಾಗಿ ದೇವನಹಳ್ಳಿಯ ಹರ್ಷ ಎಂ ಅವರನ್ನು ಆಯ್ಕೆ ಮಾಡಲಾಗಿದೆ.
ನೂತ ಅಧ್ಯಕ್ಷ ಉಪಾಧ್ಯರನ್ನು ಕೆಪಿಸಿಸಿ ಉಪಾಧ್ಯಕ್ಷ ಟಿ.ವೆಂಕಟರಮಣಯ್ಯ, ದೊಡ್ಡಬಳ್ಳಾಪುರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಚುಂಚೇಗೌಡ, ಯೂತ್ ಕಾಂಗ್ರೆಸ್ ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ಶರತ್ ಪಟೇಲ್, ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷ ಪುನೀತ್ ಗೌಡ ಮಲ್ಲೋಹಳ್ಳಿ ಮತ್ತಿತರರು ಶುಭಕೋರಿದ್ದಾರೆ.