Who ordered D.K. Shivakumar to apologize?: R. Ashok

ಡಿ.ಕೆ.ಶಿವಕುಮಾರ್ ಅವರು ಕ್ಷಮೆ ಕೇಳಬೇಕು ಎಂದು ಆದೇಶ ನೀಡಿದ್ದು ಯಾರು?: ಆರ್. ಅಶೋಕ್ ಕಿಡಿ

ಬೆಂಗಳೂರು: “ನಮಸ್ತೇ ಸದಾ ವತ್ಸಲೇ ಮಾತೃಭೂಮೇ” ಎಂದು ತಾಯಿ ಭಾರತಾಂಬೆಗೆ ನಮಸ್ಕರಿಸಿದ್ದಕ್ಕೆ ಡಿಸಿಎಂ (D.K. Shivakumar) ಅವರು ಕ್ಷಮೆ ಕೇಳಬೇಕು ಎನ್ನುವುದಾದರೆ, ಕಾಂಗ್ರೆಸ್ ಪಕ್ಷದ ಪ್ರಕಾರ ಭಾರತೀಯರು ಇನ್ಯಾರಿಗೆ ಜಯಕಾರ ಹಾಕಬೇಕು? ಇಟಲಿ ಮಾತೆಗಾ? ಇಟಲಿಯಿಂದ ಬಂದ ಮೇಡಂಗಾ? ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಪ್ರಶ್ನಿಸಿದ್ದಾರೆ.

ಈ ಕುರಿತಂತೆ ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿರುವ ಅವರು, ಆರ್.ಎಸ್ಎಸ್ ಪ್ರಾರ್ಥನಾ ಗೀತೆಯ ಮೊದಲನೆಯ ಸಾಲಿನ ಸಾರಾಂಶ ಇಷ್ಟೇ.

“ನಮ್ಮನ್ನೆಲ್ಲ ವಾತ್ಸಲ್ಯದಿಂದ ಸಾಕುತ್ತಿರುವ ಮಾತೃ ಸಮಾನಳಾದ ತಾಯಿ ಭಾರತಾಂಬೆಗೆ ನನ್ನ ನಮಸ್ಕಾರಗಳು.”

ಜನ್ಮ ಕೊಟ್ಟ ಮಾತೃಭೂಮಿ ಬಗ್ಗೆ ಈ ಭಾವನೆ ಇಟ್ಟುಕೊಳ್ಳುವುದು ತಪ್ಪೇ? ತಾಯ್ನೆಲಕ್ಕೆ ನಮಸ್ಕಾರ ಮಾಡುವುದೇ ತಪ್ಪೇ?

ಒಂದು ಕಡೆ ವಿಧಾನಸೌಧದಲ್ಲಿ “ಪಾಕಿಸ್ತಾನ ಜಿಂದಾಬಾದ್” ಎಂದು ಘೋಷಣೆ ಕೂಗಿದವರನ್ನ ಸಮರ್ಥನೆ ಮಾಡಿಕೊಳ್ಳುವ ಕಾಂಗ್ರೆಸ್ ಪಕ್ಷ, ಮತ್ತೊಂದು ಕಡೆ ತಾಯಿ ಭಾರತಾಂಬೆಗೆ ನಮಸ್ಕರಿಸುವವರನ್ನ ಅಪರಾಧಿ ಸ್ಥಾನದಲ್ಲಿ ನಿಲ್ಲಿಸುತ್ತದೆ. ಇದನ್ನು ದೇಶದ್ರೋಹಿ ಮನಸ್ಥಿತಿ ಅನ್ನದೇ ಇನ್ನೇನನ್ನಲು ಸಾಧ್ಯ?

ಇಷ್ಟಕ್ಕೂ ಡಿ.ಕೆ.ಶಿವಕುಮಾರ್ ಅವರು ಕ್ಷಮೆ ಕೇಳಬೇಕು ಎಂದು ಆದೇಶ ನೀಡಿದ್ದು ಯಾರು? ಸೋನಿಯಾ ಗಾಂಧಿ ಅವರಾ? ರಾಹುಲ್ ಗಾಂಧಿ ಅವರಾ? ಕೆ.ಸಿ.ವೇಣುಗೋಪಾಲ್ ಅವರಾ? ಸುರ್ಜೆವಾಲಾ ಅವರಾ? ಅಥವಾ ಹರಿಪ್ರಸಾದ್ ಅವರು ಹೇಳಿದ್ದಕ್ಕೆ ಕ್ಷಮೆ ಕೇಳಿದರಾ?

ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಕಿಂಚಿತ್ತಾದರೂ ಸ್ವಾಭಿಮಾನ ಇದ್ದಿದ್ದರೆ, ಕಿಂಚಿತ್ತಾದರೂ ಧೈರ್ಯ ಇದ್ದಿದ್ದರೆ, ಕ್ಷಮೆ ಕೇಳಬಾರದಿತ್ತು. ಕೇಳಲೇಬೇಕು ಎನ್ನುವ ಒತ್ತಡ ಇದ್ದಿದ್ದರೆ ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು.

“He who loves not his country can love nothing”. ಅಂದರೆ “ತನ್ನ ಮಾತೃಭೂಮಿಯನ್ನು ಪ್ರೀತಿಸದವನು ಏನನ್ನೂ ಪ್ರೀತಿಸಲಾರ” ಎನ್ನುವ ಮಾತಿದೆ.

ಆದರೆ ಕಾಂಗ್ರೆಸ್ ಪಕ್ಷದಲ್ಲಿ “ಕುರ್ಚಿಯ ಮೇಲೆ ಪ್ರೀತಿ ಇದ್ದರೆ ದೇಶಪ್ರೇಮವನ್ನು ಬಿಡಬೇಕು” ಎನ್ನುವ ಪರಿಸ್ಥಿತಿ ಇದೆ. ಅಧಿಕಾರದ ಮೇಲಿನ ವ್ಯಾಮೋಹಕ್ಕೆ, ಜನ್ಮ ಕೊಟ್ಟ ತಾಯ್ನೆಲವನ್ನೇ ಬಿಟ್ಟುಕೊಡುವ so-called ನಾಯಕರು ನಾಡಿನ ಮುಖ್ಯಮಂತ್ರಿಗಳಾಗಲು ಹೊರಟಿರುವುದು ನಮ್ಮ ನಾಡಿನ ಸದ್ಯದ ದೊಡ್ಡ ದುರಂತ.

ಜಯ ಭಾರತ ಜನನಿಯ ತನುಜಾತೆ, ಜಯಹೇ ಕರ್ನಾಟಕ ಮಾತೆ ಎಂದಿದ್ದಾರೆ.

ರಾಜಕೀಯ

ಡಿ.ಕೆ.ಶಿವಕುಮಾರ್ ಅವರು ಕ್ಷಮೆ ಕೇಳಬೇಕು ಎಂದು ಆದೇಶ ನೀಡಿದ್ದು ಯಾರು?: ಆರ್. ಅಶೋಕ್ ಕಿಡಿ

ಡಿ.ಕೆ.ಶಿವಕುಮಾರ್ ಅವರು ಕ್ಷಮೆ ಕೇಳಬೇಕು ಎಂದು ಆದೇಶ ನೀಡಿದ್ದು ಯಾರು?: ಆರ್. ಅಶೋಕ್

"ನಮಸ್ತೇ ಸದಾ ವತ್ಸಲೇ ಮಾತೃಭೂಮೇ" ಎಂದು ತಾಯಿ ಭಾರತಾಂಬೆಗೆ ನಮಸ್ಕರಿಸಿದ್ದಕ್ಕೆ ಡಿಸಿಎಂ (D.K. Shivakumar) ಅವರು ಕ್ಷಮೆ ಕೇಳಬೇಕು ಎನ್ನುವುದಾದರೆ... R. Ashoka

[ccc_my_favorite_select_button post_id="113127"]
RSS ಗೀತೆಯ ಸಾಲು ಉಲ್ಲೇಖ: ಕಾರ್ಯಕರ್ತರ ಕ್ಷಮೆ ಕೋರಿದ ಡಿಸಿಎಂ ಡಿ.ಕೆ.ಶಿವಕುಮಾರ್

RSS ಗೀತೆಯ ಸಾಲು ಉಲ್ಲೇಖ: ಕಾರ್ಯಕರ್ತರ ಕ್ಷಮೆ ಕೋರಿದ ಡಿಸಿಎಂ ಡಿ.ಕೆ.ಶಿವಕುಮಾರ್

ವಿಧಾನಸಭೆಯಲ್ಲಿ ಆರ್ ಎಸ್ಎಸ್ ಗೀತೆಯ ಸಾಲುಗಳನ್ನು ಉಲ್ಲೇಖಿಸಿದ್ದರ ಬಗ್ಗೆ ಸ್ಪಷ್ಟನೆ ನೀಡಿದರು. ಜೊತೆಗೆ ತಮ್ಮ ಹೇಳಿಕೆಯನ್ನು ರಾಜಕೀಯವಾಗಿ ಬಳಸುತ್ತಿರುವವರಿಗೂ ಡಿ.ಕೆ.ಶಿವಕುಮಾರ್ (D.K. Shivakumar) ತಿರುಗೇಟು ನೀಡಿದರು.

[ccc_my_favorite_select_button post_id="113124"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಆಘಾತಕಾರಿ ಸ್ಥಿತಿಯಲ್ಲಿ ಬಾಲಕನ ಶವ ಪತ್ತೆ.‌. ಹಲವು ಶಂಕೆ

ದೊಡ್ಡಬಳ್ಳಾಪುರ: ಆಘಾತಕಾರಿ ಸ್ಥಿತಿಯಲ್ಲಿ ಬಾಲಕನ ಶವ ಪತ್ತೆ.‌. ಹಲವು ಶಂಕೆ

17 ವರ್ಷದ ಬಾಲಕನ ಶವ ಆಘಾತಕಾರಿ ಸ್ಥಿತಿಯಲ್ಲಿ (shocking condition) ಪತ್ತೆಯಾಗಿರುವ ಘಟನೆ ನಗರದ ಕರೇನಹಳ್ಳಿಯ ಟೆಂಟ್ ಹಿಂಭಾಗದ ಗುಟ್ಟೆಯಲ್ಲಿ ಪತ್ತೆಯಾಗಿದೆ.

[ccc_my_favorite_select_button post_id="113099"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಅಪಘಾತ.. ಯುವಕನ ಬಲಿ ಪಡೆದ ಸಿಮೆಂಟ್ ಲಾರಿ..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಅಪಘಾತ.. ಯುವಕನ ಬಲಿ ಪಡೆದ ಸಿಮೆಂಟ್ ಲಾರಿ..!

ಮತ್ತೊಂದು ರಸ್ತೆಯಲ್ಲಿ ತನ್ನ ಪಾಡಿಗೆ ತಾನು ಸಾಗುತ್ತಿದ್ದ ಯುವಕನ ಮೇಲೆರಗಿದ (Accident) ಲಾರಿ, ಸ್ಥಳದಲ್ಲಿಯೇ ಬಲಿ ಪಡೆದಿರುವ ಘಟನೆ

[ccc_my_favorite_select_button post_id="113040"]

ಆರೋಗ್ಯ

ಸಿನಿಮಾ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ಅಭಿನಯದ ದಿ ಡೆವಿಲ್ ಸಿನಿಮಾದ 'ಇದ್ರೇ ನೆಮ್ಮದಿಯಾಗ್ ಇರ್ಬೇಕ್' ಹಾಡು ಯುಟ್ಯೂಬ್‌ನಲ್ಲಿ ಬಿಡುಗಡೆಯಾಗಿದೆ.

[ccc_my_favorite_select_button post_id="113046"]
error: Content is protected !!